ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಪಂಚಮಿ/ ಷಷ್ಠಿ, ನಿತ್ಯನಕ್ಷತ್ರ: ಅನಿರಾಧಾ, ಯೋಗ: ಆಯುಷ್ಮಾನ್, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 16 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:53 ರಿಂದ 09:22, ಯಮಘಂಡ ಕಾಲ ಮಧ್ಯಾಹ್ನ 10:51ರಿಂದ 12: 20ರವರೆಗೆ, ಗುಳಿಕ ಕಾಲ ಮಧ್ಯಾಹ್ನ 03:19 ರಿಂದ 04:48 ರವರೆಗೆ.
ಮೇಷ ರಾಶಿ: ಎಂತಹ ಎತ್ತರವನ್ನೇ ಏರಿದರೂ ನಿಮ್ಮ ಮೂಲ ಸ್ಥಾನದ ಬಗ್ಗೆ ಪ್ರೀತಿ ಇರಲಿ. ಹಣಕಾಸಿನ ವಿಷಯದಲ್ಲಿ ನೀವು ಎಷ್ಟೇ ಎಚ್ಚರದಿಂದ ಇದ್ದರೂ ವ್ಯಯವಾಗುವ ಸಾಧ್ಯತೆ ಹೆಚ್ಚು ಇರಲಿದೆ. ಆಸ್ತಿ ಹಂಚಿಕೆಯು ಇತ್ಯರ್ಥವಾಗಬಹುದು. ನಿಮ್ಮನ್ನು ಕೆಲವು ಸಂದರ್ಭಗಳು ಪರಿವರ್ತನೆ ಮಾಡಬಹುದು. ಉನ್ನತ ಅಧ್ಯಯನವನ್ನು ಬಯಸಿ ವಿದೇಶಕ್ಕೆ ತೆರಳುವ ಸಾಧ್ಯತೆ ಇರಲಿದೆ. ನಿಮ್ಮ ನಿರೀಕ್ಷೆಯ ಗುರಿಯನ್ನು ತಲುಪುವುದು ಕಷ್ಟವಾದೀತು. ನಿಮ್ಮ ಸಂಗಾತಿಯ ವಿಚಾರದಲ್ಲಿ ಪ್ರೀತಿಯು ಅಧಿಕವಾಗಬಹುದು. ಕೃತಜ್ಞತೆಯು ನಿಮ್ಮ ಮುಖ್ಯಗುಣವನ್ನಾಗಿ ಮಾಡಿಕೊಳ್ಳುವಿರಿ. ಬಂಧುಗಳ ಮಾತು ನಿಮ್ಮನ್ನು ದಾರಿ ತಪ್ಪಿಸಬಹುದು. ಹಣಕಾಸಿನ ವ್ಯವಹಾರವನ್ನು ಈಗಲೇ ಸರಿಮಾಡಿಕೊಳ್ಳುವುದು ಉತ್ತಮ. ಸಂಗಾತಿಯ ಜೊತೆಗಿನ ಸಂಬಂಧವನ್ನು ಗಟ್ಟಿಯಾಗಿಸುವಿರಿ. ನಿಮ್ಮನ್ನು ನಂಬಿದವರಿಗೆ ಕಿಂಚಿತ್ ಸಹಾಯವನ್ನು ಮಾಡಬೇಕಾಗುವುದು. ನಿಮ್ಮ ಸಾಹಸದ ಬಗ್ಗೆ ಜನರು ಮಾತನಾಡಿಕೊಳ್ಳಬಹುದು.
ವೃಷಭ ರಾಶಿ: ನಿಮ್ಮ ಸಂಧಾನದ ಮಾತುಗಳು ನಿಷ್ಫಲವಾಗಬಹುದು. ಬಹಳ ಹಳೆಯ ಗೆಳೆಯನವಾದರೂ ಹಂಚಿಕೊಳ್ಳುವಷ್ಟು ಆಪ್ತತೆ ಬಾರದು. ಇಂದು ನಿಮಗೆ ಬೇರೆ ಬೇರೆ ಮೂಲಗಳಿಂದ ಸಂಪಾದನೆಗೆ ಅವಕಾಶಗಳು ಸಿಗಬಹುದು. ಸಾಲದ ಹಣವು ಇಂದು ನಿಮ್ಮ ಕೈಸೇರಬಹುದು. ವಿದೇಶೀ ವ್ಯವಹಾರದಲ್ಲಿ ನಿಮಗೆ ಲಾಭವು ಬರಬಹುದು. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವು ಇರುವುದು. ಇನ್ನೊಬ್ಬರ ಕ್ಷೇಮ ಸಮಾಚಾರವನ್ನು ಕೇಳುವಿರಿ. ನಿಮಗೆ ಬೇಕಸದ ಮುಖ್ಯ ಜನರನ್ನು ನೀವು ಕಡೆಗಣಿಸಿ ಸಂತೋಷದಿಂದ ಇರುಬಿರಿ. ಬಹಳ ದಿನಗಳ ಅನಂತರ ಸಂತಾನದ ಸುಖದ ನಿರೀಕ್ಷೆಯಲ್ಲಿ ಸಫಲರಾಗುವಿರಿ. ಸಾಹಸದ ಕೆಲಸಗಳನ್ನು ಮಾಡುವಾಗ ಎಚರಚರ ಅಗತ್ಯ. ಆಪ್ತರಿಂದ ಸಂಪತ್ತನ್ನು ಪಡೆದುಕೊಳ್ಳುವಿರಿ. ಇನ್ನೊಬ್ಬರ ಒತ್ತಾಯದ ಹೊಸ ಕಲಿಕೆಯನ್ನು ಆರಂಭಿಸುವಿರಿ. ನಿಮಗೆ ಆಗದವರನ್ನು ನಿಂದಿಸುತ್ತ ದಿನವನ್ನು ಕಳೆಯುವಿರಿ. ಪರಿಚಯವಿಲ್ಲದ ಜನರಿಂದ ನೀವು ಅಂತರವನ್ನು ಕಾಯ್ದುಕೊಳ್ಳುವಿರಿ.
ಮಿಥುನ ರಾಶಿ: ಅನಿರೀಕ್ಷಿತ ಕೊಡುಗೆಗಳಿಂದ ನಿಮಗೆ ಸಂತೋಷವಾಗಲಿದೆ. ಉದ್ಯೋಗದಲ್ಲಿ ಎಲ್ಲಿಗಾದರೂ ಪ್ರಯಾಣ ಮಾಡುವ ಅವಕಾಶ ಬರುವುದು. ಇಂದು ಸ್ತ್ರೀಯರು ನಾನಾ ತೊಂದರೆಗಳನ್ನು ಅನುಭವಿಸಬೇಕಾಗಬಹುದು. ಅನಾರೋಗ್ಯವು ನಿಮ್ಮ ಉತ್ಸಾಹವನ್ನು ಕಡಿಮೆ ಮಾಡಬಹುದು. ಯಾರದೋ ತಪ್ಪಿಗೆ ತಲೆಕೊಡುವ ಸಂದರ್ಭವು ಬರಬಹುದು. ನೆರೆಹೊರೆಯರ ನಡುವೆ ವಾಗ್ವಾದವು ಆಗಬಹುದು. ಸರ್ಕಾರದ ಕಡೆಯಿಂದ ನಿಮ್ಮ ಕೆಲಸಕ್ಕೆ ಒಪ್ಪಿಗೆ ಸಿಗಬಹುದು. ಉದ್ಯೋಗದಲ್ಲಿ ಉದ್ವೇಗಕ್ಕೆ ಒಳಗಾಗುವ ಸಾಧ್ಯತೆ ಇವೆ. ಉದ್ಯೋಗದ ಮಿತ್ರನನ್ನು ಭೇಟಿಯಾಗುವಿರಿ. ಆದಾಯವು ನಿಮ್ಮ ಯೋಜನೆಯಷ್ಟು ಇದ್ದರೂ ಆದಾಯವು ಹೆಚ್ಚಿನ ಖರ್ಚಿಗೆ ಕಾರಣವಾಗಬಹುದು. ಸಂಗಾತಿಯ ಜೊತೆ ಬಹಳ ದಿನಗಳ ಅನಂತರ ಸೌಹಾರ್ದ ಮಾತುಕತೆ ಇರಲಿದೆ. ನಿಮ್ಮ ಆಪ್ತರ ಜೊತೆ ಕೆಲವು ಸಂತೋಷದ ಕ್ಷಣಗಳನ್ನು ಕಳೆಯುವಿರಿ.
ಕರ್ಕಾಟಕ ರಾಶಿ: ನಿಮ್ಮ ಕಾರ್ಯದ ಕೌಶಲ್ಯತೆಯು ಸಹೋದ್ಯೋಗಿಗಳಿಗೆ ಇಷ್ಟವಾಗುವುದು. ನಿಮಗೆ ಬೇರೆ ಕಡೆಗಳಿಂದ ಬರಬೇಕಾದ ಹಣವು ಆಕಸ್ಮಿಕವಾಗಿ ಬರಲಿದೆ. ಅನಗತ್ಯ ತಿರುಗಾಟದಿಂದ ಬೇಸರವಾಗಬಹುದು. ನಿಮ್ಮ ಕಾರ್ಯಗಳನ್ನು ಮುಂದೂಡುವಿರಿ. ಇಂದು ನೀವು ಮನೋನಿಯಂತ್ರಣದಲ್ಲಿ ಸೋಲುವಿರಿ. ಲಾಭವಿರುವ ಕೆಲಸಗಳನ್ನು ಮಾತ್ರ ಮಾಡಲು ಇಚ್ಛೆಯು ಇರಲಿದೆ. ಮನಸ್ಸಿನ ಚಾಂಚಲ್ಯವನ್ನು ಯೋಗದ ಮೂಲಕ ನಿಯಂತ್ರಿಸುವಿರಿ. ಬಂಧುಗಳು ನಿಮಗೆ ಆರ್ಥಿಕ ಸಹಾಯವನ್ನು ಮಾಡಲು ಬಂದರೂ ನೀವು ಅದನ್ನು ಸ್ವಾಭಿಮಾನದಿಂದ ನಿರಾಕರಿಸುವಿರಿ. ಸರ್ಕಾರದ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಕರೆಯು ಬರಬಹುದು. ರೋಗಬಾಧೆಯನ್ನು ನೀವು ಲೆಕ್ಕಕ್ಕೆ ತಂದುಕೊಳ್ಳಲಾರಿರಿ. ನಿಮ್ಮ ವೃತ್ತಿಜೀವನಕ್ಕೆ ಮುಖ್ಯವಾದ ಜನರು ಇಂದು ನಿಮಗೆ ಸ್ವಲ್ಪ ತೊಂದರೆ ನೀಡಬಹುದು.
ಸಿಂಹ ರಾಶಿ: ಅಪರಿಚಿತರ ಜೊತೆ ವಿವಾದವನ್ನು ಮಾಡುವಿರಿ. ಅವಿವಾಹಿತರಿಗೆ ವಿವಾಹದ ಚಿಂತೆ ಹೆಚ್ಚಾಗುವುದು. ಇಂದು ನೀವು ಪಿತ್ರಾರ್ಜಿತ ಆಸ್ತಿಯ ಬಗ್ಗೆ ಆಸಕ್ತಿ ಹೊಂದುವಿರಿ. ದ್ವೇಷವನ್ನು ದೀರ್ಘಕಾಲದವರೆಗೆ ಮುಂದೂಡುವ ಅವಶ್ಯಕತೆ ಇರದು. ಇಂದು ಬಹು ದಿನಗಳ ಚಿಂತಿತ ಕಾರ್ಯವು ಸಫಲವಾಗುವುದು. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಿದರೂ ವಿರೋಧ ಬರುವ ಸಾಧ್ಯತೆ ಇದೆ. ನೂತನ ವಸ್ತುಗಳ ಖರೀದಿಯನ್ನು ಬಹಳ ಸಂತೋಷದಿಂದ ಮಾಡುವಿರಿ. ನಿಮ್ಮ ಕೆಲಸವನ್ನು ವಿವಾದ ಮಾಡಿಕೊಳ್ಳದೇ ಮಾಡಿಕೊಳ್ಳಿ. ಎಲ್ಲ ಸಮಯದಲ್ಲಿಯೂ ವಾತಾವರಣವು ನಿಮ್ಮ ಪರವಾಗಿಯೇ ಇರುತ್ತದೆ ಎಂಬುದನ್ನು ಮರೆತುಬಿಡಿ. ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುವುದು ಹೊಸತಾಗದು. ಇದಕ್ಕಾಗಿ ನೌಕರರು ತಿರುಗಿ ಬೀಳಬಹುದು. ನೀವು ಅಂದುಕೊಂಡಿದ್ದನ್ನು ಸರಿಯಾಗಿ ಪ್ರಸ್ತುತಪಡಿಸುವಿರಿ. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಗೊಂದಲ ಸೃಷ್ಟಿಯಾಗಬಹುದು. ನೀವು ಇಂದು ಕಾನೂನಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು.
ಕನ್ಯಾ ರಾಶಿ: ವಿದ್ಯಾರ್ಥಿಗಳು ಕಲಿತದ್ದನ್ನೇ ಕಲಿಯಬೇಕಾದ ಅನಿವಾರ್ಯತೆ ಬಂದೀತು. ಇಂದು ನೀವು ಅನ್ಯಸ್ಥಳದಲ್ಲಿ ಆಕಸ್ಮಿಕವಾಗಿ ವಾಸಮಾಡಬೇಕಾಗುವುದು. ಭೂಮಿಯ ವ್ಯವಹಾರವನ್ನು ಸರಿಯಾದ ಕ್ರಮದಲ್ಲಿ ಮಾಡಿ. ನಕಾರಾತ್ಮಕ ಚಿಂತನೆಯನ್ನು ಹೆಚ್ಚಿಸಲು ಅಂತಹ ವಾತಾವರಣವು ಇರಲಿದೆ. ಉಳಿತಾಯವನ್ನು ನೀವು ಅಲ್ಪವಾದರೂ ಮಾಡಿ. ಮಕ್ಕಳಿಗೆ ಮಾಡಿದ ಖರ್ಚು ನಿಮಗೆ ಸಾರ್ಥಕ ಎನಿಸಬಹುದು. ನಿಮ್ಮ ಅರ್ಹತೆಯನ್ನು ಉದ್ದೇಶಪೂರ್ವಕವಾಗಿ ತೋರಿಸಬೇಕಾಗುವುದು. ಸಂಗಾತಿಗೆ ನಿಮ್ಮ ಉಡುಗೊರೆಯು ಇಷ್ಟವಾಗದೇ ಹೋಗಬಹುದು. ಕೃಷಿಯ ಮೇಲೆ ನಿಮ್ಮ ಪ್ರಯೋಗವು ನಡೆಯುವುದು. ಮಹಿಳೆಯರು ಬಂಧುಗಳ ಮನೆಗೆ ಹೋಗುವ ಸಾಧ್ಯತೆ ಇದೆ. ನಿಮ್ಮ ನಂಬಿಕೆಯನ್ನು ನೀವು ಎಲ್ಲರೆದುರು ಸಮರ್ಥಿಸಿಕೊಳ್ಳುವಿರಿ. ಅಪರಿಚಿತರು ನಿಮ್ಮ ಎಲ್ಲ ವಿವರಗಳನ್ನು ಪಡೆಯಲು ಇಚ್ಛಿಸಬಹುದು. ಕಠಿಣ ಪರಿಶ್ರಮಕ್ಕೆ ಸರಿಯಾಗಿ ಯಶಸ್ಸು ಸಿಗುತ್ತದೆ.
ತುಲಾ ರಾಶಿ: ನೀವು ಯಾವ ಮಾತನ್ನು ಒಮ್ಮೆಲೆ ನಂಬುವುದಿಲ್ಲ. ರಾಜಕೀಯವಾಗಿ ಇರುವವರು ಹಿನ್ನಡೆಯನ್ನು ಅನುಭವಿಸಬೇಕಾದೀತು. ಹೊಸ ತಂತ್ರವನ್ನು ನೀವು ರೂಪಿಸಿಕೊಳ್ಳುವಿರಿ. ನಿಮ್ಮೆದುರೇ ಮಾತು ಬದಲಿಸುವವರನ್ನು ನೀವು ಇಷ್ಟಪಡಲಾರಿರಿ. ಹಳೆಯ ನೋವುಗಳು ನಿಮ್ಮನ್ನು ಕಾಡಬಹುದು. ಶುಭ ಸುದ್ದ ನಿರೀಕ್ಷೆಯು ಇಂದು ಕೇವಲ ನಿರೀಕ್ಷೆಯಾಗಿಯೇ ಇರಲಿದೆ. ಉದ್ಯಮಿಗಳು ಲಾಭಕ್ಕಾಗಿ ಬಹಳ ಶ್ರಮಪಡಬೇಕಾಗುವುದು. ಪ್ರೀತಿಯಲ್ಲಿ ನಿಮಗೆ ಖುಷಿ ಸಿಗದು. ಮನಃಸ್ಥಿತಿಯು ಸರಿ ಇಲ್ಲದ ಕಾರಣ ಯಾವ ಕೆಲಸವನ್ನೂ ಖುಷಿಯಿಂದ ಮಾಡಲಾಗದು. ದಾಂಪತ್ಯದಲ್ಲಿ ಸಣ್ಣ ವಿರಸವು ಇರಲಿದೆ. ನೇರ ಮಾತಿನಿಂದ ಇತರರಿಗೆ ಬೇಸರವಾಗುವುದು. ಮಕ್ಕಳ ವಿಚಾರದಲ್ಲಿ ನಿಮ್ಮ ವರ್ತನೆಯು ಸರಿಯಾದುದು ಆಗಿರದು. ಅಧಿಕಾರಿಗಳನ್ನು ಮೆಚ್ಚಿಸಲು ನೀವು ಸಮಯವನ್ನು ಹಾಳುಮಾಡುವಿರಿ. ಪ್ರಣಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ.
ವೃಶ್ಚಿಕ ರಾಶಿ: ನೀವು ಉದ್ಯೋಗವನ್ನು ಇನ್ನು ಮುಂದೆ ಗಂಭೀರವಾಗಿ ಸ್ವೀಕರಿಸುವಿರಿ. ಇಂದಿನ ವಿವಾದಗಳು ನಿಮ್ಮ ಮನಸ್ಸನ್ನು ಕೆಡಿಸಬಹುದು. ಅತಿಯಾದ ನಂಬಿಕೆಯಿಂದ ಕೆಲವು ಅಮೂಲ್ಯವಾದ ವಸ್ತುಗಳನ್ನು ಕಳೆದುಕೊಳ್ಳುವಿರಿ. ಮನೆಯಲ್ಲಿ ಅಶಾಂತಿಯ ವಾತಾವರಣವು ಇರಲುದೆ. ನಿಮ್ಮ ವ್ಯವಹಾರಕ್ಕೆ ಯಾರಾದರೂ ಹಸ್ತಕ್ಷೇಪ ಮಾಡಲು ಬರಬಹುದು. ಸಿಟ್ಟು ಮಾಡಿಕೊಂಡರೂ ಕ್ಷಣ ಕಾಲದಲ್ಲಿ ಅದು ಸರಿಯಾಗುವುದು. ಯಾರ ಅಸಹಾಯಕತೆಯೂ ನಿಮ್ಮನ್ನು ಏನೂ ಮಾಡಲಾಗದು. ವೃತ್ತಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಬೇಕಾದೀತು. ಬಾಲ್ಯದ ಸ್ನೇಹಿತರು ನಿಮ್ಮನ್ನು ಕಂಡು ಖುಷಿಪಡುವರು.
ವೃತ್ತಿಜೀವನವು ಹೊಸ ದಿಕ್ಕಿನತ್ತ ಹೊರಳಬಹುದು. ಇಟ್ಟುಕೊಳ್ಳಲು ಕೊಟ್ಟ ಹಣವು ಪುನಃ ಬಾರದೇ ಇದ್ದೀತು. ಹಿರಿಯರ ಎದುರು ಮಾತನಾಡಲು ನೀವು ಹೆದರುವಿರಿ. ಆತ್ಮವಿಶ್ವಾಸವು ಇದ್ದರೂ ಅದನ್ನು ಸರಿಯಾಗಿ ಬಳಸಿಕೊಳ್ಳಲು ಆಗದು. ಕಳೆದು ಸಂದರ್ಭವನ್ನು ಪುನಃ ಸೃಷ್ಟಿಸಿಕೊಳ್ಳಲು ಪ್ರಯತ್ನಿಸುವಿರಿ.
ಧನು ರಾಶಿ: ದೊಡ್ಡ ಸಂಭ್ರಮದಲ್ಲಿ ಸಣ್ಣ ತಪ್ಪುಗಳು ಆಗಬಹುದು. ಅದನ್ನು ಸರಿಮಾಡಿಕೊಳ್ಳಬೇಕಾಗುವುದು. ಯಾರ ಮೇಲೋ ಹಠಸಾಧಿಸುವುದು ಬೇಡ. ನಿಮ್ಮಷ್ಟಕ್ಕೆ ನೀವು ಇರಿ. ನಿಮ್ಮ ಮಾತಿಗೆ ಇಂದು ವಿರೋಧವು ಬರಬಹುದು. ಆದಷ್ಟು ಇಂತಹ ಸಂದರ್ಭವು ಬಾರದಂತೆ ನೋಡಿಕೊಳ್ಳುವುದು ಉತ್ತಮ. ನಿಮ್ಮ ಸ್ಪಷ್ಟ ಮಾತಿಗೆ ಒಳ್ಳೆಯ ಉದ್ಯೋಗವು ಸಿಗಬಹುದು. ತಂದೆಯ ಮೇಲೆ ನಿಮಗೆ ಬೇಸರ ಉಂಟಾಗಬಹುದು. ಸಂಗಾತಿಯ ಮಾತುಗಳು ನಿಮಗೆ ನೋವನ್ನು ಕೊಡಬಹುದು. ಆಸ್ತಿಯ ವಿಚಾರದಲ್ಲಿ ನೀವು ನಿಮ್ಮರಿಗೆ ಸುಳ್ಳು ಹೇಳಿದ್ದು ಗೊತ್ತಾಗುವುದು. ಆರ್ಥಿಕ ನಷ್ಟವನ್ನು ತುಂಬಿಕೊಳ್ಳಲು ಅನ್ಯಮಾರ್ಗವನ್ನು ಹುಡುಕುವಿರಿ. ವಿಶೇಷವಾದ ವಸ್ತುವನ್ನು ಕೊಳ್ಳುವ ಆಸಕ್ತಿಯು ಇರಲಿದೆ. ಹಣಕಾಸಿಗೆ ಸಂಬಂಧಿಸಿದ ವೃತ್ತಿಯಲ್ಲಿ ಒತ್ತಡ ಕಾಣಿಸುವುದು. ದೈನಂದಿನ ಕೆಲಸದಲ್ಲಿ ಸಮಸ್ಯೆಗಳು ಉಳಿಯಬಹುದು. ಉದ್ಯೋಗಕ್ಕೆ ಸೇರಲು ಪ್ರಶ್ನೆಗಳ ಸುರಿಮಳೆ ಕಾಣಿಸಿಕೊಳ್ಳುವುದು.
ಮಕರ ರಾಶಿ: ಸ್ವಂತಿಕೆಯನ್ನು ನೀವು ಯಾವ ಸನ್ನಿವೇಶದಲ್ಲಿಯೂ ಬಿಟ್ಟುಕೊಡಲಾರಿರಿ. ಏನೋ ಮಾಡಲು ಹೋಗಿ ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಅಧಿಕ ಆಲೋಚನೆಯನ್ನು ಮಾಡುವುದರಿಂದ ಮನಸ್ಸು ದುರ್ಬಕವಾಗಬಹುದು. ನಿಮಗಮ ಜೀವನ ಕ್ರಮವನ್ನು ಬದಲಿಸಿಕೊಳ್ಳಲು ಇಷ್ಟಪಡುವಿರಿ. ಸ್ವಂತ ಉದ್ಯೋಗದಲ್ಲಿ ನಿಮಗೆ ಕೆಲವು ಕಹಿ ವಿಚಾರವು ಗೊತ್ತಾಗಲಿದೆ. ನಿಮ್ಮ ಸಂಗಾತಿಯ ಜೊತೆ ಹೆಚ್ಚು ಸಮಯ ಕಳೆಯಲು ನಿಮಗೆ ಆಗದು. ಯಾರಿಂದಲಾದರೂ ಔಚಿತ್ಯಪೂರ್ಣವಾದ ಮಾರ್ಗದರ್ಶನವು ನಿಮಗೆ ಸಿಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಮನೆಯಿಂದ ದೂರ ಹೋಗಬೇಕಾಗುವುದು. ಕಚೇರಿಯಲ್ಲಿ ನಿಮ್ಮ ಸಾಧನೆಗೆ ಮೆಚ್ಚುಗೆ ಸಿಗಲಿದೆ. ನೂತನ ವಸ್ತುಗಳ ಖರೀದಿಗೆ ಹೆಚ್ಚು ಮನಸ್ಸು ಮಾಡುವಿರಿ. ನಿಮ್ಮ ಸಹವಾಸವನ್ನು ಬಿಟ್ಟವರು ಪುನಃ ಬರಬಹುದು. ನೀವು ಇಂದು ಅನಿರೀಕ್ಷಿತವಾಗಿ ಆರ್ಥಿಕ ಲಾಭವನ್ನು ಪಡೆಯಬಹುದು. ನೀವು ಕೆಲವು ಉತ್ತಮ ಅವಕಾಶಗಳನ್ನು ಪಡೆಯಬಹುದು.
ಕುಂಭ ರಾಶಿ: ನಿಮ್ಮ ಸಂಗವು ಚೆನ್ನಾಗಿದ್ದರೆ ಯಾರೂ ಏನೂ ಮಾಡಲಾರರು. ಇಂದು ನಿಮಗೆ ಆತ್ಮೀಯರ ಒಡನಾಡ ಅಧಿಕವಾಗಲಿದೆ. ಸಹೋದ್ಯೋಗಿಗಳನ್ನು ಕೆಲಸದಲ್ಲಿ ಸಹಾಯಕ್ಕಾಗಿ ಕೇಳುವಿರಿ. ನಿಮ್ಮದಾದ ಚಿಂತನೆಯನ್ನು ಬಿಟ್ಟು ಬೇರೆ ಕಡೆ ಯೋಚನೆಯನ್ನು ಮಾಡಲಾರಿರಿ. ಆನಂದದಿಂದ ಈ ದಿನವನ್ನು ಕಳೆಯಲು ಬಯಸುವಿರಿ. ಅನಿರೀಕ್ಷಿತ ಪ್ರಯಾಣವು ಬರಬಹುದು. ಕೊಡಬೇಕಾದ ಹಣವನ್ನು ಯಾವುದೇ ಕಾರಣಕ್ಕೂ ಮುಂದೂಡಲಾರಿರಿ. ನಿಮ್ಮ ವಿವಾಹದ ಮಾತುಕತೆ ವಿಳಂಬವಾಗಿದೆ ಬೇಸರವು ಆಗಬಹುದು. ದಾಖಲೆಗಳನ್ನು ಸರಿಯಾದ ಕಡೆಗಳಲ್ಲಿ ಇಟ್ಟುಕೊಳ್ಳಿ. ನಿಮಗೆ ಸರಿಯಾದ ಸಮಯದಲ್ಲಿ ಹಣವು ಸಿಕ್ಕಿರುವುದು ಸಂತೋಷದ ವಿಚಾರವಾಗಲಿದೆ. ಮನೆಯವರ ಜೊತೆ ಹೆಚ್ಚು ಆನಂದದಿಂದ ಇರುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚು ತೊಡಗುವಿರಿ. ಅಪ್ರಮತ್ತರಾಗಿ ನೀವು ವ್ಯವಹಾರವನ್ನು ಮಾಡುವಿರಿ. ನಿಮ್ಮ ಆದಾಯದ ಜೊತೆಗೆ ನಿಮ್ಮ ಖರ್ಚುಗಳೂ ಹೆಚ್ಚಾಗುತ್ತವೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ವೃದ್ಧಿಸಲು ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ.
ಮೀನ ರಾಶಿ: ವ್ಯವಹಾರದಲ್ಲಿನ ಸೂಕ್ಷ್ಮ ವಿಚಾರಗಳನ್ನು ವೇಗವಾಗಿ ಅರಿತುಕೊಳ್ಳಬೇಕು. ಇಂದು ಮನೆಯಲ್ಲಿ ನಿಮಗೆ ನಿರಾಸೆಯ ಅನುಭವ ಆಗಬಹುದು. ಆಲಸ್ಯದಿಂದ ನಿಮ್ಮ ಕೆಲಸದಲ್ಲಿ ಹಿನ್ನಡೆಯಾಗಬಹುದು. ಕೃಷಿಯಲ್ಲಿ ನೀವು ಹೆಚ್ಚಿನ ಪ್ರಗತಿಯನ್ನು ಸಾಧಿಸುವ ಮನಸ್ಸನ್ನು ಇಟ್ಟುಕೊಳ್ಳುವಿರಿ. ನೀವು ಇಂದು ಅತಿಥಿಯಾಗಿ ಕಾರ್ಯದಲ್ಲಿ ಭಾಗವಹಿಸುವಿರಿ. ಮನೆಯವರನ್ನು ನಿಷ್ಠುರ ಮಾಡಿಕೊಳ್ಳುವುದು ಬೇಡ. ನಿಮ್ಮ ನಡವಳಿಕೆಯನ್ನು ಬದಲಿಸಿಕೊಳ್ಳುವಿರಿ. ನಿಮ್ಮಿಂದಾಗಿ ಮನೆಯಲ್ಲಿ ಇಂದು ಸಂತೋಷವು ಇರಲಿದೆ. ಕೋಪವು ಇದ್ದಕ್ಕಿದ್ದಂತೆ ಕಡಿಮೆ ಆಗಿರುವುದು ಆಶ್ಚರ್ಯ ಎನಿಸಬಹುದು. ಕಳೆದ ದಿಮಗಳನ್ನು ಒಂದೊಂದಾಗಿಯೇ ಮೆಲುಕು ಹಾಕಿಕೊಂಡು ಸಂತೋಷಪಡುವಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿಯು ಕಡಿಮೆ ಆಗಿದೆ ಎಂದು ಅನ್ನಿಸಬಹುದು. ವಿಶೇಷ ವ್ಯಕ್ತಿಯ ಬಗ್ಗೆ ಒಂಟಿ ಜನರ ಆಸಕ್ತಿ ಹೆಚ್ಚಾಗುತ್ತದೆ. ಇಂದು ನಿಮ್ಮ ಭಾವನೆಗಳನ್ನು ನಿಮ್ಮ ಪ್ರೇಮಿಗೆ ಮುಕ್ತವಾಗಿ ವ್ಯಕ್ತಪಡಿಸಿ. ಮನೆಯ ಸಂಭ್ರಮದಲ್ಲಿ ನೀವೂ ಒಂದಾಗಿ.