Horoscope: ರಾಶಿಭವಿಷ್ಯ, ದುರಾಲೋಚನೆಯೂ ನಿಮ್ಮ ಸಂತೋಷವನ್ನು ಹಾಳು ಮಾಡುವುದು
ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್ 23) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಉತ್ತರಾಭಾದ್ರಾ, ಯೋಗ: ವ್ಯಾಘಾತ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 38 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:44 ರಿಂದ 03:09ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:38 ರಿಂದ 08:03ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:29 ರಿಂದ 10:54ರ ವರೆಗೆ.
ಮೇಷ ರಾಶಿ: ಬರುವ ಅಪಾಯವನ್ನು ಜಾಣ್ಮೆಯಿಂದ ದಾಟುವಿರಿ. ಉದ್ಯೋಗದ ಹೊಸ ಆಯಾಮವು ತೆರೆದುಕೊಳ್ಳುವುದು. ನಿಮ್ಮ ಖರ್ಚಿನಿಂದ ದೂರ ಪ್ರಯಾಣವನ್ನು ಮಾಡಲಾರಿರಿ. ಪೂರ್ವಾಗ್ರಹವಿಲ್ಲದೇ ಎಲ್ಲರ ಜೊತೆ ಮಾತನಾಡುವುದು ಒಳ್ಳೆಯದು. ಮಿತ್ರರ ಸಲಹೆಗಳು ನಿಮಗೆ ಪೂರಕ ಮಾನಸಿಕತೆಯನ್ನು ತಂದುಕೊಡಬಹುದು. ಇಂದಿನ ನಿಮ್ಮ ಪ್ರಯತ್ನವು ಸಂಪೂರ್ಣವಾಗಿ ಇರಲಿ. ಯಶಸ್ಸನ್ನು ಹಂಬಲವು ಅತಿಯಾಗಿ ಕಾಣಿಸುವುದು. ಸಿಕ್ಕ ಸೌಲಭ್ಯವನ್ನು ದುರುಪಯೋಗ ಮಾಡಿಕೊಳ್ಳುವಿರಿ. ಹೂಡಿಕೆಯತ್ತ ಗಮನಹರಿಸುವುದು ಸದ್ತಕ್ಕೆ ಬೇಡ. ದುರ್ಬಲರಿಗೆ ಅಲ್ಪ ಸಹಾಯವನ್ನು ಮಾಡುವಿರಿ. ನಕಾರಾತ್ಮಕತೆಗೆ ಅವಕಾಶ ಬೇಡ. ಅನಗತ್ಯ ಖರ್ಚನ್ನು ಸಂಗಾತಿಯು ನಿಲ್ಲಿಸಬಹುದು.
ವೃಷಭ ರಾಶಿ: ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ. ಬಂಧುಗಳಿಂದ ಅನಗತ್ಯ ಕಿರಿಕಿರಿಯನ್ನು ಸಹಿಸಬೇಕಾದೀತು. ಖಾಸಗಿಯಾಗಿ ಇರಬೇಕು ಎನಿಸಬಹುದು. ನಿಮ್ಮ ಸಂತೋಷಕ್ಕೆ ಅಡ್ಡಿಯಾಗುವ ಕೆಲಸವನ್ನು ಮಾಡಲಾರಿರಿ. ವಿದ್ಯಾರ್ಥಿಗಳ ಬಗ್ಗೆ ಅಸಮಾಧನವು ಇರುವುದು. ಉದ್ವೇಗಕ್ಕೆ ಒಳಗಾಗುವ ಸಂದರ್ಭವು ಬರಬಹುದು. ಧನಲಾಭದ ನಿರೀಕ್ಷೆಯಲ್ಲಿ ನೀವು ಇರುವುದಿಲ್ಲ. ಅತ್ಯುತ್ಸಾಹವು ನಿಮಗೆ ಹಾನಿಯನ್ನು ಉಂಟುಮಾಡೀತು. ದ್ವೇಷವನ್ನು ಮರೆತು ಪ್ರೀತಿಯಿಂದ ಇರುವಿರಿ. ಆಪದ್ಧನವನ್ನು ವಿನಿಯೋಗ ಮಾಡುವ ಸ್ಥಿತಿಯು ಬರುವುದು. ಯಾವುದೇ ಪ್ರಚಾರವಿಲ್ಲದೇ ನಿಮ್ಮನ್ನು ಪ್ರಕಟಪಡಿಸಿಕೊಳ್ಳುವಿರಿ. ದುರಾಲೋಚನೆಯು ನಿಮ್ಮ ಸಂತೋಷಕ್ಕೆ ತೊಂದರೆಯನ್ನು ಕೊಡಬಹುದು. ಮನೆಗೆ ಬೇಕಾಗಿ ವಸ್ತುಗಳನ್ನು ಖರೀದಿಸುವಿರಿ.
ಮಿಥುನ ರಾಶಿ: ಭಾವುಕರಾಗುವ ಸಂದರ್ಭವು ಬರಬಹುದು. ಕೆಲವರನ್ನು ನೀವು ದೂರವಿಡುವುದು ಮುಖ್ಯವಾಗಿರುವುದು. ಉದ್ಯಮವು ಒಂದೊಂದೇ ಹಂತವನ್ನು ಏರಲಿದ್ದು, ನಿಮಗೆ ಉತ್ಸಾಹವು ಅಧಿಕವಾಗಬಹುದು. ಸಹೋದರರ ಬಾಂಧವ್ಯವು ಸಡಿಲಾಗುವುದು. ಇಂದಿನ ಕಾರ್ಯದಲ್ಲಿ ರೋಚಕತೆ ಕಾಣಿಸುವುದು. ಹತ್ತಾರು ವಿಚಾರಗಳನ್ನು ನೀವು ಒಂದೇ ಬಾರಿ ಅಲೋಚಿಸುವಿರಿ. ಅಪರಿತರು ನಿಮ್ಮನ್ನು ಪರಿಚಯ ಮಾಡಿಕೊಳ್ಳಬಹುದು. ಇಬ್ಬರ ನಡುವಿನ ಜಗಳದಲ್ಲಿ ಮಧ್ಯಸ್ತಿಕೆ ವಹಿಸುವಿರಿ. ಸಮಾರಂಭಗಳಿಗೆ ಹೋಗುವ ಸಾಧ್ಯತೆ ಇದೆ. ಆರೋಗ್ಯವು ವ್ಯತ್ಯಾಸವಾದ ಕಾರಣ ಕಷ್ಟವಾದೀತು. ಸಂಗಾತಿಯ ನಡುವಿನ ಸಂಬಂಧವು ದುರ್ಬಲವಾಗಬಹುದು. ನಿಮ್ಮ ನಿರ್ಧಾರವನ್ನು ಬದಲು ಮಾಡಿದ್ದಕ್ಕೆ ಬೇಸರವಾದೀತು. ಹೇಳಬಾರಸ ವಿಚಾರವನ್ನು ಹೇಳುವ ಬಯಕೆಯು ಇರುವುದು.
ಕಟಕ ರಾಶಿ: ರಾಜಕೀಯ ಒತ್ತಡವು ನಿಮಗೆ ಬೇಡದ ಕಾರ್ಯವನ್ನು ಮಾಡಲು ಪ್ರೇರಿಸುವುದು. ನಿಮಗೆ ಆಗದವರು ನಿಮ್ಮ ಬಗ್ಗೆ ಹೇಳಿಯಾರು. ಪರೋಪಕಾರದ ಸ್ಮರಣೆಯು ಇಲ್ಲದೇಹೋಗುವುದು. ಕೆಲಸಕ್ಕೋಸ್ಕರ ನಿಮ್ಮನ್ನು ಹೊಗಳಬಹುದು. ಕಾರ್ಯಗಳಲ್ಲಿ ಸಿಗುವ ಪೂರ್ಣಜಯದಿಂದ ನಿಮಗೆ ಖುಷಿಯಾಗಲಿದೆ. ಧಾರ್ಮಿಕ ಕಾರ್ಯದಲ್ಲಿ ಹೆಚ್ಚಿನ ಆಸಕ್ತಿಯು ಇರುವುದು. ನೀವು ಸ್ವಾರ್ಥಿಗಳಂತೆ ಕಾಣುವಿರಿ ಅಷ್ಟೇ. ಎಲ್ಲವೂ ನಿಮ್ಮದಾಗಬೇಕು ಎನ್ನುವ ಬಯಕೆ ಇರಿವುದು. ನಿಮ್ಮ ವಿವಾಹಕ್ಕೆ ಸಂಬಂಧಿಸಿದಂತೆ ಶುಭ ವಾರ್ತೆಯು ಇರಲಿದೆ. ಆರ್ಥಿಕತೆಯ ವೃದ್ಧಿಗಾಗಿ ತಂತ್ರವನ್ನು ಮಾಡುವಿರಿ. ಪ್ರಭಾವೀ ವ್ಯಕ್ತಿಗೆ ಮೆಚ್ಚಿಸಿ ಅಧಿಕಾರವನ್ನು ಪಡೆಯುವಿರಿ. ಸಿಗದ ವಸ್ತುವಿನ ಬಗ್ಗೆ ಅತಿಯಾದ ಮೋಹವನ್ನು ಬೆಳೆಸಿಕೊಳ್ಳುವುದು ಬೇಡ. ನಿಮ್ಮ ಪ್ರಯಾಣವನ್ನು ಮೊಟಕುಗೊಳಿಸಿ ಮನೆಗೆ ಬರುವಿರಿ.