Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 26ರ ದಿನಭವಿಷ್ಯ

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 26ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 26ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 26ರ ದಿನಭವಿಷ್ಯ
Follow us
Rakesh Nayak Manchi
|

Updated on:Mar 26, 2023 | 6:12 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 26ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನೇರವಂತಿಕೆ ಈ ದಿನ ನಿಮ್ಮನ್ನು ಕಾಪಾಡಲಿದೆ. ಒಂದು ನಿರುಪದ್ರವಿ ಸುಳ್ಳಿನಿಂದ ಏನೂ ಸಮಸ್ಯೆ ಆಗಲಿಕ್ಕಿಲ್ಲ ಎಂದೆಲ್ಲ ಯೋಚಿಸಿ ತಪ್ಪು ಹೆಜ್ಜೆ ಇಡಬೇಡಿ. ಜ್ಯೋತಿಷಿಗಳು, ಪುರೋಹಿತರು, ಮ್ಯಾಜಿಷಿಯನ್‌ಗಳಿಗೆ ಉತ್ತಮವಾದ ದಿನ ಇದು. ದೂರದ ಸ್ಥಳಗಳಿಂದ ನಿಮಗೆ ಆಹ್ವಾನ ಬರಲಿದೆ. ಸನ್ಮಾನ ಆಗುವ ಸಾಧ್ಯತೆ ಇದೆ. ನೀವಾಗಿಯೇ ಕೆಲವು ಜವಾಬ್ದಾರಿಗಳನ್ನು ಅತ್ಯುತ್ಸಾಹದಲ್ಲಿ ಮೈಮೇಲೆ ಎಳೆದುಕೊಳ್ಳಲಿದ್ದೀರಿ. ನಿಮ್ಮ ಸಾಮರ್ಥ್ಯವನ್ನು ನೋಡಿ, ನಿರ್ಧರಿಸಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಪ್ರೇಮಿಗಳಿಗೆ ವಿರಹದ ದಿನವಾಗಿರುತ್ತದೆ. ಮೂರನೇ ವ್ಯಕ್ತಿಗಳ ಮಾತಿನಿಂದ ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ- ಮನಸ್ತಾಪಗಳು ಎದುರಾಗಬಹುದು.ಇಷ್ಟಪಡುವ ಊಟ- ತಿಂಡಿ ಮಾಡುವ ಯೋಗ ಇದೆ. ಹಣ ಉಳಿತಾಯ ಯೋಜನೆ ಬಗ್ಗೆ ಸಂಗಾತಿ ಜತೆ ಚರ್ಚೆ ನಡೆಸಲಿದ್ದೀರಿ. ಸಮಯಕ್ಕೆ ಸರಿಯಾಗಿ ಊಟ- ತಿಂಡಿ ಮಾಡಿ. ಇಲ್ಲದಿದ್ದರೆ ಗ್ಯಾಸ್ಟ್ರಿಕ್ ಸಮಸ್ಯೆ ಆಗಬಹುದು. ಎಲ್ಲ ವಿಚಾರಕ್ಕೂ ಅನುಮಾನ ಪಡುವುದು ಸರಿಯಲ್ಲ. ದೂರ ಪ್ರಯಾಣ ಮಾಡುವಾಗ ಸರಿಯಾದ ಸಿದ್ಧತೆಗಳನ್ನು ಮಾಡಿಕೊಂಡು ಹೋಗಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಹೊಸದಾದ ಕಾರು, ಬೈಕ್ ಖರೀದಿ ಮಾಡಬೇಕು ಎಂದು ಇರುವವರು ಈ ದಿನ ಅಂತಿಮವಾಗಿ ತೀರ್ಮಾನವನ್ನು ಕೈಗೊಳ್ಳಲಿದ್ದೀರಿ. ಆದರೆ ಬಜೆಟ್ ಮಾಡಿಕೊಳ್ಳುವುದು ಬಹಳ ಮುಖ್ಯ. ಯಾವುದೇ ಉದ್ಯೋಗ, ವೃತ್ತಿಯಿರಲಿ ಬಂದಿದ್ದೇನು- ಖರ್ಚಾಗಿದ್ದೆಷ್ಟು ಎಂಬ ಬಗ್ಗೆ ಸ್ಪಷ್ಟತೆ ಇರಲಿ. ಎಲ್ಲಿಂದಲೋ ಬಂದು ನಿಮ್ಮ ಕೈ ಹಿಡಿದು ಮೇಲೆ ಎತ್ತುತ್ತಾರೆ ಎಂಬ ಭ್ರಮೆ ಬೇಡ. ನಿಮ್ಮ ಅಧ್ಯಾತ್ಮ ಮನೋಭಾವ ಸ್ಫೂರ್ತಿ ಆಗಬೇಕೇ ವಿನಾ ಯಾವುದೇ ಕೆಲಸಕ್ಕೆ ವಿರಕ್ತಿ ಆಗದಿರಲಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಮನರಂಜನೆ, ರೆಸ್ಟೋರೆಂಟ್, ಹೋಟೆಲ್, ಪ್ರವಾಸ ಇಂಥದ್ದಕ್ಕೆ ಹೆಚ್ಚಿನ ಖರ್ಚು ಆಗಲಿದೆ. ಸ್ನೇಹಿತರು, ಸಂಬಂಧಿಗಳ ವಾಹನವನ್ನು ಬಳಸುವ ಆಲೋಚನೆ ಇದ್ದಲ್ಲಿ ಈ ದಿನ ಮಾಡದಿರುವುದು ಉತ್ತಮ. ಪ್ರೇಮಿಗಳಿಗೆ ಈ ದಿನ ಸವಾಲಿನಿಂದ ಕೂಡಿರುತ್ತದೆ. ಮನೆಯಲ್ಲಿ ನಿಮ್ಮ ಪ್ರೀತಿ ವಿಷಯ ಮೂರನೇ ವ್ಯಕ್ತಿಗಳಿಂದ ಗೊತ್ತಾಗಿ, ಕೂಗಾಟ- ಕಿರುಚಾಟಕ್ಕೆ ಕಾರಣ ಆಗಬಹುದು. ಅಲರ್ಜಿ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನಿಧಾನಕ್ಕೆ ಎಲ್ಲವೂ ಸರಿಹೋಗುತ್ತದೆ ಎಂಬ ಭಾವನೆ ಮೂಡಲಿದೆ. ಸಣ್ಣ- ಪುಟ್ಟ ಯೋಜನೆಗಳು ರೂಪಿಸುವುದಕ್ಕೆ ಅಗತ್ಯ ಸಂಪನ್ಮೂಲಗಳನ್ನು ಒಟ್ಟುಗೂಡಿಸುವುದಕ್ಕೆ ಶುರು ಮಾಡುತ್ತೀರಿ. ಊಟ- ತಿಂಡಿ ವಿಚಾರದಲ್ಲಿ ಪೊಗದಸ್ತಾದ ಆತಿಥ್ಯ ಸವಿಯುವಂಥ ಯೋಗ ಇದೆ. ದೂರದ ಊರಿನಿಂದ ಶುಭ ಸುದ್ದಿ ಕೇಳಿಬರುವಂಥ ಯೋಗ ಇದೆ. ನಿಮ್ಮ ಕೈಯಿಂದ ಹಣ ಹಾಕಿ, ಇತರರಿಗೆ ಅನುಕೂಲ ಮಾಡಿಕೊಡುವಂಥ ಸನ್ನಿವೇಶ ಸೃಷ್ಟಿ ಆಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ದೈವಂ ಮಾನುಷ ರೂಪೇಣ ಎಂಬ ಮಾತಿನಂತೆ ನಿಮ್ಮ ಅಗತ್ಯ, ಅನಿವಾರ್ಯಗಳಿಗೆ ವ್ಯಕ್ತಿಯೊಬ್ಬರ ಮೂಲಕವಾಗಿ ನೆರವು ಒದಗಿಬರುವಂಥ ಸಾಧ್ಯತೆಗಳಿವೆ. ಗಂಭೀರವಾದ ಸಮಸ್ಯೆ ಆಗಬಹುದು ಎಂದುಕೊಂಡಿದ್ದ ವಿಚಾರಗಳು ಬಹಳ ಸಲೀಸಾಗಿ ಬಗೆಹರಿಯಲಿವೆ. ಯಾವುದೇ ವಿಷಯಕ್ಕೆ ಪಂಥ ಕಟ್ಟುವುದಕ್ಕೆ ಹೋಗದಿರಿ. ಮನೆಯ ಮಾರಾಟಕ್ಕೆ ಇಟ್ಟಿದ್ದಲ್ಲಿ ಸೂಕ್ತ ವ್ಯಕ್ತಿಯ ಮೂಲಕ ಖರೀದಿಯ ಪ್ರಸ್ತಾವ ಬರುವ ಸಾಧ್ಯತೆಗಳಿವೆ. ಎಲ್ಲ ವಿಷಯಗಳನ್ನು ಹೃದಯದಿಂದ ಆಲೋಚನೆ ಮಾಡುವುದು ಉಪಯೋಗವಿಲ್ಲ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ನಿಮ್ಮ ಮನೆ ದೇವರ ಆರಾಧನೆಯನ್ನು ಮಾಡಿದರೆ ಹಲವು ಸವಾಲುಗಳು ಸುಲಭವಾಗಿ ಎದುರಿಸಬಹುದು. ಯಾವುದೇ ವಿಚಾರವಾಗಿರಲಿ, ಅದೆಷ್ಟೇ ಸಣ್ಣ ಪ್ರಮಾಣದ್ದಾಗಿರಲಿ ಪೂರ್ತಿಯಾಗಿ ಆ ಬಗ್ಗೆ ತಿಳಿದುಕೊಳ್ಳದೆ ನಿಮ್ಮ ಅಭಿಪ್ರಾಯವನ್ನು ಹೇಳದಿರಿ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸವನ್ನು ಒಪ್ಪಿಕೊಳ್ಳದಿರಿ. ಪಾರ್ಟನರ್ ಷಿಪ್ ವ್ಯವಹಾರಗಳನ್ನು ಮಾಡುತ್ತಿರುವವರು ಕಾಗದ- ಪತ್ರಗಳು, ಸರ್ಕಾರದಿಂದ ತೆಗೆದುಕೊಳ್ಳಬೇಕಾದ ಪರವಾನಗಿಗಳನ್ನು ತೆಗೆದುಕೊಳ್ಳಲಾಗಿದೆಯೇ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗುವಂಥ ಸಾಧ್ಯತೆ ಇದೆ. ಇದರ ಜತೆಜತೆಗೆ ಮನಸ್ಸಿಗೆ ಒಂದು ಸಾಧನೆ ಮಾಡಿದಂಥ ಸಂತೋಷ ದೊರೆಯಲಿದೆ. ನಿಮ್ಮ ಕೈ ಅಳತೆಯಲ್ಲಿ ಸಾಧ್ಯವಾಗುವ ಬಹುತೇಕ ಕೆಲಸಗಳನ್ನು ಮಾಡುವುದಕ್ಕೆ ಅವಕಾಶ ದೊರೆಯಲಿದೆ. ನಿದ್ದೆಯ ವಿಚಾರಕ್ಕೆ ಸ್ವಲ್ಪ ಮಟ್ಟಿಗೆ ಅಡೆತಡೆಗಳು ಎದುರಾಗಬಹುದು. ಈ ಕಾರಣಕ್ಕೆ ಏಕಾಗ್ರತೆ ಕಷ್ಟ ಆಗಲಿದೆ. ಅಪಾರ್ಟ್ ಮೆಂಟ್ ಖರೀದಿಗೆ ಪ್ರಯತ್ನಿಸುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವಂಥ ಅವಕಾಶಗಳಿವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ನಿಮ್ಮ ಸಾಮರ್ಥ್ಯವನ್ನು ಸಂಪೂರ್ಣ ಬಳಸಿಕೊಂಡು, ಈ ದಿನ ನೀವೇನು ಎಂಬುದನ್ನು ಸಾಬೀತು ಮಾಡಬೇಕಾಗುತ್ತದೆ. ನಿಮಗೆ ಪರಿಚಯ ಇರದ ವ್ಯಕ್ತಿಯ ಬಗ್ಗೆ ಯಾರದೋ ಮಾತಿನ ಆಧಾರದಲ್ಲಿ ಅಭಿಪ್ರಾಯವನ್ನು ಹೇಳದಿರಿ. ನೀರಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಇರುವವರಿಗೆ ಹೆಚ್ಚಿನ ಆದಾಯ ಬರಲಿದೆ. ಸೌಂದರ್ಯವರ್ಧಕ ವಸ್ತುಗಳಿಗಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ಈ ಹಿಂದೆ ನೀವು ಮಾಡಿದ್ದ ಕೆಲಸವನ್ನು ಗುರುತಿಸಿ, ಈಗ ಹೊಸದಾಗಿ ಕೆಲಸ ವಹಿಸಲಿದ್ದಾರೆ.

ಲೇಖನ- ಎನ್‌.ಕೆ.ಸ್ವಾತಿ

Published On - 6:12 am, Sun, 26 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ