Daily Horoscope 30 September 2024: ಈ ರಾಶಿಯವರ ನೇರ ನುಡಿಯಿಂದ ಎದುರಿನವರಿಗೆ ತೊಂದರೆಯಾದೀತು

ಸೆಪ್ಟೆಂಬರ್​ 30,​ 2024ರ​​ ನಿಮ್ಮ ಭವಿಷ್ಯ ಹೇಗಿದೆ?: ಒಮ್ಮೆಲೇ‌ ಅಧಿಕ ಲಾಭವನ್ನೂ ಇಂದು ಯಾರಿಂದಲೂ ನಿರೀಕ್ಷಿಸಬಾರದು. ನೀವು ಇಂದು ದೇವರ ಮೇಲೆ‌ ಸಂಪೂರ್ಣ ಭಾರ ಹಾಕಿ ನಿಮ್ಮ ಕಾರ್ಯವನ್ನು ಆರಂಭಿಸುವಿರಿ. ಪ್ರೇಮವನ್ನು ನೀವು ಒಪ್ಪಿಕೊಳ್ಳದೇ ನಿಮ್ಮದೇ ವಾದವನ್ನು ಮಾಡುವಿರಿ. ಸಂಗಾತಿಯ ಮಾತುಗಳು ನಿಮಗೆ ಕಿರಿಕಿರಿಯನ್ನು ತಂದೀತು. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 30 September 2024: ಈ ರಾಶಿಯವರ ನೇರ ನುಡಿಯಿಂದ ಎದುರಿನವರಿಗೆ ತೊಂದರೆಯಾದೀತು
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 30, 2024 | 12:01 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಶುಭ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 21 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:53 ರಿಂದ 09:23, ಯಮಘಂಡ ಕಾಲ ಬೆಳಿಗ್ಗೆ 10:53ರಿಂದ 12:22ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:52 ರಿಂದ 03:22 ರವರೆಗೆ.

ಮೇಷ ರಾಶಿ : ಎಲ್ಲವನ್ನೂ ನೀವು ಪ್ರೀತಿಯಿಂದ ವಿಶ್ವಾಸದಿಂದ ಪಡೆಯಲಾಗದು. ಯಾರ ಬೆಂಬಲಕ್ಕೂ ನೀವು ಸುಮ್ಮನೇ ಇರಲಾರಿರಿ. ಇಂದು ನಿಮಗೆ ದೇವತಾರಾಧನೆಯಲ್ಲಿ ಮನಸ್ಸಾಗುವುದು. ಸಿಟ್ಟಾಗಬೇಕಾದ ಸ್ಥಿತಿಯಲ್ಲಿಯೂ ನೀವು ಪ್ರಶಾಂತರಾಗಿರುವುದು‌ ಆಶ್ಚರ್ಯಕರ ಸಂಗತಿಯಾಗಿದೆ. ಮನೆಯ ಕೆಲಸದಲ್ಲಿ ನೀವು ಮಗ್ನರಾಗುವಿರಿ. ಮಕ್ಕಳಿಂದ ನಿಮಗೆ ಉದ್ಯಮಕ್ಕೆ ಅವಕಾಶ ಸಿಗುವುದು. ಉದ್ಯೋಗದ ನಿಮಿತ್ತ ನೌಕರರ ತುರ್ತು ಸಭೆಯನ್ನು ಕರೆಯಲಿದ್ದೀರಿ. ಮನೆ ಮತ್ತು ಕೆಲಸವನ್ನು ಸಮಾನವಾಗಿ ಇಟ್ಟುಕೊಳ್ಳಿ. ಕಟ್ಟಡವನ್ನು ನಿರ್ಮಾಣ ಮಾಡುವವರಿಗೆ ಹೆಚ್ಚು ಕೆಲಸವು ಇರಲಿದೆ. ಹಳೆಯ ಖಾಯಿಲೆಯಿಂದ ಬಳಲಬಹುದು. ಬೇಡವಾದ ವಸ್ತುಗಳನ್ನು ಮಾರಿ ಹಣವನ್ನು ಪಡೆಯುವಿರಿ. ಹಣದ ಲೆಕ್ಕಾಚಾರದಲ್ಲಿ ನಿಮಗೆ ಮೋಸವಾದುದ್ದು ತಿಳಿದುಬರುವುದು. ಯಾರದೋ ಉಪಕಾರಕ್ಕಾಗಿ ನೀವು ವೃಥಾ ತಿರುಗಾಡುವಿರಿ.

ವೃಷಭ ರಾಶಿ : ಕೆಲವು ಸುದ್ದಿಗಳು ನಿಮ್ಮನ್ನು ಭ್ರಾಂತಗೊಳಿಸಬಹುದು. ಅಪರಿಚಿತ ವ್ಯಕ್ತಿಗಳು ನಿಮಗೆ ಬಹಳ ಆಪ್ತರಾಗುವರು. ಸಂಗಾತಿಯ ಪುನರಾವರ್ತಿತ ಘಟನೆಯಿಂದ ನಿಮಗೆ ಬಹಳ ಬೇಸರವಾಗುವುದು. ಸಂಗಾತಿಯ ಮಾತು ನಿಮಗೆ ಸಿಟ್ಟನ್ನ ತರಿಸೀತು. ನಿಮ್ಮನ್ನು ಕನಿಷ್ಠವಾಗಿಯೂ ಉದ್ಯಮದಲ್ಲಿ ಕಾಣಬಹುದು. ಯಾವುದೇ ಫಲಾಪೇಕ್ಷೆ ಇಲ್ಲದೇ ಸ್ನೇಹಿತರನ್ನು ಮಾಡಿಕೊಳ್ಳುವಿರಿ. ಇಂದಿನ ನಿಮ್ಮ ವ್ಯಾಪಾರವು ಎಂದಿಗಿಂತ ಹೆಚ್ಚು ಕಳೆಗಟ್ಟಲಿದೆ. ಹೂಡಕೆಯ ಹಣವು ನಿಮಗೆ ಸರಿಯಾಗಿ ಸಿಗಲಿದೆ. ನಿಮ್ಮನ್ನು ನೀವು ತೆರೆದುಕೊಳ್ಳಲು ಅವಕಾಶ ಸಿಗುವುದು. ನಿವೃತ್ತಿಯಾದವರಿಗೆ ಬರಬೇಕಾದ ಹಣವನ್ನು ಪಡೆಯಲು ತೊಂದರೆಯಾದೀತು. ನಿಮ್ಮ ನಿಯಮಗಳನ್ನು ನೀವೇ ಮುರಿದುಕೊಳ್ಳುವಿರಿ. ಮಕ್ಕಳ‌ ಮೇಲೆ ಅಶಿಸ್ತಿನ ಕಾರಣಕ್ಕೆ ಸಿಟ್ಟಾಗುವಿರಿ. ಮನೆಗೆ ಬಂದವರನ್ನು ಖಾಲಿ ಕೈಯಲ್ಲಿ ಕಳುಹಿಸಿ ಅನಂತರ ಪಶ್ಚಾತ್ತಾಪಪಡುವಿರಿ. ನಿಮ್ಮ ಕೆಲವು ಹೊಸ ಪ್ರಯತ್ನಗಳು ಫಲ ನೀಡುತ್ತವೆ. ನಿಮ್ಮ ವೈಯಕ್ತಿಕ ಕಾರ್ಯಗಳು ಹಲವು ಹಾಗಯೇ ಉಳಿದುಕೊಂಡಿರುವುದು.

ಮಿಥುನ ರಾಶಿ : ಕಛೇರಿಯಲ್ಲಿ ನಿಮ್ಮ ಸ್ಥಾನವನ್ನು ಉಳಿಸಿಕೊಳ್ಳಲುವಂತೆ ಇರಿ. ಸಂಗಾತಿಯ ಜೊತೆ ಕಲಹದ ಕಾರಣ ಎಲ್ಲವೂ ಅಸ್ತವ್ಯಸ್ತ ಆಗಬಹುದು.‌ ವಿಶ್ವಾಸಘಾತವು ನಿಮಗೆ ದುಃಖವನ್ನು ತರಿಸಬಹುದು. ಆಹಾರದ ಕೊರತೆಯಿಂದ ನಿಮಗೆ ಸಂಕಟವಾಗಲಿದೆ. ದುಡಿಮೆಯ ಬೆನ್ನೇರಿ ಸಂಬಂಧಗಳನ್ನು ಅಗೌರವದಿಂದ ಕಾಣುವ ಸ್ವಭಾವವನ್ನು ಬೆಳೆಸಿಕೊಂಡಿರುವಿರಿ. ಖಾಸಗಿ ಸಂಸ್ಥೆಯು ನಿಮಗೆ ಉನ್ನತ ಸ್ಥಾನವನ್ನು ಕೊಡಲಿದೆ. ನಿಮ್ಮ ಮತ್ತು ನೌಕರರ ನಡುವಿನ ಸಂಬಂಧವು ಹದ ತಪ್ಪಬಹುದು. ಸಿಕ್ಕ ಗೌರವಕ್ಕೆ ತಕ್ಕಂತೆ ನಿಮ್ಮ ವರ್ತನೆ ಇದ್ದರೆ ಒಳ್ಳೆಯದು. ವಿಶೇಷ ಕೆಲಸಕ್ಕೆ ಹೊರಡುವಾಗ ಕುಲದೇವರ ಸ್ಮರಣೆಯನ್ನು ಮರೆಯುವುದು ಬೇಡ. ನೇರ ನುಡಿಯಿಂದ ಎದುರಿನವರಿಗೆ ತೊಂದರೆಯಾದೀತು. ಭೂ ವ್ಯವಹಾರದಲ್ಲಿ ಕೈ ಹಾಕಲು ಹೋಗಲೇಬೇಡಿ. ಹಣವನ್ನು ಹೊಂದಿಸುವುದು ಇಂದು ಸುಲಭದ ಕೆಲಸವಲ್ಲ‌. ಅನ್ಯರ ಕಾರಣದಿಂದ ತಾಳ್ಮೆಯ ಕಟ್ಟೆ ಒಡೆಯಬಹುದು. ಆಪ್ತರನ್ನಾಗಿ ಸರಿಯಾದವರನ್ನು ಜೋಡಿಸಿಕೊಳ್ಳುವಿರಿ.

ಕರ್ಕಾಟಕ ರಾಶಿ : ಮನೆಗೆ ಬಂದವರನ್ನು ಬರಿದಾಗಿ ಕಳುಹಿಸುವುದು ಬೇಡ. ಇಂದು ನೀವು ಹಣವನ್ನು ಖರ್ಚು ಮಾಡದೇ ಜಿಪುಣರಂತೆ ತೋರುವಿರಿ. ಧನದ‌ ಲಾಭವನ್ನು ನಿರೀಕ್ಷಿಸದೇ ಕೆಲಸವನ್ನು ಆರಂಭಿಸಿ. ನೀವು ಮಿಂಚಿನ‌ ವೇಗದಲ್ಲಿ ಮಾಡುವ ಕೆಲಸವು ಎಲ್ಲರಿಗೂ ಇಷ್ಟವಾಗುವುದು. ಮಕ್ಕಳನ್ನು ತಿದ್ದುವ ಕೆಲಸದಲ್ಲಿ ಸಮಯವು ಹೋಗುವುದು. ನಿಮ್ಮ‌ ಸ್ವಭಾವದ ದುರುಪಯೋಗವಾಗಲಿದೆ. ನಗುಮುಖವು ನಿಮ್ಮ ವ್ಯಾಪಾರಕ್ಕೆ ಪೂರಕ. ಗಂಭೀರವಾದ ಚಿಂತನೆಯನ್ನು ಮಾಡುವುದು ನಿಮಗೆ ಇಷ್ಟವಿಲ್ಲದ ಕೆಲಸವಾಗಲಿದೆ. ಸಮಾರಂಭದಲ್ಲಿ ಆಪ್ತರ ಸಮಾಗಮವಾಗಲಿದೆ. ಹಳೆಯ ಗೆಳತಿಯು ಸಿಗಬಹುದು. ನಿಮ್ಮ ವೈಯಕ್ತಿಕ ವಿಚಾರವನ್ನು ಇತರರಿಗೆ ತಿಳಿದುಕೊಳ್ಳುವ ಕುತೂಹಲ ಇರಲಿಕ್ಕಿದೆ. ಯಾರಿಂದಲೂ ಅತಿಯಾಗಿ ನಿರೀಕ್ಷಿಸದೇ ಕೆಲಸವನ್ನು ಮಾಡಿ. ಬೇಕಾದವರನ್ನು ಮಾತಿನಿಂದ ದೂರ ಮಾಡಿಕೊಳ್ಳುವಿರಿ. ನಿಮ್ಮ ಅತಿಯಾದ ಮಾತು ಕಿರಿಕಿರಿ‌ ಮಾಡೀತು. ಕಛೇರಿಯಲ್ಲಿ ನಿಮ್ಮ ಅಭಿಪ್ರಾಯವೂ ಮುಖ್ಯವಾಗಬಹುದು.

ಸಿಂಹ ರಾಶಿ : ಜವಾಬ್ದಾರಿಯ ಸ್ಥಾನದಲ್ಲಿ ಇದ್ದು ನೀವು ವರ್ತಿಸಬೇಕಾಗುವುದು. ವಿದ್ಯಾಭ್ಯಾಸದಲ್ಲಿ ಪ್ರಗತಿಯ ಜೊತೆ ಶತ್ರುಗಳೂ ಉಂಟಾಗುವರು. ಅಪರಿಚಿತರ ಜಾಲಕ್ಕೆ ಸಿಕ್ಕಿ ಮೋಸ ಹೋಗಬಹುದು. ಆರ್ಥಿಕ ಬಲವನ್ನು ನೋಡಿ ಇಂದು ಮುಂದುವರಿಯಿರಿ. ಸ್ನೇಹಿತರು ನಿಮ್ಮ ಬಳಿ ಹಣದ ಸಹಾಯವನ್ನು ಕೇಳಬಹುದು. ವೃತ್ತಿಯಲ್ಲಿ ನೀವು ಹೊಸತನ್ನು ತರಲು ಯೋಚಿಸಬಹುದು. ನೀವು ಕೊಡುವ ತೀರ್ಮಾನವು ನ್ಯಾಯಸಮ್ಮತವಾಗಿರಲಿ. ಸ್ತ್ರೀಯರಿಂದ ನಿಮಗೆ ಬೇಕಸದ ಸಹಾಯವು ಸಿಗಲಿದೆ. ಇನ್ನೊಬ್ಬರ ಆದಾಯಕ್ಕೆ ತೊಂದರೆಯನ್ನು ಕೊಡುವುದು ಒಳ್ಳೆಯದಲ್ಲ. ಎಂದೋ ಮಾಡಿದ ಉಪಕಾರವು ನಿಮಗೆ ವರವಾಗಿ ಬರಬಹುದು. ‌ಬಲವಂತವಾಗಿ ಇನ್ನೊಬ್ಬರಿಂದ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಪ್ರಾಮಾಣಿಕತೆಯು ಇಂದು ನಿಮಗೆ ವರದಾನವಾಗುವುದು. ಅಪರಿಚಿತ ಸ್ಥಳದಿಂದ ಭೀತಿಯಾಗಬಹುದು.

ಕನ್ಯಾ ರಾಶಿ : ಪ್ರಭಾವೀ ವ್ಯಕ್ತಿಗಳ ಸಂಪರ್ಕವು ಯಾರದೋ ಮೂಲಕ ಸಿಗುವುದು. ಇಂದು ಎಲ್ಲರಿಗೂ ನೀವು ಇಷ್ಟವಾಗುವಿರಿ. ಕಲಾತ್ಮಕ ವಿಚಾರದಲ್ಲಿ ಇಂದು ಹೆಚ್ಚು ಆಸಕ್ತಿಯನ್ನು ಇಟ್ಟುಕೊಳ್ಳುವಿರಿ. ನಿಮ್ಮ ನಿರ್ಧಾರವನ್ನು ಇನ್ನೊಬ್ಬರ ಮೇಲೆ‌ ಹೇರುವುದು ಬೇಡ. ಎಲ್ಲರ ಮೇಲೂ ಹಿಡಿತ ಸಾಧಿಸುವುದು ಅಶಕ್ಯ. ರಾಜಕೀಯ ವಲಯದಲ್ಲಿ ನಿಮ್ಮ ಮಾತು ನಡೆಯಲಿದ್ದು ಅದನ್ನು ಸದುಪಯೋಗವಾಗಿವಂತೆ ಮಾಡಿಕೊಳ್ಳಿ. ಮನೆಯ ಮೇಲೆ‌‌ ಚೋರರ ಭಯವು ಕಾಡಬಹುದು. ಕೃಷಿಯಲ್ಲಿ ಸ್ವಲ್ಪಮಟ್ಟಿಗೆ ನಷ್ಟವಾಗುವ ಸಾಧ್ಯತೆ ಇದೆ. ಅನುಭವಿಗಳ ಮಸರ್ಗದರ್ಶನವು ನಿಮಗೆ ಸಿಗಲಿದೆ. ಸಣ್ಣ ವ್ಯಾಪಾರಿಗಳಿಗೆ ಸ್ವಲ್ಪ ಲಾಭವಾಗುವುದು. ಬಂಧುಗಳ ಜೊತೆಗೆ ನಿಮ್ಮ ಒಡನಾಟವು ಚೆನ್ನಾಗಿರುವುದು. ಸಂಬಂಧವು ನಿಮಗೆ ಹೊಸ ಉತ್ಸಾಹವನ್ನು ಕೊಡಬಹುದು. ಮಾತಿನಲ್ಲಿ ಹಿಡಿತವಿದ್ದರೆ ನಿಮಗೆ ಇಂದು ಕ್ಷೇಮ. ಸಣ್ಣದಕ್ಕೂ ಸಂಗಾತಿಯ ಬೆಂಬಲವನ್ನು ಅಪೇಕ್ಷಿಸುವಿರಿ. ಹಿರಿಯರಿಗೆ ಕೊಡಬೇಕಾದ ಗೌರವವನ್ನು ಕೊಡಿ. ಹಳೆಯ ತಪ್ಪಿನಿಂದ ಪಾಠ ಕಲಿತರೆ ಒಳ್ಳೆಯದು.

ತುಲಾ ರಾಶಿ : ಪರ ಊರು ನಿಮ್ಮ ಆರೋಗ್ಯವನ್ನು ಹಾಳುಮಾಡುವುದು. ಮೇಲಧಿಕಾರಿಗಳ ಕಿರುಕುಳವನ್ನು ಸಹಿಸುವುದು ಕಷ್ಟವಾಗುವುದು. ಹಳೆಯ ವಿಚಾರಕ್ಕೆ ಸಂಗಾತಿಯ ಜೊತೆ ಕಲಹವಾಗಲಿದೆ. ಆದಷ್ಟು ಒಬ್ಬರು ಸುಮ್ಮನಿದ್ದರೆ ಕಲಹವು ಶಾಂತವಾಗಲಿದೆ. ಶ್ರೇಷ್ಠ ವಸ್ತುಗಳ ಲಾಭವಿದ್ದರೂ ಅದನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಮನೆಯ ಶುಭ ಕಾರ್ಯಗಳಿಗೆ ನೀವು ಕೈಲಾದ ಸಹಕಾರವನ್ನು ಕೊಡಬಹುದು. ಕಛೇರಿಯ ಕೆಲಸಗಳನ್ನು ಬೇರೆ ಸಮಯದಲ್ಲಿಯೂ ಮಾಡಬೇಕಾಗುವುದು. ಕೆಲವು ಘಟನೆಗಳನ್ನು ನೀವು ಮರೆತು ಮುಂದಡಿ ಇಡಬೇಕಾದೀತು.‌ ಸಂಗಾತಿಯ ಬೆಂಬಲವನ್ನು ನಿರಾಕರಿಸುವಿರಿ. ತಪ್ಪಿಗೆ ಕ್ಷಮೆ ಕೇಳಿ ದೊಡ್ಡವರಾಗಲಿದ್ದೀರಿ. ಅವರ ಎಲ್ಲ ಸಹಕಾರಗಳನ್ನು ತೆಗೆದುಕೊಳ್ಳಿ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಬಹುದು. ನಿಮ್ಮ ಅಧ್ಯಯನವು ಕಡಿಮೆಯಾಗಲಿದೆ. ನಿಮ್ಮವರನ್ನು ದೂರ ಮಾಡಿಕೊಳ್ಳದೇ ಯಥಾಸ್ಥಿತಿಯಲ್ಲಿ ಇರಿಸಿ. ಯಾರಾದರೂ ಮಾನಸಿಕವಾದ ಒತ್ತಡವನ್ನು ತರಿಸಬಹುದು.

ವೃಶ್ಚಿಕ ರಾಶಿ : ಯಾರನ್ನೋ ಟೀಕಸುತ್ತ ನಿಮ್ಮ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಇಂದಿನ ಆದಾಯ ಕಡಿಮೆ ಇದ್ದರೂ ನೆಮ್ಮದಿ ಇರಲಿದೆ. ಪ್ರಾಮಾಣಿಕತೆ ನಿಮಗೆ ವರವಾಗಬಹುದು. ನಿಮ್ಮ ಸರಳತೆಯು ನಿಮಗೆ ಧನಾತ್ಮಕ ಅಂಕಗಳನ್ನು ನೀಡುವುದು. ಸ್ತ್ರೀಯರಿಂದ ನೀವು ಸಂತೋಷವನ್ನು ಅನುಭವಿಸುವಿರಿ. ನಿಮ್ಮ ಮನಸ್ಸಿಗೆ ಹೊಂದುವವರ ಒಡನಾಟ ಸಿಗುವುದು. ನಿಮ್ಮವರೇ ನಿಮಗೆ ತೊಂದರೆಯನ್ನು ಕೊಡುವರು. ವಿವಾಹ ವಿಚಾರವನ್ನು ನೀವು ಆತುರದಿಂದ ಮಾಡುವುದು ಬೇಡ. ಮಕ್ಕಳ‌ ಮೇಲೆ ಮೋಹವು ಅಧಿಕವಾಗುವುದು. ಸಿಕ್ಕ ಸಂಪತ್ತನ್ನು ಜೋಪಾನವಾಗಿ ಇರಿಸಿಕೊಳ್ಳಿ. ಅಗ್ನಿಯ ಬಗ್ಗೆ ಎಚ್ಚರಿಕೆ ಇರಲಿ. ಯಾವುದೇ ಕೆಲಸಕ್ಕೆ ಬೇರೆಯವರ ಮೇಲೆ ಅವಲಂಬಿತರಾಗಬೇಡಿ. ಉದ್ಯಮವು ದಿಕ್ಕು ತಪ್ಪದಂತೆ ನೋಡಿಕೊಳ್ಳಿ. ಹೊರದೇಶಕ್ಕೆ ನೀವು ಹೋಗಬೇಕಾದ ಸ್ಥಿತಿಯು ಬರಬಹುದು. ಸ್ವ ಉದ್ಯೋಗ ನಿಮಗೆ ಹಿತವೆನಿಸುವುದು.

ಧನು ರಾಶಿ : ನಿಮ್ಮ ಆತ್ಮವಿಶ್ವಾಸವೇ ಏಕಾಗ್ರತೆಯನ್ನು ತರುವುದು. ಯಾರ ಮೇಲೂ ದ್ವೇಷ ಬರುವಂತಹ ಕೆಲಸವನ್ನು ಮಾಡುವುದು ಬೇಡ. ಇಂದು ನೀವು ವ್ಯವಹಾರದಲ್ಲಿ ಜಾಗರೂಕರಾಗಿ ಇರಬೇಕಸದೀತು. ಹಣವನ್ನು ತಪ್ಪಾದ ಕಡೆಯಲ್ಲಿ ಹೂಡುವಿರಿ. ಸುಮ್ಮನೇ ಎಲ್ಲದಕ್ಕೂ ಒಪ್ಪಿಗೆಯನ್ನು ಕೊಡುವುದು ಬೇಡ. ಸಾಹಸಮಯವಾದ ಪ್ರವೃತ್ತಿಯನ್ನು ಇಟ್ಟುಕೊಳ್ಳುವುದು ಬೇಡ. ನಿಮ್ಮ‌ ಅಭಿಪ್ರಾಯವನ್ನು ಹಂಚಿಕೊಳ್ಳಿ. ನಿಮ್ಮ ಸ್ವಭಾವವನ್ನು ಬದಲಾಯಿಸಿಕೊಳ್ಳುವಿರಿ. ನಿಮ್ಮ ವಸ್ತುಗಳ ಬಳಕೆಯನ್ನು ನೀವು ನಿರ್ಲಕ್ಷ್ಯದಿಂದ‌ ಮಾಡುವಿರಿ. ಸರಳ ಮಾತುಗಳನ್ನು ಆಡುವುದು ನಿಮಗೆ ಬಾರದು. ಹೊಸ ಕೆಲಸಕ್ಕೆ ಸೇರುವ ಉತ್ಸಾಹದಲ್ಲಿ ನೀವಿರುವಿರಿ. ಮಕ್ಕಳ ನಡುವೆ ವಾದವು ಬೆಳೆಯಬಹುದು. ನೀವು ಹಳೆಯ ಸ್ನೇಹಿತರನ್ನು ಭೇಟಿ ಮಾಡಲು ಹೋಗಬಹುದು. ಸ್ವಂತ ಬುದ್ಧಿಯಿಂದ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ವ್ಯಾಪಾರಕ್ಕೆ ಯೋಗ್ಯವಾದ ಮಾತು ಇರಲಿ.

ಮಕರ ರಾಶಿ : ಒಮ್ಮೆಲೇ‌ ಅಧಿಕ ಲಾಭವನ್ನೂ ಇಂದು ಯಾರಿಂದಲೂ ನಿರೀಕ್ಷಿಸಬಾರದು. ನೀವು ಇಂದು ದೇವರ ಮೇಲೆ‌ ಸಂಪೂರ್ಣ ಭಾರ ಹಾಕಿ ನಿಮ್ಮ ಕಾರ್ಯವನ್ನು ಆರಂಭಿಸುವಿರಿ. ಪ್ರೇಮವನ್ನು ನೀವು ಒಪ್ಪಿಕೊಳ್ಳದೇ ನಿಮ್ಮದೇ ವಾದವನ್ನು ಮಾಡುವಿರಿ. ಸಂಗಾತಿಯ ಮಾತುಗಳು ನಿಮಗೆ ಕಿರಿಕಿರಿಯನ್ನು ತಂದೀತು. ಸುಲಭದ ಕೆಲಸಗಳನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಗೃಹನಿರ್ಮಾಣಕ್ಕೆ ಸ್ಥಳಪರಿಶೀಲನೆ ಆಗುವುದು. ಸಂಗಾತಿಯಿಂದ ಹಣದ ಸಹಾಯವನ್ನು ಪಡೆಯುವಿರಿ. ಶೋಧಕರಿಗೆ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಸಾಮಾಜಿಕ ಕೆಲಸಗಳು ನಿಮಗೆ ಅಭ್ಯಾಸದಂತೆ‌ ಅಗುವುದು. ಬಂಧುಗಳ ಆಗಮನವು ಖುಷಿಕೊಡುವುದು. ಸಂಗಾತಿಯಾಗಲಿರುವವರು ಇಂದು ಭೇಟಿಯಾಗುವಿರಿ. ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ನಿಮಗೆ ಶುಭ ಸುದ್ದಿಯು ಬರುವುದು. ಉದ್ಯಮದಲ್ಲಿ ನಿಮಗೆ ಪ್ರಗತಿ ಕಾಣಿಸುವುದು. ಉಚಿತವಾದ ಸ್ಥಾನವು ಇಂದು ನಿಮಗೆ ಸಿಗಬಹುದು. ವಿಶ್ವಾಸವು ಘಾಸಿಯಾಗಿ ನಿಮಗೆ ಬೇಸರವಾಗುವುದು.

ಕುಂಭ ರಾಶಿ : ಇಂದು ನಿಮ್ಮ ಹಳೆಯ ವೈರವು ಮುರಿದುಬೀಳುವುದು. ನೆಮ್ಮದಿಗೆ ನಿಮ್ಮದೇ ಸೂತ್ರಗಳನ್ನು ನೀವು ಅನುಸರಿಸುವಿರಿ.‌ ಕೆಲವು ಅಭ್ಯಾಸವನ್ನು ಬಿಟ್ಟುಬಿಡುವಿರಿ. ಸ್ನೇಹಿತರ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ. ಸಂಸಾರವನ್ನು ನಿಭಾಯಿಸುವ ಕಲೆಯನ್ನು ನೀವು ತಿಳಿದುಕೊಳ್ಳಬಹುದು. ಔದ್ಯೋಗಿಕವಾದ ವಿಚಾರವನ್ನು ಮನೆಯಲ್ಲಿ ಸಹೋದರರ‌ ಜೊತೆ ಚರ್ಚಿಸುವಿರಿ. ತಾಯಿಯಿಂದ ನಿಮಗೆ ಹಿತವಚನವು ಸಿಗಲಿದೆ. ಯಾವುದನ್ನೂ ಗೊತ್ತಿಲ್ಲದೇ ನಂಬುವುದು ಬೇಡ. ನಿಮ್ಮ ವರ್ತನೆಯು ಎಂದಿಗಿಂತ ಭಿನ್ನವಾಗಿರುವುದು. ಕ್ಲಿಷ್ಟಕರ ಸನ್ನಿವೇಶಗಳನ್ನು ನೀವು ಸುಲಭವಾಗಿ ನಿಭಾಯಿಸುವ ಕಲೆಯನ್ನು ಅರಿತಿರುವಿರಿ. ಅನವಶ್ಯಕ ವಸ್ತುಗಳನ್ನು ಖರೀದಿಸಿ ದಂಡ ಮಾಡುವಿರಿ. ನೀವು ನಿಮ್ಮ ಹಿರಿಯರ ಸಲಹೆಯನ್ನು ಅನುಸರಿಸಿದರೆ ಉತ್ತಮವಾದುದನ್ನು ಪಡೆಯುವಿರಿ. ನಿಮ್ಮ ದೇಹಕ್ಕೆ ಆಯುಧದಿಂದ. ಬಲವಾಗಿ ಘಾಸಿಯಾಗಬಹುದು. ಆತುರದಲ್ಲಿ ಯಾವುದೇ ಕೆಲಸ ಮಾಡುವುದನ್ನು ಮುಖ್ಯ ಕಾರ್ಯಗಳೇ ಮರೆತುಹೋಗಬಹುದು.

ಮೀನ ರಾಶಿ : ಮಾಡಿದ ತಪ್ಪನ್ನೇ ಮತ್ತೆ ಮಾಡಿ, ಎಲ್ಲರ ಕೆಂಗಣ್ಣಿಗೆ ಗುರಿಯಾಗುವಿರಿ. ಇಂದು ನೀವು ಏಕಾಂತವಾಗಿ ಇರಲು ಆಗದು. ಸಾಮಾಜಿಕ ಕಳಕಳಿಯನ್ನು ನೀವು ಹೆಚ್ಚಿಸಿಕೊಳ್ಳುವಿರಿ. ಆದಾಯಕ್ಕಿಂತ ಖರ್ಚು ಹೆಚ್ಚಾಗಿ ಆತಂಕವಾಗಬಹುದು. ಕುಟುಂಬದ ಸದಸ್ಯರ ಪ್ರೀತಿಯು ಸಿಗಲಿದೆ. ಆಕಸ್ಮಿಕ ವಾರ್ತೆಯನ್ನು ನೀವು ಸಮಾಧಾನದಿಂದ ತೆಗೆದುಕೊಳ್ಳಬೇಕಾದೀತು.‌ ನಿಮ್ಮ ಕೆಲಸಕ್ಕೆ ಪ್ರಶಂಸೆಯು ಸಿಗಲಿದೆ. ಸಂಗಾತಿಯನ್ನು ಸಂತೋಷಪಡಿಸಲು ಇಷ್ಟಪಡುವಿರಿ‌. ನಿಮ್ಮ ಅಭಿರುಚಿಯು ಬದಲಾಗುವುದು. ಸನ್ನಿವೇಶಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾದೀತು. ಅಲ್ಪ ಶ್ರಮದಿಂದ ಹೆಚ್ಚು ಗಳಿಸುವ ತಂತ್ರವನ್ನು ಹೂಡುವಿರಿ. ಸಹೋದರರು ನಿಮ್ಮ ಕಷ್ಟದಲ್ಲಿ ಭಾಗಿಯಾಗುವರು. ಯಾವದನ್ನೂ ಕ್ಷಣದಲ್ಲಿ ಬದಲಿಸಲಾಗದು. ನಿಮ್ಮ ಬಳಿ ಇರುವುದುನ್ನು ಕೊಡಲಾರಿರಿ. ಯಾವುದೇ ಹೂಡಿಕೆ ಸಂಬಂಧಿತ ಯೋಜನೆಯ ಬಗ್ಗೆ ನಿಮಗೆ ಮಾಹಿತಿ ಬಂದರೆ, ಅದರಲ್ಲಿ ಹಣವನ್ನು ಹೂಡಿಕೆ ಮಾಡುವುದು ಉತ್ತಮ.

-ಲೋಹಿತ ಹೆಬ್ಬಾರ್-8762924271 (what’s app only)

ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು
Weekly Astrology: ಡಿಸೆಂಬರ್ 23 ರಿಂದ 29ರ ವರೆಗಿನ ರಾಶಿ ಭವಿಷ್ಯ
Weekly Astrology: ಡಿಸೆಂಬರ್ 23 ರಿಂದ 29ರ ವರೆಗಿನ ರಾಶಿ ಭವಿಷ್ಯ
ವೀಳ್ಯದೆಲೆ ದೀಪದ ಮಹತ್ವ ಮತ್ತು ಹಚ್ಚುವ ವಿಧಾನ ತಿಳಿಯಿರಿ
ವೀಳ್ಯದೆಲೆ ದೀಪದ ಮಹತ್ವ ಮತ್ತು ಹಚ್ಚುವ ವಿಧಾನ ತಿಳಿಯಿರಿ
ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
‘ನೀವು ಈ ಆಟಕ್ಕೆ ಫಿಟ್ ಅಲ್ಲ’; ಚೈತ್ರಾಗೆ ನೇರವಾಗಿ ಹೇಳಿದ ಸುದೀಪ್
‘ನೀವು ಈ ಆಟಕ್ಕೆ ಫಿಟ್ ಅಲ್ಲ’; ಚೈತ್ರಾಗೆ ನೇರವಾಗಿ ಹೇಳಿದ ಸುದೀಪ್
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ