Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 16ರ ದಿನಭವಿಷ್ಯ

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 16ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 16ರ ದಿನಭವಿಷ್ಯ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Apr 16, 2023 | 5:25 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 16ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಪ್ರೇಮಿಗಳಿಗೆ ವಿರಹದ ದಿನವಾಗಿರುತ್ತದೆ. ಮೂರನೇ ವ್ಯಕ್ತಿಗಳ ಮಾತಿನಿಂದ ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ- ಮನಸ್ತಾಪಗಳು ಎದುರಾಗಬಹುದು.ಇಷ್ಟಪಡುವ ಊಟ- ತಿಂಡಿ ಮಾಡುವ ಯೋಗ ಇದೆ. ಹಣ ಉಳಿತಾಯ ಯೋಜನೆ ಬಗ್ಗೆ ಸಂಗಾತಿ ಜತೆ ಚರ್ಚೆ ನಡೆಸಲಿದ್ದೀರಿ. ಸಮಯಕ್ಕೆ ಸರಿಯಾಗಿ ಊಟ- ತಿಂಡಿ ಮಾಡಿ. ಇಲ್ಲದಿದ್ದರೆ ಗ್ಯಾಸ್ಟ್ರಿಕ್ ಸಮಸ್ಯೆ ಆಗಬಹುದು. ಎಲ್ಲ ವಿಚಾರಕ್ಕೂ ಅನುಮಾನ ಪಡುವುದು ಸರಿಯಲ್ಲ. ದೂರ ಪ್ರಯಾಣ ಮಾಡುವಾಗ ಸರಿಯಾದ ಸಿದ್ಧತೆಗಳನ್ನು ಮಾಡಿಕೊಂಡು ಹೋಗಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮಗೆ ಎಷ್ಟೇ ಹತ್ತಿರದವರು ಹೇಳಿದರೂ ಯಾವುದೇ ಕಾರಣಕ್ಕೂ ಹೇಳಿಕೆ ಮಾತುಗಳನ್ನು ಕೇಳಬೇಡಿ. ನಿಮ್ಮ ಮೂಲಕ ಇತರರು ತಮ್ಮ ಗುರಿ ಸಾಧನೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಾರೆ. ನಿಮ್ಮ ಹೆಸರು, ವರ್ಚಸ್ಸು ದುರುಪಯೋಗ ಆಗದಂತೆ ಮೇಲಧಿಕಾರಿಗಳು ತಮ್ಮ ಮನಸ್ಸಿನಲ್ಲಿರುವ ವಿಚಾರ ನಿಮಗೆ ಹೇಳುತ್ತಿಲ್ಲ ಎಂಬುದು ನಿಮ್ಮ ಗಮನಕ್ಕೆ ಬರುತ್ತದೆ. ಮಾತಿನ ಮೇಲೆ ನಿಗಾ ಇರಬೇಕು. ಇಲ್ಲದಿದ್ದರೆ ಅನಗತ್ಯ ವಿವಾದ ಆಗಬಹುದು. ಕಾರಣವೇ ಇಲ್ಲದೆ ನಿಮ್ಮ ಮನಸ್ಸಿಗೆ ಇಂದು ಬೇಸರ ಕಾಡಲಿದೆ. ನಿಮಗೆ ಗೊತ್ತಿಲದ ವಿಚಾರದ ಬಗ್ಗೆ ಮಾತನಾಡದಿರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ದಿನಸಿ ಮಾರಾಟ, ಸಿಮೆಂಟ್ ಮಾರಾಟ ಹಾಗೂ ಉಕ್ಕಿನ ಮಾರಾಟದಂಥ ಸ್ವಂತ ವ್ಯವಹಾರ ಮಾಡುವವರಿಗೆ ಏಳ್ಗೆ ಇದೆ. ಹೊಸದಾಗಿ ಹೂಡಿಕೆಯನ್ನು ಮಾಡಿ, ವ್ಯಾಪಾರ ವಿಸ್ತರಣೆಯನ್ನು ಮಾಡುವುದಕ್ಕೆ ಆಲೋಚನೆ ಮಾಡಲಿದ್ದೀರಿ. ನಿಮ್ಮಲ್ಲಿ ಕೆಲಸವರಿಗೆ ಕಿರು ಪ್ರಯಾಣ ಮಾಡುವ ಯೋಗ ಇದೆ. ವಾಹನ ಖರೀದಿ ಬಗ್ಗೆ ಮನೆಯಲ್ಲಿ ಚರ್ಚೆ ನಡೆಸಲಿದ್ದೀರಿ. ಸಾಲ ಮಾಡಬೇಕಾದ ಸ್ಥಿತಿ ನಿರ್ಮಾಣ ಆಗುತ್ತದೆ. ಮನೆಗೆ ಗೃಹಾಲಂಕಾರ ವಸ್ತುಗಳನ್ನು ಖರೀದಿ ಮಾಡುವ ಯೋಗ ಇದೆ. ಆದರೆ ಹಾಸಿಗೆ ಇದ್ದಷ್ಟು ಕಾಲು ಚಾಚಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಸ್ವಂತ ವ್ಯವಹಾರ ಮಾಡುವವರಿಗೆ, ಉದ್ಯಮಗಳನ್ನು ನಡೆಸುವವರಿಗೆ ಆದಾಯದಲ್ಲಿನ ಇಳಿಕೆ ಚಿಂತೆಗೆ ಕಾರಣ ಆಗಬಹುದು. ಹೆಣ್ಣುಮಕ್ಕಳ ಸಲುವಾಗಿಯೇ ಸಾಲ ಮಾಡಬೇಕಾಗಬಹುದು. ತಂದೆ- ತಾಯಿಗಳ ಮಾತಿಗೆ ಗೌರವ ನೀಡಿ. ಕಫ, ಶೀತ, ಜ್ವರದಂಥ ಆರೋಗ್ಯ ಸಮಸ್ಯೆಗಳು ಕಾಡಬಹುದು. ಒಲ್ಲದ ಮನಸಿನಿಂದಲೇ ಕೆಲವು ಕೆಲಸಗಳನ್ನು ಮಾಡಬೇಕಾಗಬಹುದು. ನಿಮಗೆ ಸಂಬಂಧಪಡದ ವಿಷಯಗಳನ್ನು ತಲೆಗೆ ಹಾಕಿಕೊಂಡು ಚಿಂತೆ ಮಾಡದಿರಿ. ಹೊಸ ವಾಹನಗಳ ಖರೀದಿಗೆ ಹಣ ಹೊಂದಾಣಿಕೆಗೆ ಹೆಚ್ಚಿನ ಪ್ರಯತ್ನ ಮಾಡಲಿದ್ದೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಆಹಾರ- ನೀರು ಸೇವನೆ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರುವುದು ಉತ್ತಮ. ಪ್ರಮುಖವಾದ ಕೆಲಸಗಳು ಹಾಗೂ ಜವಾಬ್ದಾರಿಯುತವಾದ ನಿಮ್ಮ ಕೆಲಸವನ್ನು ನೀವೇ ಮಾಡಿಕೊಳ್ಳುವುದು ಉತ್ತಮ. ಇನ್ನೊಬ್ಬರಿಗೆ ವಹಿಸಿದ ಜವಾಬ್ದಾರಿ ಮೇಲೆ ಅತಿಯಾದ ನಿರೀಕ್ಷೆ ಬೇಡ. ಮಾನಸಿಕ ನೆಮ್ಮದಿ ಹಾಳಾಗುತ್ತದೆ. ಆಪ್ತರ ಬಗ್ಗೆ ಅನುಮಾನ ಪಡುವುದು ಸರಿಯಲ್ಲ. ವಾಹನ ಚಾಲನೆ ಮಾಡುವವರು ಎಚ್ಚರಿಕೆಯಿಂದ ಇರಬೇಕು.ಆದ್ದರಿಂದ ಯಾವುದೇ ವಿಚಾರದಲ್ಲಿ ಆತುರ ಬೇಡ. ಹೊಸ ಬಟ್ಟೆ, ಗ್ಯಾಜೆಟ್ ಖರೀದಿಸುವ ಯೋಗ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಮನೆಯಲ್ಲಿ ಅಗತ್ಯ ಇರುವ ದುರಸ್ತಿ, ನವೀಕರಣದ ಕೆಲಸಗಳನ್ನು ಮಾಡಿಸಲು ಹೆಚ್ಚಿನ ಶ್ರಮ ಹಾಕಲಿದ್ದೀರಿ. ವೈದ್ಯರು, ಚಾರ್ಟರ್ಡ್ ಅಕೌಂಟೆಂಟ್ ಗಳು, ವಕೀಲರಿಗೆ ಖರ್ಚಿನ ಪ್ರಮಾಣ ಹೆಚ್ಚಾಗಲಿದೆ. ಸ್ನೇಹಿತರು, ಸಂಬಂಧಿಕರನ್ನು ಭೇಟಿ ಆಗಲಿದ್ದೀರಿ. ಹೂಡಿಕೆ ಬಗ್ಗೆ ಆಲೋಚನೆ ಮಾಡಲಿದ್ದೀರಿ. ರುಚಿಕಟ್ಟಾದ ಊಟ- ತಿಂಡಿ ಮಾಡುವ ಯೋಗ ಇದೆ. ಹೊಸಬರ ಜತೆ ಸಾಂಸಾರಿಕ ವಿಚಾರಗಳನ್ನು ಹಂಚಿಕೊಳ್ಳಬೇಡಿ. ನಿಮ್ಮ ವೈಯಕ್ತಿಕ ವಿಚಾರಗಳನ್ನು ವಿರೋಧಿಗಳು ಬೇಕೆಂತಲೇ ಎಳೆದು ತಂದು, ಅವಮಾನ ಮಾಡಲು ಪ್ರಯತ್ನಿಸಲಿದ್ದಾರೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಅಡಿಕೆ ಕೃಷಿಕರಿಗೆ ಮನೆಯಲ್ಲಿ ಸಂತೋಷವಾದ ದಿನ. ಸ್ವಂತ ವ್ಯವಹಾರ ಮಾಡುವಂಥವರು ಹೊಸ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸುವಿರಿ. ಹೊಸದಾಗಿ ಕೆಲಸಕ್ಕೆ ತೆಗೆದುಕೊಳ್ಳಲು ತೀರ್ಮಾನ ಮಾಡಲಿದ್ದೀರಿ. ಉದ್ಯೋಗಸ್ಥರು ಪ್ರಮುಖ ಸಭೆ, ಚರ್ಚೆ ಸಂದರ್ಭದಲ್ಲಿ ನೇರವಾದ ಮಾತುಗಳಿಂದ ಇತರರ ಗಮನ ಸೆಳೆಯುತ್ತೀರಿ. ಪ್ರಮುಖವಾಗಿ ಮಾಡಿ ಮುಗಿಸಬೇಕಾದ ಕೆಲಸವನ್ನು ಇಂದು ಮಾಡಲಿಕ್ಕಾಗದೆ ಸ್ವಲ್ಪ ಮಟ್ಟಿಗೆ ದೇಹಾಲಸ್ಯ ಇರುತ್ತದೆ. ಅದಕ್ಕಾಗಿ ವಿಶ್ರಾಂತಿ ಪಡೆಯಲಿದ್ದೀರಿ. ವೃತ್ತಿಪರರಿಗೆ ಹಿನ್ನಡೆ ಇದೆ. ಪಾರ್ಟಿಗಳಿಗೆ ಆಹ್ವಾನ ಬರಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಇತರರು ನಿಮ್ಮ ಮೇಲೆ ಇಟ್ಟಿರುವ ನಿರೀಕ್ಷೆಯು ಭಾರವಾಗಿ ಪರಿಣಮಿಸಲಿದೆ. ಸಂಸಾರದಲ್ಲಿ ಭಿನ್ನಾಭಿಪ್ರಾಯ ಏರ್ಪಡಬಹುದು. ಮಕ್ಕಳ ಶಿಕ್ಷಣದ ವಿಚಾರಕ್ಕೆ ಚಿಂತೆ ಎದುರಾಗಲಿದೆ. ಈಗಾಗಲೇ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅದು ಅರ್ಧದಲ್ಲಿ ನಿಂತುಬಿಡುವ ಸಾಧ್ಯತೆ ಇದೆ. ಇತರರ ಮಾತನ್ನು ನಂಬಿ, ನಿರ್ಧಾರ ಕೈಗೊಳ್ಳಬೇಡಿ. ವರ್ಗಾವಣೆಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಪ್ರಭಾವಿಗಳ ನೆರವು ದೊರೆಯಲಿದೆ. ರಾಜಕಾರಣಿಗಳಿಗೆ ಹೊಸ ಜವಾಬ್ದಾರಿಗಳು ಹುಡುಕಿಕೊಂಡು ಬರಲಿವೆ. ಶಿವನ ಆರಾಧನೆ ಮಾಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಅನಾರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡಬಹುದು. ಅದರಲ್ಲೂ ಸ್ಥೂಲಕಾಯ ಇದ್ದು, ಮಧುಮೇಹ, ರಕ್ತದೊತ್ತಡ ಸಮಸ್ಯೆ ಇರುವವರು ಬಹಳ ಎಚ್ಚರಿಕೆಯಿಂದ ಇರಬೇಕು. ಇತರರು ನೀಡುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಬೆಂಕಿಯ ಮುಂದೆ ಹಾಗೂ ಎತ್ತರದ ಸ್ಥಳಗಳಲ್ಲಿ ಕೆಲಸ ಮಾಡಬೇಕು ಎಂದಿರುವವರು ಏಕಾಗ್ರತೆಯಿಂದ ಕೆಲಸ ಮಾಡಿ. ಸಣ್ಣ ಪುಟ್ಟ ಅಪಘಾತ ಆಗುವ ಸಾಧ್ಯತೆ ಇದೆ. ವಾಹನಗಳು ಬಳಸುವಾಗ ಅದರ ಬ್ರೇಕ್ ಇತ್ಯಾದಿ ಸರಿಯಾಗಿ ಇದೆಯೇ ಎಂದು ಪರೀಕ್ಷಿಸಿಕೊಳ್ಳಿ. ಆದ್ಯತೆ ಮೇಲೆ ಕೆಲಸ- ಕಾರ್ಯಗಳನ್ನು ಪೂರ್ಣಗೊಳಿಸಿ.

ಲೇಖನ- ಎನ್‌.ಕೆ.ಸ್ವಾತಿ

ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?