ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಆಗಸ್ಟ್ 15ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಯಾರದೋ ಉದ್ಧಾರ ನಾನು ಮಾಡಿಬಿಡ್ತೀನಿ ಎಂಬ ಭ್ರಮೆ ಬೇಡ. ಇತರರ ಆತ್ಮಗೌರವಕ್ಕೆ ಚ್ಯುತಿ ಆಗುವಂಥ ಮಾತುಗಳನ್ನು ಆಡಬೇಡಿ. ಇದರಿಂದ ನಿಮ್ಮದೇ ಕೆಲಸಕ್ಕೆ ಪೆಟ್ಟು ಬೀಳಬಹುದು. ಇನ್ನು ಪೂರ್ತಿ ಮಾಹಿತಿ ಇಲ್ಲದ ಹೊರತು ಯಾವುದೇ ವಸ್ತುವಿನ ಬೆಲೆಯನ್ನು ಹೇಳಲಿಕ್ಕೆ ಹೋಗದಿರಿ. ಸೆಕೆಂಡ್ ಹ್ಯಾಂಡ್ ವಾಹನವನ್ನು ಕೊಳ್ಳುವಂಥ ಯೋಗ ಇದೆ. ಮನೆಯಲ್ಲಿ ಕೆಲವು ಸಣ್ಣ- ಪುಟ್ಟ ದುರಸ್ತಿಗಳನ್ನು ಮಾಡಿಸಿಕೊಳ್ಳಲು ವಿಚಾರಣೆ ಮಾಡಲಿದ್ದೀರಿ.
ಶಾಶ್ವತವಾದ ಆದಾಯ ಮಾಡಿಕೊಳ್ಳುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಲಿದ್ದೀರಿ. ಸ್ವಂತ ಉದ್ಯಮ, ವ್ಯವಹಾರ ನಡೆಸುತ್ತಿರುವವರಿಗೆ ಸಂಘ- ಸಂಸ್ಥೆಗಳಿಂದ ಸನ್ಮಾನ, ಮೆಚ್ಚುಗೆ ದೊರೆಯಲಿದೆ. ಮಕ್ಕಳ ಶಿಕ್ಷಣದ ಸಲುವಾಗಿ ಚಿಂತೆ ಕಾಡಲಿದೆ. ಹೆಚ್ಚಿನ ಖರ್ಚು ಮಾಡಲಿದ್ದೀರಿ. ನಿಮ್ಮ ನಿರ್ಧಾರದ ಬಗ್ಗೆ ಇತರರು ಅನುಮಾನ ವ್ಯಕ್ತಪಡಿಸಲಿದ್ದಾರೆ. ಒಂದು ವೇಳೆ ನಿಮ್ಮೆದುರೇ ಈ ಮಾತನ್ನು ಹೇಳಿದಲ್ಲಿ ಮನಸ್ಸಿಗೆ ಬೇಸರ ಪಟ್ಟುಕೊಳ್ಳದಿರಿ.
ದೇವತಾಕಾರ್ಯಗಳಿಗೆ ನಿಮ್ಮಿಂದ ದೇಣಿಗೆ ಮತ್ತ್ಯಾವುದಾದರೂ ನೆರವು ಕೇಳಿಕೊಂಡು ಬರಬಹುದು. ನಿಮ್ಮಿಂದ ಸಾಧ್ಯವಾದಲ್ಲಿ ಖಂಡಿತಾ ನೆರವಾಗಿ. ಇದು ಆ ದೇವರ ಸೇವೆ ಮಾಡುವುದಕ್ಕೆ ನಿಮಗೆ ದೊರೆಯುವ ಅವಕಾಶ ಆಗಿರಲಿದೆ. ಬೇಕೆಂತಲೇ ಕೆಲವರು ತಪ್ಪು ಅಭಿಪ್ರಾಯ ಮೂಡಿಸುವಂಥ ಪ್ರಯತ್ನ ಮಾಡಲಿದ್ದಾರೆ. ಅದನ್ನು ಹೋಗಲಾಡಿಸುವುದು ಹೇಗೆ ಎಂಬ ಬಗ್ಗೆ ಆಲೋಚಿಸಿ, ಅದನ್ನು ಬಿಟ್ಟು ಕೂಗಾಟ- ಕಿರುಚಾಟ ಮಾಡಿದಲ್ಲಿ ನೀವೇ ಸಮಸ್ಯೆ ಮಾಡಿಕೊಂಡಂತೆ ಆಗುತ್ತದೆ.
ತಂದೆ- ತಾಯಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಿ. ನಿಮಗೆ ಸಂಬಂಧಪಡದ ವಿಚಾರಗಳಿಗೆ ತಲೆ ಹಾಕದಿರುವುರು ಉತ್ತಮ. ಸಂಬಂಧಿಕರ ಮನೆಯಲ್ಲಿನ ಕಾರ್ಯಕ್ರಮಗಳಿಗೆ ನೀವು ಹೆಚ್ಚಿನ ಓಡಾಟ ನಡೆಸಲಿದ್ದೀರಿ. ಯುವತಿಯರು ವಿವಾಹ ವಯಸ್ಕರಾಗಿದ್ದಲ್ಲಿ ಸೂಕ್ತ ಸಂಬಂಧಗಳು ಹುಡುಕಿಕೊಂಡು ಬರಲಿವೆ. ಕ್ರೀಡಾ ಕ್ಷೇತ್ರದಲ್ಲಿ ಇದ್ದಲ್ಲಿ ಏಳ್ಗೆ ಸಾಧ್ಯತೆಗಳು ಹೆಚ್ಚಾಗಿವೆ. ಸಿಗುವ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳುವ ಕಡೆಗೆ ಗಮನವನ್ನು ನೀಡಬೇಕು.
ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಿಗೆ ಸಂಬಂಧಿಕರಿಂದ ಅವಮಾನ ಆಗಬಹುದು. ಆದ್ದರಿಂದ ಸಮಾರಂಭಗಳಿಗೋ ಕಾರ್ಯಕ್ರಮಗಳಿಗೋ ಭಾಗವಹಿಸುತ್ತಿದ್ದೀರಿ ಎಂದಾದಲ್ಲಿ ಆ ಸ್ಥಳದಲ್ಲಿ ನೀವಾಡುವ ಮಾತಿನ ಮೇಲೆ ನಿಗಾ ಇರಿಸಿಕೊಳ್ಳಿ. ನಿಮ್ಮಿಂದ ತಪ್ಪು ಮಾತುಗಳನ್ನು ಆಡಿಸುವುದಕ್ಕೆ ಅಥವಾ ಬೇಕೆಂತಲೇ ಕೆರಳಿಸುವುದಕ್ಕೆ ಕೆಲವರು ಪ್ರಯತ್ನಿಸುತ್ತಾರೆ. ಮಕ್ಕಳ ಸಲುವಾಗಿ ಹಣವನ್ನು ಹೊಂದಿಸಬೇಕಾದ ಅನಿವಾರ್ಯ ಸೃಷ್ಟಿ ಆಗಲಿದೆ. ಹೆಣ್ಣುಮಕ್ಕಳಿದ್ದು, ಅವರಿಗೆ ಮದುವೆ ಆಗಿದ್ದಲ್ಲಿ ಅಂಥವರ ಸಂಸಾರದಲ್ಲಿ ಭಿನ್ನಾಭಿಪ್ರಾಯ ತೀವ್ರಗೊಳ್ಳುವ ಸಾಧ್ಯತೆಗಳಿವೆ.
ಕುಟುಂಬ ಸದಸ್ಯರ ಜತೆಗೆ ಪ್ರವಾಸ ತೆರಳುವಂಥ ಯೋಗ ಇದೆ. ದಂಪತಿ ಮಧ್ಯೆ ಸಣ್ಣ- ಪುಟ್ಟ ಮನಸ್ತಾಪಗಳು ಇದ್ದಲ್ಲಿ ಬಗೆಹರಿಸಿಕೊಳ್ಳುವುದಕ್ಕೆ ಉತ್ತಮ ವೇದಿಕೆ ದೊರೆಯಲಿದೆ. ನಿಮ್ಮಲ್ಲಿ ಕೆಲವರು ಮನೆಯನ್ನು ಬದಲಿಸಿ, ಬೇರೆಡೆ ತೆರಳುವುದಕ್ಕೆ ಆಲೋಚನೆ ಮಾಡಲಿದ್ದೀರಿ. ಈ ಓಡಾಟದಲ್ಲಿ ಹೆಚ್ಚಿನ ಸಮಯ ಹೋಗಲಿದೆ. ಇನ್ನು ಮನೆಗೆ ದೊಡ್ಡ ಅಳತೆಯ ಟೀವಿ, ಹೋಮ್ ಥಿಯೇಟರ್ ಇಂಥದ್ದನ್ನು ಕೊಳ್ಳುವುದಕ್ಕೆ ಹಣ ಖರ್ಚು ಮಾಡಲಿದ್ದೀರಿ.
ಅತಿಯಾದ ಲಾಭ ಅಥವಾ ಆದಾಯದ ಆಸೆಗೆ ಬಿದ್ದು, ಸಮಸ್ಯೆಗಳನ್ನು ಮೈ ಮೇಲೆ ಎಳೆದುಕೊಳ್ಳುವಂತಾಗಲಿದೆ. ಹಣಕಾಸಿನ ಮುಗ್ಗಟ್ಟು ಎದುರಾಗಬಹುದು. ಅಥವಾ ನಿಮ್ಮದೇ ಅತಿಯಾದ ಆತ್ಮವಿಶ್ವಾಸದ ಕಾರಣಕ್ಕೆ ಕೆಲವು ಎಡವಟ್ಟುಗಳನ್ನು ಮಾಡಿಕೊಳ್ಳಲಿದ್ದೀರಿ. ಯಾವುದೇ ನಿರ್ಧಾರವನ್ನು ಆತುರವಾಗಿ ಮಾಡದಿರಿ. ಕೆಲವು ಶುಭ ಕಾರ್ಯಗಳು ಅಥವಾ ಸಮಾರಂಭಗಳ ಕಾರಣಕ್ಕಾಗಿ ದೂರ ಪ್ರಯಾಣ ಮಾಡಬೇಕಾಗಬಹುದು. ಒಬ್ಬೊಬ್ಬರೇ ಪ್ರಯಾಣ ಮಾಡುತ್ತಿದ್ದೀರಿ ಅಂತಾದಲ್ಲಿ ಬೆಲೆಬಾಳುವ ವಸ್ತುಗಳ ಕಡೆಗೆ ಜಾಸ್ತಿ ನಿಗಾ ಮಾಡಿ,
ಈ ಹಿಂದೆ ನೀವು ಮಾಡಿದ ಸಹಾಯ, ನೀಡಿದ ಸಲಹೆ- ಸೂಚನೆಗಳಿಂದ ಲಾಭವಾದಂಥವರು ಈಗ ಮತ್ತೆ ನಿಮ್ಮನ್ನು ಹುಡುಕಿಕೊಂಡು ಬಂದು, ಕೆಲವು ಕೆಲಸಗಳನ್ನು ನೀಡಲಿದ್ದಾರೆ. ವಾಹನ ಖರೀದಿ ಮಾಡಬೇಕು ಎಂಬ ಕಾರಣಕ್ಕೆ ಹಣಕಾಸಿಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಅದು ಒದಗಿ ಬರುವ ಸಾಧ್ಯತೆ ಇದೆ. ನೀವು ತೆಗೆದುಕೊಂಡ ಕೆಲವು ನಿರ್ಧಾರಗಳು ತಕ್ಷಣವೇ ಫಲ ನೀಡುವುದಕ್ಕೆ ಆರಂಭಿಸಲಿವೆ. ನಿಮಗೆ ಸಣ್ಣ- ಪುಟ್ಟ ಅನಾರೋಗ್ಯ ಎಂದು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ.
ಬೇರೆ ಯಾರದೋ ಖರ್ಚು ನಿಮ್ಮ ತಲೆ ಮೇಲೆ ಬೀಳಲಿದೆ. ಇದಕ್ಕೆ ತಕ್ಕ ಹಾಗೆ ಊರವರ ಮದುವೆಗೆಲ್ಲ ನಂದೇ ಪೌರೋಹಿತ್ಯ ಎಂದು ಎಲ್ಲ ವಿಚಾರಗಳಿಗೆ ಮೂಗು ತೂರಿಸದಿರಿ. ಲೋಕಜ್ಞಾನದಿಂದ ಮುಂದುವರಿದಲ್ಲಿ – ಸ್ವಲ್ಪ ಮಟ್ಟಿಗೆ ಎಚ್ಚರಿಕೆ ವಹಿಸಿದರೆ ಉತ್ತಮ. ದೈಹಿಕ ದೃಢತೆ ಕಾಪಾಡಿಕೊಳ್ಳುವ ಸಲುವಾಗಿ ಜಿಮ್, ಯೋಗ ಅಥವಾ ಇಂಥ ಯಾವುದಾದರೂ ಒಂದರಲ್ಲಿ ತೊಡಗಿಕೊಳ್ಳುವ ಬಗ್ಗೆ ಆಲೋಚನೆ ಮಾಡಲಿದ್ದೀರಿ.