Horoscope 13 April: ರಾಶಿ ಭವಿಷ್ಯ; ಈ ರಾಶಿಯವರು ಇಂದು ಮೋಸ ಹೋಗುವ ಸಾಧ್ಯತೆಯಿದೆ-ಎಚ್ಚರ

Rashi Bhavishya: 2024 ಏಪ್ರಿಲ್​​ 13 ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಇಂದಿನ ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope 13 April: ರಾಶಿ ಭವಿಷ್ಯ; ಈ ರಾಶಿಯವರು ಇಂದು ಮೋಸ ಹೋಗುವ ಸಾಧ್ಯತೆಯಿದೆ-ಎಚ್ಚರ
ರಾಶಿಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 13, 2024 | 12:01 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಸೌಭಾಗ್ಯ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:27  ರಿಂದ 11:00ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:06 ರಿಂದ 03:39 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:21 ರಿಂದ 07:54ರ ವರೆಗೆ.

ಮೇಷ ರಾಶಿ : ಇಂದಿನ‌ ನಿಮ್ಮ ಅವಸರವಸರದ ಕಾರ್ಯಗಳಿಂದ ಯಾವುದೂ ಪೂರ್ಣವಾಗದು. ನಿಮ್ಮ ಮೈಂಡ್ ಹಲವು ಕಡೆಗಳಲ್ಲಿ ಓಡುತ್ತಿರುವುದದಕ್ಕೆ ಹೀಗಾಗುವುದು. ಯಾವುದಾದರೂ ದುರ್ವ್ಯಸನಕ್ಕೆ ತುತ್ತಾಗಿ ಹಣವನ್ನೂ ಆರೋಗ್ಯವನ್ನೂ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಮಾಡದೇ ಉಳಿದ ಕೆಲಸ ಕಾರ್ಯಗಳತ್ತ ಗಮನಹರಿಸಿ. ವ್ಯಾಪರದಲ್ಲಿ ಲಾಭವಾಗಲಿದೆ. ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು. ಮನೆಯರಿಂದ ಹೊಸ ಸ್ಥಳಕ್ಕೆ ಹೋಗಲು ಒಪ್ಪಿಗೆ ಸಿಗದೇಹೋಗಬಹುದು. ಕಛೇರಿಯಲ್ಲಿ ಉಂಟಾದ ಕೆಲವು ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡುವುದು. ದೌರ್ಬಲ್ಯವನ್ನು ಹೇಳಿಕೊಂಡು ಪರಿಹಾರ ಕಂಡುಕೊಳ್ಳುವುದು ಉತ್ತಮ.ಯಾರನ್ನೂ ಸರಿಯಾಗಿ ಊಹಿಸಲಾರಿರಿ. ವಿಳಂಬವಾಗಿ ಬರುತ್ತದೆ ಎಂದುಕೊಂಡ ಹಣವು ಬೇಗ ನಿಮಗೆ ಬೇಗ ಸಿಗಬಹುದು. ನಿಮ್ಮ ನಿರ್ಧಾರವು ತೂಗುಕತ್ತಿಯಂತೆ ಇರಲಿದೆ. ವಿವಾಹಜೀವನವು ಅತ್ಯಂತ ಸುಖದಂತೆ ತೋರುವುದು.

ವೃಷಭ ರಾಶಿ : ಹೊಂದಾಣಿಕೆಯು ಬೇಸರವಾಗುವುದು. ಹೊಸತನ್ನು ಹುಡುಕಲು ಆರಂಭಿಸುವಿರಿ. ವೈಯಕ್ತಿಕ ವಿಚಾರಕ್ಕೆ ಅನ್ಯರು ಪ್ರವೇಶ ಮಾಡುವುದು ಸರಿಕಾಣದು. ಇಂದು ನಿಮಗೆ ಹಣಕಾಸಿನ ಹರಿವು ಹೆಚ್ಚಾಗುವುದರ ಜೊತೆಗೆ ಆತಂಕವೂ ಇರುವುದು. ಕೊಟ್ಟ ಸಾಲ ಮರಳಿಬರುವ ಆಸೆಯನ್ನು ಬಿಡುವಿರಿ. ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ಮೋಸ ಹೋಗುವ ಸಾಧ್ಯತೆ ಇರುತ್ತದೆ. ಜಾಗರೂಕರಾಗಿರಿ. ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ. ಯಾರದೋ ಮಾತನ್ನು ನಿಮಗೆಂದು ಭಾವಿಸಿ ಸಿಟ್ಟಾಗುವಿರಿ. ನಕಾರಾತ್ಮಕ ವಿಚಾರಗಳ ನಡೆಯೂ ನೀವು ಬಲವಾಗಿದ್ದರೆ ಅದು ವಿದ್ಯೆಯ ಕಾರಣದಿಂದ. ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆಯು ಇಷ್ಟವಾಗದು. ಸಮಯದ ಹೊಂದಾಣಿಕೆಯು ನಿಮಗೆ ಕಷ್ಟವಾಗುವುದು. ಮಹಿಳೆಯರು ಅನುಕೂಲಕರ ಸನ್ನಿವೇಶವು ಇರುವುದನ್ನು ಬಳಸಿಕೊಳ್ಳುವರು.

ಮಿಥುನ ರಾಶಿ : ಕುಟುಂಬದಲ್ಲಿ ಬರುವ ಮಾತಿಗೆ ನೀವು ಪ್ರತಿಕ್ರಿಯೆ ಕೊಡಬಾರದೂ ಎಂದರೂ ಕೊಡುವಿರಿ. ನಂಬಿಕೆ ದ್ರೋಹದಿಂದ ನಿಮಗೆ ಬೇಸರವಾಗಲಿದೆ. ಸಹೋದರ ಜೊತೆ ನಿಮಗೆ ಯೋಗ್ಯ ಸಲಹೆಯು ಸಿಗಬಹುದು. ಸೃಜನಾತ್ಮಕವಾಗಿ ಬದುಕುವ ಸ್ವಭಾವಕ್ಕೆ ಫಲಸಿಗಬಹುದು. ಉತ್ತಮವಾದ ಯೋಜನೆಗಳನ್ನು ರೂಪಿಸಿ. ನಿಮ್ಮ ಸಂಗಾತಿಯು ನಿಮಗೆ ಅನುಕೂಲವನ್ನು ಕಲ್ಪಿಸುವವಳೇ ಆಗಿದ್ದಾಳೆ. ದೈವಭಕ್ತಿಯ ಕಡೆ ಮನಸ್ಸು ಸಾವಧನಾವಾಗಿ ಹೋಗುವುದು. ಅಭಿವೃದ್ಧಿಗೆ ಅವಕಾಶವಿದ್ದರೂ ನಿಮಗೆ ಹಿನ್ನಡೆಯಂತೆ ಎಲ್ಲವೂ ಭಾಸವಾಗುವುದು. ಶ್ರಮಕ್ಕೆ ತಕ್ಕ ಫಲವು ಲಭಿಸಿಲ್ಲ ಎಂದು ನಿಮ್ಮ ಮನಸ್ಸಿಗೆ ಗಾಢವಾಗಿ ತಿಳಿಯುವುದು. ಅತಿಯಾಗಿ ಯಾವುದನ್ನು ಮಾಡಲು ಹೋಗುವುದು ಬೇಡ. ಹೊಸ ಕಲಿಕೆಗೆ ಉತ್ಸಾಹ ಇರಲಿದ್ದು ಶ್ರದ್ಧೆಯಿಂದ ಅದನ್ನು ಅಭ್ಯಾಸ ಮಾಡುವಿರಿ. ನಿಮ್ಮ ತಮಾಷೆಯು ಇಷ್ಟವಾಗದೇ ಇರಬಹುದು. ಪುಣ್ಯಕ್ಷೇತ್ರದಲ್ಲಿ ನಿಮಗೆ ಮನಶ್ಶಾಂತಿ ಸಿಗುವುದು.

ಕಟಕ ರಾಶಿ : ನಿಮ್ಮ ಆದಾಯದ ಮೂಲವನ್ನು ಸರಿಯಾಗಿ ಪರೀಕ್ಷಿಸಿಕೊಳ್ಳಿ. ನಿಮ್ಮ ವೇತನವನ್ನು ಪ್ರಯತ್ನಪೂರ್ವಕವಾಗಿ ಯಾರಾದರೂ ಕೇಳಬಹುದು. ನಿಮ್ಮನ್ನು ನೀವು ಪರಿಚಯ ಮಾಡಿಕೊಳ್ಳುವಿರಿ. ಕಛೇರಿಯ ಕಾರ್ಯಗಳನ್ನು ಮುಂದುವರಿಸಲು ನಿಮಗೆ ಆಗದು. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯ ಮತ್ತಾವುದೂ ಇಲ್ಲ. ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿರುವ ಒಂದು ದಿನ. ನಿಮ್ಮ ನಿರುದ್ಯೋಗವು ಚಿಂತೆಯಾಗಿ ನಿಮ್ಮ ಬಗ್ಗೆಯೇ ನಿಮಗೆ ನಕಾರಾತ್ಮಕ ಭಾವ ಮೂಡುವುದು. ಯಾವುದೋ ಗಾಢವಾದ ಆಲೋಚನೆಯಲ್ಲಿ ಮುಳುಗಿರುವಿರಿ. ಮಕ್ಕಳಿಂದ ನಿಮಗೆ ಸಂತೃಪ್ತಿಯು ಸಿಗಲಿದೆ. ಬಂಧುಗಳ ಭೇಟಿಯು ನಿಮಗೆ ಅಷ್ಟಾಗಿ ಇಷ್ಟವಾಗದು. ಸರಳವಾದ ಕೆಲಸವನ್ನು ಮನಶ್ಚಾಂಚಲ್ಯದಿಂದ ಸಂಕೀರ್ಣ ಮಾಡಿಕೊಳ್ಳುವಿರಿ. ಇಂದು ಇತರರಿಂದ ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಉಂಟಾಗಬಹುದು.

ಸಿಂಹ ರಾಶಿ : ಸಣ್ಣ ಮೊತ್ತವಾದರೂ ಅದನ್ನು ಉಳಿಸುವ ಬಗ್ಗೆ ಯೋಚಿಸುವಿರಿ‌. ಹಿತಶತ್ರುಗಳಿಂದ ಬೇಕಾದ ಮಾಹಿತಿಯು ಸಿಗಲಿದೆ. ಸಂಗಾತಿಯ ಬಗ್ಗೆ ಪ್ರೀತಿಯನ್ನು ಅನುಭವಿಸುವಿರಿ. ನಿಮಗೆ ಇಂದು ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ. ಕುಟುಂಬದೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಿ. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳಬೇಡಿ. ಅದು ನಿಮಗೆ ಮುಳ್ಳಾಗಬಹುದು. ಎಲ್ಲದಕ್ಕೂ ಅತಿಯಾದ ತೊಂದರೆ ಇರುವಂತೆ ಅನ್ನಿಸಬಹುದು. ನಿಮ್ಮ ಅಂತರಂಗವನ್ನು ವ್ಯಕ್ತಪಡಿಸಲು ನಿಮಗೆ ಸೂಕ್ತ ಸಮಯವು ಲಭ್ಯವಾಗದೇ ಇರಬಹುದು. ಅಪರಿಚಿತರ ಬಗ್ಗೆ ಜಾಗರೂಕತೆ ಇರಲಿ. ನಿಮ್ಮ ತಪ್ಪಿನ ನಿರ್ಧಾರದಿಂದ ಪಶ್ಚಾತ್ತಾಪ ಪಡಬೇಕಾಗುವುದು. ಇನ್ನೊಬ್ಬರನ್ನು ಪ್ರಶಂಸಿಸುವ ಮನೋಭಾವ ನಿಮ್ಮಲ್ಲಿ ಇರದು. ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಗತ್ಯವಿರುವುದು.

ಕನ್ಯಾ ರಾಶಿ : ನೀವು ಮಾಡದ ಕಾರ್ಯಗಳಿಗೆ ನಿಮ್ಮ ಹಣೆಪಟ್ಟಿ ಬೀಳಬಹುದು. ಅದನ್ನು ಎದುರಿಸುವ ಚಾಕಚಕ್ಯತೆ ನಿಮ್ಮದಾಗಲಿದೆ. ನೀವೇ ಇಂದು ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪ್ರಣಯದ ಸಂಬಂಧಿಸಿದಂತೆ ಹೆಚ್ಚು ಬೇಡಿಕೆಗಳು ಬರಬಹುದು. ಆಪ್ತರೊಂದಿಗೆ ಹೊಸ ಉದ್ಯೋಗವನ್ನು ಆರಂಭಿಸಬಹುದು. ಕೃಷಿಗೆ ಅನುಭವಿಗಳ ಬೆಂಬಲವು ಅನಿರೀಕ್ಷಿತವಾಗಿ ಸಿಗಬಹುದು. ನಿಮ್ಮದಾದ ಕೆಲವು ಅಸಂಬದ್ಧ ವ್ಯವಸ್ಥೆಯನ್ನು ನೀವು ಸರಿ ಮಾಡಿಕೊಳ್ಳಬೇಕಾಗುವುದು. ಹೊಸ ವಸ್ತುವಿನ ಖರೀದಿಯಲ್ಲಿ ನಿಮಗೆ ಮೋಸ ಆಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜೊತೆ ಇಂದು ಸಲುಗೆಯಿಂದ ಇರುವಿರಿ. ಮನಸ್ಸಿಗೆ ಇಷ್ಟವಾಗದ ಕಾರ್ಯವನ್ನು ನೀವು ಮಾಡಬೇಕಾದೀತು. ನಿಮ್ಮ ಯೋಜನೆಯನ್ನು ಪ್ರಯೋಗಕ್ಕೆ ತರಲು ಪೂರ್ಣ ಯಶಸ್ಸನ್ನು ಪಡೆಯಲಾರಿರಿ. ಆಪ್ತರಿಂದ ನಿಮಗೆ ಏನಾದರೂ ಅಚ್ಚರಿಯ ಕೊಡುಗೆ ಸಿಗಲಿದೆ.

ತುಲಾ ರಾಶಿ : ಇಂದು ಧಾರ್ಮಿಕ ಕಾರ್ಯಗಳಿಗೆ ಸಮಯವನ್ನೂ ಬೇಕಾದ ವ್ಯವಸ್ಥೆಯನ್ನೂ ಮಾಡುವಿರಿ. ಪರೋಪಕಾರದಲ್ಲಿ ಆಸಕ್ತಿ ಹೆಚ್ಚಿದ್ದು ಇನ್ನೊಬ್ಬರನ್ನೂ ಇದಕ್ಕೆ ಪ್ರೇರಿಸುವಿರಿ. ಇಂದು ಏನಾದರೂ ಅಪ್ರಯೋಜನ ಎಂದನಿಸಿದ್ದನ್ನು ಮಾಡುವ ಮೊದಲು ಅದರ ಪರಿಣಾಮದ ಬಗ್ಗೆಯೂ ಆಲೋಚಿಸಿ. ಹಿರಿಯರ ಸಲಹೆಯನ್ನು ಪಡೆಯುವುದು ನಿಮಗೆ ಅಪಮಾನದಂತೆ ಕಂಡೀತು. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ನೀವು ನಿರಾಸೆ ಅನುಭವಿಸುತ್ತೀರಿ. ಬಿಡುವಿನ ವೇಳೆಯಲ್ಲಿ ಆಧ್ಯಾತ್ಮಿಕ ಪುಸ್ತಕಗಳ ಅಧ್ಯಯನ ಮಾಡಬೇಕು. ಉಗುರಿನಿಂದ ಆಗುವ ಕಾರ್ಯಕ್ಕೆ ಕೊಡಲಿ ಏಟು ತರುವುದು ಉಚಿತವಲ್ಲ. ವಿಷಯ, ಸಮಯ ಎಲ್ಲವನ್ನೂ ನೋಡಿ ವ್ಯವಹರಿಸಿ. ವೃದ್ಧರ, ಅಶಕ್ತರ ಸೇವೆಯಲ್ಲಿ ತೊಡಗಿಕೊಳ್ಳುವಿರಿ.

ವೃಶ್ಚಿಕ ರಾಶಿ : ಕಟ್ಟಿಕೊಟ್ಟ ಬುತ್ತಿ, ಹೇಳಿಕೊಟ್ಟ ಬುದ್ಧಿ ಎಲ್ಲಿಯವರೆಗೆ ಇದ್ದೀತು. ಸ್ವತಂತ್ರವಾಗಿರಲು ಇಚ್ಛಿಸುವಿರಿ. ನಿಮಗೆ ಲಾಭವಾಗುವ ಕೆಲವು ಕಾರ್ಯಗಳು ನಿಮಗೆ ಸಿಗಬಹುದು. ಸಂಗಾಯನ್ನು ಹೊರಗೆ ಕರೆದುಕೊಂಡುಹೋಗುವ ಸನ್ನಿವೇಶ ಬರಬಹುದು. ಇಂದು ನಿಮ್ಮ ಮಾತು ಕಡಿಮೆ ಇದ್ದಷ್ಟೂ ಒಳ್ಳೆಯದು. ಇಲ್ಲದಿದ್ದರೆ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ವ್ಯಾಪಾರಿಗಳಿಗೆ ಹಳೆಯ ಹೂಡಿಕೆಯ ಕಾರಣದಿಂದಾಗಿ ಇಂದು ನಷ್ಟವಾಗುವ ಸಾಧ್ಯತೆ ಇದೆ. ಹಿಂದೆ ಕೊಟ್ಟ ಸಾಲವು ಮರಳಿ ಬರುವ ನಿರೀಕ್ಷೆಯಲ್ಲಿ ಇರುವಿರಿ. ಸುಮ್ಮನೇ ವಾದ ಮಾಡುವ ಚಪಲವನ್ನು ಬಿಟ್ಟು ಸಹಜವಾಗಿ ಎಲ್ಲರ ಜೊತೆ ಮಾತನಾಡಿ. ದೈಹಕ ಕಾರ್ಯದಲ್ಲಿ ತೊಡಗಿದವರಿಗೆ ಹೆಚ್ಚು ಆದಾಯವು ಇರುವುದು. ಕಾರ್ಯಕ್ಕಾಗಿ ಹೆಚ್ಚು ಓಡಾಡಬೇಕಾಗುವುದು. ನಿದ್ರಾಹೀನತೆಯಿಂದ ಕಿರಿಕಿರಿ ಉಂಟಾಗುವುದು. ಎಲೆಕ್ಟ್ರಾನಿಕ್ ವಿಚಾರದಲ್ಲಿ ನೀವು ಚಾಣಾಕ್ಷರು.

ಧನು ರಾಶಿ : ನೀವು ಕಾರ್ಯದ ಕಾರಣ ಸಹೋದ್ಯೋಗಿಗಳ ಜೊತೆ ದೂರ ಪ್ರಯಾಣಮಾಡಬೇಕಾಗುವುದು. ಇಂದು ಹೆಚ್ಚು ಸಮಯವು ಸಿಗುವ ಕಾರಣ ಇನ್ನೊಬ್ಬರ ಕುರಿತು ಹರಟೆ ಮಾಡುವಿರಿ. ನಿಮಗೆ ಇಂದು ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರವು ಗಟ್ಟಿತನ ಕೊಡಲಿದೆ. ಸಾಲವನ್ನು ಮರುಪಾವತಿ ಮಾಡದೇ ಇರುವ ನಿಮ್ಮ ಸಂಬಂಧಿಕರಿಗೆ ಇಂದು ಸಾಲ ಕೊಡಬಾರದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ಪ್ರತಿಕೂಲ ವಾತಾವರಣವನ್ನು ನಿಭಾಯಿಸುವ ಕಲೆಯನ್ನು ಗೊತ್ತುಮಾಡಿಕೊಳ್ಳುವಿರಿ. ಹಳೆಯ ವಸ್ತುಗಳು ನಿಮಗೆ ಸಾಕೆನಿಸಬಹುದು. ಮಕ್ಕಳ ಭವಿಷ್ಯಕ್ಕೆ ಹಣವನ್ನು ಕೂಡಿಡಬೇಕಾಗುವುದು. ಸಾಲ ಕೊಟ್ಟವರು ನಿಮ್ಮನ್ನು ಇಂದು ಏನೂ ಕೇಳುವುದಿಲ್ಲ. ಮಕ್ಕಳು ನಿಮಗೆ ಬೇಕಾದ ಆರ್ಥಿಕ ನೆರವನ್ನು ಕೊಡುವರು. ನಿಮ್ಮ ದುರಭ್ಯಾಸವು ಅತಿಯಾಗಲಿದೆ. ಕಛೇರಿಯಲ್ಲಿ ಸ್ವಲ್ಪ ಬಿಡುವು ಮಾಡಿಕೊಂಡು ಕುಟುಂಬಕ್ಕೆ ಸಮಯವನ್ನು ಕೊಡುವಿರಿ.

ಮಕರ ರಾಶಿ : ನಿಮಗೆ ಇಂದು ಪ್ರಾಣಭೀತಿಯು ಕಾಡಬಹುದು. ಎಲ್ಲ ಕಡೆಗಳಿಂದ ತೊಂದರೆಯಾದಂತೆ ಅನ್ನಿಸೀತು. ಸಾಲದ ವಸೂಲಿಯನ್ನು ಬಹಳ ತಾಳ್ಮೆಯಿಂದ ಸಿಟ್ಟನ್ನೆಲ್ಲ ನಿಯಂತ್ರಣದಲ್ಲಿ ಇರಿಸಿಕೊಂಡು ಮಾಡಬೇಕಾಗುತ್ತದೆ. ಇಂದು‌ನೀವು ದೈಹಿಕ ಸೌಕರ್ಯವನ್ನು ಇಷ್ಟಪಡುವಿರಿ. ಎಲ್ಲ ಕಡೆಗಳಲ್ಲಿ ನೀವು ಆತ್ಮರಕ್ಷಣೆಯನ್ನು ಮಾಡಿಕೊಳ್ಳುವಿರಿ. ದಿನವನ್ನು ಜಾಗರೂಕತೆಯಿಂದ ಆಯೋಜಿಸಿ. ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ.‌ ವಿದ್ಯಾಭ್ಯಾಸದಲ್ಲಿ ಹಿನ್ನಡೆಯಿಂದಾಗಿ ಕೆಲವು ಅವಕಾಶಗಳು ತಪ್ಪುವುದು. ಕುಟುಂಬದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ನಿಮ್ಮ ಬಗ್ಗೆ ಕುಟುಂಬದಲ್ಲಿ ಒಳ್ಳೆಯ ಅಭಿಪ್ರಾಯವು ಇರುವುದು. ವೈವಾಹಿಕ ಜೀವನದಲ್ಲಿ ಏರಿಳಿತವು ಆರಂಭವಾಗಬಹದು. ಸಾಲ ಕೊಟ್ಟವರು ನಿಮ್ಮನ್ನು ಶತ್ರುಗಳಂತೆ ಕಾಣುವರು. ನಿಮ್ಮ ಕಾರ್ಯವನ್ನು ಕೆಲವು ಸಹೋದ್ಯೋಗಿಗಳು ಟೀಕಿಸಬಹುದು.

ಕುಂಭ ರಾಶಿ : ನಿಮ್ಮ ಇಷ್ಟದ ವಸ್ತುಗಳನ್ನು ಪಡೆಯುವ ಖುಷಿಯು ಇಂದು ಇರಲಿದೆ. ನಿಮಗೆ ಉದ್ಯೋಗದಲ್ಲಿ ಬಡ್ತಿ ಸಿಗುವ ಬಗ್ಗೆ ಖುಷಿ ಇರಲಿದೆ. ಕೆಲವು ಸಂದರ್ಭದಲ್ಲಿ ನೀವು ತಾಳ್ಮೆಯನ್ನು ಕಳೆದುಕೊಳ್ಳಬಹುದು. ನಿಮ್ಮದೇ ಸರಿ ಇದ್ದರೂ ಅದನ್ನು ಪ್ರತಿಪಾದಿಸುವ ಕ್ರಮವು ವ್ಯತ್ಯಾಸವಾಗುವುದು. ಇಂದು ನಿಮ್ಮ ಎಲ್ಲ ಕೆಲಸವನ್ನು ಬಿಟ್ಟು ಸಂಗಾತಿಯ ಜೊತೆ ಸಮಯವನ್ನು ಕಳೆಯಲು ಬಯಸುವಿರಿ. ಹಳೆಯ ರೋಗ ನಿಮ್ಮನ್ನು ಕಾಡಲಿದ್ದು, ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇರುವುದು. ಜೀವನದ ತೊಂದರೆಗಳನ್ನು ಸಂಗಾತಿಯ ಜೊತೆಗೆ ಹಂಚಿಕೊಳ್ಳಲು ಬಯಸುವಿರಿ. ಸಂಬಂಧಿಕರ ಜೊತೆ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತವೆ. ಆತುರಾತುರವಾಗಿ ಯಾವುದನ್ನೂ ಮಾಡಲು ಹೋಗುವುದು ಬೇಡ. ಇನ್ನೊಬ್ಬರು ತೋರುವ ನಿರ್ಲಕ್ಷ್ಯದಿಂದ ನೀವು ಬಹಳ ದುಃಖಿಸುವಿರಿ. ಹೊಸ ಯೋಜನೆಯನ್ನು ನಿರ್ವಹಿಸುವ ಅವಕಾಶವು ಸಿಗಲಿದೆ.

ಮೀನ ರಾಶಿ : ನೀವು ಇಂದು ಬಂಧುಗಳಿಂದ ಯಾವುದಾದರೂ ಒಂದು ರೀತಿಯಲ್ಲಿ ಸಹಾಯವನ್ನು ಬಯಸುವಿರಿ. ಅಲ್ಪ ಜಮೀನಿನ ಕೃಷಿಯಲ್ಲಿ ಒಳ್ಳೆಯ ಲಾಭವನ್ನು ಗಳಿಸಲಿದ್ದೀರಿ. ಪ್ರಭಾವಿ ವ್ಯಕ್ತಿಗಳ ಭೇಟಿಗೆ ಇಂದು ಅವಕಾಶ ಸಿಗದೇ ಹೋಗದೆ ಇರಬಹುದು. ಇಂದು ಬಂಧುಗಳ ಆಗಮನವಾದ ಕಾರಣ ಕುಟುಂಬ ಜೊತೆ ಹೆಚ್ವು ಕಾಲ ಕಳೆಯಿರಿ. ನೀವು ಕೆಲಸದಲ್ಲಿ ಇಂದು ಒಂದು ಒಳ್ಳೆಯ ಸುದ್ದಿ ಪಡೆಯಬಹುದು. ಮಾನಸಿಕವಾಗಿ ಸ್ವಲ್ಪ ಮಟ್ಟಿನ ಕಿರಿಕಿರಿಯನ್ನು ಅನುಭವಿಸುವಿರಿ. ಒಂಟಿತನವನ್ನು ಇಷ್ಟಪಡುತ್ತೀರಿ. ಗುರುವಿನ ದರ್ಶನವನ್ನು ಪಡೆಯಿರಿ. ಇಂದು ನೀವಾಡುವ ಮಾತಿನ ಮೇಲೆ ನಿಮ್ಮ ಕಾರ್ಯಗಳು ನಿಂತಿರುವುದು. ಓಡಾಟಕ್ಕೆ ನಿಮಗೆ ವಾಹನದ ಅನುಕೂಲತೆಯೂ ಆಗುವುದು. ಸ್ವಂತ ಉದ್ಯಮದಲ್ಲಿ ನಿರೀಕ್ಷಿತ ಲಾಭವನ್ನು ಕಾಣುವಿರಿ. ಪ್ರೇಮವು ನಿಮಗೆ ನಿಮ್ಮನ್ನು ಉತ್ಸಾಹದಿಂದ ಇಡುವುದು. ಇನ್ನೊಬ್ಬರಿಗೆ ನೀವು ಸಹಾಯವನ್ನು ಮಾಡಲು ಹೆಚ್ಚು ಇಷ್ಟಪಡುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ