ರಾಶಿಭವಿಷ್ಯ, ನಿಮ್ಮ‌ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳುವರು

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 30, 2023 | 12:45 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 30) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

ರಾಶಿಭವಿಷ್ಯ, ನಿಮ್ಮ‌ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳುವರು
ಪ್ರಾತಿನಿಧಿಕ ಚಿತ್ರ
Follow us on

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣರಾಜ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಶುಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 41 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:21 ರಿಂದ 01:46ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:06 ಗಂಟೆ 09:31 ನಿಮಿಷಕ್ಕೆ, ಗುಳಿಕ ಕಾಲ ಬೆಳಗ್ಗೆ 10:56 ರಿಂದ 12:21ರ ವರೆಗೆ.

ಧನು ರಾಶಿ : ಹೇಳಿದ್ದಷ್ಟನ್ನೇ ಮಾಡುವ ನಿಮ್ಮ ಸ್ವಭಾವವು ಕೆಲವರಿಗೆ ಇಷ್ಟವಾಗದೇ ಹೋಗುವುದು. ಉದ್ಯೋಗವು ಎಣಿಸಿಕೊಂಡಷ್ಟು ಸರಳವಾಗಿ ಇರದು. ಆರ್ಥಿಕತೆಯು ನಿಮ್ಮ ಕೈ ಮೀರಿ, ಖರ್ಚುಮಾಡಬೇಕಾದೀತು. ಸ್ವಂತ ಬುದ್ಧಿಯಿಂದ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ನಿಮ್ಮ ಇಂದಿನ ಮಾತು ಕೇಳುಗರಿಗೆ ಹೃದ್ಯವಾಗುವುದು. ಅಗ್ನಿಯ ಭೀತಿಯು ನಿಮಗೆ ಅಧಿಕವಾಗಿ ಕಾಡುವುದು. ಮೊದಲು ಆರ್ಥಿಕ ಲಾಭವನ್ನು ನಿರೀಕ್ಷಿಸದೇ ಕಾರ್ಯವನ್ನು ಆರಂಭಿಸಿ. ಆದುದರ ಬಗ್ಗೆ ಆಲೋಚಿಸಿ ಪ್ರಯೋಜನವಿಲ್ಲ. ಮಕ್ಕಳನ್ನು ತಿದ್ದುವುದು ನಿಮಗೆ ಕಷ್ಟವಾದೀತು. ನಿಮ್ಮ‌ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳುವರು. ಹತ್ತಾರು ವಿಚಾರವು ನಿಮ್ಮ ತಲೆಯಲ್ಲಿ ಓಡಾಡುವುದು. ಯಾವುದೇ ನಿರ್ಧಾರಕ್ಕೆ ಬರುವುದು ಸಾಧ್ಯವಾಗದು. ಗೊಂದಲು ಹೆಚ್ಚಿರುವುದು. ಗಂಭೀರವಾದ ಚಿಂತನೆಯನ್ನು ಮಾಡಲು ಮನಸ್ಸು ಸ್ತಿಮಿತದಲ್ಲಿ ಇರದು. ಸಮಾರಂಭದಲ್ಲಿ ಆಪ್ತರ ಭೇಟಿಯಾಗಲಿದೆ. ಹಳೆಯ ಗೆಳತಿಯು ಭೇಟಿಯಾಗಲಿದೆ.

ಮಕರ ರಾಶಿ : ನಿಮ್ಮ ವ್ಯಾಪಾರಕ್ಕೆ ವಿದೇಶದ ಸಂಪರ್ಕವು ಸಿಗಲಿದೆ. ತಮ್ಮದೇ ಸಣ್ಣ ಉದ್ಯಮದಿಂದ ಸ್ತ್ರೀಯರು ಹಣವನ್ನು ಗಳಿಸಬಹುದು. ಭೂಮಿಯ ವಿಚಾರವು ಇತ್ಯರ್ಥವಾಗಿ ಮನಸ್ಸಿಗೆ ಸಮಾಧಾನವಾಗಲಿದೆ. ಕೆಲವು ತೊಂದರೆಗಳನ್ನು ನೀವಾಗಿಯೇ ತಂದುಕೊಳ್ಳಲಿದ್ದೀರಿ. ಉಚಿತವಾದ ಸ್ಥಾನವು ಇಂದು ನಿಮಗೆ ಸಿಗಬಹುದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗುವುದು. ಆಹಾರವು ಸರಿಯಾಗಿ ಸಿಗದೇ ನಿಮಗೆ ಸಂಕಟವಾಗಬಹುದು. ದುಡಿಮೆಯ ಬೆನ್ನೇರಿ ಸಂಬಂಧಗಳನ್ನು ಸಡಿಲಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಒಮ್ಮನಸ್ಸು ಬರುವುದು ಕಷ್ಟವಾಗುವುದು. ಖಾಸಗಿ ಸಂಸ್ಥೆಯು ನಿಮ್ಮ ಕಾರ್ಯಕ್ಕೆ ಉನ್ನತ ಸ್ಥಾನವನ್ನು ಕೊಡುವುದು. ಯಾರಿಂದಲೂ ನಿರೀಕ್ಷಿಸುವುದು ಬೇಡ. ಪ್ರಯೋಜನವಾಗದು. ನಿಮ್ಮ ಮತ್ತು ನೌಕರರ ನಡುವಿನ ಸಂಬಂಧವು ಚೆನ್ನಾಗಿರದು. ಸಣ್ಣ ವಿಚಾರಗಳಿಂದ ಸಂಗಾತಿಯ ನಡುವೆ ವೈಮನಸ್ಯ ಉಂಟಾಗುವುದು.

ಕುಂಭ ರಾಶಿ : ನೇರ ನುಡಿಯು ನಿಮಗೆ ಉಚಿತವಲ್ಲ. ಮಾತನ್ನು ಆಡಬೇಕಾದ ಸಂದರ್ಭದಲ್ಲಿ ಆಡಿ. ಎಲ್ಲದಕ್ಕೂ ಮಾತನಾಡುವುದು ಬೇಡ. ಉದ್ಯೋಗದ ಕಾರಣಕ್ಕೆ ಮಾಡಿದ ಪ್ರಯಾಣದಿಂದ ಆಯಾಸವಾಗುವುದು. ಆರ್ಥಿಕ ತೊಂದರೆಯನ್ನು ನೀವು ಮನೆಯಲ್ಲಿ ಹೇಳಿಕೊಳ್ಳುವಿರಿ. ಬಂಧುಗಳಿಂದ ಕೆಲಸವು ಹಾಳಾಗಬಹುದು. ಕಾನೂನಿಗೆ ವಿದ್ಧವಾದ ಕಾರ್ಯವನ್ನು ಸಮರ್ಥಿಸಿಕೊಳ್ಳುವಿರಿ. ಸಂಗಾತಿಯ ಮಾತುಗಳು ಘಟನೆಯಿಂದ ನಿಮಗೆ ಬಹಳ ಬೇಸರ ತರಿಸಬಹುದು. ಯಾವುದೇ ಫಲಾಪೇಕ್ಷೆ ಇಲ್ಲದೇ ಸ್ನೇಹಿತರನ್ನು ಸಂಪಾದಿಸಿಕೊಳ್ಳುವಿರಿ. ಮುಂಗೋಪವವನ್ನು ನೀವೇ ಬಲವಂತವಾಗಿ ಕಡಿಮೆ ಮಾಡಿಕೊಳ್ಳುವಿರಿ. ಇಂದಿನ ನಿಮ್ಮ ವ್ಯವಹಾರವು ಎಂದಿಗಿಂತ ಹೆಚ್ಚು ಚೆನ್ನಾಗಿ ಆಗಲಿದೆ. ಹೂಡಕೆಯ ಹಣದಲ್ಲಿ ತೊಡಕಾಗಬಹುದು. ಸರ್ಕಾರದಿಂದ ಬರುವ ಹಣವು ಬಾರದು.

ಮೀನ ರಾಶಿ : ಇಂದು ಹೊಸ ಉದ್ಯಮದ ಬಗ್ಗೆ ಚಿಂತಿಸಿ ಸ್ಪಷ್ಟ ನಿರ್ಧಾರಕ್ಕೆ ಬರುವಿರಿ. ರೋಗವು ಹೆಚ್ಚಾಗುವ ಸಾಧ್ಯತೆ ಇದೆ. ಯಾರಾದರೂ ನಿಮ್ಮನ್ನು ಎಚ್ಚರಿಸುವರು. ನಿಮ್ಮ ಬಗ್ಗೆ ಸರಿಯಾಗಿ ತಿಳಿಹೇಳುವರು. ದೇಹಾಯಾಸದಿಂದ ಕಷ್ಟವಾಗಲಿದೆ. ಇಂದು ನೀವು ದೇವರ ಆರಾಧನೆಯಲ್ಲಿ ಮಗ್ನರಾಗುವಿರಿ. ಸಿಟ್ಟಾಗುವ ಸ್ಥಿತಿಯಲ್ಲಿಯೂ ನೀವು ಶಾಂತರಾಗುವಿರಿ. ಮನೆಯ ಕೆಲಸವೆಲ್ಲವೂ ಹಾಗೆಯೇ ಇರಿಸಿಕೊಂಡು ಬಂಧುಗಳ ಮನೆಗೆ ಹೋಗಲಿದ್ದೀರಿ. ರಕ್ಷಣಾವಿಭಾಗದ ಮುಖ್ಯಸ್ಥರಾಗುವ ಸಾಧ್ಯತೆ ಇದೆ. ಉದ್ಯಮದಲ್ಲಿ ಆದಾಯವನ್ನು ಹೆಚ್ಚಿಸಲು ನೌಕರರ ಜೊತೆ ಮಾತನಾಡುವಿರಿ. ಮನೆಯ ಕಾರ್ಯವನ್ನು ಸರಿದೂಗಿಸುವು ನಿಮಗೆ ಕಷ್ಟ ಎನಿಸಬಹುದು. ಕಟ್ಟಡವನ್ನು ನಿರ್ಮಾಣದವರಿಗೆ ದೊಡ್ಡ ಯೋಜನೆ ಸಿಗಲಿದೆ. ತಾಳ್ಮೆಯ ಅವಶ್ಯಕತೆ ಹೆಚ್ಚು ಕಾಣಿಸುವುದು.

-ಲೋಹಿತಶರ್ಮಾ – 8762924271 (what’s app only)