Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 27ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಆಗಸ್ಟ್ 27ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಆಗಸ್ಟ್ 27ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಸಂಬಂಧಿಕರು, ಸ್ನೇಹಿತರು ಮನೆಗೆ ಬರಲಿದ್ದಾರೆ. ಕುಟುಂಬದ ಕೆಲವು ಸದಸ್ಯರಿಗಾಗಿ ಹೆಲ್ತ್ ಇನ್ಷೂರೆನ್ಸ್ ಖರೀದಿ ಮಾಡುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದೀರಿ. ಮುಂಬರುವ ದಿನಗಳಲ್ಲಿ ತೀರ್ಥಕ್ಷೇತ್ರಕ್ಕೆ ಕುಟುಂಬದ ಜತೆಗೂಡಿ ತೆರಳವುದಕ್ಕೆ ಒಮ್ಮತದ ತೀರ್ಮಾನ ಆಗಲಿದೆ. ಇಷ್ಟು ಸಮಯ ನೀವು ಆರಾಧನಾ ಭಾವದಿಂದ ನೋಡುತ್ತಿದ್ದ ವ್ಯಕ್ತಿಯೊಬ್ಬರ ನಡವಳಿಕೆಯಿಂದ ಮನಸ್ಸಿಗೆ ಬೇಸರ ಆಗಲಿದೆ. ಇನ್ನು ಮುಂದೆ ಅವರ ಜತೆಗೆ ಮಾತು ಸಹ ಬೇಡ ಎಂದು ನಿರ್ಧಾರ ಮಾಡುವ ಸಾಧ್ಯತೆಗಳು ಹೆಚ್ಚಿವೆ.
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ಖರ್ಚಿನ ವಿಚಾರಕ್ಕೆ ಸಂಗಾತಿ ಜತೆಗೆ ಅಭಿಪ್ರಾಯ ಭೇದಗಳು ಮೂಡಬಹುದು. ಒಬ್ಬರೇ ಎಲ್ಲ ತೀರ್ಮಾನಗಳನ್ನು ಕೈಗೊಳ್ಳುತ್ತೀರಿ ಎಂದು ನಿಮ್ಮ ಬಗ್ಗೆ ಆಕ್ಷೇಪಗಳು ಕೇಳಿಬರಲಿವೆ. ಹೊಸ ಬಟ್ಟೆ, ಆಭರಣಗಳನ್ನು ಕಂತುಗಳಲ್ಲಿ ಖರೀದಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಕೊಳ್ಳಲೇಬೇಕಾದ ಸನ್ನಿವೇಶ ಎದುರಾಗಲಿದೆ. ಮಧುಮೇಹ- ರಕ್ತದೊತ್ತಡದಂಥ ಸಮಸ್ಯೆಗಳು ಈಗಾಗಲೇ ಇದ್ದಲ್ಲಿ ಸೂಕ್ತ ವೈದ್ಯೋಪಚಾರ ಮಾಡಿಕೊಳ್ಳುವ ಕಡೆಗೆ ಲಕ್ಷ್ಯ ನೀಡಿ.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ಪುಷ್ಕಳವಾದ ಊಟ- ತಿಂಡಿಗಳನ್ನು ಸವಿಯುವಂಥ ಯೋಗ ಇದೆ. ನೀವು ನಿರೀಕ್ಷೆ ಕೂಡ ಮಾಡದ ರೀತಿಯಲ್ಲಿ ಹಳೇ ಗೆಳೆಯ- ಗೆಳತಿಯರು ಭೇಟಿ ಆಗಲಿದ್ದಾರೆ. ದೂರ ಪ್ರಯಾಣಕ್ಕೆ ತೆರಳಿದವರಿಗೆ ಒಂದಲ್ಲಾ ಒಂದು ರೀತಿಯಲ್ಲಿ ಅನುಕೂಲಗಳು ಒದಗಿ ಬರಲಿವೆ. ವಿವಾಹ ವಯಸ್ಕರಾಗಿದ್ದಲ್ಲಿ ಮದುವೆಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸಂಬಂಧಿಕರು, ಸ್ನೇಹಿತರ ನೆರವಿನಿಂದ ಸಂಬಂಧಗಳು ಗಟ್ಟಿಯಾಗುವಂಥ ಸಾಧ್ಯತೆ ಇದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ದೈಹಿಕವಾಗಿ ದೃಢವಾಗಿರಬೇಕು, ಆರೋಗ್ಯವಾಗಿರಬೇಕು ಎಂಬ ಕಾರಣಕ್ಕೆ ಆಹಾರ ಪಥ್ಯ, ಜಿಮ್ ಹೀಗೆ ಏನು ಮಾಡುವುದು ಎಂಬ ತೀರ್ಮಾನ ಮಾಡಲಿದ್ದೀರಿ. ಚೀಟಿ ವ್ಯವಹಾರಗಳಲ್ಲಿ ಹಣ ಹಾಕಿರುವಂಥವರು ಅದನ್ನು ತೆಗೆದುಕೊಳ್ಳುವುದಕ್ಕೆ ತೀರ್ಮಾನ ಮಾಡಲಿದ್ದೀರಿ. ಇಷ್ಟು ಮೊತ್ತಕ್ಕೆ ಹಣ ತೆಗೆಯುವಂತೆ ನೀವು ಸೂಚನೆ ಸಹ ನೀಡಬಹುದು. ಮನೆಯ ದುರಸ್ತಿ ಅಥವಾ ಪೇಂಟ್ ಮಾಡುವ ಬಗ್ಗೆ ಹಣಕಾಸಿನ ವಿಚಾರ ಮಾತನಾಡಲಿದ್ದೀರಿ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ಈ ದಿನ ಪ್ರಕೃತಿ ಮಧ್ಯೆ ಉತ್ತಮವಾದ ಸಮಯ ಕಳೆಯುವಂಥ ಯೋಗ ಇದೆ. ಹಾಗಂತ ಕಾಡು, ಬೆಟ್ಟ- ಗುಡ್ಡ, ನದಿ ಇಂಥದ್ದರ ಬಗ್ಗೆಯೇ ಆಲೋಚಿಸಬೇಡಿ. ನಿಮ್ಮದೇ ಪರಿಸರದ ಸಮೀಪ ಇರುವಂಥ ಸ್ಥಳಗಳು ಸಹ ಮನಸ್ಸಿಗೆ ಮುದ ನೀಡುತ್ತದೆ. ಹೊಸದಾದ ಪ್ರಾಜೆಕ್ಟ್ ಗಳನ್ನು ಕೈಗೆತ್ತಿಕೊಳ್ಳಬೇಕು ಎಂದಿರುವವರಿಗೆ ಇದರಿಂದ ಹೊಸ ಉತ್ಸಾಹ, ಚೈತನ್ಯ ಹಾಗೂ ಆಲೋಚನೆಗಳು ಮೂಡಲಿವೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ಇತರರು ನೆರವಾಗುತ್ತೀನಿ ಎಂದಿದ್ದಾರೆ ಎಂಬ ಮಾತನ್ನೇ ನಂಬಿಕೊಂಡು, ಯಾವುದೇ ಕೆಲಸಕ್ಕೆ ಇಳಿಯದಿರಿ. ನಿಮ್ಮ ಸಾಮರ್ಥ್ಯ, ನಿಮ್ಮ ಬಳಿ ಇರುವ ಸಂಪನ್ಮೂಲ ಲಭ್ಯತೆ ಇತ್ಯಾದಿಗಳನ್ನು ಗಮನದಲ್ಲಿ ಇಟ್ಟುಕೊಂಡೇ ಮುಂದುವರಿಯಿರಿ. ಯಾರಾದರೂ ನಿಮ್ಮ ವಿರುದ್ಧ ಹಳೇ ದ್ವೇಷ ಸಾಧನೆ ಮಾಡುತ್ತಿದ್ದಾರೆ ಎಂಬ ಗುಮಾನಿ ಬಂದಲ್ಲಿ ಈ ದಿನ ಕೂಡಲೇ ಎಚ್ಚೆತ್ತುಕೊಳ್ಳುವುದು ಮುಖ್ಯ. ನಿಮಗೆ ಹಳೆ ಕಾಯಿಲೆ- ನೋವುಗಳು ಕಾಡುತ್ತಿದ್ದಲ್ಲಿ ಅದು ಉಲ್ಬಣ ಆಗುವಂಥ ಸಾಧ್ಯತೆ ಇದೆ. ವೈದ್ಯರನ್ನು ಭೇಟಿ ಆಗುವುದು ಕಡ್ಡಾಯ ಎಂದಾದಲ್ಲಿ ಸೂಕ್ತ ಸಲಹೆ- ಮಾರ್ಗದರ್ಶನ ಪಡೆದುಕೊಳ್ಳಿ.
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ನಿಮ್ಮ ಧಾರ್ಮಿಕ ನಂಬಿಕೆಗಳು ನೆರವಿಗೆ ಬರಲಿವೆ. ನಿರೀಕ್ಷೆಯೇ ಮಾಡದ ರೀತಿಯಲ್ಲಿ ಇತರರ ನೆರವು ನಿಮ್ಮ ಪಾಲಿಗೆ ಒದಗಿ ಬರಲಿವೆ. ನಿಮ್ಮಲ್ಲಿ ಕೆಲವರು ಹೊಸದಾಗಿ ಚಿನ್ನದ ಚೀಟಿಗೆ ಹಣ ಕಟ್ಟುವುದಕ್ಕೆ ಆರಂಭಿಸುವ ಯೋಗ ಇದೆ. ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಇರುವವರಿಗೆ ಗುರಿಯನ್ನು ತಲುಪುವುದು ಸಲೀಸಾಗಲಿದೆ. ರೈಲ್ವೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಲಿದ್ದು, ಇದರಿಂದ ಭವಿಷ್ಯದಲ್ಲಿ ಅನುಕೂಲ ಆಗಲಿದೆ. ಮಹಿಳೆಯರಿಗೆ ಕೆಲ ಸಮಯ ಬಿಡುವು ತೆಗೆದುಕೊಳ್ಳಬೇಕು ಎಂದು ಬಲವಾಗಿ ಅನಿಸುವುದಕ್ಕೆ ಆರಂಭಿಸುತ್ತದೆ.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ಈ ದಿನ ನಿಮಗೆ ಕೈ ನೋವು ಕಾಡಲಿದೆ. ಭಾರವಾದ ವಸ್ತುಗಳನ್ನು ಎತ್ತಬೇಕಾಗುತ್ತದೆ ಎಂದಾದಲ್ಲಿ ಮಾಮೂಲಿಗಿಂತ ಹೆಚ್ಚಿನ ಎಚ್ಚರಿಕೆಯನ್ನು ವಹಿಸಿ. ಕಡಿಮೆ ಬಡ್ಡಿಗೆ ಸಾಲ ದೊರೆಯಲಿದೆ ಅಥವಾ ಝೀರೋ ಕಾಸ್ಟ್ ಇಎಂಐ ದೊರೆಯಲಿದೆ ಎಂಬ ಕಾರಣಕ್ಕೆ ನಿಮಗೆ ಅಗತ್ಯ ಇಲ್ಲದ ವಸ್ತುಗಳನ್ನು ಖರೀದಿಸಬೇಡಿ. ಸರ್ಕಾರಿ ಯೋಜನೆಗಳಿಗೆ ಅರ್ಜಿ ಹಾಕಬೇಕು ಎಂದಿರುವವರಿಗೆ ನಾನಾ ಬಗೆಯಲ್ಲಿ ಸಮಸ್ಯೆಗಳು ಎದುರಾಗಬಹುದು ಅಥವಾ ಕೈಯಿಂದ ಹೆಚ್ಚಿನ ಹಣ ಖರ್ಚಾಗಲಿದೆ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ಕೆಲವು ತೀರ್ಮಾನಗಳನ್ನು ಮಾಡುವುದಕ್ಕೆ ನಿಮ್ಮ ಮನಸ್ಸಲ್ಲಿ ಆತಂಕ ಕಾಡಬಹುದು. ಕುಟುಂಬದಲ್ಲಿ ಸಣ್ಣ- ಪುಟ್ಟ ಮನಸ್ತಾಪಗಳು ಕೂಡ ನಿಮಗೆ ದೊಡ್ಡ ಮಟ್ಟದಲ್ಲಿ ಚಿಂತೆಗೆ ಗುರಿ ಮಾಡುತ್ತವೆ. ಉದ್ಯಮ- ವ್ಯವಹಾರಗಳನ್ನು ಮಾಡುತ್ತಿರುವವರಿಗೆ ಹೊಸದಾಗಿ ಪ್ರತಿಸ್ಪರ್ಧಿಗಳು ಹುಟ್ಟಿಕೊಂಡು, ಹೆಚ್ಚಿನ ಹೂಡಿಕೆ ಮಾಡಬೇಕಾದ ಅನಿವಾರ್ಯ ಸೃಷ್ಟಿ ಆಗಲಿದೆ. ಈ ದಿನ ಅಸಹಾಯಕರು, ಅಶಕ್ತರಿಗೆ ಊಟ ಕೊಡಿಸುವುದರಿಂದ ನಿಮ್ಮ ಆತ್ಮಸ್ಥೈರ್ಯ ಹೆಚ್ಚಾಗಲಿದೆ.