Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 3ರ ದಿನಭವಿಷ್ಯ 

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 3 ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 3ರ ದಿನಭವಿಷ್ಯ 
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 3ರ ದಿನಭವಿಷ್ಯ Image Credit source: freepik
Follow us
Rakesh Nayak Manchi
|

Updated on: Apr 03, 2023 | 6:01 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 3ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಹಳೇ ನೆನಪುಗಳು ವಿಪರೀತವಾಗಿ ಕಾಡಲಿದೆ. ಧೈರ್ಯದಿಂದ ಕೆಲವು ನಿರ್ಧಾರಗಳನ್ನು ಮಾಡಬೇಕಾಗುತ್ತದೆ. ಇತರರ ಸಲಹೆಯನ್ನು ಕೇಳಿಕೊಂಡು ಮಾಡಿದ ಕೆಲಸದಲ್ಲಿ ಸ್ವಲ್ಪ ಮಟ್ಟಿಗೆ ನಷ್ಟವಾಗುವಂಥ ಸಾಧ್ಯತೆ ಇದೆ. ಭವಿಷ್ಯದಲ್ಲಿ ಅನುಕೂಲ ಆಗಬಹುದು ಎಂಬ ಗುರಿಯೊಂದಿಗೆ ಸಾಲ ಮಾಡಿಯಾದರೂ ಹೂಡಿಕೆ ಮಾಡಲಿದ್ದೀರಿ. ಇತರರ ವೈಯಕ್ತಿಕ ವಿಚಾರಗಳಿಗೆ ಮೂಗು ತೂರಿಸಬೇಡಿ. ನಿಮಗಿಂತ ಚಿಕ್ಕ ವಯಸ್ಸಿನವರ ಜತೆ ಮಾತುಕತೆ ಆಡುವಾಗ ಎಚ್ಚರಿಕೆ ಅಗತ್ಯ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಮನರಂಜನೆ, ಹೋಟೆಲ್, ಕಿರು ಪ್ರವಾಸಗಳಿಗೆ ಹಣ ಖರ್ಚಾಗುವಂತಹ ಯೋಗ ಇದೆ. ಮದುವೆಗಾಗಿ ಪ್ರಯತ್ನ ಮಾಡುತ್ತಿರುವ ವಿವಾಹ ವಯಸ್ಕರಿಗೆ ಸೂಕ್ತ ಸಂಬಂಧಗಳು ದೊರೆಯಲಿವೆ. ಡಿಜಿಟಲ್ ಸ್ವತ್ತುಗಳಲ್ಲಿ ಹೂಡಿಕೆ ಮಾಡಿರುವವರು ಅದರಿಂದ ಹಣ ಹಿಂದಕ್ಕೆ ಪಡೆಯುವಂಥ ಸಾಧ್ಯತೆ ಇದೆ. ಕಣ್ಣಿನ ಸಮಸ್ಯೆ ಇರುವವರಿಗೆ ಖರ್ಚು ಹೆಚ್ಚಾಗಲಿದೆ. ಪ್ರಾಣಿ ದಯಾ ಸಂಘಗಳು, ಎನ್ ಜಿಒಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಪ್ರಯಾಣ ಮಾಡಬೇಕಾಗುತ್ತದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಹಣಕಾಸಿನ ಮೂಲವನ್ನು ಹೆಚ್ಚಳ ಮಾಡಿಕೊಳ್ಳುವುದಕ್ಕೆ ಅವಕಾಶ ದೊರೆಯುತ್ತದೆ. ಮಾಧ್ಯಮಗಳಲ್ಲಿ ಕೆಲಸ ಮಾಡುವವರಿಗೆ, ಸಿನಿಮಾ ರಂಗದಲ್ಲಿ ಇರುವವರಿಗೆ ಒತ್ತಡದ ದಿನವಾಗಿರುತ್ತದೆ. ಶುಭ ಕಾರ್ಯಗಳಿಗೆ ಆಹ್ವಾನ ಬರಲಿದೆ. ದೇವತಾರಾಧನೆಯಲ್ಲಿ ಭಾಗೀ ಆಗುವುದಕ್ಕೆ ಅವಕಾಶ ದೊರೆಯಲಿದೆ. ಸಿಹಿ ಪದಾರ್ಥಗಳು, ಮಸಾಲೆಯುಕ್ತ ಪದಾರ್ಥಗಳು ಸೇವನೆ ಮಾಡುವುದರಿಂದ ದೂರ ಇರುವುದು ಒಳಿತು. ಮಧುಮೇಹ, ರಕ್ತದೊತ್ತಡ ಸಮಸ್ಯೆ ಉಲ್ಬಣ ಆಗಬಹುದು.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಹೊಸದಾಗಿ ಮನೆ ಅಥವಾ ಸೈಟು ಖರೀದಿ ಮಾಡಬೇಕು ಎಂದಿರುವವರಿಗೆ ಸೂಕ್ತ ಸ್ಥಳ, ಮನೆ ದೊರೆಯುವಂಥ ಸಾಧ್ಯತೆ ಇದೆ. ಪಾರ್ಟಿ ಅಥವಾ ಗೆಟ್ ಟು ಗೆದರ್​ಗೆ ಆಹ್ವಾನ ಬರುವಂಥ ಯೋಗ ಇದೆ. ಕುಟುಂಬ ಸದಸ್ಯರ ಅನಾರೋಗ್ಯ ಸಮಸ್ಯೆಯು ಚಿಂತೆಗೆ ಗುರಿ ಮಾಡುವಂಥ ಸಾಧ್ಯತೆ ಇದೆ. ಅಡ್ವರ್ಟೈಸಿಂಗ್ ಏಜೆನ್ಸಿಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಹೊಸ ಅವಕಾಶಗಳು ದೊರೆಯಲಿವೆ. ನಿಮ್ಮದಲ್ಲದ ವಸ್ತುಗಳಿಗೆ ಆಸೆ ಪಡಲು ಹೋಗದಿರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನಿಮ್ಮ ಕ್ರಿಯೇಟಿವಿಟಿಗೆ ಗೌರವ ದೊರೆಯುವ ದಿನ ಇದೆ. ಮೇಲಧಿಕಾರಿಗಳು ಅಥವಾ ಯಾವುದಾದರೂ ನಿರ್ದಿಷ್ಟ ಪ್ರಾಜೆಕ್ಟ್  ಮೇಲೆ ಕೆಲಸ ಮಾಡುತ್ತಿದ್ದಲ್ಲಿ ಅದರ ಮುಖ್ಯಸ್ಥರಿಗೆ ನಿಮ್ಮ ಶ್ರಮ ಅರ್ಥ ಆಗಲಿದೆ. ಹೊಸದಾಗಿ ಗ್ಯಾಜೆಟ್, ಮೊಬೈಲ್ ಫೋನ್ ಖರೀದಿ ಮಾಡುವಂಥ ಯೋಗ ಇದೆ. ದೂರ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಿದ್ದೀರಿ. ಸ್ನೇಹಿತರು ನಿಮ್ಮ ಸಹಾಯವನ್ನು ಕೇಳಿಕೊಂಡು ಬರಲಿದ್ದಾರೆ. ಉದ್ಯೋಗಾವಕಾಶ ದೊರೆಯುವ ಅವಕಾಶ ಇದ್ದು, ಸರಿಯಾದ ನಿರ್ಧಾರ ಮಾಡಬೇಕಾಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಕ್ರೀಡಾಳುಗಳಿಗೆ ಪ್ರಾಯೋಜಕರು ದೊರೆಯುವಂಥ ಅವಕಾಶ ಇದೆ. ವಿದ್ಯಾರ್ಥಿಗಳು ಹೊಸ ಕೋರ್ಸ್ ಸೇರ್ಪಡೆ ಆಗುವ ಸಾಧ್ಯತೆ ಇದೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಸೂಕ್ತ ವೈದ್ಯೋಪಚಾರ ದೊರೆಯಲಿದೆ. ತಂದೆ- ತಾಯಿಯ ಪ್ರವಾಸ ಅಥವಾ ತೀರ್ಥಕ್ಷೇತ್ರಗಳಿಗೆ ಕಳುಹಿಸುವುದಕ್ಕೆ ಹಣ ಖರ್ಚು ಮಾಡಲಿದ್ದೀರಿ. ವಾಹನ ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ಹೊರಡಬೇಕಾದ ಸ್ಥಳ ತಲುಪುವುದಕ್ಕೆ ಸ್ವಲ್ಪ ಬೇಗನೇ ಮನೆಯನ್ನು ಬಿಡಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಪ್ರಗತಿ ಇದೆ. ಕಲಾವಿದರಿಗೆ, ಸಂಗೀತಗಾರರಿಗೆ ಸನ್ಮಾನ ಆಗುವ ಯೋಗ ಇದೆ. ಆಪ್ತರಿಗೆ ಉಡುಗೊರೆ ನೀಡುವ ಸಾಧ್ಯತೆ ಇದೆ. ಯೂಟ್ಯೂಬರ್ ಗಳು, ಆನ್ ಲೈನ್ ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಅವಕಾಶಗಳು ದೊರೆಯಲಿವೆ. ಈ ದಿನ ಡಿಪ್ಲೊಮ್ಯಾಟಿಕ್ ಆಗಿ ವ್ಯವಹಾರವನ್ನು ಮುಗಿಸುವ ಬಗ್ಗೆ ಆಲೋಚನೆ ಮಾಡಿ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ಏನಾದರೂ ಸಹಾಯ ಕೇಳಿದರೆ ನಿಮ್ಮಿಂದ ಆದಲ್ಲಿ ನೆರವಾಗಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಈ ದಿನ ಸಮಯಕ್ಕೆ ಸರಿಯಾಗಿ ಊಟ- ತಿಂಡಿ ಮಾಡುವುದು ಕಷ್ಟವಾಗುತ್ತದೆ. ನಿಮ್ಮ ಜನಪ್ರಿಯತೆ ಹೆಚ್ಚಾಗುವ ಅವಕಾಶ ಇದೆ. ಸಂಗಾತಿಯ ಅಗತ್ಯಗಳೇನು ಎಂದು ತಿಳಿದುಕೊಳ್ಳುವುದಕ್ಕೆ ಪ್ರಯತ್ನಿಸಿ ಹಾಗೂ ಅದನ್ನು ಪೂರೈಸುವುದಕ್ಕೆ ಕೂಡ ಯತ್ನಿಸಿ. ಬಹಳ ಕಾಲದಿಂದ ಕಾರು ಅಥವಾ ಸ್ಕೂಟರ್ ಖರೀದಿ ಮಾಡಬೇಕು ಎಂದಿರುವವರಿಗೆ ಈಗ ಅದಕ್ಕೆ ಅವಕಾಶ ಹಾಗೂ ಹಣಕಾಸಿನ ಹರಿವು ದೊರೆಯಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಹೊಸ ಪ್ರಾಜೆಕ್ಟ್ ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಬಡ್ತಿಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ವೇದಿಕೆ ಸಿದ್ಧವಾಗಲಿದೆ. ಕೆಲವು ಕೆಲಸಗಳು ಈಗಾಗಲೇ ಅರ್ಧ ಮುಗಿದಿದ್ದಲ್ಲಿ ಈಗ ಮೊದಲಿಂದ ಆರಂಭವಾಗಲಿದೆ. ವಿದೇಶ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವವರಿಗೆ ಹಿನ್ನಡೆ ಆಗಲಿದೆ. ಮೂಲವ್ಯಾಧಿಯಂಥ ಸಮಸ್ಯೆ ಇರುವವರಿಗೆ ಅದು ಉಲ್ಬಣ ಆಗುವ ಸಾಧ್ಯತೆ ಇದೆ. ದೇಹದ ಉಷ್ಣತೆ ಹೆಚ್ಚಾಗದಂತೆ ಎಚ್ಚರಿಕೆ ವಹಿಸಿ. ವೃತ್ತಿನಿರತರು ಕಚೇರಿಗೆ ಅಗತ್ಯ ಇರುವ ಪೀಠೋಪಕರಣಗಳನ್ನು ಖರೀದಿಸುವ ಸಾಧ್ಯತೆ ಇದೆ.

ಲೇಖನ- ಎನ್‌.ಕೆ.ಸ್ವಾತಿ

ನಾನ್ಯಾಕೆ ಸಿಎಂ ಆಗ್ಬಾರ್ದು ಎಂದಿದ್ದ ಸಚಿವ ತಿಮ್ಮಾಪುರ ವರಸೆ ಬದಲು
ನಾನ್ಯಾಕೆ ಸಿಎಂ ಆಗ್ಬಾರ್ದು ಎಂದಿದ್ದ ಸಚಿವ ತಿಮ್ಮಾಪುರ ವರಸೆ ಬದಲು
ಏ ಪಾಂಚಾಲಿ! ಬೀಮನ ಪಾತ್ರದ ಡೈಲಾಗ್ ಹೇಳಿದ ಮಿಂಚಿದ ಶಾಸಕ ಶಿವಲಿಂಗೇಗೌಡ
ಏ ಪಾಂಚಾಲಿ! ಬೀಮನ ಪಾತ್ರದ ಡೈಲಾಗ್ ಹೇಳಿದ ಮಿಂಚಿದ ಶಾಸಕ ಶಿವಲಿಂಗೇಗೌಡ
Video: ಮುಳ್ಳುಗಳ ಮೇಲೆ ಮಲಗುವ ಬಾಬಾ
Video: ಮುಳ್ಳುಗಳ ಮೇಲೆ ಮಲಗುವ ಬಾಬಾ
BBL 2025: ಬೌಲ್ಡ್ ಆಗುವುದನ್ನು ತಪ್ಪಿಸಿ ಅರ್ಧಶತಕ ಸಿಡಿಸಿದ ಸ್ಟೀವ್ ಸ್ಮಿತ್
BBL 2025: ಬೌಲ್ಡ್ ಆಗುವುದನ್ನು ತಪ್ಪಿಸಿ ಅರ್ಧಶತಕ ಸಿಡಿಸಿದ ಸ್ಟೀವ್ ಸ್ಮಿತ್
ಬಿಗ್ ಬಾಸ್​ನಲ್ಲಿ ಧನರಾಜ್ ಮೋಸದಾಟಕ್ಕೆ ಎಲಿಮಿನೇಷನ್ ಶಿಕ್ಷೆ?
ಬಿಗ್ ಬಾಸ್​ನಲ್ಲಿ ಧನರಾಜ್ ಮೋಸದಾಟಕ್ಕೆ ಎಲಿಮಿನೇಷನ್ ಶಿಕ್ಷೆ?
ಐಶ್ವರ್ಯ ವೃದ್ಧಿಯಲ್ಲಿ ಉಪ್ಪಿಗಿದೆ ಬಹಳ ಮಹತ್ವ! ಏನದು? ಇಲ್ಲಿದೆ ನೋಡಿ
ಐಶ್ವರ್ಯ ವೃದ್ಧಿಯಲ್ಲಿ ಉಪ್ಪಿಗಿದೆ ಬಹಳ ಮಹತ್ವ! ಏನದು? ಇಲ್ಲಿದೆ ನೋಡಿ
ದಿನ ಭವಿಷ್ಯ: ಜನವರಿ 16ರಂದು ಹೇಗಿದೆ ದ್ವಾದಶ ರಾಶಿಗಳ ಫಲಾಫಲ? ಇಲ್ಲಿದೆ ನೋಡಿ
ದಿನ ಭವಿಷ್ಯ: ಜನವರಿ 16ರಂದು ಹೇಗಿದೆ ದ್ವಾದಶ ರಾಶಿಗಳ ಫಲಾಫಲ? ಇಲ್ಲಿದೆ ನೋಡಿ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ