Horoscope: ರಾಶಿಭವಿಷ್ಯ, ಈ ರಾಶಿಯವರು ಸದಾ ಅನ್ಯರ ಬಗ್ಗೆ ಆಲೋಚನೆ ಮಾಡುವುದನ್ನು ಬಿಡಿ

| Updated By: Rakesh Nayak Manchi

Updated on: Nov 26, 2023 | 12:45 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 26) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯವರು ಸದಾ ಅನ್ಯರ ಬಗ್ಗೆ ಆಲೋಚನೆ ಮಾಡುವುದನ್ನು ಬಿಡಿ
ಪ್ರಾತಿನಿಧಿಕ ಚಿತ್ರ
Image Credit source: iStock Photo
Follow us on

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಭರಣೀ, ಯೋಗ: ಪರಿಘ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 04:35 ರಿಂದ 05:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:20 ರಿಂದ 01:45ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:10 ರಿಂದ 04:35ರ ವರೆಗೆ.

ಧನು ರಾಶಿ: ತಂದೆಯ ಮಾತು ಕಿರಿಕಿರಿ‌ ಎನಿಸಬಹುದು. ನಿಮ್ಮ ಇಂದಿನ ಪ್ರಯಾಣವು ಯಶಸ್ವಿಯಾಗಿದೇಹೋದೀತು. ಉದ್ಯಮಕ್ಕೆ ಸಂಬಂಧಿಸಿದ ಸರಿಯಾದ ನಿರ್ಧಾರವನ್ನು ಯಾರಿಂದಲಾದರೂ ಪಡಡಸುಕೊಳ್ಳಿ. ನಿಮ್ಮ ಚಾಂಚಲ್ಯದ ಸ್ಥಿತಿಗೆ ಸಿಟ್ಟಾಗಬಹುದು. ಆಹಾರದ ಮಾರಾಟದಿಂದ ಲಾಭ ಸಿಗುವುದು. ಇಂದು ಬರುವ ಹಣದ ಆಧಾರದ ಮೇಲೆ ನೀವು ಯಾವ ವ್ಯವಹಾರವನ್ನೂ ಮಾಡುವುದು ಬೇಡ. ವಾಹನವನ್ನು ಚಾಲಾಯಿಸುವಾಗ ಅನೇಕ ಸಕಾರಾತ್ಮಕ ಯೋಚನೆಗಳು ಇರಲಿ. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗೊಂದಲಗಳು ಬರುವುದು. ಸ್ವತಂತ್ರವಾದ ಆಲೋಚನೆಯು ಇಲ್ಲದೇ ಹೋದರೆ ಕಷ್ಟವಾದೀತು‌‌. ಕಛೇರಿಯಲ್ಲಿ ನಿಮ್ಮ ಶ್ರಮಕ್ಕೆ ಮೆಚ್ಚುಗೆ ಸಿಗಲಿದೆ‌. ಮನೆ ಕೆಲಸಕ್ಕೆ ಆಲಸ್ಯವು ಇರುವುದು. ಸಮಾರಂಭದಲ್ಲಿ ಅನಿರೀಕ್ಷಿತ ಗೌರವವು ನಿಮಗೆ ಪ್ರಾಪ್ತವಾಗುವುದು. ನಿಮ್ಮ‌ ನಿಷ್ಠೆಯು ಎಂದಿನಂತೆ ಇರಲಿದೆ.

ಮಕರ ರಾಶಿ: ಗೌರವವನ್ನು ಕೊಟ್ಟು ಅದನ್ನು ಪಡೆಯುವುದು ಸೂಕ್ತ. ನಿಮ್ಮೆದುರೇ ನಿಮ್ಮ‌ ಬಗ್ಗೆ ಮಾತನಾಡಬಹುದು. ಉದ್ಯೋಗದ ಸ್ಥಳದಲ್ಲಿ ಉತ್ಸಾಹವು ಹೆಚ್ಚಿರಲಿದೆ. ಸಮಯೋಚಿತ ಸಲಹೆಯಿಂದ ಬರುವ ತೊಂದರೆಯು ದೂರಾಗುವುದು. ಪಾಲುದಾರಿಕೆಯಲ್ಲಿ ಕಲಹವಾಗುವ ಸಾಧ್ಯತೆ ಇದೆ. ಪತ್ರವ್ಯವಹಾರವು ಸಂಪೂರ್ಣ ಪ್ರಾಮಾಣಿಕವಾಗಿ ಇರದು ಎಂಬುದು ಗಮನದಲ್ಲಿ ಇರಲಿ. ನಿಮ್ಮ ಉದ್ಯೋಗವನ್ನು ನೀವು ಪ್ರೀತಿಸುವಿರಿ. ಕೇಳಿಕೊಂಡು ಬಂದವರಿಗೆ ನಿಮ್ಮಿಂದ ಅಲ್ಪ ಸಹಾಯ ಸಿಗುವುದು. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು. ಸಹೋದ್ಯೋಗಿಗಳ ವರ್ತನೆಯಿಂದ ಸಿಟ್ಟಾಗುವ ಸಾಧ್ಯತೆ ಇದೆ. ಭೋಗವಸ್ತುಗಳನ್ನು ಖರೀದಿ ಮಾಡುವಿರಿ. ಇವತ್ತಿಗೆ ತುರ್ತಾಗಿ ಬೇಕಾದುದನ್ನು ಸ್ನೇಹಿತರಿಂದ ಪಡೆದುಕೊಳ್ಳುವಿರಿ. ನೀವು ಇಂದು ವಿಶೇಷ ಲಕ್ಷ್ಯವನ್ನು ಇಟ್ಟುಕೊಂಡು ಕೆಲಸವನ್ನು ಮಾಡಬೇಕಾದೀತು. ಮಾತಿನಿಂದ ಎಲ್ಲರನ್ನೂ ಗೆಲ್ಲುವಿರಿ.

ಕುಂಭ ರಾಶಿ: ಬಂಧುಗಳಿಂದ ನೀವು ದೂರವಾಗುವಿರಿ. ಸದಾ ಅನ್ಯರ ಬಗ್ಗೆ ಆಲೋಚನೆ ಮಾಡುವುದನ್ನು ಬಿಡಿ. ನೆರೆಹೊರೆಯವರ ವಿಚಾರದಲ್ಲಿ ಸಣ್ಣ ಅಸಮಾಧಾನ ಇರಲಿದೆ. ದೇಹಕ್ಕೆ ತೊಂದರೆ ಮಾಡಿಕೊಳ್ಳುವ ಸನ್ನಿವೇಶವಿರಲಿದೆ. ಮನೆಯ ಬದಲಾವಣೆಯನ್ನು ಮಾಡುವಿರಿ. ಯಾರಿಂದಲೂ ಆರ್ಥಿಕ ಸಹಾಯವು ಸಿಗದೇ ಕಷ್ಟವಾದೀತು. ನಿಮ್ಮ ಕೆಲಸವೇ ನಿಮ್ಮ ತಿಳಿಸಲಿ. ಮನಸ್ಸು ಚಂಚಲವಾಗಿ ಕೆಲಸವು ಸೂಚಿಸದು. ಚರ ಆಸ್ತಿಯನ್ನು ಮಾರಾಟ ಮಾಡಿ ಹಣದ ಗಳಿಸುವಿರಿ. ನಿಮಗೆ ಸಂಬಂಧಿಸದ ವಿಚಾರದಲ್ಲಿ ಮಧ್ಯಸ್ತಿಕೆ ಬೇಡ. ಇದರಿಂದ ಅಪಮಾನವು ಆಗುವುದು. ನಿಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಮಸ್ಯೆಯಾಗಬಹುದು. ಇಂದು ಭೀತಿಯು ಇರಲಿದ್ದು ಮನೆಯನ್ನು ಬಿಟ್ಟು ಹೋಗಲಾರಿರಿ. ಎಲ್ಲಿಗೂ ಹೋಗಲು ಮನಸ್ಸಾಗದು. ಶುಭಾವಾರ್ತೆಯಿಂದ ಖುಷಿ ಇರುವುದು. ದೂರದಲ್ಲಿರುವ ಮಕ್ಕಳನ್ನು ಕಾಣಲು ಹೋಗುವಿರಿ.

ಮೀನ ರಾಶಿ: ಹಣಕಾಸಿನ ವಿಚಾರದಲ್ಲಿ ಅಸಮಾಧನಾ ಇರಲಿದ್ದು, ಇದರಕ್ಕಾಗಿ ಮನೆಯಲ್ಲಿ ಕಲಹವಾಗಬಹುದು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ತೊಂದರೆ ಆಗಲಿದ್ದು ಮನಸ್ಸು ವಿಚಲಿತವಗಲಿದೆ. ಮಿತ್ರರು ನಿಮಗೆ ಸಹಕಾರ ನೀಡಲಾರರು. ಸಾಲ ಮಾಡುವ ಸಂದರ್ಭವನ್ನು ತಂದುಕೊಳ್ಳುವುದು ಬೇಡ. ಮಕ್ಕಳ‌ ವಿವಾಹದ ವಿಚಾರವನ್ನು ಎಲ್ಲಿಯೂ ಪ್ರಸ್ತಾ‌ಪ ಮಾಡುವುದು ಬೇಡ. ಪ್ರಯಾಣದಲ್ಲಿ ಜಾಗರೂಕತೆ ಇರಲಿ. ನಿಮಗೆ ಇಂದು ಸಂಗಾತಿಯ ಮೇಲೆ ಪ್ರೀತಿ ಹೆಚ್ಚಾಗಿದ್ದು ದೂರದ ಊರಿನಿಂದ ನೋಡಲು ಹೋಗುವಿರಿ. ಪ್ರೇಮವು ಯಾರಿಂದಲೋ ಬಹಿರಂಗವಾಗುವುದು. ಮಹಿಳಾ ಉದ್ಯೋಗಿಗಳು ಹೆಚ್ಚಿನ ಸ್ಥಾನವನ್ನು ಪಡೆಯುವಿರಿ. ಯಾರನ್ನೂ ದೂರುವ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ. ನಿಮ್ಮ ಮಾತಿನಿಂದ ತಾಯಿಗೆ ಬೇಸರವಾಗಲಿದೆ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ