Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 19ರ ದಿನಭವಿಷ್ಯ
ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 19ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 19ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಸಂಬಂಧ ಗಟ್ಟಿ ಆಗಲಿದೆ. ಸ್ನೇಹಿತರ ಮಾತಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಿದ್ದೀರಿ. ಮರದ ಕೆತ್ತನೆ, ಮಾರಾಟ ಮಾಡುವಂಥವರಿಗೆ ಲಾಭದ ಪ್ರಮಾಣ ಜಾಸ್ತಿ ಆಗುವ ಮಾರ್ಗ ಗೋಚರಿಸಲಿದೆ. ರಾಜಕಾರಣಿಗಳಿಗೆ ಪ್ರಭಾವ ವಿಸ್ತರಿಸಿಕೊಳ್ಳವಂಥ ದಿನ ಇದು. ಮನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳು ಬರಲಿದ್ದಾರೆ.
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ಹೊಸ ಕೆಲಸಕ್ಕೆ ಸಿದ್ಧತೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಅಂದರೆ ಅದಕ್ಕೆ ಬೇಕಾದಂತೆ ರೆಸ್ಯೂಮೆ, ಹೊಸ ದಿರಿಸು, ಶೂ ಖರೀದಿ ಇತ್ಯಾದಿಗಳೊಂದಿಗೆ ಸಿದ್ಧ ಆಗಲಿದ್ದೀರಿ. ತಾಯಿ ಕಡೆಯ ಸಂಬಂಧಿಕರು ಮನೆಗೆ ಬರುವಂಥ ಯೋಗ ಇದೆ. ನವ ವಿವಾಹಿತರು ಸಂತೋಷವಾಗಿ ಕಾಲ ಕಳೆಯಲಿದ್ದೀರಿ.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ಭರವಸೆ ಇಟ್ಟುಕೊಂಡು ಶುರು ಮಾಡಿದ್ದ ಕೆಲಸ ಅರ್ಧಕ್ಕೆ ನಿಲ್ಲುವ ಸಾಧ್ಯತೆಗಳಿವೆ. ಇದರಿಂದಾಗಿ ನಿಮ್ಮ ವರ್ಚಸ್ಸು, ಹಣಕ್ಕೆ ಹಾನಿ ಆಗಬಹುದು. ಹೊಸಬರ ಪರಿಚಯ ಆಗುತ್ತದೆ. ಸ್ವಂತ ಉದ್ಯಮಿಗಳಿಗೆ ದೂರ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಕಣ್ಣಿನ ಅಲರ್ಜಿ ಕಾಡಬಹುದು.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ವ್ಯಾಪಾರ- ವ್ಯವಹಾರ ವಿಸ್ತರಣೆಗಾಗಿ ಕುಟುಂಬದಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ನಿಮ್ಮ ಈ ತನಕದ ಉಳಿತಾಯ ಹಾಗೂ ತೆಗೆದುಕೊಳ್ಳಬಹುದಾದ ಸಾಲ ಮತ್ತು ವ್ಯಾಪಾರಕ್ಕೆ ಇರುವ ಅವಕಾಶಗಳನ್ನು ಚೆನ್ನಾಗಿ ಅಳೆದು, ಮುಂದಿನ ಯೋಜನೆ ರೂಪಿಸುತ್ತೀರಿ. ನಿಮ್ಮ ಸಮಯಪ್ರಜ್ಞೆಯಿಂದ ತುಂಬ ದೊಡ್ಡ ಸಹಾಯ ಆಗಲಿದೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ಗುರುಗಳ ಅನುಗ್ರಹ ದೊರೆಯಲಿದೆ. ಹೊಸದಾಗಿ ವಾಹನ ಖರೀದಿಗಾಗಿ ಹಣ ಹೊಂದಿಕೆಗಾಗಿ ಸ್ನೇಹಿತರು- ಸಂಬಂಧಿಗಳ ಬಳಿ ಪ್ರಯತ್ನ ಮಾಡಲಿದ್ದೀರಿ. ದಾಕ್ಷಿಣ್ಯಕ್ಕೆ ಸಿಲುಕಿಕೊಂಡು ನಿಮ್ಮ ಕೈಯಾರೆ ಹಣ ಖರ್ಚು ಮಾಡಿಕೊಳ್ಳಲಿದ್ದೀರಿ. ಹಳೇ ವ್ಯಾಜ್ಯಗಳು ಇದ್ದಲ್ಲಿ ಮಾತು ಕತೆ ಮೂಲಕ ಬಗಹರಿಸಿಕೊಳ್ಳುವುದಕ್ಕೆ ದಾರಿ ಸಿಗಲಿದೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ಮನೆಗೆ ಅಗತ್ಯ ಇರುವ ವಸ್ತುಗಳನ್ನು ಖರೀದಿಸುವ ಸಾಧ್ಯತೆ ಇದೆ. ಈ ದಿನ ಹಲವು ಜನರ ಮಧ್ಯೆ ಇದ್ದರೂ ಒಂಟಿತನ ನಿಮ್ಮನ್ನು ಕಾಡುತ್ತದೆ, ಸ್ವಾದಿಷ್ಟವಾದ ಊಟ- ತಿಂಡಿ ಸವಿಯುವ ಯೋಗ ಇದೆ. ವಿನಾಕಾರಣವಾಗಿ ಭವಿಷ್ಯದ ಬಗ್ಗೆ ಆತಂಕಕ್ಕೆ ಒಳಗಾಗಬೇಡಿ. ಎಲ್ಲರಿಗೂ ಆಗಿದ್ದೇ ನಿಮಗೂ ಆಗಲಿದೆ. ಅದಕ್ಕೆ ಗಾಬರಿ ಏಕೆ?
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ಹೊಸ ವಿಷಯಗಳನ್ನು ಕಲಿತುಕೊಳ್ಳಲಿದ್ದೀರಿ. ವಸ್ತ್ರಾಭರಣ ಖರೀದಿಸಲಿದ್ದೀರಿ. ಗುರು- ಹಿರಿಯರ ಆಶೀರ್ವಾದ ಇರಲಿದೆ. ಸ್ನೇಹಿತರು- ಬಂಧುಗಳು ಹಣಕಾಸಿನ ನೆರವು ನೀಡಬಹುದು. ಮನರಂಜನೆಗಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ಯಾರಿಗೂ ಸಾಲಕ್ಕೆ ಜಾಮೀನಾಗಿ ನಿಲ್ಲಬೇಡಿ. ಪಾರ್ಟಿಗಳಲ್ಲಿ ಭಾಗೀ ಆಗಲಿದ್ದೀರಿ.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ಪ್ರಭಾವಿ ವ್ಯಕ್ತಿಗಳ ಸಂಪರ್ಕಕಕ್ಕೆ ಬರಲಿದ್ದೀರಿ. ವೃತ್ತಿನಿರತರಿಗೆ ಭವಿಷ್ಯದ ಸವಾಲಿನ ಬಗ್ಗೆ ಸೂಚನೆ ದೊರೆಯಲಿದೆ. ಸೋಷಿಯಲ್ ಮೀಡಿಯಾ ಬಳಸುವವರು ಬಹಳ ಎಚ್ಚರಿಕೆಯಿಂದ ಇರಬೇಕು. ವಾಗ್ವಾದ- ಭಿನ್ನಾಭಿಪ್ರಾಯ ಇಲ್ಲದಂತೆ ನೋಡಿಕೊಳ್ಳುವುದು ನಿಮ್ಮ ಕೈಯಲ್ಲೇ ಇದೆ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ವಿಪರೀತ ಚಂಚಲತೆ ಇರುತ್ತದೆ. ಎಲ್ಲವೂ ಬೇಕು, ಬೇಕು ಎಂಬ ಧೋರಣೆ ಸರಿಯಲ್ಲ. ನಿಮ್ಮ ಅಗತ್ಯಗಳನ್ನು ಅರಿತುಕೊಂಡು, ಎಷ್ಟು ಬೇಕೋ ಅಷ್ಟನ್ನು ಮಾತ್ರ ಖರೀದಿಸಿ. ಕ್ರೆಡಿಟ್ ಕಾರ್ಡ್ ಬಳಕೆ ಮಾಡುವಾಗ ಬಹಳ ಎಚ್ಚರಿಕೆ ಅಗತ್ಯ. ಕಡಿಮೆ ಬಡ್ಡಿಗೆ ಅಥವಾ ಬಡ್ಡಿಯೇ ಇಲ್ಲದ ಸಾಲ ಸಿಗುತ್ತದೆ ಎಂಬ ಕಾರಣಕ್ಕೆ ಹಣ ಅಥವಾ ವಸ್ತು ತೆಗೆದುಕೊಳ್ಳಬೇಡಿ.
ಲೇಖನ- ಎನ್.ಕೆ.ಸ್ವಾತಿ