AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Predictions: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 29ರ ದಿನಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 29ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Predictions: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 29ರ ದಿನಭವಿಷ್ಯ 
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 29ರ ದಿನಭವಿಷ್ಯ Image Credit source: istock
Rakesh Nayak Manchi
|

Updated on: Apr 29, 2023 | 5:50 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 29ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಆದಾಯದಲ್ಲಿನ ಇಳಿಕೆ ಚಿಂತೆಗೆ ಕಾರಣ ಆಗಬಹುದು. ಮಕ್ಕಳ ಸಲುವಾಗಿಯೇ ಸಾಲ ಮಾಡಬೇಕಾಗಬಹುದು. ತಂದೆ- ತಾಯಿಗಳ ಮಾತಿಗೆ ಗೌರವ ನೀಡಿ. ಕಫ, ಶೀತ, ಜ್ವರದಂಥ ಆರೋಗ್ಯ ಸಮಸ್ಯೆಗಳು ಕಾಡಬಹುದು. ಒಲ್ಲದ ಮನಸಿನಿಂದಲೇ ಕೆಲವು ಕೆಲಸಗಳನ್ನು ಮಾಡಬೇಕಾಗಬಹುದು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮ್ಮ ಕೆಲಸವನ್ನು ನೀವೇ ಮಾಡಿಕೊಳ್ಳುವುದು ಉತ್ತಮ. ಇನ್ನೊಬ್ಬರಿಗೆ ವಹಿಸಿದ ಮೇಲೆ ಅತಿಯಾದ ನಿರೀಕ್ಷೆ ಬೇಡ. ಮಾನಸಿಕ ನೆಮ್ಮದಿ ಹಾಳಾಗುತ್ತದೆ. ಆಪ್ತರ ಬಗ್ಗೆ ಅನುಮಾನ ಪಡುವುದು ಸರಿಯಲ್ಲ. ವಾಹನ ಚಾಲನೆ ಮಾಡುವವರು ಎಚ್ಚರಿಕೆಯಿಂದ ಇರಬೇಕು. ಆತುರ ಬೇಡ. ಹೊಸ ಬಟ್ಟೆ, ಗ್ಯಾಜೆಟ್ ಖರೀದಿಸುವ ಯೋಗ ಇದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಪ್ರೇಮಿಗಳಿಗೆ ವಿರಹದ ದಿನವಾಗಿರುತ್ತದೆ. ಇಷ್ಟಪಡುವ ಊಟ- ತಿಂಡಿ ಮಾಡುವ ಯೋಗ ಇದೆ. ಹಣ ಉಳಿತಾಯ ಯೋಜನೆ ಬಗ್ಗೆ ಸಂಗಾತಿ ಜತೆ ಚರ್ಚೆ ನಡೆಸಲಿದ್ದೀರಿ. ಸಮಯಕ್ಕೆ ಸರಿಯಾಗಿ ಊಟ- ತಿಂಡಿ ಮಾಡಿ.  ಇಲ್ಲದಿದ್ದರೆ ಗ್ಯಾಸ್ಟ್ರಿಕ್ ಸಮಸ್ಯೆ ಆಗಬಹುದು. ಎಲ್ಲ ವಿಚಾರಕ್ಕೂ ಅನುಮಾನ ಪಡುವುದು ಸರಿಯಲ್ಲ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಮನೆಯಲ್ಲಿ ಅಗತ್ಯ ಇರುವ ಕೆಲಸಗಳನ್ನು ಮಾಡಿಸಲು ಶ್ರಮ ಹಾಕಲಿದ್ದೀರಿ. ಖರ್ಚಿನ ಪ್ರಮಾಣ ಹೆಚ್ಚಾಗಲಿದೆ. ಸ್ನೇಹಿತರು, ಸಂಬಂಧಿಕರನ್ನು ಭೇಟಿ ಆಗಲಿದ್ದೀರಿ. ಹೂಡಿಕೆ ಬಗ್ಗೆ ಆಲೋಚನೆ ಮಾಡಲಿದ್ದೀರಿ. ರುಚಿಕಟ್ಟಾದ ಊಟ- ತಿಂಡಿ ಮಾಡುವ ಯೋಗ ಇದೆ. ಹೊಸಬರ ಜತೆ ಸಾಂಸಾರಿಕ ವಿಚಾರಗಳನ್ನು ಹಂಚಿಕೊಳ್ಳಬೇಡಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಕೃಷಿಕರಿಗೆ ಮನೆಯಲ್ಲಿ ಸಂತೋಷವಾದ ದಿನ. ಹೊಸ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸುವಿರಿ. ನೇರವಾದ ಮಾತುಗಳಿಂದ ಇತರರ ಗಮನ ಸೆಳೆಯುತ್ತೀರಿ. ಸ್ವಲ್ಪ ಮಟ್ಟಿಗೆ ದೇಹಾಲಸ್ಯ ಇರುತ್ತದೆ. ಅದಕ್ಕಾಗಿ ವಿಶ್ರಾಂತಿ ಪಡೆಯಲಿದ್ದೀರಿ. ವೃತ್ತಿಪರರಿಗೆ ಹಿನ್ನಡೆ ಇದೆ. ಪಾರ್ಟಿಗಳಿಗೆ ಆಹ್ವಾನ ಬರಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಮಧುಮೇಹ, ರಕ್ತದೊತ್ತಡ ಸಮಸ್ಯೆ ಇರುವವರು ಬಹಳ ಎಚ್ಚರಿಕೆಯಿಂದ ಇರಬೇಕು. ಇತರರು ನೀಡುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಏಕಾಗ್ರತೆಯಿಂದ ಕೆಲಸ ಮಾಡಿ. ಸಣ್ಣ ಪುಟ್ಟ ಅಪಘಾತ ಆಗುವ ಸಾಧ್ಯತೆ ಇದೆ. ಆದ್ಯತೆ ಮೇಲೆ ಕೆಲಸ- ಕಾರ್ಯಗಳನ್ನು ಪೂರ್ಣಗೊಳಿಸಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಸಂಗಾತಿ, ಮಕ್ಕಳ ಜತೆ ಉತ್ತಮ ಸಮಯ ಕಳೆಯಲಿದ್ದೀರಿ. ವ್ಯಾಪಾರ- ವ್ಯವಹಾರ ಮಾಡುವವರಿಗೆ ಏಳ್ಗೆ ಇದೆ. ಹೆಚ್ಚುವರಿ ಆದಾಯ ಮೂಲದ ಬಗ್ಗೆ ಯೋಚಿಸುತ್ತೀರಿ. ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚರ್ಚೆ ನಡೆಯಲಿದೆ. ದೈಹಿಕ ಆಯಾಸ ಪರಿಹಾರಕ್ಕೆ ವಿಶ್ರಾಂತಿ ಪಡೆಯಲಿದ್ದೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಹೇಳಿಕೆ ಮಾತುಗಳನ್ನು ಕೇಳಬೇಡಿ. ನಿಮ್ಮ ಮೂಲಕ ಇತರರು ತಮ್ಮ ಗುರಿ ಸಾಧನೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಾರೆ. ಮೇಲಧಿಕಾರಿಗಳು ತಮ್ಮ ಮನಸ್ಸಿನಲ್ಲಿರುವ ವಿಚಾರ ನಿಮಗೆ ಹೇಳುತ್ತಿಲ್ಲ ಎಂಬುದು ನಿಮ್ಮ ಗಮನಕ್ಕೆ ಬರುತ್ತದೆ. ಮಾತಿನ ಮೇಲೆ ನಿಗಾ ಇರಬೇಕು. ಇಲ್ಲದಿದ್ದರೆ ಅನಗತ್ಯ ವಿವಾದ ಆಗಬಹುದು.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಸ್ವಂತ ವ್ಯವಹಾರ ಮಾಡುವವರಿಗೆ ಏಳ್ಗೆ ಇದೆ. ಕಿರು ಪ್ರಯಾಣ ಮಾಡುವ ಯೋಗ ಇದೆ. ವಾಹನ ಖರೀದಿ ಬಗ್ಗೆ ಮನೆಯಲ್ಲಿ ಚರ್ಚೆ ನಡೆಸಲಿದ್ದೀರಿ. ಸಾಲ ಮಾಡಬೇಕಾದ ಸ್ಥಿತಿ ನಿರ್ಮಾಣ ಆಗುತ್ತದೆ. ಮನೆಗೆ ಗೃಹಾಲಂಕಾರ ವಸ್ತುಗಳನ್ನು ಖರೀದಿ ಮಾಡುವ ಯೋಗ ಇದೆ. ಆದರೆ ಹಾಸಿಗೆ ಇದ್ದಷ್ಟು ಕಾಲು ಚಾಚಿ.

ಲೇಖನ- ಎನ್‌.ಕೆ.ಸ್ವಾತಿ