Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 23ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 23ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಮೆದುಳಿಗೆ ಸಂಬಂಧಿಸಿದ ಕೆಲವು ಅನಾರೋಗ್ಯ ಸಮಸ್ಯೆಗಳು ಕಾಡಬಹುದು. ಕೆಲವರಿಗೆ ಮರೆವು, ಮೈಗ್ರೇನ್, ವಿಪರೀತ ತಲೆ ಸಿಡಿತ ಇಂಥ ಸಮಸ್ಯೆಗಳು ಕಾಡಲಿವೆ. ಯಾವುದಾದರೂ ಕಾರ್ಯಕ್ರಮದಲ್ಲಿ ಓಡಾಟ ವಿಪರೀತವಾಗಿ, ಸಮಯಕ್ಕೆ ಸರಿಯಾಗಿ ಊಟ- ತಿಂಡಿ ಮಾಡುವುದಕ್ಕೆ ಸಾಧ್ಯವಾಗದ ಸನ್ನಿವೇಶ ಎದುರಾಗಲಿದೆ. ಹಣಕಾಸಿನ ವಿಚಾರಕ್ಕೆ ಮುಖ್ಯವಾದ ಮಾತುಕತೆ ನಡೆಸಬೇಕು ಎಂದಿದ್ದಲ್ಲಿ ಈ ದಿನದ ಮಟ್ಟಿಗೆ ಸಾಧ್ಯವಾದರೆ ಮುಂದಕ್ಕೆ ಹಾಕಿ.
ಎಲ್ಐಸಿ ಏಜೆಂಟ್ ಆಗಿರುವಂಥವರು, ಕಮಿಷನ್ ವ್ಯವಹಾರಗಳನ್ನು ಮಾಡುತ್ತಿರುವವರಿಗೆ ಆದಾಯದ ಪ್ರಮಾಣ ಹೆಚ್ಚಾಗಲಿದೆ. ಹೂಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದವರ ಜತೆ ಚರ್ಚೆ ಮಾಡಲಿದ್ದೀರಿ. ಮುಖ್ಯವಾದ ಕಾಗದ- ಪತ್ರಗಳನ್ನು ಜೋಪಾನವಾಗಿಟ್ಟುಕೊಳ್ಳಿ. ಈ ದಿನ ವಾಹನ ಚಾಲನೆ ಮಾಡುವಂಥವರು ನೋ ಪಾರ್ಕಿಂಗ್, ಒನ್ ವೇ ಇಂಥದ್ದರಿಂದ ದಂಡ ಪಾವತಿಸುವಂಥ ಸನ್ನಿವೇಶ ಸೃಷ್ಟಿ ಆಗಲಿದೆ.
ನಿಮ್ಮ ಕೈಯಲ್ಲಿ ಏನು ಮೊತ್ತವಿದೆ ಅಥವಾ ನಿಮ್ಮಿಂದ ಎಷ್ಟು ಸಾಮರ್ಥ್ಯದ ತನಕ ಉಳಿತಾಯ ಮಾಡಬಹುದು ಎಂಬುದರ ಲೆಕ್ಕ ಸರಿಯಾಗಿ ಹಾಕಿಕೊಳ್ಳಿ. ಪ್ರೀತಿ- ಪ್ರೇಮದಲ್ಲಿ ಇರುವಂಥವರಿಗೆ ಮನೆಯಲ್ಲಿ ಈ ಬಗ್ಗೆ ವಿಷಯ ತಿಳಿಸುವ ಆಲೋಚನೆ ಬರಲಿದೆ. ವಿದೇಶ ಪ್ರಯಾಣಕ್ಕೆ ತೆರಳಬೇಕು ಎಂದು ಇರುವವರಿಗೆ ವೀಸಾ ಮೊದಲಾದ ಕೆಲಸಗಳು ಸಲೀಸಾಗಿ ಆಗುವಂಥ ಸಾಧ್ಯತೆ ಇದೆ. ನವದಂಪತಿಗೆ ಸಂತೋಷದಿಂದ ಸಮಯ ಕಳೆಯುವ ಯೋಗ ಇದೆ.
ಅನಿರೀಕ್ಷಿತ ಅತಿಥಿಗಳ ಆಗಮನ ಆಗುತ್ತದೆ. ಯಾವುದೋ ಕಾಲದಿಂದ ಪ್ರಯತ್ನ ಮಾಡುತ್ತಿದ್ದ ಸಾಲವು ದೊರೆಯುವ ಸೂಚನೆಗಳು ಸಿಗಲಿವೆ. ಸ್ನೇಹಿತರು- ಸ್ನೇಹಿತೆಯರ ವೈಯಕ್ತಿಕ ವಿಚಾರಗಳಿಗೆ ಮೂಗು ತೂರಿಸಬೇಡಿ. ನಿಮ್ಮ ಒಳ್ಳೆಯತನವನ್ನು ಇತರರು ದುರುಪಯೋಗ ಮಾಡಿಕೊಳ್ಳದಂತೆ ಎಚ್ಚರ ವಹಿಸಿ. ಕ್ರಿಯೇಟಿವ್ ಕ್ಷೇತ್ರದಲ್ಲಿ ತೊಡಗಿಕೊಂಡವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ.
ನಿಮಗೆ ಕೌನ್ಸೆಲಿಂಗ್‌ನ ಅಗತ್ಯ ಇದೆ, ಸಣ್ಣ- ಪುಟ್ಟ ವಿಚಾರಗಳಿಗೂ ವಿಪರೀತ ರಿಯಾಕ್ಟ್ ಮಾಡುತ್ತಿದ್ದೀರಿ ಎಂದು ಯಾರಾದರೂ ನಿಮಗೆ ಹೇಳಿದಲ್ಲಿ ಅದನ್ನು ಗಂಭೀರವಾಗಿ ಆಲೋಚಿಸಿ. ಮನಸ್ಸು ಪ್ರಶಾಂತವಾಗಿ ಇಟ್ಟುಕೊಳ್ಳುವುದಕ್ಕೆ ಪ್ರಯತ್ನಿಸಿ. ನನ್ನಿಂದ ಎಲ್ಲರೂ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ, ನನ್ನ ಸಾಮರ್ಥ್ಯ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಅಂತ ನಿಮಗೆ ಅನಿಸುವ ಸಾಧ್ಯತೆ ಇದೆ. ನಿಮ್ಮ ಕಣ್ಣಿಗೆ ಇರುವೆಗಳ ಗುಂಪು ಕಂಡರೆ ಅವುಗಳಿಗೆ ಸಕ್ಕರೆ ಹಾಕಿ.
ಭಾವನಾತ್ಮಕವಾದ ನಿರ್ಧಾರಗಳು ನಿಮ್ಮನ್ನು ಬಹಳ ದಣಿಯುವಂತೆ ಮಾಡುತ್ತವೆ. ನೀವು ಹೀಗಾಗಬಹುದು ಎಂಬ ಸಣ್ಣ ಊಹೆ ಕೂಡ ಮಾಡಲು ಸಾಧ್ಯವಾಗದಂಥ ಸನ್ನಿವೇಶದಲ್ಲಿ ಹಳೇ ಪ್ರೇಮ ಪ್ರಕರಣಗಳಲ್ಲಿ ನಿಮ್ಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಸಾಧ್ಯತೆ ಇದೆ. ಆದ್ದರಿಂದ ಭಾವನಾತ್ಮಕವಾಗಿ ಹಾಗೂ ನೈತಿಕವಾಗಿ ನೀವು ಗಟ್ಟಿಯಾಗಿ ನಿಲ್ಲುವುದು ಮುಖ್ಯವಾಗುತ್ತದೆ. ಖರ್ಚಿನ ವಿಚಾರದಲ್ಲಿ ಕೆಲವರಿಗೆ ಅಸಮಾಧಾನ ಆಗಲಿದೆ. ಕ್ರೀಡಾಪಟುಗಳಿಗೆ ಬಹಳ ಮುಖ್ಯವಾದ ದಿನ ಇದು.
ಮುಂಚಿನ ರೀತಿಯಲ್ಲಿ ಹೇಳಿದ ತಕ್ಷಣ ಕೆಲಸಗಳು ಆಗುವುದಿಲ್ಲ. ಇದೇ ಕಾರಣಕ್ಕೆ ನಿಮ್ಮ ಪ್ರಾಶಸ್ತ್ಯ ಕಡಿಮೆ ಆಗುತ್ತಿದೆಯೇನೋ ಎಂಬಂತೆ ಅನಿಸುತ್ತದೆ. ಅದು ಮನೆ ಇರಲಿ ಅಥವಾ ಹೊರಗಿರಲಿ. ಹೀಗೆ ಅನಿಸಿದ ತಕ್ಷಣ ಎಲ್ಲರ ಗಮನ ಸೆಳೆಯುವ ಸಲುವಾಗಿ ವಿಪರೀತದ ಕೆಲಸಗಳೇನೋ ಮಾಡುವುದಕ್ಕೆ ತೊಡಗಬೇಡಿ. ಈ ಸಮಯ ಕಳೆಯಲು ಬಿಡಿ. ನೀವು ಅನುಸರಿಸುವ ಧರ್ಮದ ಅಥವಾ ಮನಸಿಗೆ ನೆಮ್ಮದಿ- ಚೈತನ್ಯ ನೀಡುವಂಥ ಆಡಿಯೋಗಳನ್ನು ಕೇಳಿಸಿಕೊಳ್ಳಿ.
ಮೊದಲ ನೋಟಕ್ಕೆ ಸರಿ ಎನಿಸುವಂಥದ್ದನ್ನು ಒಪ್ಪಿಕೊಳ್ಳಿ. ಸೀದಾ ಸಾದಾ ಸಂಗತಿಗಳು ನಿಮ್ಮ ಪಾಲಿಗೆ ಅನುಕೂಲವಾಗಿ ಮಾರ್ಪಡಲಿವೆ. ಈ ಹಿಂದಿನ ಪ್ರಾಜೆಕ್ಟ್‌ಗಳು ಈಗ ನಿಮಗೆ ಹಣ ತಂದುಕೊಂಡುವ ಸಾಧ್ಯತೆಗಳಿವೆ. ಆದರೆ ಸಣ್ಣ- ಪುಟ್ಟ ವಿಚಾರಗಳನ್ನೂ ಮರೆಯದಿರಿ. ಮಡ್‌ಬಾತ್, ಸ್ಟೀಮ್‌ಬಾತ್ ಹೀಗೆ ದೇಹಕ್ಕೆ ಆರಾಮದಾಯಕ ಆಗುವಂಥದ್ದನ್ನು ಮಾಡಿಸಲು ಸಾಧ್ಯವಾದಲ್ಲಿ ಮಾಡಿಸಿಕೊಳ್ಳಿ, ಏಕೆಂದರೆ ಮುಂಬರುವ ದಿನಗಳಲ್ಲಿ ಬಹಳ ಬಿಜಿ ಆಗಿಬಿಡುತ್ತೀರಿ.
ನಿಮ್ಮದಲ್ಲದ್ದು ಅಂತ ಗೊತ್ತಾದ ಮೇಲೆ ಅದಕ್ಕೆ ಆಸೆ ಪಡಬೇಡಿ. ಯಾರಿಗೂ ಗೊತ್ತಾಗಲ್ಲ, ನಾನು ಬುದ್ಧಿವಂತಿಕೆಯಿಂದ ಎಲ್ಲವನ್ನೂ ನಿಭಾಯಿಸಬಲ್ಲೆ ಎಂಬ ಧೋರಣೆ ನಿಮ್ಮನ್ನು ಸಂಕಷ್ಟಕ್ಕೆ ದೂಡಲಿದೆ. ಯಾವುದೇ ಮುಖ್ಯ ಕೆಲಸಕ್ಕೆ ಹೊರಡುವ ಮುನ್ನ ಈ ದಿನ ದುರ್ಗಾ ದೇವಿಯ ಧ್ಯಾನ ಮಾಡಿ. ನಿಮ್ಮ ಧರ್ಮಾಚರಣೆ ಬೇರೆ ಆಗಿದ್ದಲ್ಲಿ ಬಿಳಿ ವಸ್ತ್ರವೊಂದನ್ನು ನಿಮ್ಮ ಪರ್ಸ್ ಅಥವಾ ವ್ಯಾನಿಟಿ ಬ್ಯಾಗ್‌ನಲ್ಲಿ ಇಟ್ಟುಕೊಳ್ಳಿ.
ಲೇಖನ- ಎನ್.ಕೆ.ಸ್ವಾತಿ