Numerology Predictions: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 30ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 30ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Predictions: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 30ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 30ರ ದಿನಭವಿಷ್ಯ
Rakesh Nayak Manchi

Updated on: Apr 30, 2023 | 6:17 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 30ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮ ನಿರ್ದಾಕ್ಷಿಣ್ಯ ಮಾತುಗಳಿಂದ ಸಂಬಂಧಿಕರಲ್ಲಿ, ಕುಟುಂಬ ವರ್ಗದವರಲ್ಲಿ ಸಿಟ್ಟಿಗೆ ಕಾರಣರಾಗಲಿದ್ದೀರಿ. ಆದ್ದರಿಂದ ಸಣ್ಣ- ಪುಟ್ಟ ಸಂಗತಿಗಳನ್ನು ದೊಡ್ಡದು ಮಾಡಿ, ಯಾರ ಜತೆಗೂ ವಾಗ್ವಾದಕ್ಕೆ ಇಳಿಯಬೇಡಿ. ಸಾಂಸಾರಿಕ ವಿಚಾರಗಳನ್ನು ಹೊಸಬರ ಜತೆಗೆ ಹಂಚಿಕೊಳ್ಳಬೇಡಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮ್ಮ ಅನುಮಾನದ ಸ್ವಭಾವದಿಂದ ದೊಡ್ಡ ಪ್ರಯೋಜನ ಆಗಲಿದೆ. ಮೇಲ್ನೋಟಕ್ಕೆ ಇತರರು ನಿಮ್ಮ ಬಗ್ಗೆ ಯಾವ ಕಾರಣಕ್ಕೆ ಬೇಸರ ವ್ಯಕ್ತಪಡಿಸಿದ್ದರೋ ಆ ನಂತರ ಅದಕ್ಕೆ ಪಶ್ಚಾತಾಪ ಪಡಲಿದ್ದಾರೆ. ಮುಖ್ಯ ಕಾಗದ- ದಾಖಲೆ, ಪತ್ರಗಳಗಳನ್ನು ಜವಾಬ್ದಾರಿಯಿಂದ ನೋಡಿಕೊಳ್ಳಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಸಣ್ಣ ಕೆಲಸ ಎಂದು ಯಾವುದನ್ನೂ ನಿರ್ಲಕ್ಷ್ಯ ಮಾಡುವಂತಿಲ್ಲ. ಆದಾಯ ಹೆಚ್ಚಿಸಿಕೊಳ್ಳಬೇಕು ಎಂಬ ಏಕೈಕ ಕಾರಣಕ್ಕೆ ಅಪಾಯಕರ ಸಂಗತಿಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ. ವದಂತಿ ಬಂದಿದೆ ಎಂದು ನಿರ್ಲಕ್ಷ್ಯ ಮಾಡಿದ್ದ ಸಂಗತಿಯೊಂದಕ್ಕೆ ದಿಢೀರನೇ ಪ್ರಾಮುಖ್ಯ ಬರುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಮದ್ಯಪಾನ- ಧೂಮಪಾನದ ವ್ಯಸನ ಇರುವವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಬಹುದು. ಸಂಗಾತಿಯ ಒತ್ತಡಕ್ಕೆ ಮಣಿದು, ಈ ಹಿಂದೆ ಯಾರ ಜತೆ ಜಗಳ ಮಾಡಿಕೊಂಡಿದ್ದರೋ ಅಂಥವರ ಜತೆಗೆ ರಾಜೀ ಸಂಧಾನ ಮಾಡಿಕೊಳ್ಳಬೇಕಾಗುತ್ತದೆ. ಆದರೆ ಈ ಕಾರಣಕ್ಕೆ ಬೇಸರ ಮಾಡಿಕೊಳ್ಳುವ ಅಗತ್ಯ ಇಲ್ಲ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನೀವೇ ಆರಂಭಿಸಿದ ಆಟವೊಂದನ್ನು ಮುಗಿಸಬೇಕಾಗುತ್ತದೆ. ಇಲ್ಲದ ಆತ್ಮವಿಶ್ವಾಸವನ್ನು ತುಂಬಿ, ಇಷ್ಟು ಸಮಯ ತೆಗೆದುಕೊಂಡ ಅನುಕೂಲವನ್ನು ನಿಲ್ಲಿಸಿಬಿಡಿ. ನೇರವಾಗಿ, ಪ್ರಾಮಾಣಿಕತೆಯಿಂದ ಮಾತನಾಡಲು ಪ್ರಯತ್ನಿಸಿ. ಉಳಿತಾಯದ ಹಣವನ್ನು ಬಳಸಿಕೊಳ್ಳಲೇಬೇಕಾದ ಅನಿವಾರ್ಯ ಸೃಷ್ಟಿಯಾಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಭಾರೀ ಹೂಡಿಕೆಯೊಂದಕ್ಕೆ ಸಂಬಂಧಿಸಿದಂತೆ ನಿಮ್ಮ ಸಲಹೆ- ಸೂಚನೆಗಳಿಗೆ ಇತರರು ಬೆಲೆ ನೀಡುತ್ತಾರೆ. ನಿಮ್ಮ ಮಾತಿಗೆ ಬೆಲೆ ಕೊಟ್ಟು ಕೆಲವು ಕೆಲಸಗಳು ಆಗುವ ಸೂಚನೆ ಇದ್ದು, ರಾಜಕಾರಣಿಗಳು ಹೆಚ್ಚು ಪ್ರಭಾವಿಗಳಾಗುವ ಲಕ್ಷಣಗಳು ಗೋಚರಿಸುತ್ತವೆ. ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಹಣ ಮೀಸಲಿಡಲಿದ್ದೀರಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಗುರಿಯ ಕಡೆಗೆ ಸಾಗುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಸುತ್ತೀರಿ. ಸ್ನೇಹಿತರು ದೊಡ್ಡ ಮಟ್ಟದ ಬೆಂಬಲ ವ್ಯಕ್ತಪಡಿಸಲಿದ್ದಾರೆ. ದೇವತಾ ಕಾರ್ಯಗಳಿಗಾಗಿ ಸಮಯ ಮೀಸಲಿಡಲಿದ್ದೀರಿ. ಇದರಿಂದ ಮಾನಸಿಕವಾಗಿ ನೆಮ್ಮದಿ ದೊರೆಯಲಿದೆ. ಪುಷ್ಕಳವಾದ ಭೋಜನ ಸವಿಯುವ ಯೋಗ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಒಪ್ಪಂದದಂತೆ ನಡೆದುಕೊಳ್ಳಲು ಪ್ರಯತ್ನಿಸಿ. ಒಂದು ವೇಳೆ ನಿಮ್ಮಿಂದ ಅದರಂತೆ ನಡೆದುಕೊಳ್ಳಲು ಸಾಧ್ಯವಾಗದಿದ್ದಲ್ಲಿ ವಾಸ್ತವ ಸ್ಥಿತಿಯನ್ನು ತಿಳಿಸಿ, ಇನ್ನೂ ಸ್ವಲ್ಪ ಸಮಯ ಕೇಳಿ ಪಡೆಯಿರಿ. ಆದರೆ ಸುಳ್ಳು ಹೇಳುವ ಪ್ರಯತ್ನ ಮಾತ್ರ ಬೇಡ. ರಾಜಕೀಯ ನಾಯಕರಿಗೆ ಹೊಸ ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಸ್ವಂತ ವ್ಯಾಪಾರ- ವ್ಯವಹಾರ ಮಾಡಿಕೊಂಡಿರುವವರಿಗೆ ಮುಖ್ಯವಾದ ತೀರ್ಮಾನ ಕೈಗೊಳ್ಳಲೇಬೇಕಾಗುತ್ತದೆ. ಎಲ್ಲರಿಗೂ ಒಳ್ಳೆಯವರಾಗಿ ಇರಲು ಸಾಧ್ಯವಿಲ್ಲವಾದ್ದರಿಂದ ನಿಮ್ಮ ನಿರ್ಧಾರಗಳು ಕೆಲವರಿಗೆ ಬೇಸರ ಉಂಟು ಮಾಡಲಿವೆ. ಆಪ್ತರು ನೀಡುವ ಸಲಹೆ- ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ.

ಲೇಖನ- ಎನ್‌.ಕೆ.ಸ್ವಾತಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us