AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 27ರ ದಿನಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 27ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 27ರ ದಿನಭವಿಷ್ಯ 
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 27, 2023 | 5:22 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 27ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮ ಸ್ನೇಹಿತರು ತರುವ ಪ್ರಾಜೆಕ್ಟ್‌ಗಳನ್ನು ಗಂಭೀರವಾಗಿ ಪರಿಗಣಿಸಿ. ಮೇಲುನೋಟಕ್ಕೆ ಕಾಣುವುದಕ್ಕಿಂತ ಹೆಚ್ಚಿನ ಅನುಕೂಲ ಇದರಿಂದ ಆಗಲಿದೆ. ದೇವಾಲಯಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೆಚ್ಚಿನ ಜವಾಬ್ದಾರಿಗಳು ಹುಡುಕಿಕೊಂಡು ಬರಲಿವೆ. ತೀರ್ಥಕ್ಷೇತ್ರ ಪ್ರಯಾಣಗಳಿಗೆ ಸಿದ್ಧತೆ ಮಾಡಿಕೊಳ್ಳಲಿದ್ದೀರಿ. ಹೋಟೆಲ್ ಉದ್ಯಮಿಗಳಿಗೆ ಬ್ಯಾಂಕಿಂಗ್ ವ್ಯವಹಾರಗಳು ಏನಾದರೂ ಇದ್ದಲ್ಲಿ ಅದು ಪೂರ್ಣಗೊಳ್ಳುವ ಅವಕಾಶ ಇದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಆಂಜನೇಯ ಸ್ವಾಮಿ ಆರಾಧನೆ ಮಾಡುವುದರಿಂದ ನಿಮಗೆ ಈ ದಿನ ನೆಮ್ಮದಿ ಸಿಗಲಿದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಶುಭ ಕಾರ್ಯಗಳಿಗೆ ಹಣ ಹೊಂದಿಸುವ ಬಗ್ಗೆ ಮನೆಯಲ್ಲಿ ಚರ್ಚೆ ಆಗುವ ಸಾಧ್ಯತೆ ಇದೆ. ವಾಹನ ಓಡಿಸುವಾಗ ಒಂದಿಷ್ಟು ಎಚ್ಚರ ವಹಿಸುವುದು ಮುಖ್ಯ. ಪಾಸ್ ವರ್ಡ್, ಎಟಿಎಂ ಪಿನ್ ಕೋಡ್ ಇಂಥವುಗಳನ್ನು ಜೋಪಾನವಾಗಿ ಇಟ್ಟುಕೊಳ್ಳಿ. ಏಕೆಂದರೆ ಇಂಥವುಗಳಿಂದಲೇ ಹಣವನ್ನು ನಷ್ಟ ಅನುಭವಿಸಬಹುದು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಪಬ್, ರೆಸ್ಟೋರೆಂಟ್‌ಗಳು, ಮಲ್ಟಿಪ್ಲೆಕ್ಸ್‌ಗಳು ಇಂಥ ಕಡೆ ಈ ದಿನ ನಿಮಗೆ ಖರ್ಚಾಗುವ ಯೋಗ ಇದೆ. ಇನ್ನು ಬಟ್ಟೆ ವಿಚಾರದಲ್ಲೂ ಒಂದಿಷ್ಟು ಧಾರಾಳವಾಗಿ ಖರ್ಚಾಗಬಹುದು. ಕ್ರೆಡಿಟ್ ಕಾರ್ಡ್ ಬಳಸುವಂಥವರು ಖರ್ಚಿನ ಮೇಲೆ ನಿಗಾ ಇಡಿ. ದಿನದ ದ್ವಿತೀಯಾರ್ಧದಲ್ಲಿ ಸೊಗಸಾದ ಆಹಾರ ತಿನಿಸುಗಳನ್ನು ಸವಿಯುವ ಯೋಗ ಇದೆ. ಹೊಸ ವಾಹನ ಖರೀದಿಗಾಗಿ ಅಡ್ವಾನ್ಸ್ ಮಾಡುವ ಅಥವಾ ಸೆಕೆಂಡ್ ಹ್ಯಾಂಡ್ ವಾಹನಗಳನ್ನು ಖರೀದಿಸುವ ಯೋಗ ಇದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಉದ್ಯೋಗ ಸ್ಥಳದಲ್ಲಿ ಈ ದಿನ ಸಣ್ಣ ಸುಳ್ಳನ್ನು ಸಹ ಹೇಳದಿರಿ. ಹೀಗೆ ಮಾಡಿದಲ್ಲಿ ಇದಕ್ಕೆ ಭಾರೀ ಬೆಲೆಯನ್ನು ತೆರಬೇಕಾಗುತ್ತದೆ. ಈ ದಿನ ಕಾಯುವಿಕೆ ನಿಮಗೆ ಬೇಸರ ತರಿಸಬಹುದು. ಇಂಥ ಸಮಯಕ್ಕೆ ಬರುತ್ತೀನಿ ಎಂದವರು ಬಾರದೇ ಇರಬಹುದು ಅಥವಾ ತಡವಾಗಬಹುದು. ಇನ್ನು ಉಪಾನ್ಯಾಸಕರು, ಶಿಕ್ಷಣ ಕ್ಷೇತ್ರದಲ್ಲಿ ಇರುವವರಿಗೆ ಗೌರವ- ಸಮ್ಮಾನಗಳು ದೊರೆಯುವ ದಿನ ಇದಾಗಿರಲಿದೆ. ಬೆನ್ನು ನೋವಿನ ಸಮಸ್ಯೆ ಕಾಡಬಹುದು, ಎಚ್ಚರ ಇರಲಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಯಾವುದೋ ಹಳೆಯ ವಿಚಾರವೊಂದು ನಿಮ್ಮನ್ನು ಈ ದಿನ ವಿಪರೀತ ಕಾಡಲಿದೆ. ದಾಕ್ಷಿಣ್ಯಕ್ಕೆ ಸಿಲುಕಿ ಯಾರಿಗಾದರೂ ಜಾಮೀನು ನೀಡುವುದಾಗಿ ಮಾತು ನೀಡಬೇಡಿ. ಏಕೆಂದರೆ ಈ ಕಾರಣಕ್ಕೆ ನಿಮ್ಮ ಸ್ನೇಹಕ್ಕೆ ಅಥವಾ ಸಂಬಂಧಕ್ಕೆ ತಡೆಯಾಗಿ ಪರಿಣಮಿಸಬಹುದು. ಇನ್ನು ಬೆಲೆಬಾಳುವ ವಸ್ತುಗಳನ್ನು ಜೋಪಾನವಾಗಿ ಇರಿಸಿಕೊಳ್ಳಿ. ಜ್ಯೋತಿಷಿಗಳು, ಪುರೋಹಿತರಿಗೆ ದೂರ ಪ್ರಯಾಣದ ಯೋಗ ಇದ್ದು, ದಿಢೀರನೆ ಹೊರಡಬೇಕಾಗಿ ಬರುವುದರಿಂದ ಕೆಲವು ಕೆಲಸ- ಕಾರ್ಯಗಳು ಅರ್ಧಕ್ಕೆ ನಿಲ್ಲಲಿವೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಪ್ರೀತಿ- ಪ್ರೇಮದಲ್ಲಿ ಇರುವವರಿಗೆ ಈ ದಿನ ಖರ್ಚು ಹಾಗೂ ಸಂತೋಷ ಎರಡೂ ಒಟ್ಟೊಟ್ಟಿಗೆ ಇದೆ. ಭಾವನಾತ್ಮಕವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಕ್ರಿಯೇಟಿವ್ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಒಂದಿಷ್ಟು ಒತ್ತಡ ಸೃಷ್ಟಿ ಆಗಬಹುದು. ಆದರೆ ಅದರಿಂದ ಬೇಜಾರಾಗಿ, ಅದರ ಪರಿಣಾಮ ನಿಮ್ಮ ಕೆಲಸದ ಮೇಲೆ ಆಗದಂತೆ ನೋಡಿಕೊಳ್ಳಿ. ಕ್ರೆಡಿಟ್ ಕಾರ್ಡ್ ಬಳಸುವವರು ಪಾವತಿ ದಿನಾಂಕವನ್ನು ಸರಿಯಾಗಿ ಗಮನಿಸಿಕೊಳ್ಳಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಎಲ್ಲವನ್ನೂ ಮುಂಚೆಯೇ ಹೇಳಿಬಿಟ್ಟಿದ್ದೀರೇನೋ ಎಂಬಂತೆ ನಿಮ್ಮ ಮನಸಿನ ಮಾತುಗಳನ್ನು ಆಪ್ತರು, ಹತ್ತಿರದವರು ನಡೆದುಕೊಳ್ಳಲಿದ್ದಾರೆ. ಕುಟುಂಬದವರೊಂದಿಗೆ ಒಟ್ಟಿಗೆ ಸಮಯ ಕಳೆಯಲಿದ್ದೀರಿ. ನೀವು ಬಳಸುವ ವಾಹನದ ಸರ್ವೀಸ್ ಬಗ್ಗೆ ಕಾಳಜಿ ನೀಡಿ, ಇಲ್ಲದಿದ್ದಲ್ಲಿ ಮುಖ್ಯವಾದ ಸಮಯದಲ್ಲೇ ಕೈ ಕೊಡಬಹುದು. ದೂರ ಪ್ರಯಾಣ ಮಾಡುವವರಿದ್ದಲ್ಲಿ ಸಿದ್ಧತೆ ಸರಿಯಾಗಿ ಮಾಡಿಕೊಳ್ಳುವುದು ಅಗತ್ಯ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಒಂದೇ ವಿಷಯದ ಬಗ್ಗೆ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಪದೇ ಪದೇ ಮಾತನಾಡಿ ನಿಮಗೆ ಬೇಸರ ತರಬಹುದು. ಆದರೆ ಅವರನ್ನು ಬಯ್ಯುವುದೋ ಅಥವಾ ಕೋಪದಿಂದ ದೂರ ಮಾಡಿಕೊಳ್ಳುವುದೋ ಸರಿಯಲ್ಲ. ಬಾಡಿಗೆ ಮನೆಯಲ್ಲಿ ವಾಸವಿದ್ದು, ಅದನ್ನು ಬದಲಾವಣೆ ಮಾಡಬೇಕು ಎಂದು ಪ್ರಯತ್ನ ಮಾಡುತ್ತಿದ್ದಲ್ಲಿ ನಿಮ್ಮ ನಿರೀಕ್ಷೆಗೆ ತಕ್ಕಂಥ ವಾತಾವರಣ, ಮನೆ ದೊರೆಯಲಿದೆ. ವಿಷ್ಣು ಸಹಸ್ರನಾಮ ಶ್ರವಣ ಅಥವಾ ಪಠಣ ಮಾಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಹೊಸದಾಗಿ ಕ್ರೆಡಿಟ್ ಕಾರ್ಡ್‌ಗೆ ಅಪ್ಲೈ ಮಾಡಬೇಕು ಎಂದು ಇದ್ದಲ್ಲಿ ಈ ದಿನದ ಮಟ್ಟಿಗೆ ಮುಂದೂಡಿ. ನಿಮ್ಮ ಮೊಬೈಲ್‌ನಲ್ಲಿ ಇರುವ ಡೇಟಾ ಬಗ್ಗೆ ಎಚ್ಚರಿಕೆ ವಹಿಸುವುದು ಮುಖ್ಯ. ನಿಮ್ಮ ವೈಯಕ್ತಿಕ ಡೇಟಾ, ಫೋಟೋ, ಮಾಹಿತಿಗಳನ್ನು ಯಾರೂ ಕಳುವು ಮಾಡದಂತೆ ನೋಡಿಕೊಳ್ಳಿ. ಅಪರಿಚಿತ ಮೆಸೇಜ್, ಮೇಲ್‌ಗಳನ್ನು ತೆರೆಯುವ ಮುನ್ನ, ನಿಮ್ಮ ಗ್ಯಾಜೆಟ್‌ಗಳನ್ನು ಬೇರೆಯವರಿಗೆ ಕೊಡುವವರಿದ್ದಲ್ಲಿ ಜಾಗ್ರತೆ.

ಲೇಖನ- ಎನ್‌.ಕೆ.ಸ್ವಾತಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್