AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಅಪರಿಚಿತರಿಂದ ನಿಮ್ನ ಸಂಪತ್ತು ನಷ್ಟವಾಗುವುದು-ಎಚ್ಚರ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 29) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ, ಅಪರಿಚಿತರಿಂದ ನಿಮ್ನ ಸಂಪತ್ತು ನಷ್ಟವಾಗುವುದು-ಎಚ್ಚರ
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Nov 29, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣರಾಜ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಸಾಧ್ಯ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 41 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:21 ರಿಂದ 01:46ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:06 ಗಂಟೆ 09:31 ನಿಮಿಷಕ್ಕೆ, ಗುಳಿಕ ಕಾಲ ಬೆಳಗ್ಗೆ 10:56 ರಿಂದ 12:21ರ ವರೆಗೆ.

ಸಿಂಹ ರಾಶಿ : ಧಾರ್ಮಿಕ ಕಾರ್ಯಗಳಿಗೆ ದೂರಪ್ರಯಾಣವನ್ನು ಮಾಡುವಿರಿ. ಕೆಲವು‌ ಸಾಲಬಾಧೆಯಿಂದ ಮುಕ್ತಿಪಡೆಯುವಿರಿ. ಕಛೇರಿಯಲ್ಲಿ ಕಾರ್ಯಗಳು ಒತ್ತಡದಿಂದ ಇದ್ದು ಕೆಲವು ತಪ್ಪು ಆಗಬಹುದು.‌ ಅಧಿಕಾರಿಗಳಿಂದ ಕ್ರಮ ತೆಗೆದುಕೊಳ್ಳಬಹುದು. ವಾಹನ‌ಸಂಚಾರದಿಂದ ಆಯಾಸವಾಗುವುದು.‌ ನಿಮ್ಮನ್ನು ಇತರರು ನೋಡುವರು. ಪ್ರೇಮದಲ್ಲಿ ಅಹಂ ನುಸುಳುವ ಸಾಧ್ಯತೆ ಇದೆ. ರಾಜಕಾರಣಿಗಳು ಕಾರ್ಯಕ್ರಮದ ಒತ್ತಡದಲ್ಲಿ ಇರುವರು. ಮಾನಸಿಕ ಒತ್ತಡದಿಂದ ಬೇರೆ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ನಿಮಗೆ ಇಷ್ಟವಾಗದವರ ಭೇಟಿಯಾಗಲಿದೆ. ಮನಸ್ಸು ಅನ್ಯ ಆಲೋಚನೆಯಲ್ಲಿ ಮಗ್ನವಾಗಿರುವುದು. ಆಪ್ತರ ಸಲಹೆಯು ನಿಮ್ಮ ಉದ್ಯೋಗಕ್ಕೆ ಸಹಕಾರಿಯಾಗಲಿದೆ. ನಿಮಗೆ ಪದವಿಯನ್ನು ಪಡೆದುಕೊಳ್ಳುವ ಬಯಕೆ ಹೆಚ್ಚಾದೀತು.

ಕನ್ಯಾ ರಾಶಿ : ಅಪರಿಚಿತರಿಂದ ನಿಮ್ನ ಸಂಪತ್ತು ನಷ್ಟವಾಗುವುದು. ಕೆಲವರ ಮೇಲಿನ ದ್ವೇಷವು ಹೋಗದು. ಆಪ್ತರು ದುಷ್ಕೃತ್ಯಕ್ಕೆ ಪ್ರೇರಣೆ ಕೊಡಬಹುದು. ಇಂದು ನಿಮ್ಮ ಜೀವನಕ್ಕೆ ಸಂಬಂಧಿಸಿದ ಕೆಲವು ನಿರ್ಧಾರವನ್ನು ತೆಗೆದುಕೊಳ್ಳಬೇಕಾದೀತು. ಭವಿಷ್ಯದಲ್ಲಿ ನೀವು ಒಳ್ಳೆಯ ಫಲಿತಾಂಶವನ್ನು ಪಡೆಯುವಿರಿ. ಸಹೋದ್ಯೋಗಿಗಳ ಜೊತೆ ವೈಮನಸ್ಯ ಉಂಟಾಗಬಹುದು‌‌. ಬೇಡ ಮಾತುಗಳನ್ನು ನೀವು ಎಲ್ಲರೆದುರು ಪ್ರಸ್ತಾಪಿಸುವಿರಿ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳಲು ಓಡಾಡಬೇಕಾದೀತು. ನಿಮಗೆ ಆಗುವ ಸಹಾಯವನ್ನು ಮಾಡಿ.‌ ನೂತನ ದಾಂಪತ್ಯವು ಮಂದಗತಿಯಲ್ಲಿ ಸಾಗುವುದು. ನಿಮ್ಮ ರೋಗಕ್ಕೆ ವೈದ್ಯಕೀಯ ಚಿಕಿತ್ಸೆಯನ್ನು ಮಾಡಿಕೊಳ್ಳಿ. ಧಾರ್ಮಿಕ ಆಚರಣೆಗೆ‌ ಮನಸ್ಸಿದ್ದರೂ ಸಮಯದ ಅಭಾವದಿಂದ ಸಾಧ್ಯಬಾಗದು. ನಿಮ್ಮ ಭಾವನೆಗಳನ್ನು ಆಪ್ತರ ಜೊತೆ ಹಂಚಿಕೊಳ್ಳುವಿರಿ.

ತುಲಾ ರಾಶಿ : ಬಹಳ‌ ದಿನಗಳಲ್ಲಿ ಕೆಲಸಕ್ಕಾಗಿ ಪ್ರಯತ್ನಿಸಿ ನೀವು ಕೊನೆಗೂ ಕೆಲಸಕ್ಕೆ ಸೇರಿಕೊಳ್ಳುವಿರಿ. ಆಪ್ತರು ನಿಮಗೆ ಆತಿಥ್ಯವನ್ನು ಕೊಡಿಸುವರು. ಇಂದು ವಿದ್ಯಾರ್ಥಿಗಳಿಗೆ ಪ್ರಶಂಸೆ ಸಿಗುವುದು. ಪರೀಕ್ಷೆಯ ಫಲಿತಾಂಶವು ನಿಮಗೆ ಸಂತೋಷವನ್ನು ಕೊಡುವುದು. ನೀವು ಉದ್ಯೋಗವನ್ನು ಬದಲಾಯಿಸಲು ಕಷ್ಟವಾದೀತು. ನಿಮ್ಮ ಅಸಂಬದ್ಧ ಯೋಚನೆಗಳನ್ನು ಕಡಿಮೆ ಮಾಡಿಕೊಳ್ಳಿ. ಭೂಮಿಯ ವಿಚಾರದಲ್ಲಿ ನಷ್ಟವಾಗಿ ತೊಂದರೆ ಪಡುವಿರಿ. ಮನಸ್ಸಿನ ನಿಯಂತ್ರಣದಲ್ಲಿ ನಿಮಗೆ ಕಷ್ಟವಾದೀತು. ಹಣದ ದುರ್ಬಳಕೆಯನ್ನು ತಪ್ಪಿಸಿಕೊಳ್ಳಿ. ಕುಟುಂಬದ ತೊಡಕುಗಳನ್ನು ಸೂಕ್ಷ್ಮವಾಗಿ ಪರಿಹರಿಸಿಕೊಳ್ಳಿ. ಕಲಾವಿದರು ಗೌರವವನ್ನು ಪಡೆದುಕೊಳ್ಳುವರು. ಇನ್ನೊಬ್ಬರಿಗೆ ಸಹಾಯವನ್ನು ಮಾಡುವ ಆಸೆಯು ಇರುವುದು. ನಿಮ್ಮ ಅಮೂಲ್ಯ ವಸ್ತುನ್ನು ಕಳೆದುಕೊಳ್ಳುವಿರಿ. ಇಂದಿನ ವ್ಯವಹಾರವನ್ನು ಸಂಗಾತಿಗೆ ಬಿಟ್ಟುಕೊಡುವಿರಿ. ಹಣದ ಉಳಿತಾಯದಿಂದ ಖುಷಿಯಾಗುವುದು.

ವೃಶ್ಚಿಕ ರಾಶಿ : ಅಧಿಕಾರವು ಸಿಕ್ಕಿ‌ ಮನಸ್ಸಿನಲ್ಲಿ ಆಹ್ಲಾದವೂ ಇರುವುದು. ಕೆಲವರಿಂದ ಬರಬೇಕಾದ ಹಣವು ಬರಲಿದೆ. ಇಂದಿನ ನಿಮ್ಮ ಕಾರ್ಯವೇ ಗೌರವವನ್ನು ಹೆಚ್ಚು ಮಾಡುವುದು. ನಿಮ್ಮ ಸಂಗಾತಿಯ ಜೊತೆ ನಿಮ್ಮ ಸಂಬಂಧವು ಹಿಂದಿಗಿಂತ ಗಟ್ಟಿಯಾಗುವುದು. ನೀವು ಇಂದು ದೊಡ್ಡ ಖರೀದಿಯನ್ನು ಮಾಡಲು ತೀರ್ಮಾನಿಸಿದ್ದೀರಿ. ವಿದ್ಯಾಭ್ಯಾಸದ ಕಾರಣಕ್ಕೆ ಮನೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಸಾಲ ಕೊಟ್ಟ ಹಣವು ನಿಮಗೆ ಮರಳಿಬರುವುದು. ನಿಮಗೆ ಸಂಸ್ಥೆಯನ್ನು ಮುನ್ನಡೆಸುವ ಹೊಣೆಗಾರಿಕೆ ಸಿಗಲಿದೆ. ಇಂದು ಇನ್ನೊಬ್ಬರ ನೋವಿಗೆ ಸ್ಪಂದಿಸಲು ಆಗದು. ಹಳೆಯ ವಾಹನದ ಮಾರಾಟವನ್ನು ಮಾಡುವಿರಿ. ನೀವು ತೆಗೆದುಕೊಂಡ ತೀರ್ಮಾನವನ್ನು ಇತರರು ಬದಲಿಸಿದ್ದು ನಿಮ್ಮ ಕೋಪ ಬರುವುದು. ನಿಮ್ಮ ಕೆಲಸಕ್ಕೆ ಕುಟುಂಬ ಬೆಂಬಲವು ಪೂರ್ಣವಾಗಿ ಸಿಗದು. ವ್ಯಾಪಾರದಲ್ಲಿ ಅಲ್ಪ ಲಾಭಕ್ಕೆ ತೃಪ್ತಿ. ಇಂದು ಎಲ್ಲರ ಜೊತೆ ಬೆರೆಯಬೇಕಾದೀತು.

-ಲೋಹಿತಶರ್ಮಾ – 8762924271 (what’s app only)

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ