Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 17ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಆಗಸ್ಟ್ 17ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 17ರ ದಿನಭವಿಷ್ಯ
ಪ್ರಾತಿನಿಧಿಕ ಚಿತ್ರ
Follow us
ಸ್ವಾತಿ ಎನ್​ಕೆ
| Updated By: Ganapathi Sharma

Updated on: Aug 17, 2023 | 1:00 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಆಗಸ್ಟ್ 17ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮ ನೆನಪಿನ ಶಕ್ತಿ ಈ ದಿನ ಬಹಳ ಮುಖ್ಯವಾಗುತ್ತದೆ. ಯಾವುದಾದರೂ ಕೆಲಸ ಬಾಕಿ ಉಳಿಸಿ, ಮರೆತೆ ಕ್ಷಮಿಸಿ ಎಂದೆಲ್ಲ ಹೇಳುವ ಸನ್ನಿವೇಶ ಎದುರಾಗದಂತೆ ನೋಡಿಕೊಳ್ಳಿ. ಲೇವಾದೇವಿ ವ್ಯವಹಾರ ಮಾಡುವವರಿಗೆ ಮುಖ್ಯ ದಾಖಲೆ ಕಡೆಗೆ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ. ಹಣಕಾಸಿನ ತುರ್ತು ಪರಿಸ್ಥಿತಿಗಾಗಿ ಸ್ನೇಹಿತರಿಂದ ಸಾಲ ಪಡೆಯುವಂಥ ಅಗತ್ಯ ಕಂಡುಬರುತ್ತದೆ. ಸಮಯಕ್ಕೆ ಸರಿಯಾಗಿ ಊಟ, ನಿದ್ರೆ ಮಾಡುವ ಕಡೆಗೂ ಲಕ್ಷ್ಯ ಇರಲಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಯಾರದಾದರೂ ಸಲಹೆ ಕೇಳಬೇಕಲ್ಲ ಎಂದು ಚಡಪಡಿಸುವಂಥ ದಿನ ಇದಾಗಿರುತ್ತದೆ. ಪೂರ್ಣ ಪ್ರಮಾಣದಲ್ಲಿ ನಂಬಿಕೆ ಇಲ್ಲ ಅಂತಾದಲ್ಲಿ ಅಂಥ ವಿಚಾರಗಳಲ್ಲಿ ಖಂಡಿತಾ ಪರಿಣತರ ಸಲಹೆಯನ್ನು ತೆಗೆದುಕೊಳ್ಳಿ. ಮುಖಕ್ಕೆ ಹೊಡೆದಂತೆ ಮಾತನಾಡುತ್ತೇನೆ ಎಂಬ ಧೋರಣೆ ಬೇಡ. ಹಳೇ ಪ್ರೇಮ ಪ್ರಕರಣಗಳು ಇದ್ದಲ್ಲಿ, ಈ ದಿನ ಅದು ನೆನಪಾಗುವ, ಆ ವ್ಯಕ್ತಿಯ ಜತೆಗೆ ಸಮಯ ಕಳೆಯುವಂಥ ಯೋಗಗಳು ಕಂಡುಬರುತ್ತಿವೆ. ವೈಯಕ್ತಿಕ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರದಂತೆ ಎಚ್ಚರ ವಹಿಸಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಎಲ್ಲ ಕೆಲಸವನ್ನೂ ನಾನೇ ಮಾಡುತ್ತೇನೆ ಎಂದು ಹೊರಡಬೇಡಿ. ಹೀಗೆ ಮಾಡಿದಲ್ಲಿ ಗಡುವಿನೊಳಗೆ ಕೆಲಸ ಮುಗಿಸುವುದು ಕಷ್ಟ ಆಗಬಹುದು. ಇನ್ನು ಸೈಟು- ಮನೆ ಖರೀದಿಗಾಗಿ ಪ್ರಯತ್ನಿಸುತ್ತಿರುವವರಿಗೆ ಬೇಕು- ಬೇಡ ಎಂಬ ಗೊಂದಲ ಸೃಷ್ಟಿ ಆಗಲಿದೆ. ಸೋದರ- ಸೋದರಿಯಿಂದ ಸಹಾಯಕ್ಕಾಗಿ ಮನವಿ ಬರುವ ಸಾಧ್ಯತೆಗಳಿವೆ. ನಿಮಗೆ ಸಂಪೂರ್ಣ ಖಾತ್ರಿ ಆಗದ ಹೊರತು ಯಾವ ವಿಚಾರದಲ್ಲೂ ಅಂತಿಮ ತೀರ್ಮಾನವನ್ನು ಕೈಗೊಳ್ಳಬೇಡಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಕೆಲಸ ಬಿಡುವಂಥ ಅಥವಾ ಹೊಸ ವ್ಯವಹಾರ ಶುರು ಮಾಡುವಂಥ ಆಲೋಚನೆಯೇನಾದರೂ ಉದ್ಯೋಗಸ್ಥರಿಗೆ ಬಂತು ಅಂತಾದರೆ ಈ ದಿನ ಆ ವಿಚಾರವನ್ನು ಮಾಡುವುದು ನಿಲ್ಲಿಸಿಬಿಡುವುದು ಉತ್ತಮ. ಏಕೆಂದರೆ ಇದರ ಪರಿಣಾಮವಾಗಿ ಕೆಲಸದಲ್ಲಿ ಆಸಕ್ತಿ ಕಳೆದುಕೊಂಡು, ತಪ್ಪುಗಳಾಗುವ ಸಾಧ್ಯತೆ ಇದೆ. ಎಲೆಕ್ಟ್ರಿಕಲ್ ಕಾಂಟ್ರಾಕ್ಟ್, ಕಟ್ಟಡ ನಿರ್ಮಾಣ ಕಾಮಗಾರಿಯ ವ್ಯವಹಾರದಲ್ಲಿ ಇರುವವರಿಗೆ ಹೊಸ ಕೆಲಸ ಬರುವಂಥ ಅವಕಾಶಗಳಿವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಎಲೆಕ್ಟ್ರಿಕಲ್ ವಾಹನವನ್ನೋ ಅಥವಾ ಗೃಹಬಳಕೆ ವಸ್ತುಗಳನ್ನೋ ಖರೀದಿಸುವುದಕ್ಕೆ ಹಣಕಾಸನ್ನು ಹೊಂದಾಣಿಕೆ ಮಾಡಿಕೊಳ್ಳಲಿದ್ದೀರಿ. ಒಂದು ವೇಳೆ ಖರೀದಿಯ ಉದ್ದೇಶವೇ ಇಲ್ಲದಿದ್ದರೂ ಆಫರ್ ಗಳು ಇದೆ ಎಂಬ ಕಾರಣಕ್ಕೆ ಕೊಂಡುಕೊಳ್ಳುವ ಸಾಧ್ಯತೆಗಳಿವೆ. ಪ್ರವೇಶ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದೀರಿ ಎಂದಾದರೆ ಕೆಲವರ ಮಾತುಗಳಿಂದ ನಿರುತ್ಸಾಹ ಆಗಬಹುದು. ಅಂಥವರಿಂದ ಅಂತರವನ್ನು ಕಾಯ್ದುಕೊಳ್ಳಿ. ಈ ದಿನ ಸಾಧ್ಯವಾದಷ್ಟೂ ತಾಜಾ- ಬಿಸಿಯಾದ ಆಹಾರ ಸೇವನೆ ಮಾಡುವುದಕ್ಕೇ ಆದ್ಯತೆಯನ್ನು ನೀಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಹಲವರು ಬೇಡ ಅಂದಾಗಲೂ ನೀವು ಪಟ್ಟು ಹಿಡಿದು ಮಾಡಿದ ಕೆಲಸದ ಶುಭ ಫಲವನ್ನು ಈ ದಿನ ನೀವು ಕಾಣಲಿದ್ದೀರಿ. ವೃತ್ತಿಪರರು, ಉದ್ಯೋಗಸ್ಥರಿಗೆ ದೊಡ್ಡ ದೊಡ್ಡ ಜವಾಬ್ದಾರಿಗಳು ಹೆಗಲಿಗೆ ಬೀಳುವಂಥ ಸಮಯ ಇದು. ಮನೆ ಬದಲಾವಣೆಗೆ ಅಥವಾ ಮಕ್ಕಳ ಶಾಲೆಯನ್ನು ಬದಲಾಯಿಸಬೇಕು ಎಂದುಕೊಳ್ಳುತ್ತಿರುವವರಿಗೆ ನಿಮ್ಮ ನಿರೀಕ್ಷೆಯಂತೆಯೇ ಬೆಳವಣಿಗೆಗಳು ಕಾಣಲಿವೆ. ದ್ವಿಚಕ್ರ ವಾಹನ ಖರೀದಿ ಮಾಡುವುದಕ್ಕೆ ಹಣಕಾಸು ಹೊಂದಿಸಲು ಪ್ರಯತ್ನಿಸುತ್ತಿದ್ದಲ್ಲಿ ಅನುಕೂಲ ಆಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ನಿಮ್ಮ ಧ್ವನಿ, ಬಾಡಿ ಲಾಂಗ್ವೇಜ್ ಮೇಲೆ ಲಕ್ಷ್ಯ ಇರಲಿ. ಇದರ ಆಧಾರದ ಮೇಲೆ ನಿಮ್ಮ ನಡವಳಿಕೆ ಹಾಗೂ ಸ್ವಭಾವದ ಬಗ್ಗೆ ತೀರ್ಪು ನೀಡುವುದಕ್ಕೆ ಅವಕಾಶ ನೀಡದಿರಿ. ಉಳಿತಾಯ ಮಾಡಬೇಕು ಎಂಬುದು ನಿಮ್ಮ ಉದ್ದೇಶವೇ ಆಗಿದ್ದಲ್ಲಿ ದುಡಿಮೆಯ ಹಣವನ್ನು ಉಳಿಸಿ. ಅದನ್ನು ಬಿಟ್ಟು ಕೊಡಬೇಕಾದ ಸಾಲವನ್ನು ಉಳಿಸಿಕೊಂಡು, ಅದನ್ನು ಉಳಿತಾಯ ಅಂತ ಮಾಡದಿರಿ. ಸಣ್ಣ-ಪುಟ್ಟ ಕೆಲಸಗಳನ್ನೂ ಶ್ರದ್ಧೆಯಿಂದ ಮಾಡಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಶುಭ ಕಾರ್ಯಗಳಿಗೆ ಓಡಾಟ ಮಾಡಬೇಕಾದ ಸನ್ನಿವೇಶ ಇದೆ. ಹಣಕಾಸು ಹರಿವು ನಿಮ್ಮ ಇಂದಿನ ಆದ್ಯತೆ ಆಗಲಿದೆ. ಸ್ವಂತ ವ್ಯವಹಾರ ಮಾಡುತ್ತಿರುವವರಿಗೆ ಹಾಕುತ್ತಿರುವ ಶ್ರಮ ಏನೇನೂ ಸಾಲುತ್ತಿಲ್ಲ ಎಂದು ಬಲವಾಗಿ ಅನಿಸುತ್ತದೆ. ಯಾವುದೇ ಲಾಭಾಪೇಕ್ಷೆ ಇಲ್ಲದೆ ನೀವು ಮಾಡಿದ ಕೆಲಸದಿಂದ ಅನುಕೂಲ ಆಗುವಂಥ ಸಾಧ್ಯತೆ ಇದೆ. ಸಂಗಾತಿ ಜತೆಗೆ ಮಾತುಕತೆ ಆಡುವಾಗ ಪಾರದರ್ಶಕವಾಗಿ ನಡೆದುಕೊಳ್ಳಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ನೀವು ಎಷ್ಟೇ ಶ್ರಮ ಹಾಕಿದರೂ ಕೆಲವು ಕೆಲಸಗಳನ್ನು ಈ ದಿನ ಪೂರ್ಣ ಮಾಡುವುದಕ್ಕೆ ಸಾಧ್ಯ ಆಗುವುದೇ ಇಲ್ಲ. ಇತರರ ಸಾಮರ್ಥ್ಯವನ್ನು ಈ ಕಾರಣದಿಂದ ನಿಮ್ಮ ಜತೆಗೆ ಹೋಲಿಕೆ ಮಾಡಿಕೊಳ್ಳದಿರಿ. ಹಣ- ಸಮಯ, ಶಿಫಾರಸು ಎಂದು ಹಠಕ್ಕೆ ಬಿದ್ದು, ಕೆಲಸ ಮುಗಿಸಲೇ ಬೇಕು ಎಂದು ಹೊರಟರೆ ನಿಮಗೆ ನಷ್ಟವಾದೀತು. ಹೊಂದಾಣಿಕೆ ಮಾಡಿಕೊಂಡಲ್ಲಿ ಉದ್ಯೋಗ ಸ್ಥಳದಲ್ಲಿ ನೆಮ್ಮದಿಯಿಂದ ಇರಬಹುದು. ಅನಿಸಿದ್ದನ್ನು ನೇರಾನೇರ ಹೇಳಿಬಿಡ್ತೀನಿ ಎಂದುಕೊಳ್ಳದಿರಿ.

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ