Horoscope: ಈ ರಾಶಿಯ ಉದ್ಯೋಗಸ್ಥ ಸ್ತ್ರೀಯರು ಇಂದು ಶುಭ ಸುದ್ದಿ ಕೇಳುವರು

| Updated By: ವಿವೇಕ ಬಿರಾದಾರ

Updated on: Dec 16, 2024 | 6:49 AM

ಈ ಲೇಖನವು ಶಾಲಿವಾಹನ ಶಕೆ 1947ರ ನಿತ್ಯ ಪಂಚಾಂಗದ ವಿವರಗಳನ್ನು ಮತ್ತು 12 ರಾಶಿಗಳಿಗೆ ದಿನದ ಭವಿಷ್ಯವನ್ನು ಒಳಗೊಂಡಿದೆ. ಪ್ರತಿ ರಾಶಿಯವರ ಆರ್ಥಿಕ, ವೃತ್ತಿಪರ, ಆರೋಗ್ಯ ಮತ್ತು ಕುಟುಂಬ ಜೀವನದ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಲಾಗಿದೆ. ಈ ಲೇಖನ ಜ್ಯೋತಿಷ್ಯದಲ್ಲಿ ಆಸಕ್ತಿ ಹೊಂದಿರುವವರಿಗೆ ಉಪಯುಕ್ತವಾಗಲಿದೆ.

Horoscope: ಈ ರಾಶಿಯ ಉದ್ಯೋಗಸ್ಥ ಸ್ತ್ರೀಯರು ಇಂದು ಶುಭ ಸುದ್ದಿ ಕೇಳುವರು
ದಿನ ಭವಿಷ್ಯ
Follow us on

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶಿರ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಪ್ರತಿಪತ್​​, ನಿತ್ಯನಕ್ಷತ್ರ: ಆದ್ರಾ, ಯೋಗ: ಶುಕ್ಲ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 51 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 05 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 08:16 ರಿಂದ 09:40ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:04 ರಿಂದ 12:29 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 01:53 ರಿಂದ 03:17 ರವರೆಗೆ.

ಮೇಷ ರಾಶಿ: ಸಮಚಿತ್ತತೆ ಸಾಧಿಸಲು ಕಷ್ಟವಾಗಬಹುದು. ಮಕ್ಕಳ ಭವಿಷ್ಯಕ್ಕೆ ಸಂಪತ್ತು ಮಾಡುವ ಯೋಚನೆ ಬರುವುದು. ಸಾಮಾಜಿಕ ಕಾರ್ಯಗಳಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರುವುದು. ಹಣಕಾಸಿನ ವಿಚಾರದಲ್ಲಿ ಯಾರನ್ನು ನಂಬಬೇಕು ಎಂಬುದು ಗೊತ್ತಾಗದು. ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಆಸೆ ಇರುವುದು. ಅತೃಪ್ತಿಕರ ದಿನವಾಗಿರಲಿದೆ. ಪತ್ನಿಯ ಅನವಶ್ಯಕ ಖರ್ಚಿಗೆ ಕಡಿವಾಣವನ್ನು ಹಾಕಬೇಕಾದೀತು. ಇದಕ್ಕಾಗಿ ಕೂಗಾಡಿಕೊಳ್ಳಬಹುದು. ಮಕ್ಕಳ ಬಗ್ಗೆ ನಿಮ್ಮ ಲಕ್ಷ್ಯವು ಇರಲಿ. ನಿಮ್ಮ ಇಂದಿನ ಕೆಲಸಗಳನ್ನು ಬಾಕಿ ಉಳಿಸಿಕೊಳ್ಳಬೇಡಿ. ಒತ್ತಡವು ಹೆಚ್ಚಾದೀತು. ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಒಬ್ಬರೇ ತೆಗೆದುಕೊಳ್ಳುವಿರಿ. ಹಳೆಯ ದೈಹಿಕ ಸಮಸ್ಯೆಯು ಪುನಃ ಕಾಣಿಸಿಕೊಳ್ಳುವುದು. ಉದ್ಯೋಗಸ್ಥ ಸ್ತ್ರೀಯರಿಗೆ ಸಮಾಧಾನವಿರದು. ಯಾರಾದರೂ ತಮ್ಮ ಕಾರ್ಯವನ್ನು ಮಾಡಲು ಒತ್ತಾಯಿಸಬಹುದು.

ವೃಷಭ ರಾಶಿ: ಎಲ್ಲ ರುಚಿಗಳು ಭಿನ್ನವಾಗುವುದು. ಹಿರಿಯರ ಮೇಲಿನ ಪ್ರೀತಿಯಿಂದ ನೀವು ಸೇವೆ ಮಾಡುವಿರಿ. ನಿಮ್ಮ ಸ್ಥಾನದ ರಕ್ಷಣೆಗಾಗಿ ಇನ್ನೊಬ್ಬರ ಮೇಲೆ ಆರೋಪವನ್ನು ಮಾಡುವಿರಿ.ನಿಮ್ಮ ಸ್ಥಾನವನ್ನು ಕಾಪಾಡಿಕೊಳ್ಳಲು ಬೇರೆಯವರ ಮೇಲೆ ಗೂಬೆ ಕೂರಿಸುವಿರಿ.ಸಣ್ಣ ಕೆಲಸಗಳನ್ನು ಮಾಡಲು ನೀವು ಇಷ್ಟಪಡುವುದಿಲ್ಲ. ನಿಮ್ಮ ಸಂಕಟಕ್ಕೆ ಸ್ಪಂದಿಸಿದವರನ್ನು ಇಷ್ಟಪಡುವಿರಿ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಏಕಾಗ್ರತೆಯು ಇಲ್ಲವಾಗಬಹುದು. ನಕಾರಾತ್ಮಕ ಚಿಂತನೆಯನ್ನು ಕಡಿಮೆ ಮಾಡಿಕೊಳ್ಳಿ. ನೀವೇ ಆಯ್ಕೆ ಮಾಡಿಕೊಂಡ ಕೆಲಸದಲ್ಲಿ ಆಸಕ್ತಿಯು ಕಡಿಮೆ ಇರುವುದು. ನಿಮ್ಮ ನಿರ್ಧಾರಗಳು ಬಲವಾದಂತೆ ಕಾರ್ಯಗಳಲ್ಲಿಯೂ ದೃಢತೆ ಇರಲಿ. ಸಿಕ್ಕ ಅಧಿಕಾರವನ್ನು ಸದುಪಯೋಗಪಡಿಸಿಕೊಳ್ಳುವಿರಿ. ಮುಂದಾಲೋಚನೆಗೂ ಸ್ವಲ್ಪ ಮಿತಿ ಇರಲಿ. ಉದ್ಯಮವು ಸಕ್ರಿಯವಾಗಿದ್ದು ವಿಸ್ತರಿಸುವ ಯೋಚನೆ ಮಾಡುವಿರಿ.

ಮಿಥುನ ರಾಶಿ: ಇಂದು ನಿಮ್ಮ ಹಣವು ತಿರುಗಿ ಬಂದು ಸಮಾಧಾನ ತರಲಿದೆ. ಹಣಕಾಸಿನ ವ್ಯವಹಾರದಿಂದ ನಿಮಗೆ ಅಪವಾದವು ಬರಬಹುದು. ತಮ್ಮ ಉದ್ಯಮವನ್ನು ಪ್ರಭಾವೀ ವ್ಯಕ್ತಿಗಳ ಸಹಾಯದಿಂದ ಜನಪ್ರಿಯ ಗೊಳಿಸಿಕೊಳ್ಳುವರು. ಎಲ್ಲವನ್ನೂ ನೀವೇ ಮಾಡಬೇಕು ಎನ್ನುವ ಮಾನಸಿಕತೆ ಬೇಡ. ಒಂಟಿತನವು ಇಷ್ಟವಾಗುವುದು. ಆರ್ಥಿಕ ವ್ಯವಹಾರದಲ್ಲಿ ನಿಮಗೆ ಕೆಲವು ಮಾತುಗಳು ಬರಬಹುದು. ಹಗುರವಾದ ಮಾತುಗಳಿಗೆ ಉತ್ತರಕೊಡುವುದು ಬೇಡ. ಕುಟುಂಬದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಗೌಪ್ಯವಾಗಿ ಇರುವುದು. ಸಿಟ್ಟನ್ನು ಯಾರದೋ ಮೇಲೆ ತೀರಿಸಿಕೊಂಡು ಸಮಾಧಾನಪಡುವಿರಿ. ಹಿತಶತ್ರುಗಳನ್ನು ಅವರಿಗೆ ಗೊತ್ತಾಗದಂತೆ ದೂರವಿರಿಸಿ. ಪಾಲುದಾರಿಕೆಯ ವ್ಯವಹಾರವು ನಿಮಗೆ ಸಾಕೆನಿಸುವುದು. ಬಿಟ್ಟು ಹೋದ ಪ್ರೇಮದ ಬಗ್ಗೆಯೇ ಹೆಚ್ಚು ಆಲೋಚನೆ ಮಾಡುತ್ತ ಇರುವಿರಿ. ಶತ್ರುಗಳಿಗೆ ತಿರುಗೇಟು ನೀಡಲು ಸಮಯ ಕಾಯುವಿರಿ.

ಕರ್ಕಾಟಕ ರಾಶಿ: ಎಂತಹ ಕೆಟ್ಟ ಸನ್ನಿವೇಶವನ್ನೂ ಸರಿಮಾಡುವ ಚಾಣಾಕ್ಷತೆ ನಿಮಗೆ ಬರಲಿದೆ. ಹಳೆಯ ಪ್ರೀತಿಯಿಂದ ನಿಮಗೆ ಕಷ್ಟವಾದೀತು. ನೀವು ಅಂದುಕೊಂಡ ಕೆಲಸವು ಆಗದೇಹೋದೀತು. ಗೌರವಾದಿಗಳು ಸಿಕ್ಕಿ ಸಂತೋಪಡುವಿರಿ. ನೀವು ಅಂದುಕೊಂಡ ಹಾಗೆಯೇ ನಡೆಯದು. ನಿಮ್ಮ ಚರ ಹಾಗೂ ಸ್ಥಿರಾಸ್ತಿಗಳ ದಾಖಲೆಗಳನ್ನು ಜೋಪಾನವಾಗಿ ಇರಿಕೊಳ್ಳಿ. ಧಾರ್ಮಿಕ ಆಚರಣೆಗಳನ್ನು ಹೆಚ್ಚು ಮಾಡಲು ಮನಸ್ಸಾಗುವುದು. ನಿಮ್ಮ ವಾಹನವನ್ನು ಚಲಾಯಿಸಲು ಕಷ್ಟವಾದೀತು. ಹಿರಿಯರ ಮಾತನ್ನು ಧಿಕ್ಕರಿಸಿ ಹೋಗಲಾರಿರಿ. ನಿಮ್ಮವರು ನಿಮ್ಮ ದೋಷವನ್ನೇ ಹೆಚ್ಚು ಹೇಳುವರು. ಸಾಹಿತ್ಯಸಲ್ಲಿ ಆಸಕ್ತಿ ಇರುವವರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ತೊಡಗಿಕೊಳ್ಳುವರು. ಎಲ್ಲವನ್ನೂ ಬಾಹುಬಲದಿಂದ ಸಾಧಿಸುತ್ತೇನೆ ಎಂಬ ಹುಂಬುತನ ಬೇಡ. ಬುದ್ಧಿಯನ್ನು ಬಳಸಿ ಕೆಲಸವನ್ನು ಸರಳ ಮಾಡಿಕೊಳ್ಳಿ. ಇನ್ನೊಬ್ಬರ ಮೇಲಿನ ಅಸಮಾಧಾನವನ್ನು ನೀವು ಇಂದು ಅವರೆದುರು ಹೇಳುವಿರಿ. ಹೂಡಕೆ ನಿಮಗೆ ಪ್ರಶಸ್ತ ಎನಿಸಬಹುದು.

ಸಿಂಹ ರಾಶಿ: ಇಂದು ನೀವು ಕೈಗೊಂಡ ಪ್ರಯಾಣವು ಸುಖಕರವಾಗದೇ ಇರಬಹುದು. ವಿನ್ಯಾಸದ ಜವಾಬ್ದಾರಿಯ ನಿಮ್ಮ ಹೆಗಲಿಗೆ ಬರುವುದು. ಮನೆ ಹಾಗೂ ಕಛೇರಿಯ ಎಲ್ಲ‌ ಕಡೆಯಿಂದ ಒತ್ತಡವು ಇರಲಿದೆ. ಸಂಗಾತಿಯು ನಿಮಗೆ ಬೇಸರವಾಗಬೇಕೆಂದೇ ಮಾತನಾಡಬಹುದು. ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ನೌಕರರು ಹಾಗೂ ಅಧಿಕಾರಿಗಳ ನಡುವೆ ವೈಮನಸ್ಸು ಉಂಟಾಗಬಹುದು. ಕೆಲವು ಸಂದರ್ಭದಲ್ಲಿ ಎಲ್ಲವೂ ಗೊತ್ತಿದೆ ಎಂದು ತೋರಿಸಿಕೊಳ್ಳುವುದು ನಿಮಗೆ ಕಷ್ಟವಾದೀತು. ಆಪ್ತರ ಜೊತೆಗಿನ ಬಿಚ್ಚು ಮನಸ್ಸಿನ ಮಾತುಕತೆಯಿಂದ ನಿಮ್ಮ ಭಾರವಾದ ಮನಸ್ಸು ಹಗುರಾಗುವುದು. ನೀವು ಇಂದು ಸಿಟ್ಟು ಮಾಡಿಕೊಳ್ಳಬಹುದಾದ ಸನ್ನಿವೇಶಗಳು ಬಾರದು. ಮನೆಯ ಮಂಗಳಕಾರ್ಯಕ್ಕೆ ಆಸ್ಪದ ಕೊಡುವಿರಿ. ಇಂದು ಸ್ತ್ರೀಯಿಂದ ಸುಖವನ್ನು ಅನುಭವಿಸುವಿರಿ. ಯಾರಿಗೂ ಹೇಳದೇ ಎಲ್ಲಿಗಾದರೂ ಹೋಗಿ ಸುತ್ತಾಡಿ ಬರುವಿರಿ. ವೃತ್ತಿಯಲ್ಲಿ ಜವಾಬ್ದಾರಿಯನ್ನು ಬೇರೆಯವರಿಗೆ ಹಾಕಿ, ಸುಮ್ಮನಾಗುವಿರಿ.

ಕನ್ಯಾ ರಾಶಿ: ಇಂದು ಸರಿಯಾಗಿ ಸಮಯವನ್ನು ಹೊಂದಿಸಿಕೊಂಡು ಎಲ್ಲ ಕಾರ್ಯವನ್ನೂ ಮಾಡಬೇಕಾಗುವುದು. ಆರ್ಥಿಕ ತೊಂದರೆಯನ್ನು ನೀವು ಸಲೀಸಾಗಿ ಸರಿಮಾಡಿಕೊಳ್ಳುವಿರಿ. ಸಮಯ ಹಾಗೂ ಸಂದರ್ಭಗಳನ್ನು ನೋಡಿ ನಿಮ್ಮ ವಿಚಾರವನ್ನು ಮೇಲಧಿಕಾರಿಗಳ ಜೊತೆ ಹಂಚಿಕೊಳ್ಳಿ. ನಿಮ್ಮ ಬಳಕೆಯಾಗದ ಭೂಮಿಯಿಂದ ಮಾರಾಟ ಮಾಡಿ ಆದಾಯವನ್ನು ಪಡೆಯುವಿರಿ. ಹೂಡಿಕೆಯ ಕಡೆ ಅಧಿಕ ಆಲೋಚನೆ ಮಾಡುವಿರಿ. ಗೌಪ್ಯವಾಗಿ ನಿಮಗೆ ಹಣವು ಸಿಗಲಿದೆ‌. ಆರಂಭದ ಆಸಕ್ತಿ ಹೋಗುತ್ತ ಕಡಿಮೆಯಾಗಬಹುದು. ಸಮಯವನ್ನು ನೋಡಿ ನಿಮ್ಮ ವಿಚಾರವನ್ನು ಮೇಲಧಿಕಾರಿಗಳಿಗೆ ಹೇಳಿ. ಮನೆಯಲ್ಲಿ ಇದ್ದು ಕೆಲಸ ಮಾಡುವವರಿಗೆ ಬಂಧನದಂತೆ ಅನ್ನಿಸಬಹುದು. ದಾನದಿಂದ ನಿಮಗೆ ಪ್ರಶಂಸೆಯು ಸಿಗುವುದು. ಆಭರಣಗಳನ್ನು ಖರೀದಿಸುವ ಇಚ್ಛೆ ಇದ್ದರೆ ಖರೀದಿಸಬಹುದು. ನಿಮ್ಮ ವಿವಾಹದ ಮಾತುಕತೆಯಿಂದ ನಿಮಗೆ ಖುಷಿ ಸಿಗುವುದು. ಸಜ್ಜನರ ಸಹವಾಸವು ಆಕಸ್ಮಿಕವಾಗಿ ಸಿಗುವುದು.

ತುಲಾ ರಾಶಿ: ಪರಿಸ್ಥಿತಿ ಬದಲಾಗಲು ಕೆಲವು ಸಮಯ ಹಿಡಿಯಬಹುದು. ಆದರೆ ಮನಸ್ಥಿತಿ ಬದಲಾದೀತು. ಅಪರಿಚಿತ ಕರೆಗಳಿಂದ ನಿಮಗೆ ಭಯವಾಗಬಹುದು. ನಿಮಗೆ ನಿರೀಕ್ಷಿತ ಉದ್ಯೋಗವು ಸಿಗದೇ ಇರುವುದು ನಿಮ್ಮನ್ನು ಖಿನ್ನಗೊಳಿಸೀತು. ನಿಮಗೆ ನಿರೀಕ್ಷಿತ ಉದ್ಯೋಗವು ಸಿಕ್ಕುವ ಸೂಚನೆ ಬರಲಿದೆ. ಬಂಧುಗಳ ವಂಚನೆಯೇ ನಿಮ್ಮ ತಲೆಯನ್ನು ಸುತ್ತಬಹುದು. ಸಾಲವು ಮುಗಿಯುತು ಎಂದುಕೊಳ್ಳುತ್ತಿದ್ದಂತೆ ಇನ್ನೊಂದು ಆರಂಭವಾಗಬಹುದು. ಬಂಧುಗಳಿಂದ ನೀವು ನಿರ್ಲಕ್ಷ್ಯಕ್ಕೆ ಒಳಗಾಗುವಿರಿ. ದಾಂಪತ್ಯದಲ್ಲಿ ನೀವು ಸುಖವನ್ನು ಕಾಣುವಿರಿ. ಹೊಸ ಕಾರ್ಯಗಳನ್ನು ಒಮ್ಮೆಲೇ ಆರಂಭಿಸುವುದು ಬೇಡ. ಇಷ್ಟು ದಿನ ನಿರ್ವಹಿಸುತ್ತಿದ್ದ ಜವಾಬ್ದಾರಿಗಳನ್ನು ಇಂದು ನಿರ್ವಹಿಸಲು ಕಷ್ಟವಾದೀತು. ಬಂಧುಗಳ ಕಡೆಯಿಂದ ನಿಮಗೆ ಅಶುಭ ಸುದ್ದಿಯು ಬರಬಹುದು. ನಿಮಗೆ ಬೇಕಾದ ವಸ್ತುವೊಂದನ್ನು ನೀವು ಕಳೆದುಕೊಳ್ಳುವಿರಿ. ಕಾರ್ಯದಲ್ಲಿ ಎಲ್ಲಿಯೂ ತಪ್ಪಾಗದಂತೆ ನೋಡಿಕೊಳ್ಳಿ.

ವೃಶ್ಚಿಕ ರಾಶಿ: ಗೃಹಾಲಂಕಾರಿಕ ಉತ್ಪನ್ನಗಳಿಂದ ನೀವು ಲಾಭವನ್ನು ಪಡೆಯುವಿರಿ. ಮನೆಯ ಕಾರ್ಯಕ್ಕೆ ನಿಮ್ಮವರ ವಿರೋಧ ಬರಬಹುದು. ಇನ್ನೊಬ್ಬರಿಂದ ಪ್ರೇರಿತರಾಗಿ ಸಾಮಾಜಿಕ ಕಾರ್ಯದಲ್ಲಿ ತೊಡಗುವಿರಿ. ಆರ್ಥಿಕತೆಯ ಮೇಲೆ ನಿಮಗೆ ಮೋಹವು ಕಡಿಮೆ ಆಗಬಹುದು. ಸಂತಾನಕ್ಕೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಟೀಕೆಗಳು ನಡೆಯುವುದು. ದಣಿದು ಕಾರ್ಯವನ್ನು ಮಾಡುವುದು ಬೇಡ. ನಿಮ್ಮ ಇಷ್ಟದವರನ್ನು ಭೇಟಿಯಾಗಿ ಕೆಲವು ಸಮಯ ಸಂತೋಷದಿಂದ ಕಳೆಯುವಿರಿ. ಯಾರಂದಲೋ ಪ್ರೇರಿತರಾದ ನಿಮಗೆ ಸಾಮಾಜಿಕ ಕಾರ್ಯವು ಹಿಡಿಸುವುದು. ಸಂಪತ್ತಿನ ಮೇಲೆ ನಿಮಗೆ ಮೋಹವು ಕಡಿಮೆ ಇರುವುದು. ವಂಚಿಸಿದವರಿಗೆ ಪ್ರತಿವಂಚನೆಯನ್ನು ಮಾಡಲು ಸಮಯವನ್ನು ನಿರೀಕ್ಷಿಸುತ್ತಿರುವಿರಿ. ಆಶಿಸ್ತಿನ ಕೆಲಸಕ್ಕೆ ಹಿರಿಯರು ನಿಂದಿಸಬಹುದು. ಅಪರಿಚಿತ ವ್ಯಕ್ತಿಗಳು ದೂರವಾಣಿಯ ಮೂಲಕ ಪದೆ ಪದೆ ಪೀಡಿಸಬಹುದು. ಭವಿಷ್ಯದ ಬಗ್ಗೆ ಸ್ಪಷ್ಟತೆಯು‌ ನಿಮಗೆ ಸಿಗದು.

ಧನು ರಾಶಿ: ಇಂದು ಆಕಾಸ್ಮಿಕವಾಗಿ ಕೌಟುಂಬಿಕ ಜವಾಬ್ದಾರಿಗಳು ಬರಬಹುದು.‌ ನಿಮ್ಮ ಕಾರ್ಯಕ್ಕೆ ಹೆಚ್ಚಿನ ವೇತನವು ಸಿಗಬಹುದು. ಅನಗತ್ಯ ಖರ್ಚನ್ನು ಮಾಡಬೇಕಾಗಬಹುದು. ನಿಮ್ಮ ಭಿನ್ನಾಭಿಪ್ರಾಯಗಳು ನಿಮ್ಮಲ್ಲಿ ಭಿನ್ನತೆ ಬಾರದಿರಲಿ. ನಿಮ್ಮ ಮಾತಿನಿಂದ ಇತರರಿಗೆ ನೋವಾಗುವುದು. ನೀವು ಅಶಿಸ್ತಿನ ಸ್ವಭಾವವನ್ನು ಬದಲಾಯಿಸಿಕೊಳ್ಳಬೇಕು. ವೇತನವನ್ನು ಹೆಚ್ಚಿಸಲು ಅಧಿಕಾರಿಗಳನ್ನು ಕೇಳಿಕೊಳ್ಳುವಿರಿ. ನಿಮ್ಮ ಸಾಮರ್ಥ್ಯವನ್ನು ಸುಧಾರಿಸಲು ಒಂದು ಅವಕಾಶ ಸಿಗಲಿದೆ. ದೂರದ ಬಂಧುಗಳ ಭೇಟಿಯಿಂದ ನಿಮಗೆ ಸಂತೋಷವಾಗುವುದು. ಸಹೋದ್ಯೋಗಿಗಳ ಜೊತೆ ವಾದವನ್ನು ಮಾಡುವಿರಿ. ಶತ್ರುಗಳನ್ನು ತಿಳಿದುಕೊಳ್ಳುವ ಅಸಕ್ತಿಯು ಇರಲಿದೆ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳುವಿರಿ. ಇಂದಿನ ನಿಮ್ಮ ಕಾರ್ಯಕ್ಕೆ ಸಮಯದ ಮಿತಿಯನ್ನು ಅವಶ್ಯಕ. ಅಹಂಕಾರದಿಂದ ಬೀಗುವುದು ಬೇಡ. ನಿಮ್ಮ ಸಮಾಧಾನದ ಚಿತ್ತವನ್ನು ಯಾರಾದರೂ ಕೆಡಿಸಬಹುದು. ಯಂತ್ರದಿಂದ‌ ಕೆಲಸ ಮಾಡುವವರಿಗೆ ಕಷ್ಟವಾದೀತು.

ಮಕರ ರಾಶಿ: ಒಂದೇ ಪ್ರಯತ್ನಕ್ಕೆ ಫಲವು ಸಾಧ್ಯವಾಗದೇ ಹೋಗಬಹುದು. ನಿಮ್ಮಿಂದ ಉಪಕಾರ ಪಡೆದವರು ಕೃತಜ್ಞತೆ ಸಲ್ಲಿಸಬಹುದು. ಮನಸ್ಸು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಅಗತ್ಯ. ನ್ಯಾಯಾಲಯದ ವಿಚಾರವನ್ನು ಬೇಗ ಮುಗಿಸಿಕೊಳ್ಳಲು ಪ್ರಯತ್ನಿಸುವಿರಿ. ಭೋಗವಸ್ತುಗಳ ಖರೀದಿಯನ್ನು ಹೆಚ್ಚು ಮಾಡುವಿರಿ. ನಿಮ್ಮ ಉದ್ದೇಶವನ್ನು ಸಾಕಾರಗೊಳಿಸುವತ್ತ ಸಾಗುವಿರಿ. ನಿಮ್ಮ ಶಕ್ತಿಗೆ ಯೋಗ್ಯ ಕಾರ್ಯವನ್ನು ಮಾಡಿ. ನಿರ್ಮಾಣದ ಕಾರ್ಯಗಳು ಕುಂಟಿತವಾಗಬಹುದು. ಕಛೇರಿಯಲ್ಲಿ ಅನಿರೀಕ್ಷಿತ ಒತ್ತಡವು ಬಂದು ಮುತ್ತಿಕೊಂಡು ದಿಕ್ಕು ತೋಚದಂತೆ ಆಗುವುದು. ನಿಮ್ಮ ಮಾತಿನ ಹಾಸ್ಯವು ಇನ್ನೊಬ್ಬರಿಗೆ ಬೇಸರವಾಗುವುದು. ನೀವು ಇನ್ನೊಬ್ಬರ ಮೇಲಿಟ್ಟ ವಿಶ್ವಾಸಕ್ಕೆ ಧಕ್ಕೆಯಾಗುವುದು. ಸ್ಥಳದ ವ್ಯತ್ಯಾಸದಿಂದ ಆರೋಗ್ಯದ ಮೇಲೆ‌ ದುಷ್ಪರಿಣಾಮವಾಗಲಿದೆ. ಉದ್ಯೋಗದ ಕಾರಣ ಪ್ರಯಾಣ ಮಾಡುವ ಸನ್ನಿವೇಶವು ಬರಲಿದೆ. ನಿಷ್ಠುರ ಮಾತುಗಳನ್ನು ಆಡುವುದು ಬೇಡ. ನಿಮ್ಮ ವೈಯಕ್ತಿಕ ಕೆಲಸಗಳನ್ನು ಬಿಡುವಿಲ್ಲದ ಸಮಯದಲ್ಲಿಯೂ ಮಾಡುವಿರಿ.

ಕುಂಭ ರಾಶಿ: ಸ್ನೇಹವನ್ನು ಸರಿಯಾಗಿ ಕಾಯ್ದುಕೊಂಡು ಹೋಗುವುದು ಮುಖ್ಯ. ಅತಿಯಾದ ಆಸೆಯಿಂದ ನಿಮಗೆ ಕೆಲವು ತೊಂದರೆಗಳು ಬರಬಹುದು. ದೈವಭಕ್ತಿಯಿಂದ ನೀವು ನೆಮ್ಮದಿ ಕಾಣಲು ಸಾಧ್ಯ. ಇಂದು ಹೆಚ್ಚು ಮಾನಸಿಕ ಒತ್ತಡವು ಇರದಿದ್ದರೂ ಕೆಲಸವು ಬಹಳ ಇರಲಿದೆ. ನಿಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಲಿ. ಮನಸ್ಸಿನ ಚಾಂಚಲ್ಯವನ್ನು ನಿಲ್ಲಿಸಲಾಗದು. ದೂಷಪೂರಿತ ಮಾತುಗಳಿಂದ ಸಿಟ್ಟಾಗುವ ಸಾಧ್ಯತೆ ಇದೆ. ಇಂದು ಹೆಚ್ಚು ಮಾನಸಿಕ ಒತ್ತಡವು ಇರದಿದ್ದರೂ ಅಧಿಕ ಕಾರ್ಯವು ಇರಲಿದೆ. ಇಷ್ಟವಿಲ್ಲದ ಕೆಲಸವನ್ನು ಮಾಡಲು ಯಾರು ಒತ್ತಾಯಿಸಿದರೂ ಮಾಡುವುದಿಲ್ಲ. ನಿಮ್ಮ ಸ್ವಭಾವವು ಕೆಲವರಿಗೆ ಇಷ್ಟವಾಗದೇ ಹೋಗುವುದು. ಸ್ವತಂತ್ರವಾಗಿರಲು ನೀವು ಹೆಚ್ಚು ಇಷ್ಟಪಡುವಿರಿ. ಯಾರ ಮಾತನ್ನೂ ಕೇಳದೇ ನಿಮ್ಮದೇ ದಾರಿಯಲ್ಲಿ ಸಾಗುವಿರಿ. ವೃತ್ತಿಯಲ್ಲಿ ಬದಲಾವಣೆ ಬೇಕು ಎನಿಸುವುದು. ಅಪರಿಚಿತರು ನಿಮಗೆ ಕೆಲವು ತೊಂದರೆಯನ್ನು ಕೊಡಬಹುದು. ಸೌಂದರ್ಯದ ಕಡೆ ನಿಮ್ಮ ಗಮನವಿರುವುದು.

ಮೀನ ರಾಶಿ: ಇಂದು ನಿಮ್ಮ ಬಳಿ ಹಣಕಾಸಿನ ವಿಚಾರವನ್ನು ಪ್ರಸ್ತಾಪಿಸಲು ಭಯವಾಗಬಹುದು. ಉದ್ಯೋಗ ಬದಲಾವಣೆಯು ನಿಮಗೆ ಕಿರಿಕಿರಿ ಎನಿಸಬಹುದು. ನಿಮ್ಮ ಅನುಮಾನದ ಕಾರಣದಿಂದ ಸಂಗಾತಿಯನ್ನು ದ್ವೇಷಿಸುವಿರಿ. ಕೃಷಿಯಲ್ಲಿ ನಿಮಗೆ ಆಸಕ್ತಿ ಹೆಚ್ಚಾಗುವುದು. ಮಕ್ಕಳ ವಿಚಾರದಲ್ಲಿ ಮಾನಸಿಕ ಹಿಂಸೆಯು ಆಗಲಿದೆ. ಒಂದೇ ಕಾರ್ಯವನ್ನು ಮಾಡಲು ಹೆಚ್ಚು ಸಮಯ ತೆಗೆದುಕೊಳ್ಳುವಿರಿ. ಒತ್ತಡ ನಿವಾರಣೆಗೆ ಧ್ಯಾನ ಹಾಗೂ ಯೋಗಾಭ್ಯಾಸವು ಬೇಕಾಗುವುದು. ಅಪರಿಚಿತರು ಆಪ್ತರಾಗುವ ಸಾಧ್ಯತೆ ಇದೆ.‌ ದುರಭ್ಯಾಸಕ್ಕೆ ಅವಕಾಶಗಳು ಬರಲಿದ್ದು ಆಲೋಚಿಸಿ ಮುಂದುವರಿಯಿರಿ. ನಿಮ್ಮ ವರ್ತನೆಯನ್ನು ಕಂಡು ಯಾರಾದರೂ ನಕ್ಕಾರು. ನಿಮ್ಮ‌ ವೇಷಭೂಷಣದ ಬಗ್ಗೆ ಟೀಕಿಸುವರು. ಯಾವುದನ್ನೂ ನೀವು ಮನಸ್ಸಿಗೆ ತೆಗೆದುಕೊಳ್ಳದೇ ನಿಶ್ಚಿಂತೆಯಿಂದ ಇರುವಿರಿ. ಆರ್ಥಿಕತೆಯನ್ನು ಬಲಪಡಿಸಿಕೊಳ್ಳುವ ಮಾರ್ಗವನ್ನು ಕಂಡುಕೊಳ್ಳಿ. ಸಂಗಾತಿಯು ನಿಮ್ಮಿಂದ ಪ್ರೀತಿಯನ್ನು ನಿರೀಕ್ಷಿಸುವರು.

Published On - 6:48 am, Mon, 16 December 24