Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 19ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 19ರ ಬುಧ ವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 19ರ ದಿನಭವಿಷ್ಯ
ಸಾಂದರ್ಭಿಕ ಚಿತ್ರ
Follow us
ಸ್ವಾತಿ ಎನ್​ಕೆ
| Updated By: Ganapathi Sharma

Updated on: Jul 19, 2023 | 1:00 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 19ರ ಬುಧ ವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ದಿಢೀರನೇ ನೀವು ಅಂದುಕೊಂಡಂತೆಯೇ ಹಲವು ಬದಲಾವಣೆಗಳು, ಬೆಳವಣಿಗೆಗಳು ಕಂಡುಬರಲಿವೆ. ಕೋರ್ಟ್ ವ್ಯಾಜ್ಯಗಳು ನಡೆಯುತ್ತಿದ್ದಲ್ಲಿ ಕೆಲವರಿಗೆ ರಾಜೀ- ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದಕ್ಕೆ ಅವಕಾಶಗಳು ದೊರೆಯಲಿವೆ. ಹೆಣ್ಣುಮಕ್ಕಳಿಗೆ ತವರು ಮನೆಯಿಂದ ಕೆಲವು ಅನುಕೂಲಗಳು ದೊರೆಯುವ ಸಾಧ್ಯತೆ ಇದೆ. ನಿಮ್ಮ ಜವಾಬ್ದಾರಿಗಳನ್ನು ಸಮಯಕ್ಕೆ ಮುಗಿಸಿದ್ದೀರಾ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಸ್ವಂತ ವ್ಯವಹಾರ ಮಾಡುತ್ತಿರುವವರು ವ್ಯಾಪಾರ ವಿಸ್ತರಣೆಗಾಗಿ ಯೋಜನೆಯನ್ನು ರೂಪಿಸಲಿದ್ದೀರಿ. ಇದಕ್ಕಾಗಿ ಸಾಲ ಪಡೆಯುವುದರ ಬಗ್ಗೆ ಆಲೋಚನೆ ಮಾಡಲಿದ್ದೀರಿ. ಎಲ್ಲ ಕೆಲಸವನ್ನು ಒಬ್ಬರೇ ಮಾಡುವುದಕ್ಕೆ ಹೊರಡಬೇಡಿ. ಇತರರ ಸಹಾಯದ ಅಗತ್ಯ ಕಂಡುಬಂದಲ್ಲಿ ಪಡೆದುಕೊಳ್ಳಿ. ಯಾರಿಗೆ ಕಾಲು ನೋವಿನ ಸಮಸ್ಯೆ ಈಗಾಗಲೇ ಅನುಭವಿಸುತ್ತಿದ್ದಲ್ಲಿ ಅದು ಉಲ್ಬಣ ಆಗುವಂತಹ ಸಾಧ್ಯತೆಗಳಿವೆ. ಆ ಬಗ್ಗೆ ಎಚ್ಚರಿಕೆಯನ್ನು ತೆಗೆದುಕೊಳ್ಳಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ದೈಹಿಕ ಪರಿಶ್ರಮ ಹೆಚ್ಚಾಗಲಿದೆ. ಯಾವುದೇ ಕೆಲಸ ಮಾಡುವ ಮುಂಚೆ ಸರಿಯಾದ ಯೋಜನೆಯನ್ನು ಮಾಡುವುದು ಮುಖ್ಯ. ಎದುರಿಗಿರುವ ವ್ಯಕ್ತಿಯ ಸಾಮರ್ಥ್ಯವನ್ನು ತಿಳಿದುಕೊಳ್ಳದೆ ಯಾವುದೇ ಆತುರದ ತೀರ್ಮಾನವನ್ನು ತೆಗೆದುಕೊಳ್ಳದಿರಿ. ವಾಹನಗಳು ಇದ್ದಲ್ಲಿ ದುರಸ್ತಿಗಾಗಿ ಹಣ ಖರ್ಚಾಗುವಂಥ ಯೋಗ ಇದೆ. ಇತರರಿಂದ ಶಿಫಾರಸು ಮಾಡಿಸುವ ಮೂಲಕ ಕೆಲವು ಅನುಕೂಲಗಳು ದೊರೆಯಲಿವೆ. ಸಂಗಾತಿ ಜತೆಗೆ ಮಾತುಕತೆ ಆಡುವಾಗ ಎಚ್ಚರಿಕೆ ಇರಲಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ತುಂಬ ಸಮಾಧಾನವಾಗಿ ದಿನ ಕಳೆಯುವುದರ ಕಡೆಗೆ ಆಲೋಚನೆ ಮಾಡಿ. ಬರಬೇಕಾದ ಹಣ ಇದ್ದಲ್ಲಿ ಅದನ್ನು ಫಾಲೋ ಅಪ್ ಮಾಡುವುದು ಮುಖ್ಯವಾಗುತ್ತದೆ. ದೀರ್ಘ ಕಾಲದಿಂದ ನಿರೀಕ್ಷೆ ಮಾಡುತ್ತಿದ್ದ ಅವಕಾಶವೊಂದು ಈಗ ದೊರೆಯುವ ಸಾಧ್ಯತೆಗಳಿವೆ. ಸ್ನೇಹಿತರು ನಿಮ್ಮಿಂದ ಆರ್ಥಿಕ ಸಹಾಯವನ್ನು ಬಯಸಿ ಬರುವಂಥ ಸಾಧ್ಯತೆ ಇದೆ. ಕ್ರೆಡಿಟ್ ಕಾರ್ಡ್ ಬಳಸುವಂಥವರು ಖರ್ಚಿನ ಮೇಲೆ ಹಿಡಿತ ಸಾಧಿಸುವುದು ಬಹಳ ಮುಖ್ಯ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಈಗಾಗಲೇ ನಿರ್ಧಾರವಾದಂಥ ಪ್ರಯಾಣವೋ ಹೂಡಿಕೆ ತೀರ್ಮಾನವನ್ನೋ ಬದಲಿಸಬೇಕಾದಂಥ ಅನಿವಾರ್ಯ ಸೃಷ್ಟಿ ಆಗಲಿದೆ. ಇತರರನ್ನು ನಂಬಿ, ಒಪ್ಪಿಸಿದಂಥ ಕೆಲಸವು ಅಂದುಕೊಂಡಂತೆ ಪೂರ್ತಿ ಆಗದೆ ಬೇಸರ ಆಗಲಿದೆ. ಬ್ಯೂಟಿಪಾರ್ಲರ್ ನಡೆಸುತ್ತಿರುವವರಿಗೆ ಆದಾಯದಲ್ಲಿ ಇಳಿಕೆ ಕಂಡುಬಂದು, ಆತಂಕಕ್ಕೆ ಕಾರಣ ಆಗಬಹುದು. ಆದರೆ ಇದು ತಾತ್ಕಾಲಿಕ ಅಷ್ಟೇ ಎಂಬುದು ಗಮನದಲ್ಲಿ ಇರಲಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಕುಟುಂಬ ಸದಸ್ಯರ ಆರೋಗ್ಯ ವಿಚಾರವು ಆತಂಕಕ್ಕೆ ಕಾರಣ ಆಗಲಿದೆ. ಈ ಹಿಂದೆ ನೀವು ತೆಗೆದುಕೊಂಡ ಕೆಲವು ನಿರ್ಧಾರಗಳಿಂದ ಸ್ವಲ್ಪ ಮಟ್ಟಿಗೆ ಆದಾಯದಲ್ಲಿ ಕಡಿಮೆ ಆಗಲಿದೆ. ಇದರಿಂದ ನಿಮ್ಮ ಮೇಲೆ ನಿಮಗೆ ಬೇಸರ ಆಗಲಿದೆ. ಇತರರ ಹಣಕಾಸಿನ ಅಗತ್ಯಗಳಿಗೆ ಸಹಾಯ ನೀಡಬೇಕು ಎಂದು ಆಲೋಚಿಸುವ ಮೊದಲು ನಿಮ್ಮ ಸ್ಥಿತಿಯ ಬಗ್ಗೆ ಆಲೋಚಿಸುವುದು ಮುಖ್ಯವಾಗುತ್ತದೆ. ದೂರದ ಸಂಬಂಧಿಗಳು ಮನೆಗೆ ಭೇಟಿ ನೀಡಲಿದ್ದಾರೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಆರಂಭಿಸಿದ ಕೆಲಸಗಳು ಸಲೀಸಾಗಿ ಮುಗಿಯುವುದಕ್ಕೆ ಬೇಕಾದ ವೇದಿಕೆ ಸಿದ್ಧವಾಗಲಿದೆ. ನಿಮಗೆ ಬೇಕಾದ ಪದಾರ್ಥಗಳು, ಸಹಾಯವನ್ನು ಕೇಳಿ ಪಡೆದುಕೊಳ್ಳುವುದಕ್ಕೆ ಸಂಕೋಚ ಪಡದಿರಿ. ಅನಿರೀಕ್ಷಿತವಾಗಿ ಉದ್ಯೋಗ ಸ್ಥಳದಲ್ಲಿ ಹೊಸ ಜವಾಬ್ದಾರಿಗಳನ್ನು ವಹಿಸುವಂಥ ಸಾಧ್ಯತೆ ಇದೆ. ದೇವತಾ ಕಾರ್ಯಗಳಿಗೆ ಆಹ್ವಾನ ಬರುವಂಥ ಯೋಗ ಇದ್ದು, ರುಚಿಕಟ್ಟಾದ ಊಟ- ತಿಂಡಿಗಳನ್ನು ಮಾಡಲಿದ್ದೀರಿ. ಹೊಸ ವಸ್ತ್ರಾಭರಣಗಳನ್ನು ಸಹ ಖರೀದಿಸುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಪ್ರತಿ ಸಲವೂ ನಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ಸಾಧ್ಯತೆಯೇನೂ ಇರುವುದಿಲ್ಲ. ಕೆಲವು ಬಾರಿ ನಾವೇ ಕೇಳಿ ಪಡೆದುಕೊಳ್ಳಬೇಕಾಗುತ್ತದೆ. ಈ ದಿನ ಅಂಥದ್ದೇ ಪರಿಸ್ಥಿತಿ ಇರುತ್ತದೆ. ನಿಮಗೆ ಸಿಗಬೇಕಾದದ್ದನ್ನು ಕೇಳಿ ಪಡೆಯಬೇಕು. ಉದ್ಯೋಗ ಅಥವಾ ವ್ಯವಹಾರಕ್ಕೆ ಸಂಬಂಧಿಸಿದ ಅತಿ ಮುಖ್ಯವಾದ ವಿಚಾರಗಳು ಏನಾದರೂ ಇದ್ದಲ್ಲಿ ಅದನ್ನು ನೀವು ಮೇಲಿನವರಿಗೆ ಮುಟ್ಟಿಸಿದ್ದೀರಿ ಎಂಬುದಕ್ಕೆ ದಾಖಲೆಗಳನ್ನು ಇಟ್ಟುಕೊಳ್ಳಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಬಂಧು- ಮಿತ್ರರನ್ನು ಭೇಟಿ ಆಗುವಂಥ ಯೋಗ ಇದೆ. ಅಥವಾ ದೂರ ಪ್ರಯಾಣಕ್ಕೆ ತೆರಳಬೇಕಾದ ಅಗತ್ಯ ಕಂಡುಬರುತ್ತದೆ. ಸಣ್ಣ- ಪುಟ್ಟ ವಿಚಾರಗಳಿಗೆ ಮಕ್ಕಳ ಜತೆಗೆ ಭಿನ್ನಾಭಿಪ್ರಾಯ ಏರ್ಪಡಬಹುದು. ರಾಜಕಾರಣಿಗಳಿಗೆ ವಿರೋಧಿಗಳಿಂದ ಭಾರೀ ಮುಖಭಂಗ ಆಗುವ ಸಾಧ್ಯತೆಗಳಿವೆ. ನಿಮಗೆ ಸಂಪೂರ್ಣವಾಗಿ ಮಾಹಿತಿ ಇಲ್ಲದ ವಿಚಾರಗಳಿಗೆ ಅಭಿಪ್ರಾಯ ಹೇಳದಿರುವುದು ಉತ್ತಮ ಎನಿಸಿಕೊಳ್ಳುತ್ತದೆ.

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ