Daily Horoscope 2 August 2024: ಈ ರಾಶಿಯವರು ತಮಗೆ ಸಿಕ್ಕ ಅವಕಾಶವನ್ನು ಇತರರಿಗೆ ಬಿಟ್ಟುಕೊಡುವರು

ಆಗಸ್ಟ್​ 2,​​ 2024ರ​​ ನಿಮ್ಮ ರಾಶಿಭವಿಷ್ಯ: ಹತ್ತಿರದೂರಿಗೆ ಪ್ರಯಾಣವನ್ನು ಮಾಡಲಿದ್ದೀರಿ. ಚರಾಸ್ತಿಯನ್ನು ಸ್ಥಿರಾಸ್ತಿ ಮಾಡುವ ಯೋಚನೆ ಮಾಡುವಿರಿ. ನಿಮ್ಮನ್ನು ಛೇಡಿಸುತ್ತ ಹಾಸ್ಯ ಮಾಡುವರು. ಸಾಲವನ್ನು ಮಾಡಬೇಕಾಗಿ ಬಂದರೆ ಬಹಳ ಎಚ್ಚರಿಕೆಯಿಂದ ಜನರನ್ನು ನೋಡಿ ಮಾಡಿ. ಹಾಗಾದರೆ ಆಗಸ್ಟ್​ 2ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope 2 August 2024: ಈ ರಾಶಿಯವರು ತಮಗೆ ಸಿಕ್ಕ ಅವಕಾಶವನ್ನು ಇತರರಿಗೆ ಬಿಟ್ಟುಕೊಡುವರು
ಈ ರಾಶಿಯವರು ತಮಗೆ ಸಿಕ್ಕ ಅವಕಾಶವನ್ನು ಇತರರಿಗೆ ಬಿಟ್ಟುಕೊಡುವರು
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 02, 2024 | 12:02 AM

ಜಾತಕವು ಒಬ್ಬ ವ್ಯಕ್ತಿಯ ಹುಟ್ಟಿನ ಸಮಯದಲ್ಲಿ ಗ್ರಹಗಳು ಮತ್ತು ನಕ್ಷತ್ರಗಳ ಸ್ಥಾನಗಳ ಆಧಾರದ ಮೇಲೆ ಭವಿಷ್ಯದ (Horoscope) ಮುನ್ಸೂಚನೆ ನೀಡಲಾಗುತ್ತದೆ. ಇದು ಸಾಮಾನ್ಯವಾಗಿ ಜ್ಯೋತಿಷ್ಯ ಶಾಸ್ತ್ರದೊಂದಿಗೆ ಸಂಬಂಧಿಸಿದೆ. ಜ್ಯೋತಿಷ್ಯವು ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ಚಿಹ್ನೆಗಳಾಗಿ ವಿಂಗಡಿಸಲಾಗಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತವೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಹರ್ಷಣ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ, ರಾಹು ಕಾಲ ಬೆಳಿಗ್ಗೆ 11:04 ರಿಂದ ಮಧ್ಯಾಹ್ನ 12:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:50 ರಿಂದ ಸಂಜೆ 05:25ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53ರಿಂದ 09:28ರ ವರೆಗೆ.

ಮೇಷ ರಾಶಿ: ಲೆಕ್ಕಾಚಾರವು ನಿಮಗೆ ಕಗ್ಗಂಟಾಗಬಹುದು. ಸಂಗಾತಿಯು ನಿಮ್ಮ ಇಂಗಿತವನ್ನು ಅರಿತು ಕೆಲಸ ಮಾಡುವರು. ಮಾನಸಿಕ ದ್ವಂದ್ವಗಳು ನಿಮ್ಮನ್ನು ಕಟ್ಟಿಹಾಕಬಹುದು. ಕಛೇರಿಯಲ್ಲಿ ಈ ಮೊದಲೇ ಇದ್ದ ವೈಮನಸ್ಯವು ಅಧಿಕವಾಗಬಹುದು. ಎಲ್ಲರಿಗೂ ತಿಳಿಯಲೂಬಹುದು. ಯಾರನ್ನೂ ಅವಲಂಬಿಸಿರುವುದು ಇಷ್ಟವಾಗದು. ಸಾಲವನ್ನು ಸರ್ಕಾರ ತೀರಿಸುತ್ತದೆ ಎಂಬ ಭಾವದಿಂದ ಎಷ್ಟಾದರೂ ಸಾಲವನ್ನು ಮಾಡಬೇಡಿ. ಬರಬೇಕಾದ ಹಣವು ಬರದೇ ಆರ್ಥಿಕವಾದ ಮುಗ್ಗಟ್ಟು ಬರಬಹುದು. ಉದ್ಯೋಗದ ಸ್ಥಳದಲ್ಲಿ ಆಗುವ ಕಲಹದಲ್ಲಿ ಯಾರ ಪರವಾಗಿ ಇರಬೇಕು ಎನ್ನುವ ಗೊಂದಲ ಕಾಣಿಸಿ ತಟಸ್ಥರಾಗಬಹುದು. ಬೇಕಾದವರನ್ನು ಮಾತ್ರ ಹತ್ತಿರ ಕರೆಯುವಿರಿ. ಬಿಡಸಲಾಗದ ಸಮಸ್ಯೆಗಳು ನಿಮ್ಮೆದುರು ಬರಬಹುದು. ಆಪ್ತರ ಸಲಹೆಯನ್ನು ಪಡೆಯಿರಿ. ನಿಮ್ಮ ಮಾತುಗಳು ಇಷ್ಟವಾಗದೇಹೋಗಬಹುದು.

ವೃಷಭ ರಾಶಿ: ಯಾವ ತೊಂದರೆಯನ್ನೂ ಹಂಚಿಕೊಳ್ಳಲಾರಿಋಇ. ಇಂದು ಸ್ತ್ರೀಯರು ಸ್ವಪ್ರಯತ್ನದಿಂದ ಲಾಭ ಗಳಿಸುವರು. ನಿಮ್ಮ ಶ್ರಮಕ್ಕೆ ದೈವವು ಅನುಕೂಲವೂ ಲಭ್ಯವಾಗುವುದು. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ಒತ್ತಡವನ್ನು ಕಳೆದುಕೊಳ್ಳುವ ಬಗ್ಗೆ ನಿಮಗೆ ಬೇಸರವಿರುವುದು. ಕಾನೂನಿಗೆ ವಿರುದ್ಧವಾದ ಕೆಲಸದಿಂದ ಹಣವನ್ನು ಪಡೆಯಲು ಹೋಗಬಹುದು. ಅದು ನಿಮ್ಮ ವೃತ್ತಿಜೀವನದ ಮೇಲೂ ಪರಿಣಾಮವನ್ನು ಉಂಟುಮಾಡಬಹುದು. ಕಳೆದುಕೊಂಡ ವಸ್ತುವನ್ನು ಮರಳಿಪಡೆಯಲು ಶ್ರಮವಹಿಸುವಿರಿ. ಆಯಾಯದ ಮೂಲವನ್ನು ನೀವು ಬದಲಿಸಿಕೊಳ್ಳುವಿರಿ. ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ಹೋಗುವ ಆಲೋಚನೆಯನ್ನು ವಿದ್ಯಾರ್ಥಿಗಳು ಬಿಡಬೇಕಾಗಿಬರಬಹುದು. ಬೇರೆಯವರಲ್ಲಿ ನಿಮ್ಮ ಬಗ್ಗೆ ಇರುವ ಭವನೆಗಳು ಗೊತ್ತಾಗಬಹುದು. ಕೆಲವು ಸಂಗತಿಗಳು ಅನಿರೀಕ್ಷಿತವಾಗಿ ಬಂದು ಮನಸ್ಸಿನ ನೆಮ್ಮದಿಯನ್ನು ಹಾಳುಗೆಡವುವುವು. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ. ನಿಮ್ಮ ವೇಗದಲ್ಲಿ ಕೆಲಸವು ಅಸಾಧ್ಯ ಎನಿಸುವುದು.

ಮಿಥುನ ರಾಶಿ: ನಿಧಾನವಾದರೂ ಇಂದಿನ ಕೆಲಸವನ್ನು ಮಾಡಿ.‌ ನಿಮ್ಮ ಅಶಕ್ತತೆಯು ಸಿಟ್ಟಾಗಿ ಬದಲಾಗುವುದು. ತಂದೆಯ ಜೊತೆ ವ್ಯವಹಾರದ ವಿಚಾರಕ್ಕೆ ಕಲಹವಾಗಬಹುದು. ಮನಸ್ಸು ಉದ್ವೇಗಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ಪಾಲುದಾರಿಕೆಯನ್ನು ನಿಭಾಯಿಸಲು ಕಷ್ಟವಾದೀತು. ಚರ್ವಿತಚರ್ವಣ ಎಂದು ಎನ್ನಿಸಿದರೂ ಹಿರಿಯರ ಮಾತುಗಳನ್ನು ಅವರ ಮೇಲಿನ‌ಗೌರವದಿಂದ ಕೇಳಬೇಕಾಗಬಹುದು. ಹಳೆಯ ಖಾಯಿಲೆಯು ಮತ್ತೆ ಬರಬಹುದು. ಅವಕಾಶಗಳನ್ನು ಬಿಟ್ಟಕೊಟ್ಟ ಇದ್ದಲ್ಲಿಯೇ ಇರಬೇಡಿ. ಆಶಾಭಂಗದಿಂದ ನಿಮ್ಮ ಮನಸ್ಸು ಮುರಿದು ಹೋಗುವುದು.‌ಸಮಯವನ್ನು ಅವಕಾಶವನ್ನೂ ಸದುಪಯೋಗ ಮಾಡಿಕೊಳ್ಳಿ. ನಿಮ್ಮನ್ನು ಬೆಂಬಲಿಸುವವರಿಗೆ ನಿಮ್ಮ ಬೆಂಬಲವನ್ನು ನೀಡುವಿರಿ. ತಂದೆಯಿಂದ ಹಣವನ್ನು ಪಡೆದು ನಿಮಗೆ ಬೇಕಾದ ವಸ್ತುಗಳನ್ನು ಪಡೆಯುವಿರಿ. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವು ನಿರ್ಮಾಣ ಮಾಡಿಕೊಳ್ಳುವಿರಿ. ಒಬ್ಬರನ್ನೇ ನಂಬಿ ಕೆಲಸ ಮಾಡುವುದು ಬೇಡ.

ಕಟಕ ರಾಶಿ: ಇನ್ನೊಬ್ಬರನ್ನು ಬೆಳೆಸುವ ಉತ್ಸಾಹ ಯೋಜನೆ ನಿಮ್ಮಲ್ಲಿ ಇರುವುದು. ನೀವು ದುಶ್ಚಟದಿಂದ ದೂರವಿರಲು ಮನಸ್ಸು ಮಾಡುವಿರಿ. ಉದ್ಯೋಗದಲ್ಲಿ ಭಡ್ತಿಯನ್ನು ನಿರೀಕ್ಷಿಸಬಹುದು. ಮಕ್ಕಳಿಂದ ಸಂತೋಷಕರವಾದ ವಾರ್ತೆಯು ಇರುತ್ತದೆ. ಸ್ನೇಹೊತರಿಗೋಸ್ಕರ ಖರ್ಚುಮಾಡಬೇಕಾಗಿ ಬರಬಹುದು. ಯಾರದೋ ಮೂಲಕ ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಅಪೂರ್ಣಗೊಂಡ ಕೆಲಸಗಳನ್ನು ಮಾಡಿ ಮುಗಿಸಬೇಕೆಂದು ಚಿಂತಿಸುವಿರಿ. ಹಿಂದೆ ಪಟ್ಟ ಕಷ್ಟದಿಂದ ನಿಮಗೆ ಇಂದು ಸುಖ, ನೆಮ್ಮದಿಗಳು ಸಿಗಲಿವೆ. ಅಸೂಯೆಯೂ ಸ್ವಭಾವದ ಕಾರಣ ಹೆಚ್ಚಾಗಬಹುದು. ಉನ್ನತ ಅಧಿಕಾರಿಗಳಿಗೆ ಯಶಸ್ಸು ಲಭಿಸುವುದು. ನೀವು ಕೈಗೊಂಡ ಕಾರ್ಯಗಳು ಸಫಲವಾಗಲಿಲ್ಲ ಎಂಬ ಹತಾಶಭಾವವೂ ಸಿಟ್ಟೂ ಏಕಕಾಲಕ್ಕೆ ಬರಲಿದೆ. ಅಪರಿಚಿತರನ್ನು ಆಪ್ತರನ್ನಾಗಿ ಮಾಡಿಕೊಳ್ಳಲು ಹೋಗಿ ಅನಾಹುತವಾದೀತು. ಯಾರನ್ನೂ ಹಂಗಿಸಿ ಖುಷಿಪಡುವುದು ಬೇಡ.

ಸಿಂಹ ರಾಶಿ: ನಿಮ್ಮ ಬಲವು ಸಾಮಾಜಿಕ ಕಾರ್ಯದಿಂದ ಟೀಕೆಗೆ ಗುರಿಯಾಗುವಿರಿ. ಕಟ್ಟಡವನ್ನು ನಿರ್ಮಿಸುವ ಕಾರ್ಯದಲ್ಲಿ ನೀವು ಯಶಸ್ವಿಯಾಗುವಿರಿ. ಹೊಸ ಕೆಲಸವನ್ನು ಮಾಡಲು ನಿಮಗೆ ಧೈರ್ಯ ಸಾಲದು. ಬುದ್ಧಿವಂತಿಕೆಯ ಕಾರ್ಯವು ನಿಮ್ಮನ್ನು ರಕ್ಷಿಸುವುದು. ಸಾಲ ಕೊಡುವುದೇ ಹೆಚತಚಾದೀತು. ಪುರುಷರಿಂದ ಏನಾದರೂ ತೊಂದರೆಗಳು ಬರಬಹುದು. ಹಣ ಸಂಪಾದನೆಯನ್ನೇ ಮುಖ್ಯವಾಗಿಟ್ಟುಕೊಂಡು ಮನೆಯನ್ನು, ಮಕ್ಕಳನ್ನು ಮರೆಯಬಹುದು. ಅಕಾರಣವಾಗಿ ದುಃಖದ ಸನ್ನಿವೇಷಗಳು ಬರಬಹುದು. ಕೋಪವನ್ನು ಮಾಡಬೇಕಾದಲ್ಲಿ ಮಾತ್ರ ಮಾಡಿ. ಇಲ್ಲವಾದರೆ ನಿಮಗೆ ಪಟ್ಟ ಸಿಗಬಹುದು. ಏಕಾಂತವನ್ನು ಇಷ್ಟಪಡುವವರಿದ್ದೀರಿ. ನಿಮ್ಮ ಆಲೋಚನೆಗೆ ತಕ್ಕಂತೆ ಎಲ್ಲವೂ ನಡೆಯುತ್ತಿದೆ ಎಂದು ಅನ್ನಿಸಿದರೂ ಅದನ್ನು ಪರಿವರ್ತಿಸಲು ಅಸಾಧ್ಯವಾಗುವುದು. ಉದರಬಾಧೆಯಿಂದ ಸಂಕಟಪಡಬೇಕಾಗುವುದು.

ಕನ್ಯಾ ರಾಶಿ: ಆರೋಗ್ಯದ ಕಾಳಜಿಯನ್ನು ಮಾಡಿಕೊಳ್ಳುವುದು ಉತ್ತಮ. ನಿಮ್ಮದಲ್ಲದ‌ ವಸ್ತುವನ್ನು ಪಡೆದಾಗ ಜೋಪಾನ‌ ಮಾಡುವುದು ಅವಶ್ಯಕ. ಇಂದು ನಿಮ್ಮ ವೇಗಕ್ಕೆ ಕೆಲಸಗಳು ಆಗುತ್ತಿಲ್ಲ ಎಂಬ ತುಡಿತ ಇರಲಿದೆ. ವ್ಯಾಪಾರದಲ್ಲಿ ಇಷ್ಟವಿಲ್ಲದಿದ್ದರೂ ಲಾಭವನ್ನು ನಿರೀಕ್ಷಿಸುವುದು ಬೇಡ. ಹೂಡಿಕೆ ಮಾಡುವ ಮನಸ್ಸಿದ್ದರೆ ಸ್ವಲ್ಪ ಮಾಡಿ. ನಿಮಗೆ ಕೂಡಿಟ್ಟ ಹಣವು ಬರಲಿದ್ದು, ಅದನ್ನು ಸದುಪಯೋಗ ಮಾಡುವಿರಿ. ಕುಟುಂಬದಲ್ಲಿ ಹಿರಿಯರ ಮಾತನ್ನು ಅಲ್ಲಗಳೆಯಬಹುದು. ನೀವು ಸ್ವತಂತ್ರವಾಗಿ ಬದುಕುವ ಇಚ್ಛೆ ಹೊಂದುವಿರಿ. ಅನುಕೂಲತೆಯನ್ನು ನೋಡಿ ಮನೆಗೆ ಸಹಾಯ ಮಾಡುವಿರಿ. ಉಪಕಾರವನ್ನು ನೀವು ಸ್ಮರಿಸುವಿರಿ. ಹೊಸತನವನ್ನು ಇಷ್ಟಪಟ್ಟು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ಭವಿಷ್ಯದ ಕುರಿತು ನಿಮಗೆ ನಿಮ್ಮದೇ ಕಲ್ಪನೆಗಳಿದ್ದು ಅದು ಸಾಕಾರಗೊಳ್ಳುವುದೋ ಇಲ್ಲವೋ ಎನ್ನುವ ಭಯವು ಕಾಡಲಿದೆ. ಕೃತಜ್ಞತೆಯು ನಿಮ್ಮ ಉನ್ನತ ಸ್ಥಾನಕ್ಕೆ ಕಾರಣವಾಗುವುದು. ಧಾರ್ಮಿಕ‌ ನಂಬಿಕೆಗಳು ಬಲವಾಗುವುದು.

ತುಲಾ ರಾಶಿ: ನಿಮ್ಮ ಮೇಲೆ ಇತರರ ದೃಷ್ಟಿ ಬೀಳುವ ಸಾಧ್ಯತೆ ಇದರ. ಇಂದು ಮನಸ್ಸನ್ನು ಕಾರ್ಯದಲ್ಲಿ ನಿಲ್ಲಿಸಲಾಗದು. ನೀವೇ ಆಯ್ಕೆ ಮಾಡಿಕೊಂಡ ಕ್ಷೇತ್ರವು ನಿಮಗೆ ಯಶಸ್ಸನ್ನು ಕೊಡಲಿದೆ. ಶ್ರಮದ ಅವಶ್ಯಕತೆ ಬಹಳ ಇರಲಿದೆ. ನಿಮ್ಮ ಮಾತನ್ನು ಇಂದು ಪೂರ್ಣ ನಂಬಲಾರರು. ಪಾಪಕೃತ್ಯದ ಬಗ್ಗೆ ನಿಮಗೆ ಭಯವು ಬರಬಹುದು. ನಿಮ್ಮ ವಿರುದ್ಧ ಯಾರೋ ಏನ್ನೋ ನಡೆಸುತ್ತಿದ್ದಾರೆ ಎಂಬ ಅನುಮಾನ ಕಾಡಲಿದೆ. ಕೆಲಸವು ಎಷ್ಟೇ ಚೆನ್ನಾಗಿದ್ದರೂ ಪ್ರಶಂಸೆ ಸಿಗುತ್ತಿಲ್ಲ ಎಂಬ ನೋವು ಹೆಚ್ಚಾಗಬಹುದು. ಕೆಲಸದಲ್ಲಿ ವೈರಾಗ್ಯವೂ ಬರುವ ಸಾಧ್ಯತೆ ಇದೆ. ಭೂಮಿಯ ಮೇಲೆ ಬಂಡವಾಳ ಹೂಡಿಕೆ ಮಾಡುವಿರಿ. ಅನಿವಾರ್ಯವಾಗಿ ಕೊಟ್ಟ ಕೆಲಸವನ್ನು ಮಾಡಬೇಕಾಗಬಹುದು. ಆಗುವುದೆಲ್ಲ ಒಳ್ಳೆಯದಕ್ಕೆ ಎಂಬ ಮಾನಸಿಕತೆ ನಿಮ್ಮನ್ನು ಖುಷಿಯಿಂದ ಇಡಲಿದೆ. ಅದಕ್ಕೆ ಇಂದು ಪಶ್ಚಾತ್ತಾಪವನ್ನು ಅನುಭವಿಸುವಿರಿ. ಇನ್ನೊಬ್ಬರ ನೋವಿಗೆ ಸ್ಪಂದನೆ ಇರಲಿ. ನಿಮ್ಮನ್ನು ನೀವು ವಿಶೇಷವೆಂದು ಭಾವಿಸುವಿರಿ.

ವೃಶ್ಚಿಕ ರಾಶಿ: ನಿಮ್ಮ ಬಳಿ ಇರುವ ಸಂಪತ್ತನ್ನು ಸಹಾಯಕ್ಕಾಗಿ ಕೊಟ್ಟು ಕಳೆದುಕೊಳ್ಳುವಿರಿ. ಬಹಳ ದಿನದ ಕಾರ್ಯಗಳನ್ನು ಬೇಗನೆ ಮುಗಿಸಲಿದ್ದೀರಿ. ಮಕ್ಕಳು ನಿಮಗೆ ಅಪಮಾನ ಮಾಡುವ ಸಾಧ್ಯತೆ ಇದೆ. ಅಧಿಕಾರವು ಸಿಕ್ಕ ಮಾತ್ರಕ್ಕೆ ಹೇಗಾದರೂ ಚಲಾಯಿಸಬೇಕೆಂದಿಲ್ಲ. ಯಾರನ್ನೂ ನೀವು ನೇರವಾಗಿ ಹೊಣೆಗಾರಿಕೆ ಮಾಡಲಾರಿರಿ. ಯಾರ ಬಗ್ಗೆಯೂ ತೀರ್ಮಾನ ಕೊಡುವ ಬದಲು ಪೂರ್ವಾಪರ ವಿಚಾರಗಳನ್ನು ಗಮನಸಿಕೊಳ್ಳಿ. ನಿಮ್ಮ ನೇರದ್ದು ಮಾತ್ರ ಸತ್ಯವಾಗಿ ಇರದು. ಸಂಬಂಧಗಳು ಮಿತಿಯನ್ನು ಮೀರದಂತೆ ನೋಡಿಕೊಳ್ಳಿ. ಬಂಗಾರದ ಕತ್ತಿಯೇ ಆದರೂ ಅದರಿಂದ ಮೂಗು ಕತ್ತರಿಸಿಕೊಳ್ಳುವುದು ಎಷ್ಟು ಸರಿ. ಜನರನ್ನು ಅವರ ಯೋಗ್ಯತೆಯ ಆಧಾರದ ಮೇಲೆ ಕೆಲಸಕ್ಕೆ ಜೋಡಿಸಿ. ತಾನು ಕಂಡಿದ್ದು ಮಾತ್ರ ಸರಿ ಎಂಬ ವಾದವು ನಿಮ್ಮವರಿಗೆ ಬೇಸರ ತರಿಸೀತು. ನಿಮ್ಮ ಯಾರಾದರೂ ಕೆಲಸ ವಹಿಸಿ ನಿಶ್ಚಿಂತರಾಗಬಹುದು. ಉದ್ಯೋಗಸ್ಥಾನದಲ್ಲಿ ಕೆಲವು ಮಾತುಗಳು ನಿಮಗೆ ಹಿಡಿಸದೇಹೋಗಬಹುದು.

ಧನು ರಾಶಿ: ಸ್ವಂತ ಬಲವಿಲ್ಲದೇ ನೀವು ಯಾರನ್ನೂ ಎದುರಿಸಲಾಗದು. ನೀವು ಸರ್ಕಾರದ ಕಡೆಯಿಂದ ಆಗಬೇಕಾದ ಕೆಲಸಕ್ಕೆ ಹಣವನ್ನು ಕೊಡಬೇಕಾಗಿ ಬರಬಹುದು. ಉದ್ಯೋಗದ ಸ್ಥಳದಲ್ಲಿ ಕೆಲಸವು ವೇಗವಾಗಿ ನಡೆಯಲಿದೆ. ಮನೆಯ ರಿಪೇರಿ ಮಾಡಿಸಲಿದ್ದೀರಿ. ಕುಟುಂಬದಲ್ಲಿ ತಾನೇ ಶ್ರೇಷ್ಠ ಎಂಬ ಅಹಂಕಾರ ಬೇಡ. ವೇಗದ ಕಾರ್ಯವನ್ನು ಮಾಡಿ ಎಲ್ಲವನ್ನೂ ಹಾಳುಮಾಡಿಕೊಳ್ಳುವಿರಿ. ಸ್ವೇಚ್ಛೆಯಿಂದ ವರ್ತಿಸಬೇಡಿ. ಇರುವ ಸಮಸ್ಯೆಯನ್ನು ಎದುರಿಸಲು ಹೋಗಿ ಮತ್ತೊಂದು ಸಮಸ್ಯೆಯನ್ನು ಹುಟ್ಟುಹಾಕಿಕೊಳ್ಳಬೇಡಿ. ಕುಟುಂಬದ ಸದಸದ್ಯರು ನಿಮ್ಮ ಏಳ್ಗೆಯನ್ನು ಇಷ್ಟಪಡುವವರು. ಯಾರದೋ ಸಿಟ್ಟನ್ನು ಮತ್ಯಾರದೋ ಮೇಲೆ ತೀರಿಸಿಕೊಳ್ಳುವಿರಿ. ಯಾರನ್ನೂ ನಂಬದವರು ಇಂದು ನಂಬಿ ಮೋಸ ಹೋಗಬಹುದು. ನಿಮಗೆ ಬೆಲೆ ಕೊಡದೇ ಇರುವುದು ನಿಮಗೆ ಬೇಸರವಾಗುವುದು. ಖುಷಿಪಡುವ ಸಂಗತಿಗಳಿದ್ದರೂ ದುಃಖಿಗಳಾಗುವ ಸಾಧ್ಯತೆ ಇದೆ. ನಿಮ್ಮ ಬಗ್ಗೆ ದೂರು ಕೇಳಿಬರಬಹುದು.

ಮಕರ ರಾಶಿ: ಇಂದು ನಿಮ್ಮ ಮನಸ್ಸು ಭಯದಿಂದ ಹಿಂದೇಟು ಹಾಕಬಹುದು. ಸರಿಯಾದ ಬದಲಾವಣೆಯನ್ನು ಹೊಂದಿರಿ. ಯಾರನ್ನೂ ಸಾಧರಣ‌ ಮನುಷ್ಯ ತಿಳಿದುಕೊಳ್ಳಬೇಡಿ. ವಿವಾಹದ ಮಾತುಕತೆಯಲ್ಲಿ ನಿಮ್ಮ ಅನರ್ಥದ ಮಾತು ವಿಘ್ನವನ್ನು ತಂದೀತು. ಒಂದೊಂದೇ ಖರ್ಚನ್ನು ನೀವು ನಿಭಾಯಿಸುವಾಗ ಅದೊಂದು ದೊಡ್ಡ ಮೊತ್ತವಾಗಿ ಕಾಣಬಹುದು. ನಿಮ್ಮಷ್ಟಕ್ಕೇ ನೀವು ಹೊಸತನವನ್ನು ಸೃಷ್ಟಿಸಿಕೊಂಡು ಅಪಮಾನಕ್ಕೆ ಒಳಗಾಗುವಿರಿ. ಏನನ್ನಾದರೂ ಕೊಟ್ಟು ಸಂತೋಷಪಡುವಿರಿ. ವಾಹನವನ್ನು ನಿಧಾನವಾಗಿ ಚಲಾಯಿಸಿ. ಬೇರೆಯವರ ತಪ್ಪಿನಿಂದ ನಿಮಗೆ ತೊಂದರೆಗಳು ಆಗಬಹುದು. ಸಾಲ ಹೊರೆಯ ಸ್ವಲ್ಪ ಕಡಿಮೆ ಆಗುವುದು. ಉನ್ನತ ಅಭ್ಯಾಸವನ್ನು ಸಮಸ್ಯೆಯ ಕಾರಣದಿಂದ ಮುಂದೂಡುವಿರಿ.

ಕುಂಭ ರಾಶಿ: ಸರ್ಕಾರದ ಉದ್ಯೋಗಕ್ಕೆ ನಿಮ್ಮ ಸಣ್ಣ ಪ್ರಯತ್ನ ಇರಲಿದೆ. ನಿಮ್ಮ ಏಳ್ಗೆಯನ್ನು ಕಂಡು ನಿಮ್ಮವರೇ ಸಂಕಟ ಪಡುತ್ತಾರೆ. ಅವರನ್ನು ದೂರವಿಟ್ಟು ನಿಮ್ಮ ಕೆಲಸವನ್ನು ಮಾಡಿಕೊಳ್ಳಿ. ಹತ್ತಿರದೂರಿಗೆ ಪ್ರಯಾಣವನ್ನು ಮಾಡಲಿದ್ದೀರಿ. ಚರಾಸ್ತಿಯನ್ನು ಸ್ಥಿರಾಸ್ತಿ ಮಾಡುವ ಯೋಚನೆ ಮಾಡುವಿರಿ. ನಿಮ್ಮನ್ನು ಛೇಡಿಸುತ್ತ ಹಾಸ್ಯ ಮಾಡುವರು. ಸಾಲವನ್ನು ಮಾಡಬೇಕಾಗಿ ಬಂದರೆ ಬಹಳ ಎಚ್ಚರಿಕೆಯಿಂದ ಜನರನ್ನು ನೋಡಿ ಮಾಡಿ. ವಾಹನದಲ್ಲಿ ಓಡಾಟ ಮಾಡುವುದರಿಂದ ಸಂತೋಷವಾದೀತು. ಯಾರದೋ ದಾಕ್ಷಿಣ್ಯಕ್ಕೆ ಒಳಗಾಗಿ ನಿಮ್ಮ ಕೆಲಸವನ್ನು ಅರ್ಧಕ್ಕೆ ಬಿಡಬೇಡಿ. ಯಾವುದಾದರೂ ಘಟನೆಯು ನಿಮ್ಮನ್ನು ಇಂದು ಹೆಚ್ಚು ಕಾಡಬಹುದು. ತಾಯಿಯಿಂದ ನಿಮಗೆ ಧನವು ಲಾಭವಾಗಬಹುದು. ವಾತಕ್ಕೆ ಸಂಬಂಧಿಸಿದ ಖಾಯಿಲೆ ಕಾಣಿಸಿಕೊಳ್ಳುವುದು. ವ್ಯಾಪರದಲ್ಲಿ ಸ್ವಲ್ಪ ನಷ್ಟವನ್ನು ಕಾಣುವಿರಿ. ಕೃಷಿಯ‌ ಚಟುವಟಿಕೆಯಿಂದ ಸಂತೋಷ ಸಿಗಲಿದೆ.

ಮೀನ ರಾಶಿ: ನಿಮ್ಮನ್ನು ಭೇಟಿಯಾಗಲು ಬಂದವರನ್ನು ಅಗೌರವವನ್ನು ತೋರಿಸಿದಂತೆ ಕಾಣಿಸುಬುದು.‌ ಸಜ್ಜನರ ವಿರೋಧ ಕಟ್ಟಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಹತ್ತಾರು ಕನಸುಗಳಲ್ಲಿ ಒಂದನ್ನು ಸಾಕಾರ ಮಾಡಿಕೊಳ್ಳುವಿರಿ. ಆರೋಗ್ಯವನ್ನು ಕಾಪಾಡಿಕೊಳ್ಳಲೇ ಬೇಕು ಎಂಬ ದೃಢನಿರ್ಧಾರದಿಂದ ಜೀವನ ಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಆರಂಭಿಸುವಿರಿ. ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳು ಕೇಳಿ ಬರಬಹುದು. ಸಾಲ ತೀರಿಸಲು ದೂರದ ಬಂಧುಗಳ ಸಹಾಯ ಹಸ್ತ ಸಿಗಲಿದೆ. ಇಂದು ನೀವೂ ಕೈಲಾದ ಸಹಾಯವನ್ನು ಮಾಡುವಿರಿ. ಇಂದು ಅನ್ನದಾನದಿಂದ ನೆಮ್ಮದಿ ಸಿಗಲಿದೆ. ಸುಳ್ಳಾಡುವವರ ಬಗ್ಗೆ ಅತಿಯಾದ ಕೋಪವಿರಲಿದೆ. ನಿಮ್ಮ ಯೋಜನೆಗಳು ಎಣಿಸಿದಂತೆ ಆಗದೇ ಇರಬಹುದು. ಒತ್ತಡದಿಂದ ಹೊರಬರುವ ಪ್ರಯತ್ನಮಾಡುವಿರಿ. ಅಪರಿಚಿತಸ್ಥಳವು ಆಪ್ತವೂ ಆಗಲಿದೆ. ಮಕ್ಕಳಿಗೆ ಮನೆಯ ನೆನಪಾಗುವುದು.

ಲೋಹಿತ ಹೆಬ್ಬಾರ್ – 8762924271 (what’s app only)

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ