AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿತ್ಯ ಭವಿಷ್ಯ; ಸಹಾಯ ಹಸ್ತ ಚಾಚದೇ ಸ್ವಂತ ಬಲದಿಂದ ಮೇಲೇರುವ ಆಸೆ ಈ ರಾಶಿಯವರಿಗೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 12 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಸಹಾಯ ಹಸ್ತ ಚಾಚದೇ ಸ್ವಂತ ಬಲದಿಂದ ಮೇಲೇರುವ ಆಸೆ ಈ ರಾಶಿಯವರಿಗೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 12, 2024 | 12:02 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಸುಕರ್ಮಾ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ ಸಂಜೆ 05:16 ರಿಂದ 08:51ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:29 ರಿಂದ 02:05ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:16ರ ವರೆಗೆ.

ಮೇಷ ರಾಶಿ: ಇಂದು ಪಾಲುದಾರಿಕೆಗೆ ಅವಕಾಶ ಸಿಕ್ಕರೆ ಒಪ್ಪುಕೊಳ್ಳಿ, ಹೊಸ ದಾರಿಗಳೂ ಸಿಗುತ್ತವೆ. ವಿದ್ಯಾರ್ಥಿಗಳು ಶಿಕ್ಷಕರಿಂದ ಪ್ರಶಂಸೆಗೆ ಪಾತ್ರರಾಗಬಹುದು. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಸಹೋದರರು ನಿಮ್ಮನ್ನು ವಿಚಾರಿಸಿಕೊಂಡಾರು. ಮಾತನ್ನು ತಪ್ಪಿದ ಅಪವಾದವು ನಿಮಗೆ ಬರಬಹುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರುವಿರಿ. ಅನಿರೀಕ್ಷಿತ ಘಟನೆಯಿಂದ‌ ಸ್ತಬ್ಧವಾಗುವಿರಿ. ವ್ಯವಹಾರದ ವಿಷಯದಲ್ಲಿ ನಿಮಗೆ ಯಾವುದೇ ಔದಾರ್ಯ ಬೇಡ. ಸಮಯ ಸಂದರ್ಭ ನೋಡಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಸಿಟ್ಟಾಗುವ ಸಂದರ್ಭದಲ್ಲಿ ನೀವು ತಾಳ್ಮೆ ಬಿಡಬಾರದು.

ವೃಷಭ ರಾಶಿ: ಗೊತ್ತಿಲ್ಲದ ಕಾರ್ಯವನ್ನು ಒಪ್ಪಿಕೊಂಡು ಅನಂತರ ಕಳವಳಗೊಳ್ಳುವಿರಿ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕೆ ಕಷ್ಟಪಡುವರು. ಬಂಧುಗಳು ನಿಮ್ಮನ್ನು ನಿರ್ಲಕ್ಷ್ಯ ಮಾಡಬಹುದು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಕಛೇರಿಯಲ್ಲಿ ಸರಿಯಾದ ಕೆಲಸವನ್ನು ಮಾಡಲು ಸಾಧ್ಯವಾಗದೇ ಹೋಗಬಹುದು. ನಿಮ್ಮದೇ ಆದ ಸ್ವಂತ ಆಲೋಚನೆ ಇರಲಿ. ಎಲ್ಲದಕ್ಕೂ ಯಾರನ್ನೋ ಆಶ್ರಯಿಸುವುದು ಬೇಡ. ಮಾತಿಗೆ ಉದ್ಯೋಗಕ್ಕೆ ಸೇರಿಕೊಳ್ಳುವುದು ಬೇಡ. ನಿಮ್ಮಿಂದ ಆಗದ್ದನ್ನು ಇತರರೂ ಮಾಡಲಾರರು. ಇಂದು ಹೊಂದಾಣಿಕೆ ಕೆಲವು ಕಡೆ ಅನಿವಾರ್ಯವಾಗಬಹುದು.

ಮಿಥುನ ರಾಶಿ: ಉದ್ಯೋಗಿಗಳಲ್ಲಿ ಉತ್ಸಾಹ ಹೆಚ್ಚಿರುತ್ತದೆ. ಎಂತಹ ಕೆಲಸವನ್ನೂ ಮಾಡಲು ಹಿಂದೇಟು ಹಾಕುವುದಿಲ್ಲ. ವೃತ್ತಿಜೀವನದಲ್ಲಿ ಕೆಲವು ದೊಡ್ಡ ಬದಲಾವಣೆಗಳು ನಿಮ್ಮ ಪರವಾಗಿರಲಿದೆ. ಸಾಮಾಜಿಕ ಮತ್ತು ರಾಜಕೀಯ ಮಟ್ಟದಲ್ಲಿ ಯಾವುದೇ ರೀತಿಯ ವೇದಿಕೆಯನ್ನು ಹಂಚಿಕೊಳ್ಳುವಾಗ, ನಿಮ್ಮ ಮಾತುಗಳ ಬಗ್ಗೆ ವಿಶೇಷ ಗಮನವಿರುವುದು ಅಗತ್ಯ. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಯಾರ ಪ್ರಶಂಸೆಗೂ ಕಾಯದೇ ಚೆನ್ನಾಗಿ ಕರ್ತವ್ಯವನ್ನು ಮಾಡುವಿರಿ. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಕಲಾವಿದರು ಅವಕಾಶದ ನಿರೀಕ್ಷೆಯಲ್ಲಿ ಇರುವರು.

ಕಟಕ ರಾಶಿ: ಇಂದು ಮೇಲಧಿಕಾರಿಗಳ ಜೊತೆ ಪ್ರಯಾಣ ಮಾಡುವ ಸಂಭವವಿದೆ. ಸಾಮಾಜಿಕವಾಗಿ ಯಾವುದೇ ಕೆಲಸವನ್ನು ಮಾಡಲು ಅದರ ಬಗ್ಗೆ ಮಾಹಿತಿ ತಿಳಿದಿರಲಿ. ಸ್ಪರ್ಧಾತ್ಮಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರೆ ನಿಮಗೆ ಇನ್ನೂ ಹೆಚ್ಚಿನ ತಯಾರಿ ಬೇಕೆನಿಸಬಹುದು. ಹಣಕಾಸಿನ ಹರಿವು ಸರಿಯಾದ ಮಾರ್ಗದಲ್ಲಿ ಬರವಂತೆ ನೋಡಿಕೊಳ್ಳಿ. ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಉದ್ಯಮದಲ್ಲಿ ನಿಮ್ಮ ದಾರಿಯನ್ನು ಯಾರಾದರೂ ತಪ್ಪಿಸಿಯಾರು. ಸಂಗಾತಿಯಿಂದ ಅವಮಾನವಾಗುವುದು. ಭೂಮಿಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಹೋಗುವುದು ಬೇಡ. ಸಹೋದರನಿಂದ ಉಡುಗೊರೆಯು ಸಿಗಬಹುದು.‌ ನಿಮ್ಮ ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ