AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನ ಭವಿಷ್ಯ; ಇಂದು ಈ ರಾಶಿಯವರು ವಿರೋಧಿಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 24 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ಇಂದು ಈ ರಾಶಿಯವರು ವಿರೋಧಿಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ
ದಿನಭವಿಷ್ಯ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: May 24, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಜ್ಯೇಷ್ಠ, ಯೋಗ: ಶಿವ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 54 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:30ರ ವರೆಗೆ, ಯಮಘಂಡ ಕಾಲ 15:42ರಿಂದ 17:19ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:41 ರಿಂದ 09:17ರ ವರೆಗೆ.

ಸಿಂಹ ರಾಶಿ :ನಿಮ್ಮ ಮಾತಿನಿಂದ ಜನರು ಪ್ರಭಾವಿತರಾಗಬಹುದು. ನಿಮಗೆ ಆದಾಯದ ಹೊಸ ಮಾರ್ಗಗಳು ಕಂಡುಬರಬಹುದು. ಈ ಸಮಯದಲ್ಲಿ ದೊಡ್ಡ ಅವಕಾಶದ ಹುಡುಕಾಟವು ಪೂರ್ಣಗೊಳ್ಳುತ್ತದೆ. ಆರಂಭದಲ್ಲಿ, ಕೆಲವು ಕೆಲಸಗಳನ್ನು ಯೋಚಿಸದೆ ಮಾಡಲಾಗುತ್ತದೆ ಮತ್ತು ಕೆಲವು ಪ್ರಜ್ಞಾಪೂರ್ವಕವಾಗಿ ಮುಂದುವರಿಯುತ್ತದೆ. ಇದು ಗುರಿಯ ಸಾಧನೆಗೆ ಅಥವಾ ಅನುಭವದ ಅನನ್ಯ ಕೊಡುಗೆಗೆ ಕಾರಣವಾಗುತ್ತದೆ. ಮಕ್ಕಳು ನಿಮ್ಮ ಜೊತೆ ಕಾಲವನ್ನು ಕಳೆಯಬಯಸುವರು. ದುರಭ್ಯಾಸಗಳನ್ನು ಬುದ್ಧಿಪೂರ್ವಕವಾಗಿ ಬಿಡದಲಲೇಬೇಕಾಗುವುದು. ನಿಮ್ಮ ಮಾತು ಸಂಗಾತಿಯನ್ನು ಮೌನಿಯನ್ನಾಗಿ‌ ಮಾಡುವುದು. ನೀವು ಮನೆಯ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕಾದೀತು. ಅತಿಯಾದ ಮಾತಿನಿಂದ ಇತರರಿಗೆ ಕಷ್ಟವಾದೀತು. ಮನೆಯ ಕಾರ್ಯವು ನಿಮಗೆ ತೃಪ್ತಿ ಕೊಡುವುದು. ಕೃತಜ್ಞತೆಯನ್ನು ಇಟ್ಟುಕೊಳ್ಳುವುದು ಕಷ್ಟವಾದರೂ ಬೇಕು.

ಕನ್ಯಾ ರಾಶಿ :ಇಂದು ನಿಮ್ಮ ಆರ್ಥಿಕವಾದ ಏರಿಳಿತಗಳು ಹೆಚ್ಚಿರುವುದು. ಸಮಾಜದಲ್ಲಿ ನಿಮ್ಮ ಗೌರವವು ಹೆಚ್ಚಾಗುತ್ತದೆ. ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ಸಿಗಲಿದೆ. ದಾನ ಮಾಡುವ ಮನೋಭಾವವು ಹೆಚ್ಚಾಗುತ್ತದೆ. ನೀವು ಇಂದು ಮಂಗಲಕಾರ್ಯವನ್ನು ಯೋಜಿಸುವಿರಿ. ಕೆಲವು ನಕಾರಾತ್ಮಕ ಸುದ್ದಿಗಳಿಂದಾಗಿ ನಿಮ್ಮ ಮನಸ್ಸು ಚಿಂತಿತವಾಗಬಹುದು. ನೀವು ಸಂತಾನದ ಸಂತೋಷವನ್ನು ಹೊಂದಿರುತ್ತೀರಿ. ಇಂದಿನ ವಹಿವಾಟು ತಕ್ಕಮಟ್ಟಿಗೆ ಇರಲಿದೆ. ಇನ್ನೊಬ್ಬರನ್ನು ಕಂಡು ಕೊರಗುವುದು ಬೇಡ. ನಿಮ್ಮ‌ ತಪ್ಪನ್ನು ಒಪ್ಪಿಕೊಂಡು ಹೊಂದಾಣಿಕೆ ಮಾಡಿಕೊಳ್ಳುವಿರಿ. ವಿದೇಶೀಯ ವಸ್ತುಗಳು ನಿಮಗೆ ಸಿಗಬಹುದು. ನಿಮ್ಮ‌ ಆಲೋಚನೆಗಳನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ. ಚಾಂಚಲ್ಯದ ಕಾರಣ ಉದ್ಯೋಗದಲ್ಲಿಯೂ ಸರಿಯಾದ ಏಕಾಗ್ರತೆಯಿಂದ ಕೆಲಸವನ್ನು ಮಾಡಲಾಗದು. ಸಾಮಾಜಿಕವಾಗಿ ಕಾರ್ಯಗಳಿಗೆ ನಿಮ್ಮ ಹಣವನ್ನೇ ಬಳಸುವಿರಿ.

ತುಲಾ ರಾಶಿ :ನಿಮ್ಮ ಮೇಲೆ ನಿಮಗೆ ಪೂರ್ಣಾವಾದ ನಂಬಿಕೆ ಇಡುವ ಮೂಲಕ ಯಶಸ್ಸು ಸಾಧಿಸಬಹುದು. ನಿಮ್ಮಲ್ಲಿರುವ ಗುಣಗಳು ಪ್ರಶಂಸೆಗೆ ಪಾತ್ರವಾಗಲಿದೆ. ಎಂದೊಕ ಮಾಡಿಕೊಂಡ ವಿದೇಶದ ಸಂಪರ್ಕಗಳು ಇಂದು ಪ್ರಯೋಜನವಾಗಲಿದೆ. ಶಿಕ್ಷಣದ ಬಗ್ಗೆ ನಿಮಗಿರುವ ಆಸಕದತಿ ಮತ್ತಷ್ಟು ಅಧಿಕವಾಗಬಹುದು. ಮಕ್ಕಳ ಚಿಂತೆಯಿಂದ ಎಲ್ಲ ಸಂತೋಷಗಳು ಮರೆಯಾಗಲಿವೆ. ಯಾರ ನಕಾರಾತ್ಮಕ ವಿಚಾರವೂ ನಿಮಗೆ ಏನೂ ಮಾಡದು. ಅನವಶ್ಯಕವಾದ ಸಮಸ್ಯೆಗಳು ನಿಮ್ಮನ್ನು ಕಾಡಿಯಾವು. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಆತ್ಮವಿಶ್ವಾಸವನ್ನು ಉಳಿಸಿಕೊಳ್ಳುವಿರಿ. ಅವ್ಯಕ್ತವಾದ ನೆಮ್ಮದಿಯಿಂದ ಬೀಗಬಹುದು. ಕಿರಿಯರಿಂದ ಆಕಸ್ಮಿಕವಾಗಿ ಗೌರವಕ್ಕೆ ಪಾತ್ರರಾಗುವಿರಿ. ಎಂದೋ ಆದ ಬೇಸರವನ್ನು ಸ್ನೇಹಿತನ ಮುಂದೆ ಇಂದು ಪ್ರಕಟಿಸುವಿರಿ. ಅಸಹಜ ಮಾತುಗಳಿಗೆ ಸ್ಪಂದನೆ ಸಿಗದು. ವಿದ್ಯಾಭ್ಯಾಸದ ಹಿನ್ನಡೆಯು ನಿಮಗೆ ಗೊತ್ತಾಗದು.

ವೃಶ್ಚಿಕ ರಾಶಿ :ಇಂದು ನೀವು ಅನನೂಕುಲ ಸ್ಥಿತಿಯಿಂದ ಹೊರ ಬರುವಿರಿ. ವಿರೋಧಿಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ. ಸರಿಯಾದ ದಾರಿಯಿಂದ ಮಾತ್ರ ಗೆಲುವು ಸಿಗಲಿದೆ. ಅದರಿಂದ ತೃಪ್ತಿಯೂ ಆಗಲಿದೆ. ಸರ್ಕಾರಿ ಕೆಲಸಗಳು ವಿಳಂಬವಾಗುವುದು. ನೆಚ್ಚಿನ ಕಲಾವಿದರ ಭೇಟಿಯಾಗಲಿದೆ. ಆಪ್ತರಿಂದ ಉಡುಗೊರೆ ಸಿಗಲಿದೆ. ಸ್ವಲ್ಪ ಆಲಸ್ಯವು ನಿಮ್ಮ ಕೆಲಸವನ್ನು ಹಿಂದಿಕ್ಕುವುದು. ಸ್ವತಂತ್ರವಾಗಿ ಆಲೋಚನೆಗಳನ್ನು ಬೆಳೆಸಿಕೊಳ್ಳುವುದು ಉತ್ತಮ. ನಿಮ್ಮವರ ಅಹಸಜ ವರ್ತನೆ ನಿಮಗೆ ಬೇಸರ ತರಿಸೀತು. ಪ್ರೀತಿಯ ಸೆಳೆತದಿಂದ ಹೊರಬರಲಾಗದು. ಭೂಮಿಯ ಲಾಭವು ಆಗಲಿದ್ದು ಅನೇಕ‌ ದಿನದ ಚಿಂತೆಗಳು ದೂರಾಗುವುದು. ಅಧಿಕ ಆದಾಯಕ್ಕಾಗಿ ಉದ್ಯೋಗವನ್ನು ನೀವು ತ್ಯಾಗಮಾಡುವಿರಿ. ಮಾನಸಿಕ ಅಸಮತೋಲನವನ್ನು ಸರಿ ಮಾಡಿಕೊಳ್ಳುವಿರಿ. ಬಿರುಸು ನುಡಿಯಿಂದ ನಿಮಗೆ ಆಗಬೇಕಾದ ಕಾರ್ಯವು ಆಗದು. ಮಾತಿಗೆ ಸಂಬಂಧಿಸದಂತೆ ದೋಷವು ನಿಮಗೆ ಕಾಣಲಿಕ್ಕೆ ಸಿಗುವುದು.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್