ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಸುಕರ್ಮ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 53 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ, ರಾಹು ಕಾಲ ಸಂಜೆ 05:10 ರಿಂದ 06:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:46 ರಿಂದ 02:14ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:42 ರಿಂದ 05:10ರ ವರೆಗೆ.
ಮೇಷ ರಾಶಿ: ಇಂದು ನೀವು ದೊಡ್ಡ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಬಹುದು. ಗಾಯವನ್ನು ಹೆಚ್ಚು ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ನ್ಯಾಯಯುತವಾದ ವಿಷಯಕ್ಕೂ ವಿರೋಧವಿರಬಹುದು. ವಾದದ ಕಡೆ ನಿಮ್ಮ ಗಮನ ಇರುವುದು ಬೇಡ. ಸಹೋದ್ಯೋಗಿಗಳು ಇಂದು ನಿಮ್ಮನ್ನು ಬೆಂಬಲಿಸುವುದಿಲ್ಲ. ದೈಹಿಕ ವ್ಯಾಯಾಮದಲ್ಲಿ ತೊಡಗಿಸಿಕೊಳ್ಳುವ ಮೂಲಕ ಅನಗತ್ಯ ಆಲೋಚನೆಗಳನ್ನು ದೂರ ಮಾಡಿ. ವ್ಯಕ್ತಿಗಳು ಅಥವಾ ಸಂಬಂಧಿಕರೊಂದಿಗೆ ವ್ಯವಹಾರಗಳನ್ನು ನಿರ್ವಹಿಸುವವರು ಆರ್ಥಿಕ ನಷ್ಟವನ್ನು ತಡೆಗಟ್ಟಲು ಎಚ್ಚರಿಕೆ ವಹಿಸಬೇಕು. ಯಾರಿಂದಲೂ ಏನನ್ನೂ ಪಡೆಯುವ ಮನಸ್ಸಾಗದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು. ಕಳೆದ ವ್ಯರ್ಥ ಕಾಲವನ್ನು ಮತ್ತೆ ಸೇರಿಸಲಗಾದು ಎಂದು ವ್ಯಥೆಪಡುವುದು ಬೇಡ. ಭವಿಷ್ಯದ ಬಗ್ಗೆ ಉತ್ತಮವಾದ ಯೋಜನೆಯನ್ನು ರೂಪಿಸಿಕೊಳ್ಳಿ.
ವೃಷಭ ರಾಶಿ: ವ್ಯಾಪಾರಸ್ಥರ ಪ್ರವಾಸವು ಯಶಸ್ವಿಯಾಗಲಿದೆ. ಉದ್ಯೋಗಕ್ಕಾಗಿ ಪಡೆಯುವ ಪ್ರಯತ್ನಗಳು ಸಫಲವಾಗುವುವು. ಹೂಡಿಕೆಯು ನಿಮಗೆ ಲಾಭವನ್ನು ಕೊಡುವುದು. ವ್ಯಾಪಾರವು ಅಪೇಕ್ಷಿತ ಲಾಭವನ್ನು ನೀಡುತ್ತದೆ. ನಿಮ್ಮ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ. ಧನಾತ್ಮಕ ಮತ್ತು ಋಣಾತ್ಮಕ ಅಂಶಗಳನ್ನು ವಿಭಾಗ ಮಾಡಿ. ಇದು ಸಮಸ್ಯೆಯನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ. ಅಧಿಕ ಓಡಾಟದಿಂದ ದಣಿವಾಗಲಿದೆ. ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ. ತಾಯಿಯ ಪ್ರೀತಿಯು ನಿಮಗೆ ಸಿಗಲಿದೆ. ಏಕಮುಖವಾದ ನಿರ್ಧಾರದಿಂದ ಸಫಲತೆಯು ಇರದು. ಸಣ್ಣ ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿ. ಓದುವಿಕೆಯಲ್ಲಿ ಆಸಕ್ತಿಯು ಹೆಚ್ಚಾಗಬಹುದು. ಮೌನವೇ ನಿಮಗೆ ಹಿತವೆನಿಸಬಹುದು.
ಮಿಥುನ ರಾಶಿ: ಅಪಾಯಗಳನ್ನು ಎದುರಿಸಲು ಧೈರ್ಯ ಸಾಲದು. ಇಂದಿನ ವ್ಯಾಪಾರ ಚೆನ್ನಾಗಿ ನಡೆಯುತ್ತದೆ. ಸಂತೋಷದ ಸಮಯವನ್ನು ಮೆಲುಕು ಹಾಕುವಿರಿ. ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ಮಹತ್ವದ ಹಣಕಾಸಿನ ವ್ಯವಹಾರಗಳನ್ನು ಮಾತುಕತೆ ಮಾಡುವಾಗ ನಿಮ್ಮ ಪಾಲುದಾರರು ಅಮೂಲ್ಯವಾದ ಬೆಂಬಲ ನೀಡುತ್ತಾರೆ. ಅನುಭವಿ ವ್ಯಕ್ತಿಗಳ ಜೊತೆ ಸಂಪರ್ಕ ಸಾಧಿಸುವ ಮೂಲಕ ಭವಿಷ್ಯದಲ್ಲಿ ಲಾಭವನ್ನು ಗಳಿಸುವಿರಿ. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ. ನೀವು ಕಾರ್ಯದಲ್ಲಿ ಮಗ್ನರಾಗಿದ್ದು ಯಾವ ವಿಷಯಕ್ಕೂ ಭಾಗಿಯಾಗಲಾರಿರಿ. ಸಂಬಂಧಿಕರನ್ನೇ ಪಾಲುದಾರಿಕೆಯಲ್ಲಿ ಇಟ್ಟಕೊಳ್ಳುವಿರಿ. ಸರ್ಕಾರದಿಂದ ಆಗಬೇಕಾದ ಕಾರ್ಯಕ್ಕೆ ಹೆಚ್ಚು ಓಡಾಟ ಮಾಡಬೇಕಾದೀತು. ಭೂಮಿಯ ವ್ಯವಹಾರದಿಂದ ಲಾಭವಿಲ್ಲದಿದ್ದರೂ ಅದನ್ನೇ ನಡೆಸಲು ಇಷ್ಟಪಡುವಿರಿ.
ಕರ್ಕ ರಾಶಿ: ಇಂದು ಯಾವದೋ ಆತಂಕದಲ್ಲಿ ಇರುವಿರಿ. ನಿಮ್ಮ ಕೀರ್ತಿ ಹೆಚ್ಚಲಿದೆ. ದೂರದಿಂದ ಒಳ್ಳೆಯ ಸುದ್ದಿ ಸಿಗಲಿದೆ. ಮನೆಗೆ ಅತಿಥಿಗಳು ಆಗಮಿಸುವರು. ಕೆಲವು ಶುಭ ಕಾರ್ಯಗಳು ನಡೆಯಬಹುದು. ನಿಮ್ಮ ಸಕಾರಾತ್ಮಕ ದೃಷ್ಟಿಕೋನ ಮತ್ತು ಆತ್ಮವಿಶ್ವಾಸವು ನಿಮ್ಮ ಸುತ್ತಲಿರುವವರ ಮೇಲೆ ಶಾಶ್ವತವಾದ ಪ್ರಭಾವ ಬೀರುವ ಸಾಧ್ಯತೆಯಿದೆ. ಹಣಕಾಸಿನ ಸುಧಾರಣೆಗಳು ದೀರ್ಘಾವಧಿಯ ಬಾಕಿ ಮತ್ತು ಬಿಲ್ಗಳನ್ನು ಇತ್ಯರ್ಥಗೊಳಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸುತ್ತದೆ. ದಿನಚರಿಯನ್ನು ಬದಲಾಯಿಸಿಕೊಳ್ಳುವುದು ಬೇಕಾಗಬಹುದು. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಹಳೆಯ ಕೆಲಸಗಳು ವ್ಯರ್ಥವಾಗಬಹುದು. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ಜಾಣತನದಿಂದ ಇಂದಿನ ಕಾರ್ಯವನ್ನು ಮಾಡುವಿರಿ. ಹಣಕಾಸಿನ ವ್ಯವಸ್ಥೆಯನ್ನು ಸರಿ ಮಾಡಿಕೊಳ್ಳುವುದು ಸೂಕ್ತ. ಕೆಲವೊಮ್ಮೆ ಸುಮ್ಮನಿರುವುದೂ ದೊಡ್ಡ ಕೆಲಸವನ್ನು ಮಾಡಿಸುತ್ತದೆ.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:31 am, Sun, 25 February 24