Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 14ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 14ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 14ರ ದಿನಭವಿಷ್ಯ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Apr 14, 2023 | 5:12 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 14ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಉದ್ಯೋಗ ಸ್ಥಳದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ಅಲ್ಲಿ ಅನುಸರಿಸುವ ಕೆಲವು ಪದ್ಧತಿಗಳನ್ನು ಬದಲಾವಣೆ ಮಾಡುವುದಕ್ಕೆ ಯೋಜನೆ ರೂಪಿಸುವ ಸಾಧ್ಯತೆ ಇದೆ. ಇತರರ ವೈಯಕ್ತಿಕ ವಿಚಾರದ ಬಗ್ಗೆ ಈ ಹಿಂದೆ ನೀವು ಮಾತನಾಡಿದ್ದು ಈಗ ನಿಮಗೆ ಪಶ್ಚಾತ್ತಾಪ ಮೂಡುವಂತೆ ಮಾಡಬಹುದು. ತಂದೆಯವರು, ತಂದೆ ಸಮಾನರಾದವರ ಆರೋಗ್ಯ ವಿಚಾರ ಚಿಂತೆಗೆ ಗುರಿ ಆಗುವಂತೆ ಮಾಡುತ್ತದೆ. ಹಣಕಾಸಿನ ಅಗತ್ಯ ಹೆಚ್ಚು ಕಂಡುಬರಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಈ ದಿನ ನೀವಾಗಿಯೇ ಕೆಲವು ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳಲಿದ್ದೀರಿ. ದೊಡ್ಡ ಗುಂಪುಗಳ ಮಧ್ಯೆ ಮಾತನಾಡುವ ಸಂದರ್ಭಗಳಲ್ಲಿ ಉತ್ಸಾಹದಿಂದಲೋ ಉದ್ವೇಗದಿಂದಲೋ ಹೇಳಿದ ವಿಚಾರಗಳಿಂದ ಸಮಸ್ಯೆಗಳು ಎದುರಾಗಬಹುದು. ಹೋಟೆಲ್ ಉದ್ಯಮದಲ್ಲಿ ಇರುವಂಥವರು ವಿಸ್ತರಣೆಗಾಗಿ ಯೋಜನೆ ರೂಪಿಸುವ ಸಾಧ್ಯತೆ ಇದೆ. ಮಕ್ಕಳ ಭವಿಷ್ಯ, ಶಿಕ್ಷಣ, ವಿವಾಹಕ್ಕಾಗಿ ಹೊಂದಿಸುವುಕ್ಕಾಗಿ ಸಾಲಕ್ಕೆ ಪ್ರಯತ್ನಿಸುತ್ತಿರುವವರಿಗೆ ಅನುಕೂಲ ಆಗಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ದೈಹಿಕವಾಗಿ, ಮಾನಸಿಕವಾಗಿ ವಿಶ್ರಾಂತಿ ಪಡೆಯುವುದು ಬಹಳ ಅಗತ್ಯ ಎಂದೆನಿಸುತ್ತದೆ. ತವರು ಮನೆಯ ಸಂಗತಿಗಳು ಹೆಣ್ಣುಮಕ್ಕಳಿಗೆ ಚಿಂತೆಗೆ ಕಾರಣ ಆಗಲಿದೆ. ಆದಾಯ ಹೆಚ್ಚಳ ಮಾಡಿಕೊಳ್ಳಬೇಕು ಎಂಬ ಕಾರಣಕ್ಕೆ ಹೊಸದಾಗಿ ಸ್ವ ಉದ್ಯೋಗಗಳನ್ನು ಆರಂಭ ಮಾಡುವುದಕ್ಕೆ ಯೋಜನೆ ರೂಪಿಸುವ ಸಾಧ್ಯತೆ ಇದೆ. ಉಷ್ಣ ಬಾಧೆ ಇರುವಂಥವರು ಆರೋಗ್ಯದ ಕಡೆಗೆ ಹೆಚ್ಚಿನ ಗಮನವನ್ನು ವಹಿಸಬೇಕಾಗುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಭಾವನಾತ್ಮಕ ವಿಚಾರಗಳು ಈ ದಿನ ಮುನ್ನೆಲೆಗೆ ಬರಲಿವೆ. ನೀವು ಹೇಳಬೇಕಾದ್ದನ್ನು ಮುಲಾಜಿಲ್ಲದೆ ಹೇಳುವುದು ಬಹಳ ಕಷ್ಟವಾಗಲಿದೆ. ನಿಮ್ಮ ಬಲ ಎಂದೆನಿಸಿಕೊಂಡ ಕೆಲವು ನಿರ್ಧಾರಗಳು ಸಹಾಯಕ್ಕೆ ಬರಲಿವೆ. ಹೊಸದಾಗಿ ಏನನ್ನಾದರೂ ಕಲಿಯುವುದಕ್ಕೆ ಆರಂಭಿಸುತ್ತಿದ್ದೀರಿ ಎಂದಾದರೆ ಮಾಮೂಲಿಗಿಂತ ಹೆಚ್ಚಿನ ಶ್ರಮ ಹಾಕುವುದು ಅತ್ಯಗತ್ಯ. ಭೂಮಿ, ವಾಹನ, ದೊಡ್ಡ ಸರಕುಗಳ ಸಾಗಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮುಂಚಿತವಾಗಿ ಇದು ನಿಮ್ಮ ಶ್ರಮವನ್ನು ಎಷ್ಟು ನಿರೀಕ್ಷಿಸುತ್ತದೆ ಎಂಬ ಲೆಕ್ಕಾಚಾರ ಹಾಕಿಕೊಳ್ಳಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನಿಮ್ಮ ಬಳಿ ಇರುವ ಹಣವೆಷ್ಟು ಹಾಗೂ ಅದಕ್ಕೆ ಎಂಥ ಯೋಜನೆ ರೂಪಿಸಿಕೊಳ್ಳಬಹುದು ಎಂಬ ಬಗ್ಗೆ ಲಕ್ಷ್ಯ ನೀಡಿ. ಜಠರಕ್ಕೆ ಸಂಬಂಧಿಸಿದ ಅನಾರೋಗ್ಯ ಸಮಸ್ಯೆಗಳು ಈಗಾಗಲೇ ಕಾಡುತ್ತಿದೆ ಎಂದಲ್ಲಿ ಸೂಕ್ತವಾದ ವೈದ್ಯರನ್ನು ಭೇಟಿ ಆಗಿ, ಚಿಕಿತ್ಸೆ ಪಡೆಯುವುದರ ಕಡೆಗೆ ಗಮನ ನೀಡಿ. ನೀವು ಈಗಾಗಲೇ ಮಾಡಿರುವ ಹೂಡಿಕೆ ಅಂದುಕೊಂಡ ಮಟ್ಟದಲ್ಲಿ ಪ್ರತಿಫಲವನ್ನು ನೀಡುತ್ತಿಲ್ಲ ಎಂಬ ಕಾರಣಕ್ಕೆ ಅದನ್ನು ಬೇರೆಡೆ ಹೂಡುವ ಬಗ್ಗೆ ಆಲೋಚನೆ ಮಾಡಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಶುಭ ಕಾರ್ಯಗಳಲ್ಲಿ, ಗೆಟ್ ಟು ಗೆದರ್ ಅಥವಾ ಪಾರ್ಟಿಗಳಲ್ಲಿ ಭಾಗೀ ಆಗುವಂಥ ಯೋಗ ಇದೆ. ಮನೆಯ ದುರಸ್ತಿಗೆ, ಪೀಠೋಪಕರಣ, ಎಲೆಕ್ಟ್ರಿಕಲ್ ವಸ್ತುಗಳ ಖರೀದಿಗೆ ಖರ್ಚು ಮಾಡುವಂಥ ಯೋಗ ಇದೆ. ಆದಾಯವನ್ನು ಹೆಚ್ಚು ಮಾಡಿಕೊಳ್ಳುವ ಬಗ್ಗೆ ಗಂಭೀರವಾದ ಆಲೋಚನೆ ಮಾಡಲಿದ್ದೀರಿ. ಪೌರೋಹಿತ್ಯ, ಜ್ಯೋತಿಷ್ಯ, ದೇವಸ್ಥಾನ ಪಾರುಪತ್ತೆದಾರರಾಗಿ ಇರುವವರಿಗೆ ಹೊಸ ಜವಾಬ್ದಾರಿಗಳು ಹುಡುಕಿಕೊಂಡು ಬರಲಿವೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ನೀವು ನಿರೀಕ್ಷೆಯೇ ಮಾಡದ ರೀತಿಯಲ್ಲಿ ಗೌರವಾದರಗಳು ನಿಮಗೆ ದೊರೆಯಲಿವೆ. ಕೆಲಸ ಮಾಡುತ್ತಿರುವ ಸ್ಥಳದಲ್ಲಿ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುವಾಗ ನಿಮ್ಮ ಅಭಿಪ್ರಾಯವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಎಲ್ಲರನ್ನೂ ಸಮಾಧಾನ ಮಾಡುತ್ತೀನಿ ಎಂಬ ಲೆಕ್ಕಾಚಾರ ಹಾಕಿಕೊಳ್ಳುತ್ತಾ ನಿಮ್ಮೊಳಗೆ ಅಸಮಾಧಾನ ಉದ್ಭವಿಸಲಿದೆ. ಈ ದಿನ ಷಣ್ಮುಖನ ಸ್ಮರಣೆ, ಧ್ಯಾನ ಅಥವಾ ಆರಾಧನೆಯನ್ನು ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಕೆಲಸದ ಒತ್ತಡವೋ ಅಥವಾ ಏಕ ಕಾಲಕ್ಕೆ ಹಲವು ಜವಾಬ್ದಾರಿಗಳು ನಿರ್ವಹಿಸ ಬೇಕಾಗುವುದರಿಂದ ಕೆಲವು ಮುಖ್ಯವಾದ ಅಂಶಗಳನ್ನು ಮರೆತುಬಿಡುವ ಸಾಧ್ಯತೆ ಇದೆ. ಆದ್ದರಿಂದ ಆದ್ಯತೆಯ ಮೇಲೆ ಯಾವ ಕೆಲಸವನ್ನು ಮೊದಲಿಗೆ ಹಾಗೂ ಆ ನಂತರದಲ್ಲಿ ಮಾಡುವುದು ಯಾವುದು ಎಂಬ ಬಗ್ಗೆ ಪಟ್ಟಿಯೊಂದನ್ನು ಮಾಡಿಟ್ಟುಕೊಂಡು ಬಿಡಿ. ಆಪ್ತರೊಬ್ಬರ ಸಣ್ಣ ಮಟ್ಟಿನ ಅನಾರೋಗ್ಯ ಕೂಡ ನಿಮಗೆ ತೀವ್ರ ತರವಾದ ಆತಂಕವನ್ನು ಮೂಡಿಸಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಲೆಕ್ಕ, ಸಂಶೋಧನೆ ಅಥವಾ ವಿಶ್ಲೇಷಣೆಯಂಥ ಉದ್ಯೋಗದಲ್ಲಿ ಇರುವವರು ನಿಮಗೆ ವಹಿಸಿದ ಜವಾಬ್ದಾರಿಯನ್ನು ಮುಗಿದಿದೆ ಎಂದು ಹೇಳುವ ಮುಂಚೆ ಒಂದಕ್ಕೆ ನಾಲ್ಕು ಬಾರಿ ಪರೀಕ್ಷಿಸಿಕೊಳ್ಳಿ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರಿಂದ ಮತ್ತೊಮ್ಮೆ ಪರಿಶೀಲನೆ ಮಾಡಿಸುವುದು ಉತ್ತಮ ನಿರ್ಧಾರ ಎನಿಸಿಕೊಳ್ಳುತ್ತದೆ. ಮಹಿಳೆಯರು ಉದ್ಯೋಗಕ್ಕಾಗಿ ಪ್ರಯತ್ನವನ್ನು ಪಡುತ್ತಾ ಇದ್ದಲ್ಲಿ ಈ ದಿನ ಅವಕಾಶಗಳ ಬಗ್ಗೆ ಸ್ನೇಹಿತರು ಅಥವಾ ಸಂಬಂಧಿಕರ ಮೂಲಕ ಮಾಹಿತಿ ದೊರೆಯುತ್ತದೆ.

ಲೇಖನ- ಎನ್‌.ಕೆ.ಸ್ವಾತಿ

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ