Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 18ರ ದಿನಭವಿಷ್ಯ

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 18ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 18ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 18ರ ದಿನಭವಿಷ್ಯ Image Credit source: istock
Follow us
Rakesh Nayak Manchi
|

Updated on: Mar 18, 2023 | 5:50 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 18ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಈ ಹಿಂದಿನ ನಿಮ್ಮ ಪ್ರಯತ್ನಗಳು ಫಲ ನೀಡುವ ಸೂಚನೆಗಳು ದೊರೆಯಲಿವೆ. ಆತ್ಮೀಯರು ನೀಡುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ. ಈ ದಿನ ಯಾರನ್ನಾದರೂ ಭೇಟಿ ಆಗಬೇಕು ಎಂದು ನಿರ್ಧಾರ ಆಗಿದ್ದಲ್ಲಿ ಸಮಯಕ್ಕೆ ಸರಿಯಾಗಿ ಆ ಸ್ಥಳದಲ್ಲಿ ಇರುವಂತೆ ನೋಡಿಕೊಳ್ಳಿ. ಕೆಲಸ ಬದಲಾವಣೆ ಮಾಡುವ ಬಗ್ಗೆ ಆಲೋಚನೆ ಮಾಡುತ್ತಿದ್ದಲ್ಲಿ ಸ್ನೇಹಿತರ ಮೂಲಕವಾಗಿ ರೆಫರೆನ್ಸ್ ಸಿಗುವಂಥ ಅವಕಾಶಗಳಿವೆ. ಇನ್ನು ಈ ದಿನ ನಿಮ್ಮ ಸೋಷಿಯಲ್ ಕಾಂಟ್ಯಾಕ್ಟ್ ಗಳನ್ನು ವಿಸ್ತರಿಸಿಕೊಳ್ಳುವ ಅವಕಾಶಗಳನ್ನು ಬಳಸಿಕೊಳ್ಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಅಚಾನಕ್ ಆಗಿ ಅಥವಾ ದಿಢೀರ್ ಎಂದು ತೀರ್ಮಾನ ಮಾಡಿ ಕೆಲವು ಖರೀದಿಗಳನ್ನು ಮಾಡಲಿದ್ದೀರಿ. ಇಎಂಐ ಸಿಗುತ್ತದೆ ಎಂಬ ಕಾರಣಕ್ಕೆ ಅಗತ್ಯ ಇಲ್ಲದನ್ನೂ ಖರೀದಿ ಮಾಡುವುದಕ್ಕೆ ಹೋಗದಿರಿ. ಇನ್ನು ತಂದೆ ಅಥವಾ ತಂದೆ ಸಮಾನರಾದವರಿಗೆ ಆರೋಗ್ಯ ತಪಾಸಣೆ ಮಾಡಬೇಕಾದಂಥ ಸನ್ನಿವೇಶ ಎದುರಾಗಲಿದೆ. ಭುಜ ಅಥವಾ ಬೆನ್ನಿನ ಸಮಸ್ಯೆ ಇರುವುದಾದಲ್ಲಿ ಅದು ಉಲ್ಬಣ ಆಗುವಂಥ ಸಾಧ್ಯತೆ ಇದೆ. ಆ ಬಗ್ಗೆ ಎಚ್ಚರಿಕೆಯನ್ನು ವಹಿಸಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಹೊಸ ಹೂಡಿಕೆ ಮಾಡಬೇಕಾದ ಅಗತ್ಯ ಕಂಡುಬರಲಿದೆ. ಕುಟುಂಬ ವಿಚಾರಗಳಲ್ಲಿ ಹೆಚ್ಚು ಸಮಯ ಮೀಸಲಿಡಬೇಕಾದ ಅಗತ್ಯ ಕಂಡುಬರಲಿದೆ. ಹೊಸ ವಾಹನ ಖರೀದಿ ಮಾಡುವುದಕ್ಕೆ ಹಣ ಹೊಂದಿಸುವುದಕ್ಕೆ ಪ್ರಯತ್ನ ಮಾಡಲಿದ್ದೀರಿ. ಈ ದಿನ ಆಂಜನೇಯ ಸ್ವಾಮಿ ದೇವರ ಆರಾಧನೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಔತಣ ಕೂಟಗಳಿಗೆ ಸಂಬಂಧಿಕರಿಂದ ಆಹ್ವಾನ ಬರಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಇತರರ ಸಲುವಾಗಿ ಹೆಚ್ಚಿನ ಸಮಯ ಮೀಸಲಿಡಬೇಕಾಗುತ್ತದೆ. ಸಂಬಂಧಿಕರು, ಸ್ನೇಹಿತರು ಸಹಾಯವನ್ನು ಕೇಳಿಕೊಂಡು ಬರುವ ಸಾಧ್ಯತೆ ಇದೆ. ಪುಸ್ತಕ ಮಾರಾಟಗಾರರಿಗೆ ಹೊಸ ಆರ್ಡರ್ ದೊರೆಯುವಂಥ ಸಾಧ್ಯತೆ ಇದೆ. ಬ್ಯಾಂಕಿಂಗ್ ವ್ಯವಹಾರಗಳನ್ನು ಮಾಡಬೇಕು ಎಂದಿದ್ದಲ್ಲಿ ಕಾಗದ- ಪತ್ರಗಳು, ದಾಖಲೆಗಳು ಬಗ್ಗೆ ಹೆಚ್ಚಿನ ಗಮನವನ್ನು ನೀಡಿ. ವಾಹನವನ್ನು ಪಾರ್ಕಿಂಗ್ ಮಾಡುವಾಗ ಲಕ್ಷ್ಯ ಇರಲಿ. ಇಲ್ಲದಿದ್ದಲ್ಲಿ ದಂಡ ಕಟ್ಟಬೇಕಾದೀತು.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಮಹಿಳೆಯರು ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಎಚ್ಚರಿಕೆಯಿಂದ ಇರಿ. ಚೂಪಾದ ವಸ್ತುಗಳನ್ನು ಬಳಸುವಾಗ ಸಣ್ಣ ಪ್ರಮಾಣದಲ್ಲಾದರೂ ಗಾಯವಾಗುವಂಥ ಸಾಧ್ಯತೆ ಇದೆ. ಕುಟುಂಬ ಸಮೇತ ಕಿರು ಪ್ರವಾಸವನ್ನು ಮಾಡಬೇಕು ಎಂದಿದ್ದಲ್ಲಿ ಉತ್ತಮವಾದ ಸಮಯ ಕಳೆಯುವಂಥ ಯೋಗ ಇದೆ. ಶೈಕ್ಷಣಿಕ ವಲಯದಲ್ಲಿ ಕಾರ್ಯ ನಿರ್ವಹಿಸುವಂಥವರಿಗೆ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕಾಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ನಿಧಾನವಾಗಿ ಆರಂಭವಾಗಿದ್ದ ಕೆಲಸಗಳು ವೇಗ ಪಡೆದುಕೊಳ್ಳಲಿವೆ. ಹಣಕಾಸು ಹೊಂದಿಕೆ ಆಗದೆ ನಿಂತುಹೋಗಿದ್ದ ಕೆಲಸಗಳಿಗೆ ಅಗತ್ಯವಿರುವ ಹಣ ದೊರೆಯುವ ಮಾರ್ಗ ಗೋಚರಿಸಲಿದೆ. ನೀವು ಒಪ್ಪಿಕೊಂಡಿದ್ದ ಕೆಲಸಗಳನ್ನು ಗಡುವಿನೊಳಗೆ ಮುಗಿಸಿಕೊಡುವ ಕಡೆಗೂ ಗಮನ ನೀಡಿ. ಇನ್ನು ಬರಬೇಕಾದ ಹಣ ಇದ್ದಲ್ಲಿ ಗಟ್ಟಿಯಾಗಿ ಪ್ರಯತ್ನಿಸಿ, ಬರುವ ಸಾಧ್ಯತೆ ಇರುತ್ತದೆ ಅಥವಾ ಇಂಥ ಸಮಯದಲ್ಲಿ ಕೊಡುವುದಾಗಿ ಭರವಸೆ ಒಪ್ಪಿಕೊಳ್ಳಲಿದ್ದಾರೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ತುಂಬ ಗಹನವಾದ ವಿಚಾರವೊಂದು ಸಮಸ್ಯೆಯಾಗಿ ಪರಿಣಮಿಸಲಿದೆ. ಕೌಟುಂಬಿಕ ವಿಚಾರದಲ್ಲಿ ಮನಸ್ತಾಪ ಎದುರಾಗಲಿದೆ. ಕಾಲು ನೋವಿನ ಸಮಸ್ಯೆ ಇರುವವರಿಗೆ ಅದು ಉಲ್ಬಣ ಆಗುವ ಸಾಧ್ಯತೆ ಇದೆ. ಅಧ್ಯಾತ್ಮ ಚಿಂತಕರು, ವೇದ ಪಂಡಿತರು, ಪ್ರವಚನಕಾರರಿಗೆ ಬಹಳ ಮುಖ್ಯವಾದ ದಿನ ಇದು. ಏಕೆಂದರೆ ನಿಮ್ಮ ಸಾಮರ್ಥ್ಯವನ್ನು ಗುರುತಿಸಿ ಸನ್ಮಾನ ಮಾಡುವುದಕ್ಕೆ ಸಂಘ- ಸಂಸ್ಥೆಗಳು ನಿರ್ಧಾರ ಮಾಡಲಿವೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಎಲ್ಲರೂ ಒಪ್ಪಿಕೊಂಡರು ಎಂಬ ಕಾರಣಕ್ಕೆ ನಿಮಗೆ ನೆಚ್ಚದಿದ್ದರೂ ಕೆಲವು ಕೆಲಸಗಳನ್ನು ಮಾಡಬೇಕಾದ ಸನ್ನಿವೇಶ ಸೃಷ್ಟಿ ಆಗಲಿದೆ. ಸರ್ಕಾರಿ ಯೋಜನೆಗಳಿಂದ ಹಣ ಬರಬೇಕಾದಲ್ಲಿ ಈ ದಿನ ಪ್ರಯತ್ನ ಪಟ್ಟರೆ ಪ್ರಕ್ರಿಯೆಗಳು ಸಲೀಸಾಗಲಿವೆ. ಈ ದಿನ ಮುಖ್ಯವಾದ ಕೆಲಸಗಳೇನಾದರೂ ಇದ್ದಲ್ಲಿ ಗಣಪತಿಯನ್ನು ಮನಸ್ಸಿನಲ್ಲಿ ಸ್ಮರಿಸಿಕೊಂಡು, ಮುಂದುವರಿಯಿರಿ. ಇಷ್ಟು ದಿನ ನೀವು ಹೇಳದೆ ಮನಸ್ಸಿನಲ್ಲಿ ಉಳಿಸಿಕೊಂಡಿದ್ದ ವಿಚಾರವನ್ನು ಹೇಳುವುದಕ್ಕೆ ಅವಕಾಶ ಸಿಕ್ಕಲ್ಲಿ ಬಳಸಿಕೊಳ್ಳಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಈ ದಿನ ಪ್ರಮುಖವಾದ ವ್ಯಕ್ತಿಗಳನ್ನು ಭೇಟಿ ಆಗಲಿದ್ದೀರಿ. ಇದು ದೀರ್ಘ ಕಾಲದ ನಿಮ್ಮ ಯೋಜನೆಗಳನ್ನು ಜಾರಿಗೆ ತರುವುದಕ್ಕೆ ಅನುಕೂಲ ಮಾಡಿಕೊಡಲಿದೆ. ಖರ್ಚಿನ ವಿಚಾರ ಬಂದಾಗ ಒಂದಕ್ಕೆ ಎರಡು ಬಾರಿ ಆಲೋಚನೆ ಮಾಡಿ, ಮುಂದುವರಿಯಿರಿ. ಹೊಸ ಪ್ರಾಜೆಕ್ಟ್ ಗಳನ್ನು ವಹಿಸಿಕೊಳ್ಳುವಂತೆ ಕೆಲವು ಆಫರ್ ಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಸಂಗಾತಿ ಸಲುವಾಗಿ ಕೆಲವು ಖರೀದಿಗಳನ್ನು ಮಾಡಲಿದ್ದೀರಿ.

ಲೇಖನ- ಎನ್‌.ಕೆ.ಸ್ವಾತಿ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು