Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 2ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 2 ರವಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 2ರ ದಿನಭವಿಷ್ಯ
ಸಂಖ್ಯಾಶಾಸ್ತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Jul 02, 2023 | 6:40 AM

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 2ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 2ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮಲ್ಲಿನ ಸೌಂದರ್ಯ ಪ್ರಜ್ಞೆ ಜಾಸ್ತಿ ಆಗಲಿದೆ. ಬ್ಯೂಟಿಪಾರ್ಲರ್, ಬ್ರ್ಯಾಂಡೆಡ್ ಶರ್ಟ್, ಪ್ಯಾಂಟ್ ಅಥವಾ ಬಟ್ಟೆಗಳಿಗೆ ಹೆಚ್ಚಿನ ಖರ್ಚು ಆಗಲಿದೆ. ಪ್ರೀತಿ- ಪ್ರೇಮದಲ್ಲಿ ಇರುವವರಿಗೆ ಕೂಡ ಖರ್ಚಿನ ಪ್ರಮಾಣ ಜಾಸ್ತಿ ಆಗಲಿದೆ. ಕ್ರೆಡಿಟ್ ಕಾರ್ಡ್ ಬಳಕೆ ಮಾಡುತ್ತಿದ್ದಲ್ಲಿ ಎಷ್ಟು ಹಾಗೂ ಯಾವುದಕ್ಕೆ ಖರ್ಚು ಮಾಡುತ್ತಿದ್ದೀರಿ ಎಂಬ ಬಗ್ಗೆ ನಿಗಾ ಇರಿಸಿಕೊಳ್ಳಿ. ಇಲ್ಲದಿದ್ದಲ್ಲಿ ಖರ್ಚು ಅಳತೆ ಮೀರಿ ಹೋಗುತ್ತದೆ. ಅನಗತ್ಯ ಸಾಲ, ವೆಚ್ಚಗಳನ್ನು ಮಾಡುವಂತಾಗುತ್ತದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮ್ಮ ಸ್ವಭಾವದಲ್ಲಿ ತಪ್ಪುಗಳನ್ನು ಹೇಳುವವರು ಈ ದಿನ ಹೆಚ್ಚಾಗಬಹುದು. ಸಣ್ಣ- ಪುಟ್ಟ ವೈಫಲ್ಯಕ್ಕೂ ನಿಮ್ಮ ನಿರ್ಧಾರ ಹಾಗೂ ಬೇಜವಾಬ್ದಾರಿ ಕಾರಣ ಎಂದು ಕೆಲವರು ದೂರಬಹುದು. ಆದರೆ ಇದ್ಯಾವುದನ್ನೂ ಮನಸ್ಸಿಗೆ ಹಚ್ಚಿಕೊಳ್ಳಬೇಡಿ. ಈ ಹಿಂದೆ ನೀವು ಮಾಡಿದ್ದ ಕೆಲಸ ಹಾಗೂ ತೆಗೆದುಕೊಂಡಿದ್ದ ನಿರ್ಧಾರಗಳು ಮತ್ತು ಪಟ್ಟ ಶ್ರಮದ ಫಲವಾಗಿ ಈ ದಿನ ನಿಮ್ಮ ವರ್ಚಸ್ಸು ಉಳಿಯಲಿದೆ. ಎಲ್ಲಕ್ಕೂ ಪ್ರತಿಕ್ರಿಯೆ ನೀಡಬೇಕು, ಗಟ್ಟಿಯಾದ ಧ್ವನಿಯಲ್ಲಿ ಉತ್ತರ ನೀಡಬೇಕು ಎಂದು ಹೊರಡಬೇಡಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಎಲ್ಲರನ್ನೂ ಒಪ್ಪಿಸಿ ಅಥವಾ ಮೆಚ್ಚಿಸಿ ಕೆಲಸ ಮಾಡುವುದು ಅಸಾಧ್ಯದ ಮಾತು. ವಾಸ್ತವವನ್ನು ಒಪ್ಪಿಕೊಳ್ಳುವುದಕ್ಕೆ ಸಿದ್ಧರಾಗಿ. ದಾಕ್ಷಿಣ್ಯದ ಮಾತಿಗೆ ಸಿಲುಕಿಕೊಂಡು, ನಿಮ್ಮ ಕೈಯಿಂದ ಹಣ ಕಳೆದುಕೊಳ್ಳುವಂಥ ಸನ್ನಿವೇಶ ಸೃಷ್ಟಿಯಾಗಲಿದೆ. ಉನ್ನತ ಶಿಕ್ಷಣಕ್ಕಾಗಿ ಈಗಾಗಲೇ ಪ್ರಯತ್ನಿಸುತ್ತಿದ್ದಲ್ಲಿ ಗೊಂದಲದ ಸನ್ನಿವೇಶ ಸೃಷ್ಟಿಯಾಗುತ್ತದೆ. ಸೆಕೆಂಡ್ ಹ್ಯಾಂಡ್ ಸ್ಕೂಟರ್, ಬೈಕ್ ಖರೀದಿ ಮಾಡುವಂತೆ ಸ್ನೇಹಿತರು, ಸಂಬಂಧಿಗಳು ಸಲಹೆ ನೀಡಿದರೆ ಅಥವಾ ನಿಮಗೇ ಆ ಆಲೋಚನೆ ಇದ್ದಲ್ಲಿ ಅದನ್ನು ಮನಸ್ಸಿನಿಂದ ತೆಗೆದುಹಾಕಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮ ಆಲೋಚನೆ, ನಡವಳಿಕೆ, ತಂತ್ರಗಾರಿಕೆಯಲ್ಲಿ ಬದಲಾವಣೆ ಮಾಡಿಕೊಳ್ಳುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ನಿಮ್ಮ ಶ್ರಮಕ್ಕೂ ದೊರೆಯುತ್ತಿರುವ ಪ್ರತಿಫಲಕ್ಕೂ ತಾಳೆಯೇ ಆಗದಷ್ಟು ಕಡಿಮೆ ಇದೆ ಎಂದು ಬಲವಾಗಿ ನಿಮ್ಮ ಮನಸಿಗೆ ಅನಿಸಲಿದೆ. ಪಬ್, ಬಾರ್- ರೆಸ್ಟೋರೆಂಟ್ ನಡೆಸುತ್ತಿರುವವರಿಗೆ ಆದಾಯದಲ್ಲಿ ಇಳಿಮುಖ ಆಗಲಿದೆ. ಮಾಂಸಾಹಾರಕ್ಕೆ ಸಂಬಂಧಿಸಿದ ವ್ಯವಹಾರ, ಉದ್ಯಮಗಳಲ್ಲಿ ತೊಡಗಿರುವವರಿಗೆ ಯಾವುದಾದರೊಂದು ರೂಪದಲ್ಲಿ ನಷ್ಟ ಎದುರಾಗುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಹಣಕಾಸಿನ ಮುಗ್ಗಟ್ಟು ತಲೆದೋರಬಹುದು. ಇಷ್ಟು ಸಮಯ ನಿಮ್ಮ ನಿರ್ಧಾರಕ್ಕೆ, ಮಾತಿಗೆ ಗೌರವ ನೀಡುತ್ತಿದ್ದವರು ಈಗ ಮೊದಲಿನಷ್ಟು ಕಿಮ್ಮತ್ತು ನೀಡುತ್ತಿಲ್ಲ ಎಂದು ಬಲವಾಗಿ ಅನಿಸುವುದಕ್ಕೆ ಶುರುವಾಗುತ್ತದೆ. ಇತರರ ಮೇಲೆ ಅತಿಯಾದ ನಿರೀಕ್ಷೆಯನ್ನು  ಇಟ್ಟುಕೊಳ್ಳಬೇಡಿ. ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಈಗಾಗಲೇ ಕಾಯಿಲೆ- ಕಸಾಲೆಗಳಿಂದ ಬಳಲುತ್ತಿರುವವರಿಗೆ ಅದು ಉಲ್ಬಣ ಆಗುವ ಎಲ್ಲ ಸಾಧ್ಯತೆಗಳಿವೆ. ಉನ್ನತ ವ್ಯಾಸಂಗಕ್ಕಾಗಿ ತೆರಳಬೇಕು ಎಂದಿರುವವರಿಗೆ ಹಣಕಾಸು ಸಮಸ್ಯೆಗಳು ಇದ್ದಲ್ಲಿ ನಿವಾರಣೆ ಆಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಒಂದು ರೀತಿಯ ನೆಮ್ಮದಿ ನೆಲೆಸಲಿದೆ. ಅಂದುಕೊಂಡಿದ್ದನ್ನು ಮಾಡಿದ, ಹೇಳಬೇಕೆಂದಿದ್ದನ್ನು ಹೇಳಿದ ಸಮಾಧಾನ ನಿಮಗೆ ದೊರೆಯಲಿದೆ. ದೂರದ ಬಂಧುಗಳು ಹೊಸ ಸಂಗತಿಯೊಂದು ತಿಳಿಸಲಿದ್ದಾರೆ. ಇದು ನಿಮಗೆ ಭವಿಷ್ಯದಲ್ಲಿ ಹೇಗಾದರೂ ನೆರವಿಗೆ ಬರಲಿದೆ. ಇಂದು ಸೌಂದರ್ಯಕ್ಕೆ ಹೆಚ್ಚಿನ ಒತ್ತು ನೀಡಿ, ಅದಕ್ಕೆ ಹಣ ಖರ್ಚು ಮಾಡಲಿದ್ದೀರಿ. ಆಪ್ತ ಸ್ನೇಹಿತರ ಕುಟುಂಬಕ್ಕೆ ಬೇಕಾದ ಅಗತ್ಯಗಳಿಗೆ ನೆರವು ನೀಡಲಿದ್ದೀರಿ. ಮನೆಯಲ್ಲಿ ತಂದೆಯೊಂದಿಗೆ ಅಭಿಪ್ರಾಯ ಭೇದಗಳು ಕಾಣಿಸಿಕೊಳ್ಳಬಹುದು.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಮಹಿಳೆಯರು ಪತಿಯ ಆರೋಗ್ಯದ ಬಗ್ಗೆ ಹೆಚ್ಚು ನಿಗಾ ಇರಿಸಿ. ಇನ್ನು ವೃತ್ತಿನಿರತರಿಗೆ ಅಧ್ಯಯನ ಪ್ರವಾಸಕ್ಕೆ ತೆರಳುವಂಥ ಸಾಧ್ಯತೆ ಇದೆ. ಡೇರಿ ವ್ಯವಹಾರಗಳಲ್ಲಿ ಇರುವವರಿಗೆ ಕಮಿಷನ್ ಅಥವಾ ಲಾಭದ ಪ್ರಮಾಣ ಜಾಸ್ತಿ ಆಗುವಂಥ ಅವಕಾಶ ಇದೆ. ಯಾರದೋ ಮಾತನ್ನು ನಂಬಿಕೊಂಡು ಖರೀದಿಸಿದ ವಸ್ತುಗಳು ಕಳಪೆ ಮಟ್ಟದ್ದು ಎಂದು ತಿಳಿದು ಬರಬಹುದು. ಉದ್ಯಮ- ವ್ಯಾಪಾರ ನಡೆಸುತ್ತಿರುವವರು ಈ ದಿನ ಮೃದುವಾದ ಮಾತುಗಳಿಂದ ಎದುರಿನವರ ಜತೆಗೆ ವ್ಯವಹರಿಸಬೇಕು. ಮಾಧ್ಯಮಗಳ ಜತೆಗೆ ವ್ಯವಹರಿಸುವಾಗ ಮಾತಿನ ಮೇಲೆ ನಿಗಾ ಇರಿಸಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನೀವು ಅನುಕೂಲಸ್ಥರೇ ಇರಬಹುದು, ನಿಮ್ಮ ಬಳಿ ಬೆಲೆಬಾಳುವ ಒಡವೆ- ವಸ್ತುಗಳೇ ಇರಬಹುದು. ಈ ದಿನ ಬಹಳ ಮುಖ್ಯವಾದ ಎಚ್ಚರಿಕೆಯೊಂದನ್ನು ಕಡ್ಡಾಯವಾಗಿ ಗಮನಿಸಿ. ಏಕೆಂದರೆ ನಿಮಗೆ ದೃಷ್ಟಿ ದೋಷ ತಾಗುವ ಸಾಧ್ಯತೆಗಳಿವೆ. ಹೀಗೆ ದೋಷ ತಾಗಿದೆ ಎಂಬುದು ಗೊತ್ತಾಗುವುದು ಹೇಗೆ ಅಂದರೆ, ಮೈ- ಕೈ ನೋವು ಕಾಡಲಿದೆ, ಊಟ ಸೇರದಂತೆ ಆಗುತ್ತದೆ. ಆದ್ದರಿಂದ ನೀವು ಧರಿಸುವ ಬಟ್ಟೆ, ಒಡವೆ ಇತ್ಯಾದಿಗಳು ಜನರ ಕಣ್ಣು ಕುಕ್ಕದಂತೆ ಇರಲಿ. ಮನೆಯಲ್ಲಿ ಹಿರಿಯರು ಹೇಳಿದ ಮಾತುಗಳನ್ನು ಪಾಲಿಸಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಈಗಾಗಲೇ ಉದ್ಯೋಗದಲ್ಲಿ ಇರುವವರು ನೀವು ಈಗ ಮಾಡುತ್ತಿರುವ ಕೆಲಸಕ್ಕೆ ಸಂಬಂಧಿಸಿದಂತೆಯೇ ಅಥವಾ ಉದ್ಯೋಗದಲ್ಲಿ ಬದಲಾವಣೆ ಮಾಡಿಕೊಳ್ಳುವುದಕ್ಕಾಗಿ ಹೊಸ ಕೋರ್ಸ್ ತೆಗೆದುಕೊಳ್ಳುವ ಇಚ್ಛೆಯಿದ್ದಲ್ಲಿ ಸರಿಯಾಗಿ ವಿಚಾರಿಸಿ, ಸೂಕ್ತ ಮಾರ್ಗದರ್ಶನವನ್ನು ಪಡೆದುಕೊಂಡು ನಿರ್ಧಾರವನ್ನು ತೆಗೆದುಕೊಳ್ಳಿ. ಯಾವುದೂ ಅಂತಿಮವಾಗದೆ ಬ್ಯಾಂಕ್ ಲೋನ್ ಅಥವಾ ಹೂಡಿಕೆ ವಾಪಸ್ ತೆಗೆದುಕೊಳ್ಳುವುದು ಮಾಡಬೇಡಿ. ನಿಮ್ಮಲ್ಲಿ ಕೆಲವರಿಗೆ ರಕ್ತಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುವಂತಾಗುತ್ತದೆ.
ಲೇಖನ- ಎನ್‌.ಕೆ.ಸ್ವಾತಿ

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ