Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 3ರ ದಿನಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 3ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 3ರ ದಿನಭವಿಷ್ಯ 
ಪ್ರಾತಿನಿಧಿಕ ಚಿತ್ರ
Follow us
ಸ್ವಾತಿ ಎನ್​ಕೆ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 03, 2023 | 1:02 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 3ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಹೊಸ ಹೂಡಿಕೆ ಮಾಡಬೇಕಾದ ಅಗತ್ಯ ಕಂಡುಬರಲಿದೆ. ಕುಟುಂಬ ವಿಚಾರಗಳಲ್ಲಿ ಹೆಚ್ಚು ಸಮಯ ಮೀಸಲಿಡಬೇಕಾದ ಅಗತ್ಯ ಕಂಡುಬರಲಿದೆ. ಹೊಸ ವಾಹನ ಖರೀದಿ ಮಾಡುವುದಕ್ಕೆ ಹಣ ಹೊಂದಿಸುವುದಕ್ಕೆ ಪ್ರಯತ್ನ ಮಾಡಲಿದ್ದೀರಿ. ಈ ದಿನ ಆಂಜನೇಯ ಸ್ವಾಮಿ ದೇವರ ಆರಾಧನೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಔತಣ ಕೂಟಗಳಿಗೆ ಸಂಬಂಧಿಕರಿಂದ ಆಹ್ವಾನ ಬರಲಿದೆ.
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ತುಂಬ ಗಹನವಾದ ವಿಚಾರವೊಂದು ಸಮಸ್ಯೆಯಾಗಿ ಪರಿಣಮಿಸಲಿದೆ. ಕೌಟುಂಬಿಕ ವಿಚಾರದಲ್ಲಿ ಮನಸ್ತಾಪ ಎದುರಾಗಲಿದೆ. ಕಾಲು ನೋವಿನ ಸಮಸ್ಯೆ ಇರುವವರಿಗೆ ಅದು ಉಲ್ಬಣ ಆಗುವ ಸಾಧ್ಯತೆ ಇದೆ. ಅಧ್ಯಾತ್ಮ ಚಿಂತಕರು, ವೇದ ಪಂಡಿತರು, ಪ್ರವಚನಕಾರರಿಗೆ ಬಹಳ ಮುಖ್ಯವಾದ ದಿನ ಇದು. ಏಕೆಂದರೆ ನಿಮ್ಮ ಸಾಮರ್ಥ್ಯವನ್ನು ಗುರುತಿಸಿ ಸನ್ಮಾನ ಮಾಡುವುದಕ್ಕೆ ಸಂಘ- ಸಂಸ್ಥೆಗಳು ನಿರ್ಧಾರ ಮಾಡಲಿವೆ.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ಅಚಾನಕ್ ಆಗಿ ಅಥವಾ ದಿಢೀರ್ ಎಂದು ತೀರ್ಮಾನ ಮಾಡಿ ಕೆಲವು ಖರೀದಿಗಳನ್ನು ಮಾಡಲಿದ್ದೀರಿ. ಇಎಂಐ ಸಿಗುತ್ತದೆ ಎಂಬ ಕಾರಣಕ್ಕೆ ಅಗತ್ಯ ಇಲ್ಲದನ್ನೂ ಖರೀದಿ ಮಾಡುವುದಕ್ಕೆ ಹೋಗದಿರಿ. ಇನ್ನು ತಂದೆ ಅಥವಾ ತಂದೆ ಸಮಾನರಾದವರಿಗೆ ಆರೋಗ್ಯ ತಪಾಸಣೆ ಮಾಡಬೇಕಾದಂಥ ಸನ್ನಿವೇಶ ಎದುರಾಗಲಿದೆ. ಭುಜ ಅಥವಾ ಬೆನ್ನಿನ ಸಮಸ್ಯೆ ಇರುವುದಾದಲ್ಲಿ ಅದು ಉಲ್ಬಣ ಆಗುವಂಥ ಸಾಧ್ಯತೆ ಇದೆ. ಆ ಬಗ್ಗೆ ಎಚ್ಚರಿಕೆಯನ್ನು ವಹಿಸಿ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ನಿಧಾನವಾಗಿ ಆರಂಭವಾಗಿದ್ದ ಕೆಲಸಗಳು ವೇಗ ಪಡೆದುಕೊಳ್ಳಲಿವೆ. ಹಣಕಾಸು ಹೊಂದಿಕೆ ಆಗದೆ ನಿಂತುಹೋಗಿದ್ದ ಕೆಲಸಗಳಿಗೆ ಅಗತ್ಯವಿರುವ ಹಣ ದೊರೆಯುವ ಮಾರ್ಗ ಗೋಚರಿಸಲಿದೆ. ನೀವು ಒಪ್ಪಿಕೊಂಡಿದ್ದ ಕೆಲಸಗಳನ್ನು ಗಡುವಿನೊಳಗೆ ಮುಗಿಸಿಕೊಡುವ ಕಡೆಗೂ ಗಮನ ನೀಡಿ. ಇನ್ನು ಬರಬೇಕಾದ ಹಣ ಇದ್ದಲ್ಲಿ ಗಟ್ಟಿಯಾಗಿ ಪ್ರಯತ್ನಿಸಿ, ಬರುವ ಸಾಧ್ಯತೆ ಇರುತ್ತದೆ ಅಥವಾ ಇಂಥ ಸಮಯದಲ್ಲಿ ಕೊಡುವುದಾಗಿ ಭರವಸೆ ಒಪ್ಪಿಕೊಳ್ಳಲಿದ್ದಾರೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ಈ ಹಿಂದಿನ ನಿಮ್ಮ ಪ್ರಯತ್ನಗಳು ಫಲ ನೀಡುವ ಸೂಚನೆಗಳು ದೊರೆಯಲಿವೆ. ಆತ್ಮೀಯರು ನೀಡುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ. ಈ ದಿನ ಯಾರನ್ನಾದರೂ ಭೇಟಿ ಆಗಬೇಕು ಎಂದು ನಿರ್ಧಾರ ಆಗಿದ್ದಲ್ಲಿ ಸಮಯಕ್ಕೆ ಸರಿಯಾಗಿ ಆ ಸ್ಥಳದಲ್ಲಿ ಇರುವಂತೆ ನೋಡಿಕೊಳ್ಳಿ. ಕೆಲಸ ಬದಲಾವಣೆ ಮಾಡುವ ಬಗ್ಗೆ ಆಲೋಚನೆ ಮಾಡುತ್ತಿದ್ದಲ್ಲಿ  ಸ್ನೇಹಿತರ ಮೂಲಕವಾಗಿ ರೆಫರೆನ್ಸ್ ಸಿಗುವಂಥ ಅವಕಾಶಗಳಿವೆ. ಇನ್ನು ಈ ದಿನ ನಿಮ್ಮ ಸೋಷಿಯಲ್ ಕಾಂಟ್ಯಾಕ್ಟ್ ಗಳನ್ನು ವಿಸ್ತರಿಸಿಕೊಳ್ಳುವ ಅವಕಾಶಗಳನ್ನು ಬಳಸಿಕೊಳ್ಳಿ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ಶಿಕ್ಷಣ ಸಾಲಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ನಿರಾಶೆ ಆಗಬಹುದು. ಆದ್ದರಿಂದ ಯಾವುದಕ್ಕೂ ಪ್ಲ್ಯಾನ್ ಬಿ ಇಟ್ಟುಕೊಂಡಿರುವುದು ಉತ್ತಮ. ಸಂಬಂಧಿಕರ ಮನೆಯ ಸಮಾರಂಭಗಳಿಗೆ ತೆರಳಿದಾಗ ಆಗುವ ಪರಿಚಯಗಳಿಂದ ಭವಿಷ್ಯದಲ್ಲಿ ಅನುಕೂಲ ಆಗಲಿದೆ. ಕ್ರೆಡಿಟ್ ಕಾರ್ಡ್, ಸಾಲಗಳ ಇಎಂಐ ಡೆಡ್ ಲೈನ್ ಒಳಗೆ ಪಾವತಿ ಮಾಡಿದ್ದೀರಾ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ. ಇಲ್ಲದಿದ್ದಲ್ಲಿ ಅದಕ್ಕೆ ದಂಡ ಪಾವತಿ ಮಾಡಬೇಕಾದಂಥ ಸನ್ನಿವೇಶ ಎದುರಾಗುತ್ತದೆ. ಪಾರ್ಟನರ್ ಷಿಪ್ ವ್ಯವಹಾರಗಳನ್ನು ಮಾಡುತ್ತಿರುವವರು ವ್ಯವಹಾರ ವಿಸ್ತರಣೆ ಬಗ್ಗೆ ಆಲೋಚಿಸಲಿದ್ದೀರಿ. ಮಹಿಳೆಯರಿಗೆ ರಕ್ತಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಣಿಸಿಕೊಳ್ಳಬಹುದು, ಜಾಗ್ರತೆ.
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ಅಸಹಾಯಕ ಸ್ಥಿತಿಯಲ್ಲಿ ನಿಮ್ಮ ಹತ್ತಿರದ ಸಂಬಂಧಿಗಳು ಅಥವಾ ಆಪ್ತ ಸ್ನೇಹಿತರು ಸಹಾಯ ಕೇಳಿಕೊಂಡು ಬರಬಹುದು. ಸಾಧ್ಯವೇ ಇಲ್ಲ ಎಂದು ಹೇಳುವ ಮೊದಲು ಆಲೋಚಿಸುವುದು ಉತ್ತಮ. ಇನ್ನು ಬಿಪಿಒ ವಲಯದಲ್ಲಿ ಕಾರ್ಯ ನಿರ್ವಹಿಸುವವರು ಹಾಗೂ ಯಾರು ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರು ಇದ್ದಾರೋ ಅಂಥವರಿಗೆ ಕೆಲಸ ಬದಲಾವಣೆ ಮಾಡುವ ಬಗ್ಗೆ ಗಂಭೀರವಾದ ಆಲೋಚನೆ ಮೂಡಲಿದೆ. ಆಪ್ತರ ವಿವಾಹ ವಾರ್ಷಿಕೋತ್ಸವವೋ ಅಥವಾ ಜನ್ಮದಿನಕ್ಕಾಗಿ ಉಡುಗೊರೆಯನ್ನು ಕೊಡುವಂಥ ಯೋಗ ಇದೆ. ಸ್ನೇಹ- ಸಂಬಂಧದಲ್ಲಿ ಬಾಂಧವ್ಯ ವೃದ್ಧಿ ಆಗಲಿದೆ.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ನಿಮ್ಮ ಬಳಿ ಇರುವ ಹಣ ಎಷ್ಟಿದೆ, ನಿಮ್ಮ ಗುರಿಗೆ ಎಷ್ಟು ಅಗತ್ಯ ಇದೆ ಎಂಬ ಬಗ್ಗೆ ಸರಿಯಾದ ಲೆಕ್ಕಾಚಾರ ಹಾಕಿಕೊಳ್ಳಿ. ಯಾರಿಗೆ ಮಾತು ನೀಡುತ್ತಿದ್ದೀರಿ, ಪೂರೈಸುವುದಕ್ಕೆ ಸಾಧ್ಯವಾಗುವಂಥ ಭರವಸೆಯಾ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ. ಪ್ರೀತಿ- ಪ್ರೇಮದ ವಿಚಾರಗಳನ್ನು ಹೇಳಿಕೊಳ್ಳಬೇಕು ಎಂದುಕೊಳ್ಳುತ್ತಾ ಇದ್ದಲ್ಲಿ ನಿಮ್ಮಲ್ಲಿ ಕೆಲವರಿಗೆ ಅದಕ್ಕೆ ಅವಕಾಶ ದೊರೆಯಲಿದೆ. ಆದರೆ ನಿರೀಕ್ಷೆ ದೊಡ್ಡ ಪ್ರಮಾಣದಲ್ಲಿ ಇಟ್ಟುಕೊಳ್ಳಬೇಡಿ. ತಾಯಿ- ತಂದೆಯ ಮಾತುಗಳನ್ನು ಸಮಾಧಾನವಾಗಿ ಕೇಳಿಸಿಕೊಳ್ಳಿ. ಯಾವುದಾದರೂ ಯೋಜನೆಗಳ ವಿಚಾರಗಳಲ್ಲಿ ಮನಸ್ಸಿಗೆ ಸಂದೇಹ ಇದ್ದಲ್ಲಿ ಅದನ್ನು ಕೈಗೆತ್ತಿಕೊಳ್ಳಬೇಡಿ. ಮನಸ್ಸಿಗೆ ವಿರುದ್ಧವಾಗಿ ನಡೆದುಕೊಳ್ಳಬೇಡಿ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ಪೌರೋಹಿತ್ಯ, ಜ್ಯೋತಿಷ್ಯ, ಉಪನ್ಯಾಸಗಳಲ್ಲಿ ತೊಡಗಿಕೊಂಡಿರುವವರಿಗೆ ಆತ್ಮಗೌರವಕ್ಕೆ ಚ್ಯುತಿ ಬರುವಂಥ ಸಾಧ್ಯತೆಗಳಿವೆ. ಆದ್ದರಿಂದ ಈ ದಿನದ ಬೆಳವಣಿಗೆಯಿಂದ ಅಧೀರರಾಗಬೇಡಿ. ಹಣಕಾಸಿನ ವಿಚಾರದಲ್ಲಿ ಪ್ರಮುಖ ಬೆಳವಣಿಗೆಗಳು ಆಗಲಿವೆ. ವಿದೇಶ ಪ್ರವಾಸಕ್ಕೆ ತೆರಳಬೇಕು ಎಂದಿರುವವರಿಗೆ ಸಿದ್ಧತೆಗಳು ವೇಗ ಪಡೆದುಕೊಳ್ಳಲಿವೆ. ರಾಜಕಾರಣಿಗಳಿಂದ ಯಾವುದಾದರೂ ಅನುಕೂಲವನ್ನು ನಿರೀಕ್ಷೆ ಮಾಡುತ್ತಿರುವವರಿಗೆ ನಿರಾಸೆ ಆಗುವ ಅವಕಾಶಗಳಿವೆ. ಈ ಮೊದಲು ನೀವು ಬಹಳ ಶ್ರಮಪಟ್ಟು ರೂಢಿಸಿಕೊಂಡಿದ್ದ ಕಾಂಟ್ಯಾಕ್ಟ್ ಗಳು ಈಗ ಪ್ರಯೋಜನಕ್ಕೆ ಬರಲಿವೆ. ನಿಮಗಿಂತ ವಯಸ್ಸಿನಲ್ಲಿ ಚಿಕ್ಕವರ ಜತೆಗೆ ಮಾತುಕತೆ ನಡೆಸುವಾಗ ಪದಗಳ ಬಳಕೆಯಲ್ಲಿ ಎಚ್ಚರವಾಗಿರಿ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ