Horoscope: ದಿನಭವಿಷ್ಯ, ಈ ರಾಶಿಯವರು ಇಂದು ಆಕರ್ಷಕ ಮಾತಿಗೆ ಮನಸೋತು ಪ್ರೀತಿಯಲ್ಲಿ ಬೀಳಲಿದ್ದಾರೆ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್ 26) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಭರಣೀ, ಯೋಗ: ಪರಿಘ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 04:35 ರಿಂದ 05:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:20 ರಿಂದ 01:45ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:10 ರಿಂದ 04:35ರ ವರೆಗೆ.
ಸಿಂಹ ರಾಶಿ: ಮಾತಿಗೆ ತಪ್ಪುವ ಸಾಧ್ಯತೆ ಇದೆ. ಬೇಕಾದ ವಸ್ತುವೇ ನಿಮ್ಮಿಂದ ಕಣ್ಮರೆಯಾದೀತು. ವಿರಾಮ ಮನಃಸ್ಥಿಯಲ್ಲಿ ಇರುವ ನಿಮಗೆ ಕೆಲಸವು ಬರಬಹುದು. ಊಹಿಸದೇ ಇರುವ ಕಡೆಯಿಂದ ನಿಮಗೆ ಬೇಕು ಎನಿಸಿದ ಸಂಪತ್ತು ದೊರೆಯುವುದು. ಇದು ನಿಮಗೆ ಇಂದಿನ ಅಚ್ಚರಿಯ ವಿಚಾರವೇ ಆಗಲಿದೆ. ಉದ್ಯೋಗದಲ್ಲಿ ಹೆಚ್ಚುಗಾರಿಕೆ ಇರುವುದು. ತಾಳ್ಮೆಯಿಂದ ಕಾರ್ಯವನ್ನು ಮಾಡಿ. ನೂತನ ಸ್ನೇಹವನ್ನು ಬೆಳೆಸಿಕೊಳ್ಳುವಿರಿ. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ. ವಿದೇಶದ ಪ್ರಯಾಣಕ್ಕೆ ಆಯಾಸವು ಆಯಾಸವು ಅಡ್ಡಿಬರಬಹುದು. ದೇಹವನ್ನು ದಂಡಿಸುವ ಅನಿವಾರ್ಯತೆ ಇರಲಿದೆ. ಆಕರ್ಷಕ ಮಾತಿಗೆ ಮನಸೋತು ಪ್ರೀತಿಯಲ್ಲಿ ಬೀಳುವಿರಿ. ಮನೋರಂಜನೆಗೆ ಸಮಯವನ್ನು ಹೊಂದಿಸಿಕೊಳ್ಳುವಿರಿ. ಕಷ್ಟವೆಂದು ಸಿಕ್ಕ ಕೆಲಸವನ್ನು ಬಿಡುವಿರಿ. ಯಾರಿಗಾದರೂ ಏನಾದರೂ ಹೇಳಬೇಕೆಂದಿದ್ದರೆ ನೇರವಾಗಿ ಹೇಳಿ.
ಕನ್ಯಾ ರಾಶಿ: ಸಂಗಾತಿಯ ಸಲಹೆಯಿಂದ ತೊಂದರೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಮನಸ್ಸಿನ ಬೇಸರವನ್ನು ಜಾಣ್ಮೆಯಿಂದ ದೂರ ಮಾಡಿಕೊಳ್ಳುವಿರಿ. ಮುಖವನ್ನು ಗಂಟು ಹಾಕಿಕೊಂಡು ಇರುವುದು ನಿಮ್ಮಿಂದ ಜನರನ್ನು ದೂರವಿರಿಸುವುದು. ನಿಮ್ಮಲ್ಲಿರುವ ಅಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ಇಂದಿನ ನಿಮ್ಮ ಮಾರಾಟದಿಂದ ಅಧಿಕಲಾಭವೂ ಆಗದು. ನಿಮ್ಮ ವ್ಯಕ್ತಿತ್ವಕ್ಕೆ ಕಳಂಕವನ್ನು ಬಳಿಯಬಹುದು. ಬೆನ್ನಿನ ನೋವು ನಿಮ್ಮ ಕಾರ್ಯಗಳ ಏಕಾಗ್ರತೆಯನ್ನು ಕೆಡಿಸೀತು. ಉದ್ಯೋಗಕ್ಕೆ ವಿರಾಮ ಹೇಳಿ ಹೊರಗೆ ಸುತ್ತಾಟವನ್ನು ಮಾಡುವಿರಿ. ಎಲ್ಲ ಕಾರ್ಯವನ್ನೂ ನೀವೇ ಮಾಡಬೇಕು ಎಂಬ ಹೆಬ್ಬಯಕೆ ಬೇಡ. ಮೋಜಿಗಾಗಿ ಹಣವನ್ನು ಖರ್ಚು ಮಾಡಬೇಕಾದೀತು. ಕೂಡಿಟ್ಟ ಹಣವನ್ನು ನೀವು ಬಿಡಿಸಿಕೊಳ್ಳುವ ಅನಿವಾರ್ಯತೆಯು ಬಂದೀತು.
ತುಲಾ ರಾಶಿ: ದಾಂಪತ್ಯದ ವಿರಸವನ್ನು ನೀವೇ ಖುದ್ದಾಗಿ ಬಗೆಹರಿಸಿಕೊಳ್ಳುವುದು ಸೂಕ್ತ. ಭೂಮಿಗೆ ಸಂಬಂಧಿಸಿದ ವಿವಾದವು ಮತ್ತೆ ಹೆಚ್ಚಾದೀತು. ಇಂದು ನೀವು ತೋರಿಕೆಗೆ ಬಹಳ ಶಾಂತರಂತೆ ಕಂಡರೂ ಒಳಗೇ ಜ್ವಾಲಗ್ನಿಯಂತೆ ಉರಿಯುತ್ತಿರುವಿರಿ. ಎಲ್ಲ ವಿಚಾರದಲ್ಲಿಯೂ ಅಸಮಾಧನವು ಇರಲಿದೆ. ಅತಿಯಾದ ಒತ್ತಡವು ನಿಮ್ಮ ದಕ್ಷತೆಯನ್ನು ಕಡಿಮೆ ಮಾಡುವುದು. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲವು ಕೆಲಸವನ್ನು ಮರೆಯುವಿರಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಬೇಕು ಎಂದು ಅನ್ನಿಸುವುದು. ನಿಮ್ಮ ಉತ್ತಮ ಹವ್ಯಾಸವು ಪ್ರಯೋಜನಕ್ಕೆ ಬಂದೀತು. ಇಂದು ಖರೀದಿಸಿದ ಹೊಸ ವಸ್ತುಗಳು ನಿಮಗೆ ಬಹಳ ಖುಷಿಯನ್ನು ಕೊಡುವುದು. ವೃತ್ತಿಯಲ್ಲಿ ನಿಮ್ಮನ್ನು ಗುರುತಿಸಿರುವುದು ಮನಸ್ಸನ್ನು ಹಿಗ್ಗಿಸಿರುವುದು. ಯಾರೋ ಆಡಿದ ನಕಾರಾತ್ಮಕ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಬೇಡ.
ವೃಶ್ಚಿಕ ರಾಶಿ: ಅನಿರೀಕ್ಷಿತ ವಾರ್ತೆಯು ನಿಮ್ಮನ್ನು ಸ್ತಬ್ಧ ಮಾಡಬಹುದು. ಕುಟುಂಬವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊರಬೇಕಾದೀತು. ಮೇಲಿಂದ ಮೇಲೆ ಬೀಳವ ಘಾತದಿಂದ ಮನಸ್ಸು ದುರ್ಬಲವಾಗಬಹುದು. ಯಾವ ಹೊಸತನ್ನೂ ಸ್ವೀಕರಿಸುವ ಮಾನಸಿಕತೆ ಇಂದು ಇರದು. ಎಲ್ಲ ವಿಚಾರಕ್ಕೂ ನಿಮ್ಮ ಮೌನಮುದ್ರೆಯು ಒತ್ತಿರುವುದು. ಹೂಡಿಕೆಯನ್ನು ಹಿಂಪಡೆಯುವ ಸಾಧಿಸುವಿರಿ ಇದೆ. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ. ಯಾರನ್ನೋ ನಂಬಿ ಹಣಕಾಸಿನ ವ್ಯವಹಾರವನ್ನು ಮಾಡುವಿರಿ. ತೊಂದರೆಯಾದೀತು. ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆ ಸ್ಪಂದನ ಇರದು. ಅಶುಭವಾದ ಕೆಲಸಕ್ಕೆ ಗೊತ್ತಿಲ್ಲದೇ ನೀವು ಹಣವನ್ನು ನೀಡುವಿರಿ. ಬಂಧುಗಳ ಮಾತಿಂದ ಸಿಟ್ಟಾದರೂ ತೋರಿಸಲು ಹೋಗುವುದಿಲ್ಲ. ಕೃಷಿಯ ಕಾರ್ಯದಲ್ಲಿ ಉತ್ಸಾಹವು ಇರದು.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ