Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 13ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 13ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 13ರ ದಿನಭವಿಷ್ಯ
ಸಾಂದರ್ಭಿಕ ಚಿತ್ರ
Follow us
ಸ್ವಾತಿ ಎನ್​ಕೆ
| Updated By: Ganapathi Sharma

Updated on: Jul 13, 2023 | 1:00 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 13ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಸಣ್ಣ ಕೆಲಸ ಕಡಿಮೆ ಖರ್ಚು, ಸಮಯದಲ್ಲಿ ಮುಗಿದು ಹೋಗುತ್ತದೆ ಎಂದುಕೊಂಡು ಆರಂಭಿಸಿದ್ದು ಎಲ್ಲ ರೀತಿಯಿಂದಲೂ ನಿಮ್ಮ ಅಂದಾಜನ್ನು ಮೀರಲಿದೆ. ಮಾತನಾಡದೆ ಸುಮ್ಮನಿದ್ದರೆ ಆಗಿತ್ತು ಎಂದು ಕೆಲವು ಸನ್ನಿವೇಶಗಳಲ್ಲಿ ಅನಿಸಲಿದೆ. ಎಲ್ಲಿ- ಎಷ್ಟು ಮಾತು ಎಂಬುದರ ಬಗ್ಗೆ ಸ್ಪಷ್ಟತೆ ಇರಲಿ. ಇನ್ನು ಅಳತೆಗೆ ಮೀರಿದ ಖರ್ಚು ಹಾಗೂ ಸಮಯ ಹಿಡಿಯಬಹುದಾದ ಕೆಲಸಕ್ಕೆ ಕೈ ಹಾಕದಿರುವುದು ಉತ್ತಮ. ಯಾವುದೇ ತೀರ್ಮಾನ ತೆಗೆದುಕೊಳ್ಳುವಾಗ ದ್ವಂದ್ವ- ಗೊಂದಲ ಇಟ್ಟುಕೊಳ್ಳದಿರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಬಾಯಿ ಚಪಲಕ್ಕೆ ಆಡುವಂಥ ಮಾತುಗಳು ಯಾವುವು ಹಾಗೂ ನಿಮ್ಮ ಬಗ್ಗೆ ನಿಜವಾದ ಕಾಳಜಿಯೊಂದಿಗೆ ಮಾತನಾಡುವವರು ಎಂಬ ಬಗ್ಗೆ ಸ್ಪಷ್ಟತೆ ದೊರೆಯಲಿದೆ. ಬಿಪಿಒ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಉದ್ಯೋಗ ಬದಲಾವಣೆಗೆ ಅವಕಾಶಗಳು ದೊರೆಯಲಿವೆ. ದೂರ ಪ್ರಯಾಣ ಮಾಡಬೇಕು ಎಂದಿರುವವರು ಮುಖ್ಯ ವಸ್ತುಗಳು ಎಲ್ಲವೂ ಇದೆಯೇ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ. ಮನೆ ದೇವರನ್ನು ಸ್ಮರಣೆ ಮಾಡಿ, ಮುಖ್ಯವಾದ ಕೆಲಸಗಳಲ್ಲಿ ತೊಡಗಿಕೊಳ್ಳಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಈಗಿರುವ ಜವಾಬ್ದಾರಿ, ಹುದ್ದೆಗಳಿಂದ ಮೇಲ್ ಸ್ತರಕ್ಕೆ ಏರುವಂಥ ಅವಕಾಶಗಳು ದೊರೆಯುವ ಸಾಧ್ಯತೆಗಳಿವೆ. ಹೋಟೆಲ್ ಅಥವಾ ಆಹಾರ ಮಾರಾಟಕ್ಕೆ ಸಂಬಂಧಿಸಿದಂಥ ಉದ್ಯಮದಲ್ಲಿ ಇರುವವರಿಗೆ ವಿಸ್ತರಣೆ ಬಗ್ಗೆ ಆಲೋಚನೆ ಬರಲಿದೆ. ವೈದ್ಯರಾಗಿ ಕಾರ್ಯ ನಿರ್ವಹಿಸುವವರಿಗೆ ಈಗಿರುವ ಆದಾಯವನ್ನು ಹೆಚ್ಚಳ ಮಾಡಿಕೊಳ್ಳುವುದಕ್ಕೆ ಅವಕಾಶ ದೊರೆಯಲಿದೆ. ಉಳಿತಾಯದ ಹಣ ಇರುವಂಥವರು ಅದನ್ನು ತೆಗೆದು ಹೂಡಿಕೆ ಮಾಡುವ ಬಗ್ಗೆ ತೀರ್ಮಾನ ಮಾಡಲಿದ್ದೀರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಮನಸಾರೆ ಯಾವುದೇ ಕೆಲಸದಲ್ಲಿ ತೊಡಗಿಕೊಳ್ಳುವುದು ಕಷ್ಟವಾಗಲಿದೆ. ಪ್ರೀತಿ- ಪ್ರೇಮದಲ್ಲಿ ಇರುವಂಥವರಿಗೆ ಮನೆಯಲ್ಲಿ ಈ ವಿಚಾರವನ್ನು ಹೇಳಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ದ್ವಂದ್ವ ಏರ್ಪಡಲಿದೆ. ವಿದೇಶಗಳಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರಯತ್ನ ಬಲವಾಗಿ ಮಾಡುತ್ತಿರುವವರಿಗೆ ಕುಟುಂಬದ ಹಾಗೂ ಸ್ನೇಹಿತರ ಬೆಂಬಲ ದೊರೆಯಲಿದೆ. ಹೊಸದಾದ ಯೋಜನೆಗಳಿಗೆ ಕೈ ಹಾಕುತ್ತಿರುವವರು ಅನುಭವಿಗಳ ಮಾರ್ಗದರ್ಶನ ಪಡೆದುಕೊಳ್ಳುವುದು ಉತ್ತಮ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನಾನು ಪಡೆದುಕೊಂಡಿದ್ದಕ್ಕಿಂತ ನೀಡಿದ್ದೇ ಹೆಚ್ಚು ಎಂದು ಅನಿಸುವುದಕ್ಕೆ ಶುರುವಾಗುತ್ತದೆ. ಒಂದು ವೇಳೆ ಹಳೇ ಪ್ರೀತಿ- ಪ್ರೇಮ ವಿಚಾರಗಳನ್ನು ಈಗಲೂ ಮನಸ್ಸಲ್ಲಿ ಇಟ್ಟುಕೊಂಡು ಸಲುಗೆಯಿಂದ ಮಾತನಾಡಿದಲ್ಲಿ ಪಶ್ಚಾತಾಪ ಪಡುವಂತೆ ಆಗುತ್ತದೆ. ಸಂಬಂಧಿಗಳ ಮನೆಗಳಲ್ಲಿನ ಕಾರ್ಯಕ್ರಮಗಳಿಗೆ ನೀವು ಹೆಚ್ಚು ಓಡಾಟ ನಡೆಸಬೇಕಾಗಬಹುದು. ಗುಂಪಾಗಿ ಜನ ಇರುವ ಕಡೆಗಳಲ್ಲಿ ಗಾಸಿಪ್ ಮಾತನಾಡಬೇಡಿ. ಇದರಿಂದ ನೀವು ಅವಮಾನಕ್ಕೆ ಗುರಿ ಆಗುವಂತಹ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಇನ್ನೇನು ಆ ಕೆಲಸ ಆಗುವುದಿಲ್ಲ ಎಂದು ಇತರರು ಕೈ ಬಿಟ್ಟು ಸುಮ್ಮನಾದಂಥದ್ದನ್ನು ನೀವು ಮುಗಿಸಿ, ಇತರರಲ್ಲಿ ಬೆರಗು ಮೂಡಿಸಲಿದ್ದೀರಿ. ಜಮೀನು ವ್ಯಾಜ್ಯಗಳು ಇದ್ದಲ್ಲಿ ಅದನ್ನು ಬಗೆಹರಿಸಿಕೊಳ್ಳುವುದಕ್ಕೆ ವೇದಿಕೆ ದೊರೆಯಲಿದೆ. ಹಣಕಾಸು ವಿಚಾರದಲ್ಲಿ ಇತರರಿಗೆ ಮಾತು ನೀಡುವ ಮುನ್ನ ನಿಮ್ಮ ಬಳಿ ಎಷ್ಟು ಮೊತ್ತ ಇದೆ, ಒಂದು ವೇಳೆ ಹೊಂದಿಸಬಹುದು ಎಂದಾದಲ್ಲಿ ಗರಿಷ್ಠ ಎಷ್ಟಾಗಬಹುದು ಎಂಬ ಲೆಕ್ಕಾಚಾರ ಸರಿಯಾಗಿ ಹಾಕಿಕೊಳ್ಳುವುದು ಉತ್ತಮ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಆದಾಯ ಹೆಚ್ಚಳ ಆಗುವ ನಿಟ್ಟಿನಲ್ಲಿ ಹೊಸ ಯೋಜನೆಗಳ ಬಗ್ಗೆ ಸ್ನೇಹಿತರು ಮಾತುಕತೆ ಆಡಬಹುದು. ನೀವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಮೊತ್ತದ ಪ್ರಾಜೆಕ್ಟ್ ವೊಂದರ ಬಗ್ಗೆ ಗಂಭೀರವಾಗಿ ಆಲೋಚಿಸುವುದು ಮುಖ್ಯವಾಗುತ್ತದೆ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಂಥವರು ಮಾಮೂಲಿ ದಿನಗಳಿಗಿಂತ ಹೆಚ್ಚು ಜಾಗ್ರತೆಯಿಂದ ಇರಬೇಕಾಗುತ್ತದೆ. ಸಂಬಂಧಿಕರೋ ಅಥವಾ ಸ್ನೇಹಿತರೋ ನಿಮ್ಮ ಪರಿಚಿತರ ಮೂಲಕ ಹಣವನ್ನು ಸಾಲವನ್ನಾಗಿ ಕೊಡಿಸುವಂತೆ ಕೇಳಬಹುದು.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಆದಾಯಕ್ಕೂ ವೆಚ್ಚಕ್ಕೂ ತಾಳೆ ಆಗದಿರುವುದು ಒಂದಿಷ್ಟು ಚಿಂತೆಗೆ ಕಾರಣ ಆಗಬಹುದು. ಮುಖ್ಯವಾಗಿ ನವವಿವಾಹಿತರಿಗೆ ಕುಟುಂಬದೊಳಗೆ ನಾನಾ ಬಗೆಯಲ್ಲಿ ಪ್ರಶ್ನೆಗಳು ಎದುರಾಗಲಿವೆ. ನೀವು ಯಾರಿಗೆ ಕಷ್ಟ ಕಾಲದಲ್ಲಿ ನೆರವಾಗಿದ್ದಿರೋ ಅವರೇ ನಿಮ್ಮ ಬಗ್ಗೆ ಹಂಗಿಸುವ ರೀತಿಯಲ್ಲಿ ಅಥವಾ ಹಗುರವಾಗಿ ಮಾತನಾಡುವಂಥ ಸಾಧ್ಯತೆಗಳಿವೆ. ಈ ದಿನ ಮಾನಸಿಕವಾಗಿ ಗಟ್ಟಿಯಾಗಿ ಇರುವುದರ ಜತೆಗೆ ಇತರರ ಕಟು ಮಾತುಗಳಿಗೆ ಮೌನವಾಗಿರುವುದು ಸಹ ಅಷ್ಟೇ ಮುಖ್ಯವಾಗುತ್ತದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಸೈಟು- ಮನೆ ಅಥವಾ ಆಸ್ತಿಗಳನ್ನು ಮಾರಾಟಕ್ಕೆ ಅಂತ ಇಟ್ಟಿದ್ದಲ್ಲಿ ನಿಮ್ಮ ನಿರೀಕ್ಷೆಗಿಂತ ಬಹಳ ಕಡಿಮೆ ಮೊತ್ತಕ್ಕೆ ಖರೀದಿಗೆ ಕೇಳಬಹುದು. ಈ ಕಾರಣದಿಂದ ಮಾನಸಿಕವಾಗಿ ಕುಗ್ಗದಿರಿ. ನಿಮ್ಮ ನಿರ್ಧಾರಗಳಲ್ಲಿ ತಪ್ಪುಗಳನ್ನು ಹುಡುಕಲೇ ಬೇಕು ಎಂದು ಕೆಲವರು ಪ್ರಯತ್ನ ಮಾಡಲಿದ್ದಾರೆ. ಅಂಥವರ ಬಗ್ಗೆ ಹೆಚ್ಚು ಲಕ್ಷ್ಯ ನೀಡಬೇಡಿ. ನೀವಾಯಿತು ನಿಮ್ಮ ಪಾಡಾಯಿತು ಎಂದು ಇದ್ದರೂ ಹೇಗಾದರೂ ಜಗಳ ಆಗುವಂಥ ಸನ್ನಿವೇಶಗಳು ಎದುರಾಗಲಿವೆ.

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ