AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಸ್ವಾರ್ಥದ ಕಾರಣಕ್ಕೆ ಎಲ್ಲರಿಂದ ದೂರವಿರಬೇಕಾಗುವುದು…

Horoscope Today 06 November: ಇಂದು, 2026ರ ನವೆಂಬರ್ 6ರ ಶುಕ್ರವಾರದ ನಿತ್ಯ ಭವಿಷ್ಯದ ಪ್ರಕಾರ, ಎಲ್ಲಾ ರಾಶಿಗಳಿಗೂ ವಿಶೇಷ ಫಲಗಳಿರುತ್ತವೆ. ಕೆಲವರಿಗೆ ಆಪ್ತರ ಮಾತುಕತೆ ಆಹ್ಲಾದ ನೀಡಿದರೆ, ಮತ್ತೆ ಕೆಲವರು ಸ್ವಾರ್ಥದಿಂದ ದೂರವಿರಬೇಕಾಗಬಹುದು. ವೃಷಭ ರಾಶಿಗೆ ಸ್ಥಳಾಂತರ ಯೋಗ, ತುಲಾ ರಾಶಿಗೆ ಹಣಕಾಸು ಚಿಂತೆ, ಮಕರ ರಾಶಿಗೆ ಸುರಕ್ಷತೆಯ ಬಗ್ಗೆ ಗಮನದ ಅಗತ್ಯವಿದೆ. ನಿಮ್ಮ ರಾಶಿಗೆ ಇಂದಿನ ದಿನ ಹೇಗಿದೆ ಎಂದು ತಿಳಿಯಲು ಸಂಪೂರ್ಣ ಭವಿಷ್ಯ ಓದಿ.

ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಸ್ವಾರ್ಥದ ಕಾರಣಕ್ಕೆ ಎಲ್ಲರಿಂದ ದೂರವಿರಬೇಕಾಗುವುದು...
ದಿನ ಭವಿಷ್ಯImage Credit source: Getty images
TV9 Web
| Edited By: |

Updated on: Nov 06, 2026 | 3:48 AM

Share

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಶರತ್ ಋತುವಿನ ಆಶ್ವಯುಜ ಮಾಸದ ಕೃಷ್ಣ ಪಕ್ಷದ ಏಕಾದಶೀ ತಿಥಿಯ ಶುಕ್ರವಾರದಂದು ಆತ್ಮನಿಂದನೆ, ಅಗಾಧ ಪ್ರೇಮ, ಕಾರ್ಯ ಸಾಧನೆ, ಹಣದ ಚಿಂತೆ, ಬೇಡಿಕೆ, ನಿರುಪಾಯದಿಂದ ಸೋಲು, ವಾಹನ ಖರೀದಿ ಇವೆಲ್ಲ ಇಂದಿನ ವಿಶೇಷ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಶರತ್, ಚಾಂದ್ರಮಾಸ : ಆಶ್ವಯುಜ, ಸೌರ ಮಾಸ : ತುಲಾ, ಮಹಾನಕ್ಷತ್ರ : ಸ್ವಾತಿ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಹಸ್ತಾ, ಯೋಗ : ಐಂದ್ರ, ಕರಣ : ಕೌಲವ, ಸೂರ್ಯೋದಯ – 06 – 15 am, ಸೂರ್ಯಾಸ್ತ – 05 – 50 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:36 – 12:03, ಯಮಗಂಡ ಕಾಲ 14:57 – 16:24, ಗುಳಿಕ ಕಾಲ 07:43 – 09:09

ಮೇಷ ರಾಶಿ : ಆಪ್ತರ ಜೊತೆಗಿನ ಮಾತುಕತೆಯು ನಿಮಗೆ ಆಹ್ಲಾದವನ್ನು ಉಂಟುಮಾಡುವುದು. ಇಂದಿನ ಕೆಲಸದಲ್ಲಿ ಮಂದಗತಿ ಇರಲಿದೆ. ಇತರರಿಂದ ಗೌರವ ಪ್ರಾಪ್ತವಾಗಬಹುದು. ಖರೀದಿಯಲ್ಲಿ ನೀವು ಸ್ಥೂಲವಾಗಿ ಖರ್ಚನ್ನು ಅಂದಾಜಿಸಿಕೊಳ್ಳಿ. ಮಕ್ಕಳು ನಿಮ್ಮ ಬಳಿ ಹೊಸತನ್ನು ತಿಳಿದುಕೊಳ್ಳಲು ಬಯಸುವರು. ಇಂದು ನೀವು ನಿಮ್ಮ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಿರಿ. ಸಂಗಾತಿಯ ಜೊತೆ ದೂರ ಪ್ರಯಾಣ ಮಾಡುವಿರಿ.

ವೃಷಭ ರಾಶಿ : ಯಾವುದನ್ನೂ ಸಹಿಸಿಕೊಳ್ಳುವ ಶಕ್ತಿ ನಿಮ್ಮಲ್ಲಿ ಇರದು. ವಾಸಸ್ಥಳವನ್ನು ನೀವು ಇಂದು ಬದಲಿಸುವ ಆಲೋಚನೆ ಮಾಡುವಿರಿ. ಸರ್ಕಾರದ ನಿಮ್ಮ ಕೆಲಸವು ಬೇಗನೆ ಮುಗಿದುಹೋಗುವುದು. ಆಭರಣ ಖರೀದಿ ಜೋರಾಗಿ ನಡೆಯವುದು. ನಿಮ್ಮ ಎಲ್ಲ ವಿವರಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಳ್ಳುವುದು ಬೇಡ. ಯಾರನ್ನೂ ಉಪಯೋಗಿಸಿಕೊಳ್ಳಲು ಹೋಗಬೇಡಿ. ಉದ್ಯೋಗದಲ್ಲಿ ಯಾವುದಾದರೊಂದು ರೀತಿಯಲ್ಲಿ ಪ್ರಗತಿಯನ್ನು ಸಾಧಿಸಲು ಹೆಜ್ಜೆ ಇಡಿ.

ಮಿಥುನ ರಾಶಿ : ಮಂತ್ರಕ್ಕಿಂತ ಉಗುಳೇ ಜಾಸ್ತಿ ಎನ್ನುವಂತೆ ಎಲ್ಲರಿಗೂ ಬೈಯುತ್ತ ಇರುವಿರಿ. ಸ್ಥಿರಾಸ್ತಿಗಾಗಿ ಹೆಚ್ಚು ಓಡಾಟವಿರುವುದು. ವಿದೇಶ ಪ್ರಯಾಣವು ನಿಮಗೆ ಇಷ್ಟವಿಲ್ಲದಿದ್ದರೂ ಮಾಡಬೇಕಾದೀತು. ಉದ್ಯಮವು ಒಂದೊಂದೇ ಹೆಜ್ಜೆ ಬೆಳೆಯುತ್ತಿರುವುದು ಸಂತೋಷ ಕೊಡುವುದು. ಮನೆಯ ಹಿರಿಯರನ್ನು ಅನಾದರದಿಂದ ನೋಡುವುದು ಉಚಿತವಲ್ಲ. ಆತುರವು ಕಡಿಮೆ ಆದರೆ ಕೆಲಸವೂ ಸುಲಲಿತವಾದಂತೆ. ನಿಮ್ಮ ಕಛೇರಿಯಲ್ಲಿ ಉಂಟಾದ ಅಸಮಾಧಾನವನ್ನು ಆಪ್ತರ ಜೊತೆ ಹಂಚಿಕೊಳ್ಳಿ.

ಕರ್ಕಾಟಕ ರಾಶಿ : ಭೂಮಿಯಿಂದ ಅಧಿಕ ಲಾಭ ಪಡೆಯಲು ಚರ್ಚೋಪಚರ್ಚೆಗಳು ಆಗಬಹುದು. ದುಸ್ಸಾಧ್ಯ ಎನಿಸಿದ ಕಾರ್ಯವನ್ನು ಮಾಡಲು ಪ್ರಯತ್ನಿಸುವುದು ಬೇಡ. ಸಂಬಂಧದ ವಿಚಾರದಲ್ಲಿ ದೃಷ್ಟಿ ಬದಲಾದರೆ ಸಾಕು. ಕೆಲವು ವಿಚಾರದಲ್ಲಿ ಗಟ್ಟಿಯಾಗಿ ನಿಲ್ಲುವುದೇ ಉತ್ತಮ. ‌ಇಂದು ನಿಮ್ಮ ಅನಗತ್ಯ ಮಾತುಗಳು ಕಲಹಕ್ಕೆ ಕಾರಣವಾಗಬಹುದು. ಇನ್ನೊಬ್ಬರ ವಸ್ತುಗಳನ್ನು ನೀವು ಹಾಳು ಮಾಡುವಿರಿ.

ಸಿಂಹ ರಾಶಿ : ನಿಮ್ಮ ಹಿತಶತ್ರುಗಳಿಂದ ತೊಂದರೆ‌ ಕೊಡಬಹುದು. ನಾಯಕತ್ವದ ಗುಣವನ್ನು ಹೆಚ್ಚು ಮಾಡಿಕೊಳ್ಳಬೇಕು. ಮನೆಗೆ ಸಹಕಾರವನ್ನು ನೀವು ನೀಡಲಿದ್ದು ಬಂಧುಗಳಿಂದ ಪ್ರಶಂಸೆಯು ಸಿಗಲಿದೆ. ಅಂದುಕೊಂಡಂತೆ ಕಾರ್ಯವು ಸಾಗದು ಎಂಬ ಕೊರಗು ಇರುವುದು. ನಿಮ್ಮ ಮಾತಿಗೆ ಬೆಲೆ ಇಲ್ಲವಾದೀತು. ಹೂಡಿಕೆಯನ್ನು ಬಹಳ ಮುತುವರ್ಜಿಯಿಂದ ಮಾಡಬೇಕಾದೀತು. ಅಪರಿಚಿತರ ಹಸಿವನ್ನು ನೀಗಿಸುವಿರಿ.

ಕನ್ಯಾ ರಾಶಿ : ಸ್ನೇಹಿತರಿಂದ ಇಂದು ಮನೆ ತುಂಬಲಿದೆ. ಸಾಮೂಹಿಕ ವ್ಯವಸ್ಥೆಯನ್ನು ತೂಗಿಸಲು ಆಗದು.‌ ವ್ಯಾಪಾರದಲ್ಲಿ ಹಿತಶತ್ರುಗಳ ಕಾಟದಿಂದ ನಿಮಗೆ ತೊಂದರೆಗಳು ಆಡಬಹುದು. ಇದರಿಂದ ನಿಮ್ಮ ನೆಮ್ಮದಿಯೂ ದೂರವಾದೀತು. ವಿದ್ಯಾಭ್ಯಾಸದಲ್ಲಿ ಯಶಸ್ಸನ್ನು ಸಾಧಿಸಲು ಅನೇಕ ಮಾರ್ಗಗಳು ಇರಲಿದೆ. ಸಾಲದ ಹೊರೆಯನ್ನು ಸ್ವಲ್ಪ ಇಳಿಸಲು ಸಾಧ್ಯವಾಗುವುದು. ತಜ್ಞರ ಜೊತೆ ಇಂದಿನ ಸಮಯವನ್ನು ಕಳೆಯುವಿರಿ.

ತುಲಾ ರಾಶಿ : ನ್ಯಾಯಕ್ಕೆ ಬೇಕಾದ ಸೂಕ್ತ ಸಾಕ್ಷಿಯ ಕೊರತೆ ಇರುವುದು. ಸರ್ಕಾರದ ಕೆಲಸಲದಲ್ಲಿ ಗೊತ್ತಿಲಗಲ್ಲದೇ ತಪ್ಪುಗಳು ಆಗಬಹುದು. ನಿಮಗೆ ಬರಬೇಕಾದ ಹಣದ ವಿಚಾರದಲ್ಲಿಯೂ ನಿಮಗೆ ಸೋಲಾಗುವುದು. ಮನೆಯಲ್ಲಿಯೂ ನಿಮ್ಮ ಮಾತಿಗೆ ಸರಿಯಾದ ಬೆಲೆಯೂ ಸಿಗದು. ಕುಟಂಬದವರು ಸೇರಿಸಿಕೊಂಡು ಧಾರ್ಮಿಕ ಕಾರ್ಯಗಳನ್ನು ಮಾಡುವಿರು. ಹೊಸ ವ್ಯವಹಾರವನ್ನು ಆರಂಭಿಸಿರುವವರಿಗೆ ಪೂರ್ಣ ಚಿತ್ರಣವು ಸಿಗದು. ಹಿರಿಯರ ಎದುರು ಸಭ್ಯತೆಯಿಂದ ನಡೆದುಕೊಳ್ಳಿ.

ವೃಶ್ಚಿಕ ರಾಶಿ : ವಿದ್ಯಾರ್ಥಿಗಳಿಗೆ ಅಹಂಕಾರದ ವರ್ತನೆಯನ್ನು ತೋರಿಸಬಹುದು. ತಿಳಿವಳಿಕೆಯನ್ನು ಹೇಳಬೇಕಾದೀತು. ಎಲ್ಲವನ್ನೂ ನಂಬಿಕೆಯ ಆಧಾರದ ಮೇಲೆ ಸ್ವೀಕರಿಸಬೇಕಿಲ್ಲ. ಮನೆಯಲ್ಲಿ ಒಂಟಿಯಾಗಿರುವ ಕಾರಣ ಎಲ್ಲಿಗೂ ಹೊರಗೆ ಹೋಗಲಾಗದು. ಸರ್ಕಾರಿ ಉದ್ಯೋಗಿಗಳಿಗೆ ನಿಮ್ಮ ಚಾತುರ್ಯದ ಕಾರಣದಿಂದ ಹೆಚ್ಚಿನ ಅಧಿಕಾರವು ಪ್ರಾಪ್ತವಾಗುವುದು. ಸಣ್ಣ ವಿಚಾರವನ್ನು ನೀವೇ ದೊಡ್ಡ ಮಾಡಿಕೊಳ್ಳುವಿರಿ. ವ್ಯವಸ್ಥೆಯ ಸಣ್ಣ ಕೊರತೆಗಳು ಮುಖ್ಯವಾಗಬಾರದು.

ಧನು ರಾಶಿ : ಶುಭ ಕಾರ್ಯದಲ್ಲಿ ನೀವು ಭಾಗವಹಿಸುವಿರಿ. ಕಳೆದುಕೊಂಡ ಸಂಪತ್ತು ಮತ್ತಾವುದೋ ರೀತಿಯಲ್ಲಿ ಬರಬಹುದು. ಸಣ್ಣ ಮಕ್ಕಳಿಂದ ನೆಮ್ಮದಿಯು ಸಿಗಲಿದೆ. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು. ಹರಿದ ಬಟ್ಟೆಗಳನ್ನು ನಿಮಗೆ ಗೊತ್ತಿಲ್ಲದೇ ಧರಿಸುವಿರಿ. ಅಸ್ಥಾನದಲ್ಲಿ ಇಂದು ಒಲವು ಹುಟ್ಟಿಕೊಳ್ಳಬಹುದು. ಉದ್ಯಮದಲ್ಲಿ ಅನಿರೀಕ್ಷಿತ ಬದಲಾವಣೆ ಆಗಬಹುದು. ಸುಮ್ಮನೇ ಆಡಿದ ಮಾತು ಸತ್ಯವಾಗಬಹುದು.

ಮಕರ ರಾಶಿ : ನಿಮ್ಮ ಸುರಕ್ಷತೆಯ ಬಗ್ಗೆ ಮೊದಲು ಗಮನವಿರಲಿ. ಅನಂತರ ಉಳಿದುದರ ರಕ್ಷಣೆ. ಹಣವು ವ್ಯಯವಾಗಬಹುದು. ಒತ್ತಡದಿಂದ ನಿಮ್ಮ ಕಾರ್ಯವು ಮಂದಗತಿಯಲ್ಲಿ ಸಾಗುವುದು. ಮೇಲ್ನೋಟಕ್ಕೆ ಶಾಂತಸ್ವಭಾವದಂತೆ ಕಾಣಿಸುವುದು.‌ ನಿಮ್ಮ ಆಲೋಚನೆಗಳೇ ನಿಮ್ಮನ್ನು ನಿರೂಪಿಸುತ್ತವೆ. ಇಂದಿನ ಎಲ್ಲ‌ ಕಾರ್ಯಗಳಲ್ಲಿ ಏಕಾಗ್ರತೆಯ ಕೊರತೆ ಕಾಣಿಸುವುದು. ತಾಯಿಯ ಕಡೆಯವರಿಂದ ಧನಸಹಾಯವು ಸಿಗಬಹುದು.

ಕುಂಭ ರಾಶಿ : ನಿಮಗಿರುವ ಸ್ಥಾನಮಾನದ ಬಗ್ಗೆ ಆತಂಕ ಬರಬಹುದು. ಇಂದು ನಿಮ್ಮ ಯೋಜನೆಗೆ ಇಂದು ಎಲ್ಲವೂ ವಿರುದ್ಧವಾಗಬಹುದು. ವಿವಾಹಕ್ಕೆ ಸಂಬಂಧಿಸಿದ ದೋಷಗಳನ್ನು ದೈವಜ್ಞರ ಬಳಿ ಕೇಳಿ ಸರಿಪಡಿಸಿಕೊಳ್ಳುವುದು ಉತ್ತಮ. ಅಧಿಕಾರಿಗಳು ನಿಮಗೆ ಅಪಮಾನ ಮಾಡಬಹುದು. ಕೃತಕತೆಯಿಂದ ತೊಂದರೆಯಾಗುವುದು. ಸಾಮಾಜಿಕ ಕಾರ್ಯಕ್ಕೆ ಇಂದು ಸಮಯವು ಸಿಗದು. ನೀವು ಖರೀದಿಸುವ ಭೂಮಿಯ ದಾಖಲೆಯನ್ನು ಸಮಾಧಾನಚಿತ್ತದಿಂದ ಕೂಲಂಕಷವಾಗಿ ಪರಿಶೀಲಿಸಿ.

ಮೀನ ರಾಶಿ : ಯಾವುದೋ ಆಲೋಚನೆಯಲ್ಲಿ ನಿಮ್ಮ ಮನಸ್ಸು ಇರುವುದು. ನಿಮ್ಮ ಆಸ್ತಿಗಳನ್ನು ಸ್ವಾಧೀನ ಮಾಡಿಕೊಳ್ಳಬಹುದು. ಹೆಚ್ಚಿನ ಸೌಕರ್ಯದಿಂದ ನೀವು ಸೋಮಾರಿಯಾಗುವಿರಿ. ಕೇಳಿದವರಿಗೆ ನಿಮ್ಮ‌ ಸಹಾಯವು ಸಿಗಲಿದೆ.‌ ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಕಳೆದ ಕೆಟ್ಟ ಕಾಲವನ್ನು‌ ನೆನಪಿಸಿಕೊಳ್ಳುವಿರಿ. ವಿದೇಶದ ಸಂಪರ್ಕವು ಇಂದು ಸಿಗಬಹುದು. ನಿಮ್ಮ‌‌ ಕೆಲಸದ ಬಗ್ಗೆ ಗಮನ ಹೆಚ್ಚಿರಲಿ. ಏಕಾಗ್ರತೆಯು ಭಂಗವಾಗಲು ಅನೇಕ ಕಾರಣಗಳು ಇರಲಿವೆ.

– ಲೋಹಿತ್ ಹೆಬ್ಬಾರ್ – 8762924271 (what’s app only)

Follow Us
TV9 Web
TV9 Web

TV9 Kannada

Read More
ಸಿಎಂ ಫಡ್ನವೀಸ್ ನೇತೃತ್ವದಲ್ಲಿ ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ ರ್‍ಯಾಲಿ
ಸಿಎಂ ಫಡ್ನವೀಸ್ ನೇತೃತ್ವದಲ್ಲಿ ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ ರ್‍ಯಾಲಿ
ಬಾಗಲಕೋಟೆಯಲ್ಲಿ ಬಡವರ ಸ್ವಂತ ಮನೆಯ ಕನಸು ಭಗ್ನ
ಬಾಗಲಕೋಟೆಯಲ್ಲಿ ಬಡವರ ಸ್ವಂತ ಮನೆಯ ಕನಸು ಭಗ್ನ
ತಾಲೂಕು, ಜಿಲ್ಲಾ ಪಂಚಾಯ್ತಿ ಎಲೆಕ್ಷನ್: ಗೊಂದಲಕ್ಕೆ ಸಿಲುಕಿದ ರಾಜ್ಯ ಸರ್ಕಾರ!
ತಾಲೂಕು, ಜಿಲ್ಲಾ ಪಂಚಾಯ್ತಿ ಎಲೆಕ್ಷನ್: ಗೊಂದಲಕ್ಕೆ ಸಿಲುಕಿದ ರಾಜ್ಯ ಸರ್ಕಾರ!
ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟ ವಾಪಸ್: 3,600 ದರಕ್ಕೆ ತೃಪ್ತಿಪಟ್ಟ ರೈತರು
ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟ ವಾಪಸ್: 3,600 ದರಕ್ಕೆ ತೃಪ್ತಿಪಟ್ಟ ರೈತರು
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್