
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಅತಿಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:50 ಗಂಟೆ, ರಾಹು ಕಾಲ ಮಧ್ಯಾಹ್ನ 12:36 ರಿಂದ 14:09, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:28ರ ವರೆಗೆ, ಗುಳಿಕ ಕಾಲ 11:02 ರಿಂದ 12:36ರ ವರೆಗೆ.
ಮೇಷ ರಾಶಿ :ಇಂದು ಅವಿವಾಹಿತರಿಗೆ ವಿವಾಹ ನಿಶ್ಚಯದ ಸಾಧ್ಯತೆ ಇದೆ. ಬಹಳ ದಿನಗಳ ಅನಂತರ ನಿಮ್ಮ ಮನೆಯಲ್ಲಿ ಸಂತೋಷದ ಸಂದರ್ಭವು ಇರುವುದು. ನಿತ್ಯ ಬಳಸುವ ವಸ್ತುವಿನಿಂದ ನಿಮಗೆ ಲಾಭವಿದೆ. ಅತಿಥಿಗಳ ಆಗಮನವು ಅನಿರೀಕ್ಷಿತವಾಗುವುದು. ನೀವು ವೃತ್ತಿಯನ್ನು ನಂಬಿ ಜೀವನ ಸಾಗಿಸುತ್ತಿದ್ದು ನಿಮಗೆ ಒಮ್ಮೆಲೆ ಬಿಡಬೇಕಾದ ಸ್ಥಿತಿ ಬರಬಹುದು. ವ್ಯಾಪಾರವನ್ನು ನೀವು ಇಂದು ತಂತ್ರಗಾರಿಕೆಯ ಮೂಲಕ ಮಾಡಲಿದ್ದೀರಿ. ನಿಮ್ಮ ಅಸ್ತಿತ್ವವನ್ನು ಗುರುತಿಸಿಕೊಳ್ಳಲು ಸಾಲ ಮಾಡಿಯಾದರೂ ಖರೀದಿಸಬೇಕಾದೀತು. ನೀವಿಂದು ತಂಡದ ನಾಯಕರಾಗಿ ಆಯ್ಕೆಯಾಗಿ ಅದನ್ನು ಮುನ್ನಡೆಸುವಿರಿ. ಎಲ್ಲರನ್ನೂ ಹತ್ತಿರದಿಂದ ತಿಳಿಯಲು ನೀವು ಇಷ್ಟಪಡುವಿರಿ. ದಾಂಪತ್ಯದಲ್ಲಿ ಸುಖವಿದ್ದರೂ ಒಳಗೊಳಗೇ ಸಂಶಯಗಳು ಇಬ್ಬರನ್ನೂ ಸಂತೋಷವಾಗಿ ಇಡಲು ಬಿಡುವುದಿಲ್ಲ. ಅನುವಾದಕರಿಗೆ ಹೆಚ್ಚು ಕಾರ್ಯಗಳು ಬರಬಹುದು. ಮನಸ್ಸಿನ ಭಾರವನ್ನು ಕಳೆಯುವ ದಾರಿಗಳು ನಿಮ್ಮ ಮುಂದೆ ಇರುವುದು.
ವೃಷಭ ರಾಶಿ :ನಿಮ್ಮ ಅಂತಶ್ಶಕ್ತಿಯೇ ನಿಮ್ಮ ನಿಜವಾದ ಬಲವಾದುದರಿಂದ ಯಾವ ಸಮಸ್ಯೆಗಳಿಗೂ ನಿರಾತಂಕವಾಗಿ ಇರುವಿರಿ. ಎಲ್ಲದರಲ್ಲೂ ಹಿನ್ನಡೆಯಾಗುವ ನಿಮಗೆ ಆತ್ಮವಿಶ್ವಾಸ ತುಂಬಲು ಜನರ ಅವಶ್ಯಕತೆ ಇದೆ. ಕಷ್ಟದ ಕೆಲಸವನ್ನು ನೀವು ಅನಾಯಾಸವಾಗಿ ಮಾಡಿ ಮುಗಿಸುವಿರಿ. ಇಂದಿನ ನಿಮ್ಮ ಕೆಲಸವು ಪೂರ್ಣವಾಗಬಹುದು. ಧನದ ಆದಾಯವು ನಿಮ್ಮ ನಿರೀಕ್ಷೆಯನ್ನು ಪೂರ್ಣವಾಗಿ ತಲುಪುವುದು. ನಿಮ್ಮ ಪ್ರಯಾಣ ಇಂದು ಬಹಳ ಕಷ್ಟಕಾರವಾದೀತು. ಯಶಸ್ಸನ್ನು ಒಡೆದು ಜೀರ್ಣಿಸಿಕೊಳ್ಳಲಾಗದಷ್ಟು ನಿಶ್ಶಕ್ತರಾಗವಿರಿ. ಹೆಚ್ಚು ಶ್ರಮದಿಂದ ಸಂಪತ್ತನ್ನು ಪಡೆಯುವಿರಿ. ಮಾಧ್ಯಮದಲ್ಲಿ ನೀವು ಇಂದು ಕಾಣಿಸಿಕೊಳ್ಳಬಹುದು. ಪಕ್ಷಪಾತದಿಂದ ನಿಮ್ಮ ಸಂಬಂಧಗಳು ಹಾಳಾಗಬಹುದು. ಎಷ್ಟೇ ಪ್ರಯತ್ನಿಸಿದರೂ ಸುಮ್ಮನೆ ಇರಲು ಆಗದು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ.
ಮಿಥುನ ರಾಶಿ :ವಿದ್ಯಾಭ್ಯಾಸದ ಬಗ್ಗೆ ನಿಮ್ಮ ಗಮನವು ಬದಲಾಗುವುದು. ನಿಮ್ಮ ಬಗ್ಗೆ ಹೇಳಿದರೂ ಕಷ್ಟ ಹೇಳದಿದ್ದರೂ ಕಷ್ಟವೆನ್ನುವಂತೆ ಆಗುವುದು. ನೀವು ಅದನ್ನು ಕಲಿಯಲು ಇಚ್ಛಿಸುವಿರಿ. ಕಲಿಕೆ ನಿಮ್ಮದೇ ಆದ ವಿಧಾನವನ್ನು ಬಳಸಿಕೊಳ್ಳಲಿದ್ದೀರಿ. ಪ್ರೇಮದ ಸೆಳೆತಕ್ಕೆ ಸಿಲುಕುವಿರಿ. ಪ್ರೇಮಿಗಳು ಇಂದು ಒಂದಾಗುವ ಸಾಧ್ಯತೆ ಇದೆ. ಮನೆಯಲ್ಲಿ ಪ್ರಸ್ತಾಪ ಮಾಡಿ ನಿಮ್ಮ ಮಾರ್ಗವನ್ನು ಸರಿ ಮಾಡಿಕೊಳ್ಳಿ. ವ್ಯಾಪಾರದಲ್ಲಿ ಕೆಲವು ಕೊರತೆಗಳನ್ನು ನೀಗಿಸಿಕೊಂಡರೆ ನೀವು ಲಾಭವನ್ನು ಗಳಿಸಬಹುದು. ಜವಾಬ್ದಾರಿಯಿಂದ ಗ್ರಾಹಕರ ಜೊತೆ ವರ್ತಿಸಿ. ಭೂಮಿಯ ವ್ಯವಹಾರ ಸದ್ಯ ಬೇಡ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ. ಶಿಸ್ತನ್ನು ಕಾಪಾಡಿಕೊಂಡು ಕೆಲಸ ಮಾಡಿಕೊಳ್ಳುವಿರಿ. ಧಾರ್ಮಿಕ ಕಾರ್ಯಕ್ಕಾಗಿ ಸಮಯವನ್ನು ಹೊಂದಿಸಿಕೊಳ್ಳುವಿರಿ. ಮೂರ್ತಿಯಾಗಲು ಪೆಟ್ಟು ತಿನ್ನುವ ಅನಿವಾರ್ಯತೆ ಇರುವುದು. ದ್ವಿಚಕ್ರ ವಾಹನದಲ್ಲಿ ಎಚ್ಚರಿಕೆಯಿಂದ ಸಂಚರಿಸಿ.
ಕರ್ಕಾಟಕ ರಾಶಿ :ಏನೇ ಮಾಡಿದರೂ ಚಾಂಚಲ್ಯವನ್ನು ನಿಯಂತ್ರಿಸಲಾಗದೇ ಕಷ್ಟವಾಗುವುದು. ಯಾವುದನ್ನು ಮಾಡಲೇ ಬಾರದು ಎಂದು ಮತ್ತೆ ಅಂದುಕೊಂಡಿದ್ದರೋ ಅದೇ ಆಗುವುದು. ಇಂದು ನೀವು ಮಾಡಿದ ಕೆಲಸಕ್ಕೆ ಪಶ್ಚಾತ್ತಾಪ ಪಡಬಹುದು. ಬೇಸರದ ಸಂಗತಿಗಳು ಇಂದು ನಡೆಯುವ ಸಾಧ್ಯತೆ ಇದೆ. ವಿರೋಧದ ನಡುವೆಯೂ ನಿಮ್ಮ ಹಣವನ್ನು ಸಾಧಿಸುವಿರಿ. ನಿಮ್ಮ ಅಪೇಕ್ಷಿತ ಸುಖವು ಬಯಸಿದವರಿಗೆ ಸಿಗದು. ಹಿರಿಯರು ನಿಶ್ಚಯಿಸಿದ ಸಂಬಂಧವನ್ನು ಒಪ್ಪಿಕೊಳ್ಳುವಿರಿ. ನಿಮ್ಮ ಮನಸ್ಸು ಎಷ್ಟೇ ಪ್ರಯತ್ನಿಸಿದರೂ ನಕಾರಾತ್ಮಕವಾಗಿ ಇರಲಿದೆ. ನಿಮ್ಮನ್ನು ಅನ್ಯ ಕಾರ್ಯಕ್ಕೆ ಬಳಸಿಕೊಳ್ಳಬಹುದು. ಹಣವೂ ಗೊತ್ತಾಗದಂತೆ ಖಾಲಿಯಾದೀತು. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ನಿಮಗಾಗಿ ಬೇರೆಯವರು ತಮ್ಮ ಯೋಜನೆಯನ್ನು ಬದಲಾಯಿಸುವರು.
ಸಿಂಹ ರಾಶಿ :ಇಂದು ಅನಿರೀಕ್ಷಿತ ಬಂಧುಗಳ ಆಗಮನದಿಂದ ಯೋಜಿತವಾದ ಕಾರ್ಯಗಳನ್ನು ಬದಲಿಸುವುದು ಬೇಡ. ನಿಮ್ಮ ಇಚ್ಛಾಶಕ್ತಿಯು ನಿಮ್ಮ ಇಂದಿನ ಮೇಲಧಿಕಾರಿಗಳಿಗೆ ಖುಷಿಯಾಗುವಂತೆ ನಡೆದುಕೊಳ್ಳುವಿರಿ. ಸುಲಭದ ವಿಚಾರವನ್ನು ಬಹಳ ಸಂಕೀರ್ಣ ಮಾಡಿಕೊಳ್ಳಲಿದ್ದೀರಿ. ನಿಮ್ಮ ಬಗ್ಗೆ ಇರುವ ಭಾವನೆಗಳು ಬದಲಾಗಬಹುದು. ಸಂಗಾತಿಯ ವಿಚಾರದಲ್ಲಿ ನೀವು ತಟಸ್ಥರಾಗುವಿರಿ. ಭೂಮಿಯಿಂದ ಬರುವ ಲಾಭವನ್ನು ಉಳಿತಾಯ ಮಾಡುವ ಬಗ್ಗೆ ಇರುವುದು. ಕುಟುಂಬದಲ್ಲಿ ನಿಮ್ಮ ವಿಚಾರಕ್ಕೆ ಕಲಹವಾಗಬಹುದು. ಸರಿಯಾದ ಮಾಹಿತಿಯನ್ನು ಅವರಿಗೆ ನೀಡಿ. ಮಾನಸಿಕವಾಗಿ ನೀವು ದುರ್ಬಲರಾಗುವಿರಿ. ನಿನ್ನೆಯ ಘಟನೆಯನ್ನು ನೆನಪಿಸಿಕೊಳ್ಳದೇ ಕಾರ್ಯಪ್ರವೃತ್ತರಾಗಿ. ಕಾನೂನಿನ ವಿಚಾರದಲ್ಲಿ ನಿರ್ದಿಷ್ಟತೆ ಇರಲಿ. ಇಂದೇ ಕಾರ್ಯವನ್ನು ಎರಡು ರೀತಿಯ ಲಾಭವಾಗುವಂತೆ ನೋಡಿಕೊಳ್ಳುವಿರಿ.
ಕನ್ಯಾ ರಾಶಿ :ನೀವು ಇಂದು ಯಾವುದಾದರೂ ಸತ್ಕಾರ್ಯದಲ್ಲಿ ಜೋಡಿಸಿಕೊಳ್ಳುವಿರಿ. ಹೂಡಿಕೆಯು ನಿಮ್ಮ ಆರ್ಥಿಕತೆಯನ್ನು ಹೆಚ್ಚಿಸುವುದು. ಏಕಾಂಗಿಯಾಗಿ ನೀವು ಎಲ್ಲಿಗಾದರೂ ಹೋಗುವಿರಿ. ನಿಮ್ಮ ವಸ್ತುವನ್ನು ಸ್ನೇಹಿತರಿಗೆ ಕೊಟ್ಟಿದ್ದು ಅದನ್ನು ಪಡೆಯಲು ನೀವು ಕಷ್ಟ ಪಡುವಿರಿ. ಕಾನೂನಿಗೆ ಮೊರೆ ಹೋಗಿ ನಿಮ್ಮ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಯಾವ ಮೂಲದಿಂದ ಹಣ ಬಂದರೂ ಅದನ್ನು ಸ್ವೀಕರಿಸುವಿರಿ. ನಿಮ್ಮ ವಂಶಸ್ಥರ ಜೊತೆ ಸಮಯವನ್ನು ಕಳೆಯುವಿರಿ. ಮನೆಯಿಂದ ಇಂದು ಹೊರಗೆ ಇರಬೇಕಾದೀತು. ಉದ್ಯೋಗದಲ್ಲಿ ನಿಮಗಿರುವ ಗೊಂದಲವು ಪರಿಹಾರವಾಗಿ ನಿಶ್ಚಿಂತೆಯಿಂದ ಕಾರ್ಯವನ್ನು ಮಾಡುವಿರಿ. ನಿಮ್ಮ ಬಗ್ಗೆ ಇರುವ ಭಾವನೆ ಬದಲಾಗುವುದು. ಪ್ರೇಯಸಿಯನ್ನು ಕಾಣದೇ ಬೇಸರಿಸುವಿರಿ. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳುವುದು ಉತ್ತಮ. ನಿಮ್ಮ ಭಾವದಂತೆ ಭವಿಷ್ಯವೂ ಇರಲಿದೆ. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುವರು.
ತುಲಾ ರಾಶಿ :ನಿಮ್ಮ ಪ್ರಯತ್ನವು ಹೇಗೇ ಇದ್ದರೂ ದೈವದ ಯೋಜನೆ ಬೇರೆಯೇ ಇರುತ್ತದೆ. ನಿಮ್ಮ ಸಮಯವನ್ನು ಸ್ನೇಹಿತರು ವ್ಯರ್ಥಮಾಡಿಯಾರು. ವೃತ್ತಿಯಲ್ಲಿ ಯಾರಾದರೂ ಕೋಪವನ್ನು ತರಿಸಬಹುದು. ಬಾಲ್ಯ ಸ್ನೇಹಿತ ಏಳ್ಗೆಯನ್ನು ಕೇಳಿ ನಿಮಗೆ ಅಸೂಯೆ ಉಂಟಾಗಬಹುದು. ವಾಹನ ಖರೀದಿಯನ್ನು ನೀವು ಮುಂದೂಡುವಿರಿ. ಧನವನ್ನು ಕೇಳಿ ಬಂದವರಿಗೆ ನೀಡಲಿದ್ದೀರಿ. ಸುಳ್ಳಾಡಿ ನೀವು ಯಾವುದಾದರೂ ಲಾಭವನ್ನು ಮಾಡಿಕೊಳ್ಳುವಿರತಿ. ಸಿಟ್ಟು ಬರುತ್ತದೆ ಎಂದು ಗೊತ್ತಿದ್ದರೂ ಅದನ್ನು ನಿಗ್ರಹಿಸಲು ಶ್ರಮವಹಿಸದೇ ಇರುವುದು ವಿಷಾದಕರ ಸಂಗತಿಯಾಗುವುದು. ಸ್ನೇಹಿತರ ನಡುವೆ ಸೈದ್ಧಾಂತಿಕ ಭಿನ್ನತೆ ಬರುವುದು. ಕೆಲವನ್ನು ಅಳೆದು ತೂಗಿ ಮಾತಾನಾಡಿದರೆ ಮಾತ್ರ ನೀವು ಎಲ್ಲರ ಜೊತೆ ಸೌಹಾರ್ದದಿಂದ ಇರಲು ಸಾಧ್ಯ. ಸಂಗಾತಿಯಿಂದ ಧನಸಹಾಯವನ್ನು ಪಡೆಯುವಿರಿ. ಉದ್ಯೋಗವನ್ನು ಬಿಡುವ ಆಲೋಚನೆ ಇದ್ದು, ಮನೆಯ ಸ್ಥಿತಿಯನ್ನು ಕಂಡು ಈ ತೀರ್ಮಾನಕ್ಕೆ ಬರುವುದು ಉತ್ತಮ.
ವೃಶ್ಚಿಕ ರಾಶಿ :ನಿಮ್ಮ ಅಂತರಂಗದ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಯೋಚಿಸುವಿರಿ. ಇನ್ನೊಬ್ಬರ ಏಳ್ಗೆಯನ್ನು ಕಂಡು ಮನಸ್ಸಿನಲ್ಲಿ ಸಂಕಟಪಡುವಿರಿ. ಹಿರಿಯರಿಗೆ ಎದುರಾಡುವುದನ್ನು ಕಡಿಮೆ ಮಾಡಿ. ಮಾತಿನಿಂದ ನೀವು ಅನೇಕ ಉತ್ತಮವಾದ ವಿಷಯವನ್ನು ಕಳೆದುಕೊಳ್ಳುವಿರಿ. ಕೋಪವನ್ನು ಆದಷ್ಟು ನಿಯಂತ್ರಣಕ್ಕೆ ತಂದುಕೊಳ್ಳಿ. ಎಲ್ಲವೂ ಗೊತ್ತಿದ್ದರೂ ಏನೂ ಗೊತ್ತಿರದಂತೆ ವರ್ತಿಸುವಿರಿ. ಆ ಸಮಯಕ್ಕೆ ನಿಮಗೆ ಇಷ್ಟವಾದ ಸಂಗತಿಯನ್ನು ಮಾಡಿ. ನಿಮ್ಮ ಹಣವೇ ಆದರೂ ಸಮಯಕ್ಕೆ ಸರಿಯಾಗಿ ಸಿಗದೇಹೋಗಬಹುದು. ನೀವು ಇಂದು ಸೌಂದರ್ಯಕ್ಕೆ ಮನಸೋಲಬಹುದು. ಅನಪೇಕ್ಷಿತ ವಿಷಯವನ್ನು ಮರೆತುಬಿಡಿ. ಆಯ್ಕೆಗಳ ವಿಚಾರದಲ್ಲಿ ನೀವು ಹಿಂದುಳಿಯಬಹುದು. ಲಾಭಾಕ್ಕಾಗಿ ವ್ಯಾಪಾರದಲ್ಲಿ ಹೊಸದಾದ ಆಕರ್ಷ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಮೇಲಧಿಕಾರಿಗಳಿಗೆ ನಿಮ್ಮ ಕಾರ್ಯದ ಒತ್ತಡವನ್ನು ವಿವರಿಸುವಿರಿ.
ಧನು ರಾಶಿ :ಅಲ್ಪ ಲಾಭಕ್ಕಾಗಿ ದೇಹವನ್ನು ದಂಡಿಸಬೇಕಾದೀತು. ಉದ್ವೇಗದ ಮಾತುಗಳು ನಿಮ್ಮ ಮಾನಸಿಕ ಸ್ಥಿತಿಯನ್ನು ತೋರಿಸುತ್ತದೆ. ಅಧಿಕವಾದ ಸಂಪತ್ತನ್ನು ಗಳಿಸಬೇಕು ಎನ್ನುವ ಹಂಬಲವಿದ್ದರೂ ಅದನ್ನು ಪಡೆಯಲು ದಾರಿ ಸುಲಭವಿಲ್ಲ ಎಂದು ಅನ್ನಿಸಬಹುದು. ವರ್ತಮಾನದ ಬಾಳಿಗಿಂತ ಭವಿಷ್ಯವು ನಿಮಗೆ ಬಹಳ ರೋಚಕತೆಯದ್ದಾಗಿ ಕಾಣಬಹುದು. ಹಳೆಯ ಸ್ನೇಹಿತೆಯ ನೆನಪು ಮರುಕಳಿಸಬಹುದು. ಇಂದಿನ ಖರ್ಚು ನಿಮ್ಮಬಆದಾಯವನ್ನು ಹೆಚ್ಚು ಮಾಡಲು ಬೇಕಾದ ಫಲವನ್ನು ಕೊಟ್ಟೀತು. ಎಲ್ಲರ ಜೊತೆ ವಸ್ತುವನ್ನು ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ನಿಮಗೆ ಬೇಕಾದ ವಸ್ತುವು ಸರಿಯಾದ ಸಮಯಕ್ಕೆ ಬಂದೊದಗದು. ತಾಳ್ಮೆಯನ್ನು ಕಳೆದುಕೊಳ್ಳಬಹುದು ಇಂದು. ಮಕ್ಕಳನ್ನು ಸ್ಪರ್ಧಾತ್ಮಕ ಜಗತ್ತಿಗೆ ಪ್ರೇರಿಸುವಿರಿ. ಅನಿರೀಕ್ಷಿತವಾಗಿ ಹಣವು ಖಾಲಿಯಾಗುವುದು. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡು ಅನಂತರ ಬೇಸರಿಸುವರು. ವಿದೇಶದ ಜೊತೆಗೆ ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಏನೂ ಇಲ್ಲದವಗೆ ಹುಲ್ಲುಕಡ್ಡಿಯೂ ದೊಡ್ಡ ಆಸರೆ ಆದೀತು.
ಮಕರ ರಾಶಿ :ನಾಯಕರಾಗಿರುವವರಿಗೆ ಪ್ರಶಂಸೆ ಗೌರವಗಳು ಸಿಗಲಿವೆ. ಮನೆಯವರ ಜೊತೆ ಭವಿಷ್ಯದ ಚಿಂತನೆಯನ್ನು ಮಾಡಬಹುದು. ಕೆಲವು ಕಾಲದ ಚಿಂತನೆಯು ಇಂದು ನಿಮ್ಮಿಂದ ದೂರವಾಗಬಹುದು. ರಾಜಕೀಯವಾಗಿ ನೀವು ಹೊಸದಾರಿಯನ್ನು ಪ್ರಸಿದ್ಧರಾಗಲು ಆಯ್ಕೆ ಮಾಡಿಕೊಳ್ಳಬಹುದು. ನಿಮ್ಮನ್ನು ಯಾವುದಾದರೂ ಖಾಸಗಿ ಸಂಸ್ಥೆಗೆ ಮುಖ್ಯಸ್ಥರನ್ನಾಗಿ ಮಾಡಬಹುದು. ಸಣ್ಣ ವಿಚಾರಗಳಿಗೆ ಕೋಪವು ಸಹಜವಾಗಿ ಬಂದರೂ ಅದನ್ನು ಹಿಡಿದಿಟ್ಟುಕೊಳ್ಳಬೇಕಾದೀತು. ಕಳೆದು ಹೋದಮೇಲೆ ಅದನ್ನು ಚಿಂತಿಸಿ ಉಪಯೋಗವಿಲ್ಲ. ನಿಮಗೆ ಏನೂ ಗೊತ್ತಾಗದೇ ಎಲ್ಲವೂ ನಡೆಯುತ್ತದೆ ಎಂವ ಕೋಪ ಇರಬಹುದು. ಸ್ತ್ರೀಯರಿಂದ ನಿಮ್ಮಬಗ್ಗೆ ಸುಳ್ಳು ಅಪವಾದಬರಬಹುದು. ಮನೆಯಲ್ಲಿ ನಿಮ್ಮ ಒಪ್ಪಿಗೆ ಸಿಗದೇ ಯಾವುದನ್ನೂ ಮಾಡಾರರು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು.
ಕುಂಭ ರಾಶಿ :ಇಂದು ನಿಮ್ಮ ಯಾವುದಾದರೂ ಕಾರ್ಯಕ್ಕೆ ಸ್ನೇಹಿತರ ಬೆಂಬಲದಿಂದ ಸಾಧ್ಯವಾಗಿಸುವಿರಿ. ಬಹಳ ದಿನಗಳಿಂದ ನಿರೀಕ್ಷಿಸಿದ್ದ ಸ್ಥಳಕ್ಕೆ ಹೋಗುವಿರಿ. ಹಣವನ್ನು ನೀವು ಎಂದಿನಂತೆ ಖರ್ಚು ಮಾಡಬಾರದು. ನಿಮ್ಮ ಬೆಂಬಲಕ್ಕೆ ನಿಲ್ಲುವವರು ಯಾರು ಎಂಬ ಕುತೂಹಲವಿದ್ದರೂ ಸಣ್ಣ ಸುಳಿವು ಸಿಗಲಿದೆ. ನಿಮ್ಮ ಮೇಲಿನ ಅಪವಾದವನ್ನು ನೀವು ಕಳೆದುಕೊಳ್ಳಲು ಹೆಚ್ಚು ಮಾತನಾಡುವಿರಿ. ಸಂಗಾತಿಯ ಮೇಲಿನ ಮೋಹದಿಂದ ತಪ್ಪು ಮಾಡುವ ಸಾಧ್ಯತೆ ಇದೆ. ಉನ್ನತ ಸ್ಥಾನಕ್ಕೆ ಹೋಗಲು ಬೇಕಾದ ಅರ್ಹತೆ ಇದ್ದರೂ ನೀವು ಅದನ್ನು ಪಡೆಯಲು ಇಷ್ಟಪಡುವುದಿಲ್ಲ. ಸಂಗಾತಿಯ ಮನೋಭಾವವನ್ನು ತಿಳಿಯಲು ನೀವು ಕೆಲವು ತಂತ್ರವನ್ನು ಬಳಸುವಿರಿ. ಅಸಹಾಯಕತೆ ಎಂದು ಮನಸಿಗೆ ಅನ್ನಿಸಬಹುದು. ಬಂಧುಗಳ ವಿಶ್ವಾಸವು ಇಂದು ಸಾಬೀತಾಗಬಹುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು.
ಮೀನ ರಾಶಿ :ಎಲ್ಲವನ್ನೂ ವ್ಯಾವಹಾರಿಕ ದೃಷ್ಟಿ ರಿಂದಲೇ ನೋಡುವುದು ಕಷ್ಟ. ಮಾನವೀಯತೆಯನ್ನು ಕಿಂಚಿತ್ತಾದರೂ ಇರಿಸಿಕೊಳ್ಳಬಹುದು. ಸಂಗಾತಿಯ ಅನಿರೀಕ್ಷಿತ ಮಾತುಗಳು ನಿಮಗೆ ಆಶ್ಚರ್ಯಕರ ಎನಿಸಬಹುದು. ಆಯಾಸದಿಂದ ಇಂದು ಸುಖವಾದ ನಿದ್ರೆಯನ್ನು ಮಾಡುವಿರಿ. ಕೆಲವರ ವ್ಯಕ್ತಿತ್ವವು ನಿಮಗೆ ಇಷ್ಟವಾದೀತು. ಲಾಭದಾಯಕವಾದ ಯೋಜನೆಗಳೂ ನಿಮ್ಮನ್ನು ನಷ್ಟದ ಕಡೆಗೆ ಕರೆದೊಯ್ಯುವುದು. ಊಹೆಯಲ್ಲಿ ದಿನ ಕಳೆಯುವುದನ್ನು ಕಡುಮೆ ಮಾಡಿ. ನೆಮ್ಮದಿಗೆ ಬೇರೆ ದಾರಿಯನ್ನು ಕಂಡುಕೊಳ್ಳಲಿದ್ದೀರಿ. ಅತಿಥಿಗಳಿಗೆ ಯೋಗ್ಯ ಸತ್ಕಾರವನ್ನು ಮಾಡಲಿದ್ದೀರಿ. ಅಶುಭವಾದ ಸಂಗತಿಯನ್ನು ಇಂದು ತರಲು ಹೋಗಬೇಡಿ. ಎಲ್ಲದಕ್ಕೂ ಕಾರಣವನ್ನು ಹುಡುಕುತ್ತ ಕಾಲಹರಣಮಾಡಬೇಡಿ. ದೈವಕೃಪೆ ಸ್ವಲ್ಪ ಕಡಿಮೆ ಇದ್ದು ಅದನ್ನು ಹೆಚ್ಚು ಮಾಡಿಕೊಳ್ಳಿ. ಮಾಡಲೇಬೇಕಾದ ಕಾರ್ಯಗಳ ಬಗ್ಗೆ ಹೆಚ್ಚು ಗಮನ ಅಗತ್ಯ. ಎಲ್ಲದಕ್ಕೂ ಇನ್ನೊಬ್ಬರನ್ನು ಬೊಟ್ಟುಮಾಡಿ ತೋರಿಸುವುದು ಸರಿಯಾಗದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು.
-ಲೋಹಿತ ಹೆಬ್ಬಾರ್ – 8762924271 (what’s app only)