Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 20ರ ದಿನಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 20ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 20ರ ದಿನಭವಿಷ್ಯ 
ಪ್ರಾತಿನಿಧಿಕ ಚಿತ್ರImage Credit source: freepik
Follow us
ಗಂಗಾಧರ​ ಬ. ಸಾಬೋಜಿ
|

Updated on: Apr 20, 2023 | 5:15 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 20ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ವೃತ್ತಿಯ ಸಲುವಾಗಿ ಕೆಲವು ಸಲಕರಣೆ, ವಾಹನ ಖರೀದಿ ಮಾಡಬೇಕು ಎಂದು ತೀರ್ಮಾನ ಮಾಡಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ನಾನಾ ರೀತಿಯಲ್ಲಿ ಕಿರಿಕಿರಿ ಆಗಬಹುದು. ಮನೆಯಲ್ಲಿನ ಶುಭ ಕಾರ್ಯಗಳ ನೇತೃತ್ವವನ್ನು ನೀವೇ ವಹಿಸಿಕೊಳ್ಳಬೇಕಾಗುತ್ತದೆ. ಕೆಲಸದ ಒತ್ತಡದ ಕಾರಣಕ್ಕೆ ಸಮಯಕ್ಕೆ ಸರಿಯಾಗಿ ನಿಮ್ಮ ಆರೋಗ್ಯದ ಫಾಲೋ ಅಪ್ ಚೆಕಪ್ ಮಾಡಿಸುವುದಕ್ಕೆ ಸಾಧ್ಯವಾಗದೇ ಇರಬಹುದು. ಇಂಥ ಸಂಗತಿಗಳನ್ನು ನಿರ್ಲಕ್ಷ್ಯ ಮಾಡಬೇಡಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಆಹಾರ- ನೀರಿನ ಬಗ್ಗೆ ಗಮನ ವಹಿಸುವುದು ಮುಖ್ಯ ಆಗುತ್ತದೆ. ಬಹಳ ಕಾಲದಿಂದ ಮುಗಿಯದೆ ಉಳಿದಿದ್ದ ಕೆಲಸಗಳು ಈಗ ವೇಗ ಪಡೆದುಕೊಂಡು, ಪೂರ್ಣಗೊಳ್ಳುವ ಸಾಧ್ಯತೆಗಳು ನಿಚ್ಚಳವಾಗುತ್ತವೆ. ನಿಮಗೇ ಗೊತ್ತಿಲ್ಲದಂತೆ ನಿಮ್ಮ ಬಗ್ಗೆ ಒಳ್ಳೆ ಮಾತನಾಡುವ ಮೂಲಕ ವರ್ಚಸ್ಸು ಹೆಚ್ಚಾಗಲಿದೆ. ಅನಗತ್ಯ ವಾದ- ವಿವಾದಗಳು ಆಗುವ ಅವಕಾಶ ಇದೆ. ಸೋಷಿಯಲ್ ಮೀಡಿಯಾ, ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವವರು ಬಳಸುವ ಭಾಷೆ, ಆರಿಸಿಕೊಳ್ಳುವ ಪದಗಳಲ್ಲಿ ಜಾಗ್ರತೆಯಿಂದ ಇರಬೇಕು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಸಂತಾನಕ್ಕೆ ಪ್ರಯತ್ನ ಪಡುತ್ತಿದ್ದಲ್ಲಿ ಶುಭ ವಾರ್ತೆ ಕೇಳುವ ಯೋಗ ಇದೆ. ಮನೆ ಸದಸ್ಯರಿಂದ ಆರ್ಥಿಕ ಬೆಂಬಲ ದೊರೆಯಲಿದೆ. ಆಹಾರ- ನೀರಿನ ಬಗ್ಗೆ ಗಮನ ವಹಿಸುವುದು ಮುಖ್ಯ ಆಗುತ್ತದೆ. ಬಹಳ ಕಾಲದಿಂದ ಮುಗಿಯದ ಉಳಿದಿದ್ದ ಕೆಲಸಗಳು ಈಗ ವೇಗ ಪಡೆದುಕೊಂಡು, ಪೂರ್ಣಗೊಳ್ಳುವ ಸಾಧ್ಯತೆಗಳು ನಿಚ್ಚಳವಾಗುತ್ತವೆ. ನಿಮಗೇ ಗೊತ್ತಿಲ್ಲದಂತೆ ನಿಮ್ಮ ಬಗ್ಗೆ ಒಳ್ಳೆ ಮಾತನಾಡುವ ಮೂಲಕ ವರ್ಚಸ್ಸು ಹೆಚ್ಚಾಗಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಹೊಸ ಪೀರೋಪಕರಣಗಳು, ಎಲೆಕ್ಟ್ರಿಕ್, ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿ ಮಾಡುವಂಥ ಯೋಗ ಇದೆ. ಇದಕ್ಕಾಗಿ ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಿ ಎಂದಾದರೆ ಖರ್ಚಿನ ಮೇಲೆ ನಿಗಾ ಇಡಿ. ಪರಿಚಯಸ್ಥರ ಮನೆಗೆ ಹೋದಾಗ ವಿಪರೀತ ಸ್ವಾತಂತ್ರ್ಯ ತೆಗೆದುಕೊಂಡು ಎಲ್ಲೆಂದರಲ್ಲಿ ಓಡಾಡಬೇಡಿ. ಏಕೆಂದರೆ ಅಲ್ಲಿ ಏನಾದರೂ ವಸ್ತುಗಳು ಕಾಣೆಯಾದಲ್ಲಿ ನಿಮ್ಮ ಮೇಲೆ ಆರೋಪಗಳು ಬರುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನಮ್ಮ ಕೆಲಸಗಳನ್ನು ನಾವೇ ಮಾಡಬೇಕು, ಇನ್ನೊಬ್ಬರಿಗೆ ನಮ್ಮ ಕನಸುಗಳನ್ನು ಒಪ್ಪಿಸಬಾರದು ಎಂದು ಬಲವಾಗಿ ನಿಮಗೆ ಅನಿಸುವುದಕ್ಕೆ ಆರಂಭವಾಗುತ್ತದೆ. ಈ ಬದಲಾವಣೆ ಬರುವುದಕ್ಕೆ ನೀವು ಒಂದಿಷ್ಟು ಬೆಲೆಯನ್ನು ಸಹ ತೆರಬೇಕಾಗುತ್ತದೆ. ತುಂಬ ಮುಖ್ಯವಾದ ದಾಖಲೆ- ಪತ್ರಗಳನ್ನು ಸರಿಯಾಗಿ ಇಡುವಂತೆ ನಿಮಗೆ ಹೇಳಿದಲ್ಲಿ ಮಾಮೂಲಿಗಿಂತ ಹೆಚ್ಚು ಜಾಗ್ರತೆಯಿಂದ ಇರಿ. ಭೂಮಿ ಖರೀದಿಗಾಗಿಯೇ ಹಣಕಾಸು ಸಂಸ್ಥೆಗಳಲ್ಲಿ ಸಾಲ ಮಾಡುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಸ್ವಂತ ಕಚೇರಿಗೆ ಬದಲಾವಣೆ ಆಗಬಹುದು ಅಥವಾ ಇರುವ ಕಚೇರಿಯಿಂದ ಬೇರೆ ಕಚೇರಿಗೆ ಸ್ಥಳಾಂತರ ಆಗುವ ಯೋಗ ಇದೆ. ವಿದೇಶದಲ್ಲಿ ವ್ಯಾಸಂಗ ಮಾಡಬೇಕು ಎಂದು ಬ್ಯಾಂಕ್ ಲೋನ್ ಅಥವಾ ಬೇರೆ ಪ್ರಯಾಣ ಸಿದ್ಧತೆಯನ್ನು ನಡೆಸುತ್ತಿದ್ದಲ್ಲಿ ಅನುಕೂಲಗಳು ಒದಗಿಬರಲಿದೆ. ದೀರ್ಘ ಕಾಲದ ಗೆಳೆಯರ ಸಹಾಯ ಒದಗಿ ಬರಲಿದೆ. ಒಂದು ವೇಳೆ ಈ ಹಿಂದೆ ಕೆಲಸ ಮಾಡುತ್ತಿದ್ದು, ತಾತ್ಕಾಲಿಕ ಅಥವಾ ದೀರ್ಘ ವಿರಾಮ ಪಡೆದುಕೊಂಡಿದ್ದೀರಿ ಅಂತಾದರೆ ಮತ್ತೆ ಉದ್ಯೋಗ ಹುಡುಕುತ್ತಿರುವವರಿಗೆ ಶುಭ- ಅನುಕೂಲ ಇದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಹೊಸ ಕಾರು ಖರೀದಿ ಮಾಡಬೇಕು ಅಂದುಕೊಂಡಿರುವವರಿಗೆ ಹಣಕಾಸಿನ ಅನುಕೂಲ, ಮನೆಯಲ್ಲಿ ಕುಟುಂಬಸ್ಥರ ಬೆಂಬಲ ದೊರೆಯುವ ಸಾಧ್ಯತೆ ಇದೆ. ಕೆಲಸ ಬದಲಾವಣೆ ಮಾಡಬೇಕು ಅಂದುಕೊಂಡಿರುವವರಿಗೆ ಸ್ವಲ್ಪ ಮಟ್ಟಿಗೆ ಹಿನ್ನಡೆ ಆಗಬಹುದು. ದಾಕ್ಷಿಣ್ಯಕ್ಕೆ ಸಿಲುಕಿಕೊಂಡು ಒಪ್ಪಿಕೊಂಡ ಕೆಲಸ ಮುಗಿಸುವುದರೊಳಗೆ ಬಹಳ ಶ್ರಮ ಪಡಬೇಕಾಗುತ್ತದೆ. ಸಹಕಾರ ಸಂಘಗಳಲ್ಲಿ ಸಾಲಕ್ಕಾಗಿ ಪ್ರಯತ್ನ ಮಾಡುತ್ತಾ ಇದ್ದಲ್ಲಿ ಪ್ರಭಾವಿಗಳ ಶಿಫಾರಸು ದೊರೆತು, ಶೀಘ್ರ ಸಾಲ ಮಂಜೂರಾಗಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನಾನಾ ಸವಾಲುಗಳು ಎದುರಾಗಲಿವೆ. ಈ ಹಿಂದೆ ನೀವೇ ಆಡಿದ್ದ ಮಾತು ಅಥವಾ ಇನ್ನೊಬ್ಬರ ವಿಚಾರವಾಗಿ ಸಾರ್ವಜನಿಕವಾಗಿ ಮಂಡಿಸಿದ್ದ ಅಭಿಪ್ರಾಯಕ್ಕೆ ಈಗ ಆಕ್ಷೇಪಗಳು ವ್ಯಕ್ತ ಆಗುತ್ತವೆ. ದೇವತಾ ಕಾರ್ಯಗಳಿಗೆ ಹಣಕಾಸಿನ ದೇಣಿಗೆ ನೀಡಲಿದ್ದೀರಿ. ವಿನಾಕಾರಣದ ಪ್ರಯಾಣ ಮತ್ತು ಇದರಿಂದ ಅನಗತ್ಯವಾಗಿ ಖರ್ಚುಗಳು ಆಗಲಿವೆ. ಈ ಹಿಂದೆ ಮಾಡಿದ್ದ ಹೂಡಿಕೆಗೆ ಈಗ ಹೆಚ್ಚು ಲಾಭ ದೊರೆಯಲಿದೆ. ಬಂದ ಲಾಭದಿಂದ ಚಿನ್ನಾಭರಣಗಳನ್ನು ಖರೀದಿ ಮಾಡುವುದಕ್ಕೆ ನಿರ್ಧಾರ ಮಾಡಲಿದ್ದೀರಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಈಗಿನ ಕೆಲಸ ಬದಲಾವಣೆ ಮಾಡುವ ಬಗ್ಗೆ ಆಲೋಚಿಸಲಿದ್ದೀರಿ. ಕೆಲವರು ಪ್ರಾಜೆಕ್ಟ್ ಬೇರೆ ಬದಲಾಯಿಸಿಕೊಡುವಂತೆ ಮನವಿ ಮಾಡಬಹುದು. ಈ ಅವಧಿಯಲ್ಲಿ ನಿಮ್ಮ ನೆಮ್ಮದಿ ಯಾವುದರಲ್ಲಿದೆ ಎಂಬುದನ್ನು ಆಲೋಚಿಸಿ. ಏಕೆಂದರೆ ನೀವಾಗಿಯೇ ಕೇಳಿಕೊಂಡ ಹುದ್ದೆ, ಕೆಲಸ ನಿಮಗೇ ಸಮಸ್ಯೆಯಾಗಿ ಕಾಡುವ ಅವಕಾಶಗಳು ಜಾಸ್ತಿ ಇದೆ. ಇತರರಿಗೆ ಜಾಮೀನಾಗಿ ನಿಲ್ಲುವ ಮುನ್ನ ಒಂದಕ್ಕೆ ನಾಲ್ಕು ಬಾರಿ ಆಲೋಚಿಸಿ.

ಲೇಖನ- ಎನ್‌.ಕೆ.ಸ್ವಾತಿ

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ