ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಜನವರಿ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಶೋಭನ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 59 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 14 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:37 ರಿಂದ 02:01ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:24 ರಿಂದ 09:48ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:13 ರಿಂದ ಮಧ್ಯಾಹ್ನ 12:37ರ ವರೆಗೆ.
ಮೇಷ ರಾಶಿ : ಸಮಯದ ಹೊಂದಾಣಿಕೆಯನ್ನು ಮಾಡಿಕೊಳ್ಳಲು ನಿಮಗೆ ಕಷ್ಡವಸದೀತು. ಆರೋಗ್ಯ ಬಗ್ಗೆ ಗಮನವು ಕಡಿಮೆಯಾದಂತೆ ತೋರುವುದು. ಆರ್ಥಿಕಮೂಲವನ್ನು ಸರಿಯಾಗಿಸಿಕೊಳ್ಳುವುದು ಉತ್ತಮ. ಸ್ನೇಹಿತರ ಜೊತೆ ಪಾಲುದಾರಿಕೆಯಲ್ಲಿ ಸೇರಿಕೊಳ್ಳುವುದು ಇಷ್ಟವಾದೀತು. ನಿಮ್ಮ ಕಾರ್ಯವನ್ನು ಮಿತ್ರರ ಮೂಲಕ ಮಾಡಿಕೊಳ್ಳುವಿರಿ. ಮಕ್ಕಳಿಗೆ ನಿಮ್ಮಿಂದ ಮಾರ್ಗದರ್ಶನದ ಅವಶ್ಯಕತೆ ಇರಬಹುದು. ಸಮಯಕ್ಕೆ ಆಗುವ ಕೆಲಸವು ಸಮಯದ ಮಿತಿಯನ್ನು ಮೀರಬಹುದು. ಅಪರಿತ ಕರೆಗಳಿಂದ ನಿಮಗೆ ಸಂಕಟವಾಗಬಹುದು. ಇಂದಿನ ಆಲಸ್ಯವು ನಿಮಗೆ ಯಾವ ಕೆಲಸಗಳಿಗೂ ಉತ್ಸಾಹವೇ ಇರದು. ನಿಮ್ಮವರ ಆರೋಗ್ಯವು ಹದ ತಪ್ಪಿಹೋಗಬಹುದು. ಶತ್ರುಗಳ ಭಯವು ಕಾರ್ಯವನ್ನು ನಿಧಾನ ಮಾಡಿಸುವುದು. ನಿಮ್ಮ ಒತ್ತಡಗಳನ್ನು ಮರೆತು ನಿಶ್ಚಿಂತೆಯಿಂದ ದಿನವನ್ನು ಕಳೆಯುವಿರಿ.
ವೃಷಭ ರಾಶಿ : ಆರ್ಥಿಕತೆಯು ಸಮೃದ್ಧವಾಗಿದ್ದರೂ ಸರಿಯಾಗಿ ವಿನಿಯೋಗಿಸುವ ಬಗ್ಗೆ ಅನುಭವ, ತಿಳಿವಳಿಕೆ ಸಾಲದು. ಗೌರವವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ನಿರಂತರ ಶ್ರಮವಿರುವುದು. ಜೀವನ ಸಂಗಾತಿಯ ಜೊತೆ ನೀವು ಸಂತೋಷದ ಸಮಯವನ್ನು ಕಳೆಯುವಿರಿ. ಕಳೆದುಕೊಂಡ ಮನೆಯ ಸದಸ್ಯರ ಬಗ್ಗೆ ನೆನಪು ಬರಬಹುದು. ಹೊಸ ಬಗೆಯಲ್ಲಿ ಯೋಚಿಸುವ ಸ್ವಭಾವವನ್ನು ಬೆಳೆಸಿಕೊಳ್ಳುವಿರಿ. ಪುಣ್ಯಸ್ಥಳಗಳ ಭೇಟಿಯಿಂದ ಖುಷಿಯಾಗುವುದು. ಸಾಹಿತ್ಯ ಆಸಕ್ತರಿಗೆ ಉತ್ತಮ ಅವಕಾಶಗಳು ಸಿಗುವುದು. ಸ್ವಂತ ವಾಹನದ ದುರಸ್ತಿಯಿಂದ ಧನ ನಷ್ಟ. ನಿಮ್ಮ ಸಲಹೆಯನ್ನು ಕೇಳದಿರುವುದು ಇಷ್ಟವಾಗದು. ಸುತ್ತಾಡದಿಂದ ಆಯಾಸವಾಗುವಚುದು. ನೌಕರರು ನಿಮ್ಮ ಮೇಲೆ ಸಿಟ್ಟಾಗಬಹುದು. ಸೌಕರ್ಯಕ್ಕೆ ತಕ್ಕ ಹಾಗೆ ದಿನಚರಿಯನ್ನು ಬದಲಿಸಿ. ಪ್ರಭಾವೀ ವ್ಯಕ್ತಿಗಳಿಂದ ನಿಮ್ಮ ಕಾರ್ಯವನ್ನು ಸಾಧಿಸಿಕೊಳ್ಳುವಿರಿ.
ಮಿಥುನ ರಾಶಿ : ನಿಮ್ಮ ಇಂದಿನ ಕಾರ್ಯಗಳು ಮಿಂಚಿನ ವೇಗದ ಮುಕ್ತಾಯವಾಗಿ ಆರಾಮಾಗಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ಕೆಲವರ ಬಗ್ಗೆ ಹರಟುವ ಮನಸ್ಸಾದೀತು. ಜವಾಬ್ದಾರಿಯ ಕೆಲಸವನ್ನು ಜಾಗರೂಕತೆಯಿಂದ ಮಾಡಿ. ದಾಂಪತ್ಯದ ಕಲಹವು ಮುಕ್ತಾಯವಾಗುವುದು. ಹೊಸ ಕೆಲಸಗಳನ್ನು ನಿರ್ವಹಿಸಲು ಧೈರ್ಯ ಸಾಲದು. ವಿದೇಶದ ವ್ಯವಹಾರವನ್ನು ಯಾರದೋ ಮೂಲಕ ನಿಮ್ಮದಾಗಿಸಿಕೊಳ್ಳುವಿರಿ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸದಲ್ಲಿ ಉತ್ತಮಫಲಿತಾಂಶವನ್ನು ಪಡೆಯುವರು. ಆಕಸ್ಮಿಕ ಧನಲಾಭದಿಂದ ನಿಮಗೆ ಖುಷಿಯಾಗುವುದು. ಹಿರಿಯರ ಬಗ್ಗೆ ನಿಮಗೆ ಪೂಜ್ಯ ಭಾವವು ಬರಬಹುದು. ಸರ್ಕಾರದ ಕೆಲಸದಲ್ಲಿ ಇಂದು ವಿಳಂಬವಾಗಲಿದೆ.ನಿಮ್ಮವರ ಧನ ಸಹಾಯವನ್ನು ಕೇಳಲು ಮುಜುಗರವಾದೀತು. ಅನ್ಯ ಚಿಂತೆಯಿಂದ ನಿದ್ರೆಗೆ ಭಂಗ. ಅನವಶ್ಯಕ ಮಾತುಗಳಿಂದ ವಿವಾದವಾಗುವುದು. ಆಸ್ತಿಯನ್ನು ಕೆಲವು ಶರತ್ತಿನ ಜೊತೆ ಹೊಂದಾಣಿಕೆ ಮಾಡಿಕೊಂಡು ಹಂಚಿಕೊಳ್ಳಲಿದ್ದೀರಿ.
ಕಟಕ ರಾಶಿ : ನೀವು ದೃಢವಾಗಿ ಮಾತನಾಡಿದರೆ ಮಾತ್ರ ನಿಮ್ಮ ಮೇಲೆ ನಂಬಿಕೆ ಸಾಧ್ಯ. ಸ್ನೇಹಿತರನ್ನು ಕುಟುಂಬದ ಸದ್ಯರಂತೆ ಭಾವಿಸುವಿರಿ. ನೀವು ಸರಿಯಾದ ಗುರಿಯನ್ನು ಇಟ್ಟುಕೊಂಡು ಮುಂದುವರಿದರೆ ಗುರಿಯನ್ನು ಸಾಧಿಸಲು ಸಾಧ್ಯವಾಗುವುದು. ಮನಶ್ಚಾಂಚಲ್ಯವನ್ನು ದೂರಮಾಡಿಕೊಳ್ಳುವುದು ಅನಿವಾರ್ಯವಾಗುವುದು. ನೀವಾಡುವ ಸುಳ್ಳು ಎಲ್ಲರಿಗೂ ಗೊತ್ತಾದೀತು. ನಿದ್ರೆಯಿಂದ ಆಲಸ್ಯವು ಹೆಚ್ಚಾಗುವುದು. ಹಣಕಾಸಿನ ವ್ಯವಹಾರದಲ್ಲಿ ಮಿತ್ರರ ಜೊತೆ ಕಲಹವಾಗಬಹುದು. ಸಂಗಾತಿಯಿಂದ ಬಲವಂತವಾಗಿ ಉಡುಗೊರೆ ಪಡೆಯುವಿರಿ. ಸ್ತ್ರೀಯರಿಗೆ ಇಂದು ಸಂತೋಷದ ದಿನ. ಉದರ ಸಂಬಂಧವಾದ ನೋವನ್ನು ಕಡಿಮೆಮಾಡಿಕೊಳ್ಳಲಾಗದು. ಎಲ್ಲರೆದುರೂ ಸಿಟ್ಟಿನಿಂದ ಕೂಗಾಡುವುದು ಬೇಡ. ಪೋಷಕರು ವಿದ್ಯಾಭ್ಯಾಸದ ಪ್ರಗತಿಯನ್ನು ಪರಿಶೀಲಿಸುವುದು ಅವಶ್ಯ. ನೆರಮನೆಯರ ಜೊತೆ ಮಾತಿಗೆ ಮಾತು ಬೆಳೆದು ಕಲಹವಾಗಬಹುದು.
ಸಿಂಹ ರಾಶಿ : ಪಾಲುದಾರಿಕೆಯ ವಿಚಾರದಲ್ಲಿ ಕೆಲವರ ಸಲಹೆಯನ್ನು ಪಡೆಯುವುದು ಸೂಕ್ತ. ಎಲ್ಲದಕ್ಕೂ ನಿಮ್ಮನ್ನೇ ಬೊಟ್ಟುಮಾಡಿ ತೋರಿಸಬಹುದು. ಮೇಲಧಿಕಾರಿಗಳನ್ನು ನಿಮ್ಮತ್ತ ಸೆಳೆಯುವ ತಂತ್ರವು ಫಲಿಸೀತು. ಉನ್ನತ ವಿದ್ಯಾಭ್ಯಾಸಕ್ಕೆ ಮಕ್ಕಳಿಗೆ ಹಣವನ್ನು ಹೊಂದಿಸಬೇಲಾಗವುದು. ನಿಮ್ಮ ಬಗ್ಗೆ ಮಾತನಾಡುವವರಿಗೆ ಈಗಲೇ ಉತ್ತರ ಕೊಡುವುದು ಬೇಡ. ನಿಮಗೆ ಕರಗತವಾದ ವಿದ್ಯೆಯನ್ನು ಪ್ರದರ್ಶಿಸುವಿರಿ. ನಿಮ್ಮ ಒರಟು ಸ್ವಭಾವವು ಇಷ್ಟವಾಗದೇ ಹೋಗಬಹುದು. ಸುಮ್ಮನೇ ಒಂಟಿಯಾಗಿ ಇದ್ದು ಹತ್ತಾರು ಯೋಚನೆಗಳು ಬರಬಹುದು. ಬಂಧುಗಳಿಂದ ಉಡುಗೊರೆ ಸಿಗಲಿದೆ. ಲೆಕ್ಕಶೋಧಕರಿಗೆ ಒತ್ತಡವು ಅಧಿಕವಾಗಿರುವುದು. ನಿಮ್ಮ ಮಾತಿನ ಮೇಲೆ ನಂಬಿಕೆಯು ಕಷ್ಟವಾದೀತು. ಅಪಘಾತ ಭೀತಿಯು ಕಾಡಬಹುದು.
ಕನ್ಯಾ ರಾಶಿ : ಎಂದೂ ಬಾರದ ಅನುಮಾನವು ನಿಮ್ಮ ಮೇಲೆ ಬರಬಹುದು. ಹೊಸ ಗೆಳೆತನವು ಖುಷಿಕೊಟ್ಟರೂ ಪೂರ್ಣವಾಗಿ ನಂಬಲು ಆಗದು. ಆಕಸ್ಮಿಕವಾಗಿ ಸಮ್ಮಾನವು ಸಿಗಬಹುದು. ಅತಿಥಿಗಳಿಗೆ ಸತ್ಕಾರವನ್ನು ಮಾಡಿ ಖುಷಿಪಡಿಸುವಿರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯವನ್ನು ಮಾಡುವ ಮನಸ್ಸಿದ್ದರೂ ಉಳಿದವರ ಒಪ್ಪಿಗೆ ಸಿಗದೇ ಇರಬಹುದು. ಉದ್ಯಮಕ್ಕೆ ಬೇಕಾದ ಕಾನೂನಿನ ಭದ್ರತೆಯನ್ನು ಪಡೆದುಕೊಳ್ಳಿ. ಕೆಲವು ಘಟನೆಗಳು ನಿಮ್ಮ ಮನಸ್ಸನ್ನು ಚಂಚಲಗೊಳಿಸಬಹುದು. ಸ್ಪರ್ಧೆಯಲ್ಲಿ ಸೋಲಾಗುವ ಸಾಧ್ಯತೆ ಇದೆ. ಆರ್ಥಿಕತೆಯ ಬಗ್ಗೆ ಎಷ್ಟೇ ಜಾಗರೂಕತೆ ಇದ್ದರೂ ಸಾಲದು. ಮಹಿಳೆಯರು ಸ್ವ ಉದ್ಯಮದಿಂದ ಲಾಭವನ್ನು ಮಾಡಿಕೊಳ್ಳುವರು. ಪ್ರೀತಿಯು ಅಪನಂಬಿಕೆಯಿಂದ ನಾಶವಾಗಬಹುದು. ಆಪ್ತರ ಸಹಾಯದಿಂದ ನಿಮಗೆ ಉದ್ಯೋಗವು ಸಿಗಲಿದೆ. ಭೂಮಿಯನ್ನು ವ್ಯಾಪಾರವನ್ನು ಸದ್ಯಕ್ಕೆ ಸ್ಥಗಿತಗೊಳಿಸಿ, ಕಾಲಾನಂತರ ಮುಂದುವರಿಸಲು ಅವಕಾಶವಿರುವುದು.
ತುಲಾ ರಾಶಿ : ಆರ್ಥಿಕತೆಯು ನಿಮಗೆ ನೆಮ್ಮದಿಯನ್ನು ಕೊಟ್ಟೀತು. ಅಶುಭಕರ ವಾರ್ತೆಯನ್ನು ಕೇಳಬೇಕಾಗುವುದು. ವಿಶ್ವಾಸವನ್ನು ಗಳಿಸಲು ವಿವಿಧ ಪ್ರಯೋಗಗಳನ್ನು ಮಾಡುವಿರಿ. ಆದಾಯ ಬರುವ ಕೆಲಸವನ್ನು ಎಷ್ಟೇ ಕಷ್ಟವಾದರೂ ಮಾಡುವಿರಿ. ಉದ್ಯೋಗದ ವಿಚಾರವನ್ನು ಬಹಳ ಗೌಪ್ಯವಾಗಿ ಇಡುವಿರಿ. ಚರಾಸ್ತಿಯನ್ನು ಉಳಿಸಿಕೊಳ್ಳುವುದು ಇಷ್ಟವಾದರೂ ಕಷ್ಟವಾಗುವುದು. ಸಲ್ಲದ ಮಾತನ್ನು ಹಿರಿಯರಿಗೆ ಹೇಳುವಿರಿ. ಅಹಂಕಾರವು ನಿಮ್ಮನ್ನು ಕೆಳಗೆ ದೂಡಬಹುದು. ಸರಳತೆಯನ್ನು ರೂಢಿಸಿಕೊಳ್ಳುವ ಬಗ್ಗೆ ಆಲೋಚನೆ ಇರಲಿ. ಅನಗತ್ಯಗಳ ಅಪೇಕ್ಷೆಯಿಂದ ಸಂಗಾತಿಯ ಸಂಪತ್ತನ್ನು ಖಾಲಿಮಾಡುವಿರಿ. ನಿಮ್ಮ ಮನಸ್ಸು ಕಾರ್ಯದಲ್ಲಿ ಮಗ್ನವಾಗಿ ಇರದು. ಆರಂಭಿಸಿದ ಉದ್ಯೋಗದಲ್ಲಿ ಯಾವ ವಿಘ್ನವೂ ಬಾರದಂತೆ ಪ್ರಾರ್ಥಿಸಿ. ನೌಕರರ ಬಗೆಗೆ ನಂಬಿಕೆ ಕಡಿಮೆಯಾಗುವುದು. ತಂದೆಯ ಮಾತು ನಿಮಗೆ ಕಿರಿಕಿರಿ ಎನಿಸಬಹುದು. ನಿಮ್ಮ ಆದಾಯದ ಮೂಲವಾದ ವ್ಯಾಪಾರದಲ್ಲಿ ಲಾಭವಿರುವುದು.
ವೃಶ್ಚಿಕ ರಾಶಿ : ನಿಮ್ಮ ಮೆಲುದನಿಯಿಂದ ಯಾವ ಕೆಲಸವೂ ಆಗದು. ಹಳೆಯ ನೋವಿನಿಂದ ಬಳಲುತ್ತಿದ್ದರೂ ಏನೂ ಆಗದವರಂತೆ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ಮನೆಗೆ ಯಾರೂ ಬಾರದಿರುವುದು ಅಜ್ಞಾತವಾಸದಂತೆ ಅನ್ನಿಸೀತು. ಭಾವನಾತ್ಮಕ ಬಂಧವನ್ನು ಬೆಳೆಯುವಲ್ಲಿ ನೀವು ಸೋಲುವಿರಿ. ಪ್ರೀತಿಯಲ್ಲಿ ನಂಬಿಕೆ ಕಡಿಮೆ ಆಗಬಹುದು. ನಿರುಪಯುಕ್ತ ವಸ್ತುಗಳನ್ನು ದಾನರೂಪವಾಗಿ ಕೊಡುವಿರಿ. ನಿಮ್ಮ ಎಲ್ಲ ಕಾರ್ಯಗಳೂ ವಿಳಂಬವಾಗಿ ಅಧಿಕಾರಿಗಳಿಂದ ಹೇಳಿಸಿಕೊಳ್ಳುವಿರಿ. ಇಂದು ಸ್ತ್ರೀಯರು ಅಲಂಕಾರಲ್ಲಿ ಹೆಚ್ಚು ತೊಡಗಿಕೊಳ್ಳುವರು. ಮಾಡಿದ ತಪ್ಪಿನಿಂದ ಪಶ್ಚಾತ್ತಾಪ ಪಡುವಿರಿ. ಎಷ್ಟೇ ಪ್ರಯತ್ನಿಸಿದರೂ ಕೊಟ್ಟ ಹಣವು ನಿಮಗೆ ಸಿಗದು. ಅದರ ಆಸೆಯನ್ನು ಬಿಡುವಿರಿ. ನಿಮ್ಮವರ ಮೇಲೆ ನೀವು ಇಟ್ಟ ನಂಬಿಕೆಯು ಹುಸಿಯಾಗುವುದು. ಕ್ರೀಡೆಯಲ್ಲಿ ಅಸಕ್ತಿಯು ಹೆಚ್ಚಾಗಬಹುದು. ಮಕ್ಕಳಿಗೆ ನಿಮ್ಮಿಂದ ಬೇಸರವಾಗಬಹುದು.
ಧನು ರಾಶಿ : ಹಸ್ತಕ್ಷೇಪ ಮಾಡುವವರ ಬಗ್ಗೆ ನಿಮಗೆ ಅಸಮಾಧಾನ ಇರಲಿದೆ. ಶೀಘ್ರಕೋಪಿಗಳಂತೆ ತೋರುವಿರಿ. ಕಷ್ಟಗಳ ಎಲ್ಲ ಹಂತವನ್ನೂ ದಾಟಿದ ನಿಮಗೆ ಬರುವ ಕಷ್ಟಗಳು ನೋವನ್ನು ಕೊಡದು. ಪರಿಸ್ಥಿತಿಯನ್ನು ಎದುರಿಸುವ ಚಾಣಾಕ್ಷತನವನ್ನು ನೀವು ಸಂಪಾದಿಸಿರುವಿರಿ. ಸಂಪನ್ಮೂಲಗಳ ಕೊರತೆಯಿಂದಾಗಿ ನೀವು ಈ ಸಮಯದಲ್ಲಿ ಕೆಲವು ವ್ಯಾಪಾರ ಯೋಜನೆಗಳನ್ನು ನಿಲ್ಲಿಸಬೇಕಾಗಬಹುದು. ಮಕ್ಕಳನ್ನು ಚತುರೋಪಾಯದಿಂದ ಹಿಡಿತಕ್ಕೆ ತರಬೇಕಾಗುವುದು. ದಾಂಪತ್ಯದ ಮೇಲೆ ದುಷ್ಟರ ದೃಷ್ಟಿಯು ಬೀಳಬಹುದು. ನಿಮ್ಮ ನಡೆ-ನುಡಿಗಳು ಆದಷ್ಟು ಸರಳವಾಗಿ ಇರಲಿ. ಮಿತಿಮೀರಿದ ಆಹಾರಸೇವನೆಯಿಂದ ನಿಮಗೆ ಕಷ್ಟವಾದೀತು. ಮಕ್ಕಳ ಬಗೆಗೆ ನಂಬಿಕೆ ಕಡಿಮೆಯಾಗಬಹುದು. ಇಷ್ಟಮಿತ್ರರನ್ನು ಮನೆಗೆ ಆಹ್ವಾನಿಸುವಿರಿ. ಯಾರದೋ ಮಾತಿನಿಂದ ನಿಮಗೆ ಸಂಕಟವಾಗುವುದು. ಆಪ್ತರನ್ನು ಸತ್ಕಾರಕ್ಕಾಗಿ ಮನೆಗೆ ಆಹ್ವಾನಿಸುವಿರಿ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಯಲ್ಲಿ ಮಗ್ನರಾಗುವಿರಿ. ತುರ್ತು ಕಾರ್ಯಕ್ಕಾಗಿ ಅವಸರವಸರವಾಗಿ ಪ್ರಯಾಣ ಮಾಡಬೇಕಾಗಬಹುದು.
ಮಕರ ರಾಶಿ : ನಿಮ್ಮ ಸಂವಹನ ಕೌಶಲದಿಂದ ಜನರನ್ನು ಆಕರ್ಷಿಸುವಿರಿ. ಹೊಸ ಉದ್ಯೋಗಕ್ಕೆ ಸೇರಿಕೊಳ್ಳುವುದು ನಿಮಗೆ ಕಷ್ಟವಾಗದು. ನಿಮ್ಮ ಜೀವನಶೈಲಿಯು ಅನುಸರಣೀಯವಾಗಿರುವುದು. ವೃತ್ತಿಯಲ್ಲಿ ಹಿತಶತ್ರುಗಳ ಕಾಟದಿಂದ ಸಿಗಬೇಕಾದ ಸ್ಥಾನಕ್ಕೆ ತೊಂದರೆಯಾಗಬಹುದು. ನಿಜವನ್ನು ನೀವು ಮರೆಮಾಚಲು ಹೋದರೂ ಅದು ಆದು ಹೇಗೋ ಗೊತ್ತಾಗುವುದು. ಸರಳವಾದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಒದ್ದಾಡುವಿರಿ. ಒಟ್ಟಿಗೇ ಬರುವ ಕೆಲಸದಿಂದ ನೀವು ಉದ್ವೇಗಕ್ಕೆ ಬೀಳುವಿರಿ. ಸಾಲದಿಂದ ಬಿಡುಗಡೆ ಸಿಕ್ಕಿ ಮನಸ್ಸು ನಿರಾಳವಾಗಲಿದೆ. ಹಿರಿಯರ ಶುಶ್ರೂಷೆಗೆ ಅವಕಾಶ ಸಿಗುವುದು. ಸಂಪೂರ್ಣ ಮಾಹಿತಿಯನ್ನು ಪಡೆದು ಮುಂದಡಿ ಇಡುವುದು ಸೂಕ್ತ. ಹೊಸ ಉದ್ಯೋಗವನ್ನು ಆರಂಭಿಸುವತ್ತ ನಿಮ್ಮ ಆಲೋಚನೆಯು ಗಾಢವಾಗಿ ಇರುವುದು. ಮಕ್ಕಳಿಗೆ ಖುಷಿಯಾಗುವಂತೆ ನಡೆದುಕೊಳ್ಳುವಿರಿ. ಯಾರ ಗುಟ್ಟನ್ನೂ ಬಿಟ್ಟಕೊಡಲು ತಯಾರಿಲ್ಲ.
ಕುಂಭ ರಾಶಿ : ಏನನ್ನಾದರೂ ಮಾತನಾಡಿ ಕುಟುಂಬದಲ್ಲಿ ಗೌರವವನ್ನು ಕಳೆದುಕೊಳ್ಳುವಿರಿ. ಕೆಲವು ಸಂದರ್ಭಗಳಲ್ಲಿ ಸರಿ ಕಾಣದಿದ್ದರೂ ಅದನ್ನು ಒಪ್ಪಿಕೊಂಡಂತೆ ನಡೆಯುವುದು ಸೂಕ್ತ. ಪ್ರೇಮ ವ್ಯವಹಾರಗಳಿಗೆ ಇಂದು ಸಮಯವು ಮಂಗಳಕರವಾಗಿದೆ. ಅಧಿಕಾರಿಗಳ ಜೊತೆ ವೇತನದ ಹೆಚ್ಚಳಕ್ಕೆ ಕುಳಿತು ಮಾತನಾಡುವಿರಿ. ಹಿರಿಯರ ಮಾತನ್ನು ಅಗೌರವದಿಂದ ಕಾಣುವುದು ಬೇಡ. ವಿದ್ಯಾರ್ಥಿಗಳು ಸತತ ಶ್ರಮದಿಂದ ಇಂದು ಹಂತವನ್ನು ತಲುಪುವರು. ಸಂಸಾರದ ಏರಿಳಿತಗಳನ್ನು ಸಮಾಜದ ಮುಂದೆ ತೆರದಿಡುವುದು ಸರಿ ಕಾಣದು. ನಿಮ್ಮ ನೋವನ್ನು ಯಾರ ಬಳಿಯಾದರೂ ಹೇಳಿಕೊಳ್ಳಿ. ಶತ್ರುಗಳ ಚಲನವಲನಗಳ ಮೇಲೆ ಕಣ್ಣಿಡುವಿರಿ. ಅಕಾಸ್ಮಾತ್ತಾಗಿ ಸಿಕ್ಕ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವ ಕಡೆಗೆ ಗಮನವಿರಲಿ. ದೇವರನ್ನು ನಂಬಿಕೆ ನಿಮ್ಮ ಯೋಜನೆಗಳನ್ನು ಮುನ್ನಡೆಸಿ. ಕುಟುಂಬದಲ್ಲಿ ನಿಮ್ಮಿಂದ ಸಂತೋಷವನ್ನು ಇರುವುದು. ಬಂಧುಗಳ ಪ್ರೀತಿಯೂ ಸಿಗುವುದು.
ಮೀನ ರಾಶಿ : ನಿಮ್ಮ ದಕ್ಷತೆಯು ಇತರರನ್ನೂ ಮೆಚ್ಚಿಸುತ್ತದೆ. ನಿತ್ಯದ ಕೆಲಸದ ಹೊರತಾಗಿ ಏನನ್ನಾದರೂ ಮಾಡಲು ನೀವು ಪ್ರಯತ್ನಿಸಿ, ಜಯಗಳಿಸುವುದು ಸುಲಭವಾಗಲಿಕ್ಕಿಲ್ಲ. ವ್ಯಾಪಾರಸ್ಥರಿಗೆ ನಿರಾಸೆಯ ದಿನವಿದು. ಉದ್ಯೋಗಸ್ಥರಿಗೆ ಓಡಾಟವು ಅಧಿಕವಿರುವುದು. ಇಂದಿನ ನಿಮ್ಮ ವ್ಯವಹಾರವು ಹತ್ತಾರು ಗೊಂದಲಗಳಿಂದ ಇರಲಿದ್ದು ಮುಂದುವರಿದರೆ ನಷ್ಟವಾಗುವ ಭಯವೂ ಇರಲಿದೆ. ಕುಟುಂಬ ವ್ಯವಸ್ಥೆಯನ್ನು ಸರಿದೂಗಿಸುವುದು ಹೊರೆಯಾಗಬಹುದು. ಇಂದು ನಿಮ್ಮ ಸಮಯವನ್ನು ಸ್ನೇಹಿತರ ಕಾರ್ಯಕ್ಕೆ ಕೊಡಬೇಕಾಗಿಬರಬಹುದು. ಅದ್ದರಿಂದ ನಿಮ್ಮ ಕೆಲಸವು ವಿಳಂಬವಾಗಬಹುದು. ಆಸೆಗಳನ್ನು ನೀವು ನಿಯಂತ್ರಣಕ್ಕೆ ತರಲು ಪ್ರಯತ್ನಿಸುವಿರಿ. ಸಂಗಾತಿಯ ನಡವಳಿಕೆಯನ್ನು ಊಹಿಸಲಾಗದು. ಯಾರಿಂದಲೂ ಗೌರವ ಸಿಗಲಿಲ್ಲ ಎಂಬ ನೋವು ಕಾಣಿಸಿಕೊಳ್ಳುವುದು. ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಳ್ಳಲು ತಂತ್ರಗಳನ್ನು ಹೂಡಬಹುದು. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗುವಿರಿ.
-ಲೋಹಿತ ಹೆಬ್ಬಾರ್ – 8762924271 (what’s app only)
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ