AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 18ರ ದಿನಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 18ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 18ರ ದಿನಭವಿಷ್ಯ 
ಸಾಂದರ್ಭಿಕ ಚಿತ್ರImage Credit source: freepick.com
Ganapathi Sharma
|

Updated on: Apr 18, 2023 | 5:18 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 18ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮ ಸ್ವಂತ ವಿಚಾರದಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳುವುದಕ್ಕೆ ನಿರ್ಧರಿಸಲಿದ್ದೀರಿ. ಕೆಲಸ ಆಗುವ ತನಕ ಒಂದು ರೀತಿ ಇದ್ದು, ಆ ನಂತರ ಜನರು ಬದಲಾಗುತ್ತಿದ್ದಾರೆ ಎಂದು ಬಲವಾಗಿ ನಿಮಗೆ ಅನಿಸುವುದಕ್ಕೆ ಶುರುವಾಗುತ್ತದೆ. ಒಂದೇ ಕಡೆ ಹಾಗೂ ಒಂದೇ ರೀತಿಯಲ್ಲಿ ಆಲೋಚನೆ ಮಾಡುತ್ತಿದ್ದ ನೀವು ಇದೀಗ ನಾಲ್ಕೂ ಕಡೆಯ ಸಾಧ್ಯತೆಗಳನ್ನು ಅಳೆದು- ತೂಗಿ ನೋಡುವುದಕ್ಕೆ ಆರಂಭಿಸುತ್ತೀರಿ. ವಿದ್ಯಾರ್ಥಿಗಳ ಮೇಲೆ ಅಪವಾದ ಬರುವ ಸಾಧ್ಯತೆ ಇದೆ, ಎಚ್ಚರಿಕೆ ಬೇಕು. ಮಹಿಳೆಯರಿಗೆ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದಲ್ಲಿ ಶುಭ ಸುದ್ದಿ ಇದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಯಾರದೋ ಸಮಸ್ಯೆಗೆ ನೀವೇ ತಲೆ ಕೊಡುವಂಥ ಸ್ಥಿತಿ ಉದ್ಭವಿಸಲಿದೆ. ಸುಖಾಸುಮ್ಮನೆ ಆಕ್ಷೇಪಗಳು, ನಿಮ್ಮ ಬಗ್ಗೆ ಸಲ್ಲದ ಸಂದೇಹದ ಮಾತುಗಳನ್ನು ಕೇಳಿಸಿಕೊಳ್ಳಬೇಕಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಬಿಡುವೇ ದೊರೆಯದಷ್ಟು ಕೆಲಸಗಳು ಮೈ ಮೇಲೆ ಬೀಳಲಿವೆ. ಕಣ್ಣಿನ ಪೊರೆ, ಕೆಂಪಾಗುವುದು, ನೀರು ಸೋರುವುದು ಸೇರಿದಂತೆ ಕಣ್ಣಿಗೆ ಸಂಬಂಧಿಸಿದ ಒಂದಲ್ಲ ಒಂದು ಸಮಸ್ಯೆಯನ್ನು ನೀವು ಎದುರಿಸಲಿದ್ದೀರಿ. ದೂರದ ಸಂಬಂಧಿಕರು ಕಾರ್ಯ ನಿಮಿತ್ತ ನಿಮ್ಮನ್ನು ಭೇಟಿ ಆಗುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಊರವರ ಮದುವೆಗೆಲ್ಲ ನನ್ನದೇ ಪೌರೋಹಿತ್ಯ ಎನ್ನುವ ಹಾಗೆ ನಿಮ್ಮ ಹೆಚ್ಚುಗಾರಿಕೆಯನ್ನು ಹೇಳಿಕೊಂಡು, ನಯಾಪೈಸೆ ಲಾಭ- ವಯಕ್ತಿಕವಾಗಿ ಉಪಯೋಗವೇ ಆಗದ ಕೆಲಸಗಳನ್ನು ಮೈ ಮೇಲೆ ಹಾಕಿಕೊಳ್ಳಲಿದ್ದೀರಿ. ಇಂದಿನ ಕೆಲಸದ ಒತ್ತಡದ ಮಧ್ಯೆ ಸಮಯಕ್ಕೆ ಸರಿಯಾಗಿ ಊಟ- ತಿಂಡಿ ಮಾಡುವುದು ಸಹ ಕಷ್ಟ ಆಗಲಿದೆ. ದೈವಾನುಗ್ರಹದಿಂದ ನೀವು ಈಗಾಗಲೇ ಕೊಟ್ಟಿರುವ ಹಣವೊಂದು ವಾಪಸ್ ಬರುವುದಕ್ಕೆ ಸಾಧ್ಯತೆ ಇದ್ದು, ಅದಕ್ಕಾಗಿ ನೀವು ಬಹಳ ಗಟ್ಟಿಯಾದ ಪ್ರಯತ್ನವನ್ನೇ ಮಾಡಬೇಕು.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮ ಬಗ್ಗೆ ಯಾರು, ಏನು ಹೇಳಿದರು ಎಂಬುದನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ. ಡಿಜಿಟಲ್ ಸ್ವತ್ತು, ಷೇರು ಮಾರುಕಟ್ಟೆಯಲ್ಲಿ ದಲ್ಲಾಳಿಗಳಾಗಿ ಕಾರ್ಯ ನಿರ್ವಹಿಸುತ್ತಾ ಇರುವವರಿಗೆ ಪರಿಚಯದ ಮೂಲಕ ಹೊಸ ಕ್ಲೈಂಟ್ ದೊರೆಯುವ ಅವಕಾಶಗಳು ಹೆಚ್ಚಿವೆ. ಪ್ರಚಾರಕ್ಕಾಗಿ, ಮಾರ್ಕೆಟಿಂಗ್, ಜಾಹೀರಾತು ಇತ್ಯಾದಿಗಳಿಗೆ ಖರ್ಚು ಮಾಡಲಿದ್ದೀರಿ. ಮಾರ್ಕೆಟಿಂಗ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾ ಇರುವವರಿಗೆ ಹೊಸ ಸವಾಲುಗಳು ಎದುರಾಗುತ್ತವೆ. ಹೊಸ ಕ್ಷೇತ್ರದಲ್ಲಿ ಹಣ ತೊಡಗಿಸುವ ಬಗ್ಗೆ ಚಿಂತಿಸುತ್ತೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನಿಮ್ಮ ಸಾಮರ್ಥ್ಯವನ್ನು ಇತರರು ಅರಿಯುವಂಥ ದಿನ ಇದು. ಒಂದು ವೇಳೆ ಮೇಲಧಿಕಾರಿಗಳು ನಿಮಗೆ ಯಾವುದಾದರೂ ಜವಾಬ್ದಾರಿ ವಹಿಸಿದಲ್ಲಿ ಆಸಕ್ತಿಯಿಂದ ಮಾಡಿ. ಎಲ್ಲರನ್ನೂ ಬಿಟ್ಟು, ಎಲ್ಲ ಕೆಲಸ ನನಗೇ ಅಂಟಿಹಾಕುತ್ತಾರೆ ಎಂಬ ಆಲೋಚನೆ, ಧೋರಣೆಯನ್ನು ಮನಸ್ಸಿನಿಂದ ಕಿತ್ತು ಹಾಕಿ. ಕೈ ಬೆರಳುಗಳ ಬಗ್ಗೆ ಜೋಪಾನದಿಂದ ಇರಬೇಕು. ಕೈ ಬೆರಳುಗಳು ಕುಯ್ದು ಹೋಗುವ, ಉಗುರು ಸುತ್ತು ಆಗುವ ಅಥವಾ ಬಿಸಿ ವಸ್ತು ಅಥವಾ ಬೆಂಕಿಗೆ ತಗುಲಿ ಗಾಯವಾಗುವಂಥ ಅಪಾಯ ಇದೆ. ಆದ್ದರಿಂದ ಎಚ್ಚರಿಕೆಯಿಂದ ಇರಬೇಕು.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಎಲ್ಲ ಮುಗಿದೇ ಹೋಯಿತು ಎಂದು ಕೈ ಚೆಲ್ಲಿದ್ದ ವಿಷಯಗಳು ಈಗ ಜೀವ ಪಡೆದುಕೊಳ್ಳುತ್ತವೆ. ಹೊಸ ಭರವಸೆಗಳು ಹುಟ್ಟುತ್ತವೆ. ಮಧ್ಯವರ್ತಿಗಳ ನೆರವಿನಿಂದ ಕೆಲವು ಒಪ್ಪಂದ, ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆಗಳು ಹೆಚ್ಚುತ್ತವೆ. ಸ್ವಂತ ವ್ಯಾಪಾರ- ವ್ಯವಹಾರ ಮಾಡಿಕೊಂಡಿರುವವರಿಗೆ ಬಹಳ ಮುಖ್ಯವಾದ ದಿನ ಇದು. ಆದಾಯ ಮೂಲವನ್ನು ಹೆಚ್ಚಿಸಿಕೊಳ್ಳುವುದಕ್ಕೆ ಪ್ರಯತ್ನಗಳನ್ನು ತೀವ್ರಗೊಳಿಸುತ್ತೀರಿ. ಹಿತೈಷಿಗಳ ನೆರವಿನಿಂದ ಹೂಡಿಕೆಯನ್ನು ಹೆಚ್ಚು ಮಾಡುವುದರ ಬಗ್ಗೆ ಆಲೋಚನೆ ಮಾಡಲಿದ್ದೀರಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಇತರರ ಬಗ್ಗೆ ನೀವು ತೋರಿಸುವ ಅಂತಃಕರಣ, ಮಮಕಾರ, ಪ್ರೀತಿ ಇಂಥವು ಹಲವು ಪಟ್ಟುಗಳು ಅಧಿಕವಾಗಿ ನಿಮ್ಮ ಬಳಿಗೆ ಹಿಂತಿರುಗಲಿವೆ. ಸ್ನೇಹಿತರು ಯಾವುದಾದರೂ ಉದ್ಯೋಗ, ಪ್ರಾಜೆಕ್ಟ್ ಅಥವಾ ಬೇರೇನೇ ಹೊಸ ವಿಚಾರಗಳನ್ನು ಹೇಳಿದರೂ ಆ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಿ. ಇನ್ನು ವಿದೇಶಕ್ಕೆ ತೆರಳಬೇಕು ಎಂದಿರುವವರಿಗೆ ಸ್ವಲ್ಪ ಮಟ್ಟಿಗೆ ನಿರಾಸೆ ಕಾಡುವಂಥ ಸಾಧ್ಯತೆ ಇದೆ. ಇತರರ ಕಾರಣಕ್ಕೆ ಕುಟುಂಬ ಸದಸ್ಯರ ಜತೆಗೆ ಜಗಳವೋ ಮಾತು ಬಿಡುವುದೋ ಇಂಥದ್ದನ್ನು ಮಾಡಬೇಡಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಹೊಸ ಉದ್ಯೋಗಾವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಈ ಹಿಂದೆ ಯಾವಾಗಲೋ ಮಾಡಿ, ನೀವೇ ಮರೆತುಹೋಗಿದ್ದ ಕೆಲಸದ ಫಲಿತಾಂಶ ಎಂಬಂತೆ ಮೆಚ್ಚುಗೆಯ ಮಾತುಗಳು ಹಾಗೂ ಅವಕಾಶಗಳು ದೊರೆಯಲಿಕ್ಕೆ ದಾರಿ ಆಗಲಿದೆ. ಸ್ವಂತ ಮನೆ ಕಟ್ಟುತ್ತಿರುವವರಿಗೆ ಹಣಕಾಸಿನ ಸಮಸ್ಯೆಗಳು ಕಾಣಿಸಿಕೊಂಡಿದ್ದಲ್ಲಿ ಅದು ನಿವಾರಣೆ ಆಗಲಿದೆ. ಇತರರ ಕಷ್ಟಗಳಿಗೆ ಸ್ಪಂದಿಸಿ, ನೆರವಿನ ಹಸ್ತವನ್ನು ಚಾಚಲಿದ್ದೀರಿ. ರುಚಿಯೇ ಇರಬಹುದು, ಮಾತೇ ಇರಬಹುದು; ನಾಲಗೆಯ ಮೇಲೆ ಹತೋಟಿ ಸಾಧಿಸುವುದು ಮುಖ್ಯ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಸಂತಾನಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಉತ್ತಮವಾದ ಬೆಳವಣಿಗೆಗಳು ಗಮನಕ್ಕೆ ಬರಲಿವೆ. ಮನೆಯ ಹಿರಿಯರ ಸಲಹೆ ಅಥವಾ ಮಾರ್ಗದರ್ಶನವನ್ನು ಗಂಭೀರವಾಗಿ ಪರಿಗಣಿಸಿ. ಬ್ಯಾಂಕ್ ವ್ಯವಹಾರಗಳನ್ನು ಮಾಡುವಾಗ ಕಾಗದ- ಪತ್ರ ಹಾಗೂ ಸಹಿಗಳು ಸರಿಯಾಗಿವೆಯೇ ಎಂದು ಒಂದಕ್ಕೆ ನಾಲ್ಕು ಬಾರಿ ಪರೀಕ್ಷಿಸಿ. ಈ ದಿನ ನಿಮ್ಮ ಆತ್ಮಸ್ಥೈರ್ಯ ದೊಡ್ಡ ಮಟ್ಟದಲ್ಲಿ ಕೈ ಹಿಡಿಯಲಿದೆ. ನಿಮ್ಮದು ತಪ್ಪಿಲ್ಲ ಎಂದಾದಲ್ಲಿ ಯಾವುದೇ ವಿಚಾರವನ್ನು ಮಂಡಿಸುವುದಕ್ಕೆ ಹಿಂದಕ್ಕೆ ಹೆಜ್ಜೆ ಇಡಬೇಡಿ. ಹೊಸ ಕಲಿಕೆಗೆ ದಾರಿ ಆಗಲಿದೆ.

ಲೇಖನ- ಎನ್‌.ಕೆ.ಸ್ವಾತಿ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್