AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿತ್ಯ ಭವಿಷ್ಯ; ಈ ರಾಶಿಯವರು ಅತಿಯಾದ ಬುದ್ಧಿಯನ್ನು ಬಳಸಲು ಹೋಗಿ ಹಳ್ಳಕ್ಕೆ ಬೀಳುವರು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 16 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಈ ರಾಶಿಯವರು ಅತಿಯಾದ ಬುದ್ಧಿಯನ್ನು ಬಳಸಲು ಹೋಗಿ ಹಳ್ಳಕ್ಕೆ ಬೀಳುವರು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Apr 16, 2024 | 12:10 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಧೃತಿ, ಕರಣ: ಭವ, ಸೂರ್ಯೋದಯ ಬೆಳಗ್ಗೆ 06 ಗಂಟೆ 19 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:39 ರಿಂದ ಸಂಜೆ 05:12ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:26 ರಿಂದ 10:59 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:32 ರಿಂದ ಮಧ್ಯಾಹ್ನ 02:06ರ ವರೆಗೆ.

ಮೇಷ ರಾಶಿ: ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿ. ಅದನ್ನು ಮತ್ತೇನೋ ಮಾಡಲು ಹೋಗಿ ವಿಶ್ವಾಸವನ್ನು ಕಳೆದುಕೊಳ್ಳಬೇಕಾಗುವುದು. ನಿಮ್ಮ ಉನ್ನತಸ್ಥಾನಕ್ಕೆ ಕಾರಣರಾದ ಎಲ್ಲರನ್ನೂ ಇಂದು ಸ್ಮರಿಸಿಕೊಳ್ಳುವಿರಿ. ಸಂತಾನದ ವಾರ್ತೆ ನಿಮಗೆ ಒಂದಿನ ಶುಭವಾರ್ತೆಯಾಗಲಿದೆ. ಪತ್ನಿಯ ಅನಾರೋಗ್ಯ ನಿಮ್ಮ‌ಚಿಂತೆಗೆ ಕಾರಣವಾಗಿರಲಿದೆ. ಹೊಸ ಮನೆಯನ್ನೋ ಜಾಗವನ್ನೋ ತೆಗದುಕೊಳ್ಳುವ ಪ್ರಸ್ತಾಪವಿರಲಿದೆ. ಕಣ್ಣಿಗೆ ಪ್ರತ್ಯಕ್ಷ ಕಂಡರೂ ಪ್ರಾಮಾಣಿಸಿ ನೋಡು ಎನ್ನುವಂತೆ ಪರಿಶೀಲಿಸಿ ಕಾರ್ಯ ಪ್ರವೃತ್ತರಾಗಿ. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ಕೆಟ್ಟ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಸಣ್ಣ ಮಟ್ಟಿನ ಗೌರವಕ್ಕೆ ಪಾತ್ರರಾಗುವಿರಿ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಾಗುವುದು. ಒಂದೇ ಆಯಾಮದ ಕಾರ್ಯಗಳಿಂದ ವಿಶ್ರಾಂತಿಯು ಬೇಕೆನಿಸಬಹುದು.

ವೃಷಭ ರಾಶಿ: ಇಂದು ಸ್ಪರ್ಧಾತ್ಮಕ ವಿಚಾರಗಳಿಂದ ಸೋಲಾಗುವುದು. ಶತ್ರುಗಳು ನಿಮ್ಮ ಹಿಂದೇ ಇದ್ದು ನಿಮ್ಮನ್ನು ಎಲ್ಲ ಕೆಲಸಗಳಿಗೆ ಪ್ರೋತ್ಸಾಹಿಸಿ ಕೈ ಬಿಡವರು.‌ ವಿದ್ಯುದುಪಕರಣಗಳ ಖರೀದಿಯಿಂದ ನಿಮಗೆ ಧನವ್ಯಯವಾಗುವ ಸಾಧ್ಯತೆಯಿದೆ. ನಿಮಗಿರುವ ಕೌಶಲವು ಜನರಿಂದ ಮೆಚ್ಚುಗೆ ಪಡೆಯಲಿದೆ. ನಿಮ್ಮ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ. ಸಂಗಾತಿಯ ಜೊತೆ ಸಮಯವನ್ನು ಕಳೆಯುವಿರಿ. ಶೈಕ್ಷಣಿಕವಾಗಿ ಹೆಚ್ಚಿನ ಪ್ರಗತಿಯನ್ನು ವಿದ್ಯಾರ್ಥಿಗಳು ಸಾಧಿಸುವರು. ಹೊಸದನ್ನು ಕಲಿಯಲು ಮತ್ತು ನಿಮ್ಮ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಏನನ್ನಾದರೂ ಮಾಡುವುದು ಉತ್ತಮ. ಉದ್ಯಮವು ಸಕ್ರಿಯವಾಗಿದ್ದು ಇದನ್ನು ವಿಸ್ತರಿಸುವಿರಿ. ದುಡುಕುವುದು ನಿಮ್ಮ ಸ್ವಭಾವಕ್ಕೆ ವಿರುದ್ಧವಾದಂತೆ.

ಮಿಥುನ ರಾಶಿ: ಇಂದು ಹಣಕಾಸಿನ ಉದ್ಯೋಗಿಗಳಿಗೆ ಒತ್ತಡದ ದಿನವಗಲಿದೆ. ಕಾಲಕ್ಕೆ ಕಾಯಬೇಕಾಗಿರುವುದರಿಂದ ನಿಮ್ಮ ಪ್ರಯತ್ನಗಳು ಸದಾ ನಡೆಯಲಿ. ದೈವಾನುಕೂಲ ಬಂದಾಗ ಅದಕ್ಕೆ ಹೊಳಪು ಬರಲಿದೆ. ಸಂಗಾತಿಯೊಡನೆ ಸಮಾರಂಭಕ್ಕೆ ಹೋಗಲಿದ್ದೀರಿ. ನಿಮ್ಮ ಮಾತುಗಳು ಸಭೆಯನ್ನು ಮೂಕವಿಸ್ಮಿತಗೊಳಿಸಲಿದೆ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಲಿದ್ದೀರಿ. ನಿಮ್ಮ ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಉಪಯೋಗಿಸಿಕೊಳ್ಳಬಹುದು. ಹಾಸ್ಯಕ್ಕಾಗಿ ಆಡಿದ ಮಾತು ಗಂಭೀರವಾಗಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಕೃಷಿ ಚಟುವಟಿಕೆಗಳ ಬಗ್ಗೆ ನಿಮಗೆ ಅಸಕ್ತಿಯು ಹೆಚ್ಚಿರುವುದು. ಅನನುಕೂಲತೆಯನ್ನು ಬಳಸಿಕೊಂಡು ಸಕಾರಾತ್ಮಕವಾಗಿ ಸಾಧಿಸುವಿರಿ. ಇಂದಿನ ದಿನವನ್ನು ಆನಂದಿಸಲು, ಜವಾಬ್ದಾರಿಯ ಕೆಲಸಗಳನ್ನು ಪೂರೈಸುವತ್ತ ಗಮನವಿರಲಿ. ವೈಯುಕ್ತಿಕ ಸಂಬಂಧಗಳನ್ನು ಸರಿಯಾಗಿ ಇರುವಂತೆ ನೋಡಿಕೊಳ್ಳಿ.

ಕಟಕ ರಾಶಿ: ಬಹಳ ದಿನಗಳಿಂದ ಹೇಳಬೇಕಾದ ವಿಷಯವನ್ನು ಹೇಳುವಿರಿ. ಮನಸ್ಸು ಹಗುರಾಗುವುದು. ಅತಿಯಾದ ಬುದ್ಧಿಯನ್ನು ಬಳಸಲು ಹೋಗಿ ಹಳ್ಳಕ್ಕೆ ಬೀಳುವ ಅವಕಾಶವನ್ನು ಇಟ್ಟುಕೊಳ್ಳುವುದು ಬೇಡ. ಮಾಡಲು ಏನೂ ಕೆಲಸವಿಲ್ಲವೆಂದು ಹೇಳಿ ನಿಮ್ಮರ ಬಾಯಿಗೆ ಸಿಗಬೇಡಿ. ಏನಾದರೂ ಉತ್ತಮವಾದ ಕೆಲಸವನ್ನು ಮಾಡಿ, ಅದನ್ನೇ ಹೇಳಿ. ಆಗ ತಾನಾಗಿಯೇ ಬಾಯಿ ಮುಚ್ಚುವುದು. ಕೆಲಸದ ಮೂಲಕ ಉತ್ತರಿಸುವ ನಿಮ್ಮ ಸ್ವಭಾವ ಹಲವರಿಗೆ ಇಷ್ಟವಾಗುವುದು. ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಜೀವನದಲ್ಲಿ ಚುರುಕುತನ ಕಂಡುಕೊಳ್ಳಲು ದಾರಿಯನ್ನು ಕಂಡುಕೊಳ್ಳಿ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು. ವಾಸದ ಸ್ಥಳವನ್ನು ನೀವು ಬದಲಿಸಬೇಕಾಗಬಹುದು. ಸಂಗಾತಿಯ ಜೊತೆ ಹೊಂದಾಣಿಕೆಯನ್ನು ಬೆಳೆಸಿಕೊಳ್ಳದಿದ್ದರೆ ಕಷ್ಟವಾದೀತು. ಹಿಂದಿನ ಹಣಕಾಸಿನ ಸಮಸ್ಯೆಯು ಇಂದೂ ಕಾಣಿಸಿಕೊಳ್ಳಬಹುದು.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ