Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 4ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 3ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 4ರ ದಿನಭವಿಷ್ಯ
ಪ್ರಾತಿನಿಧಿಕ ಚಿತ್ರ
Follow us
ಸ್ವಾತಿ ಎನ್​ಕೆ
| Updated By: Ganapathi Sharma

Updated on:Jul 04, 2023 | 10:30 PM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 3ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ವಂಚಕರಿಂದ ಭಾರೀ ಎಚ್ಚರಿಕೆಯಿಂದ ಇರಬೇಕು. ಒಂದು ನಿಮ್ಮ ವಸ್ತುವನ್ನು ಖರೀದಿಸಿ, ಹಣ ನೀಡದೆ ವಂಚನೆ ಮಾಡುವುದು ಒಂದು ಬಗೆಯಲ್ಲಾದರೆ, ಕಳಪೆ ಅಥವಾ ನಕಲಿ ವಸ್ತುಗಳನ್ನು ನಿಮಗೆ ಮಾರಾಟ ಮಾಡುವಂಥ ಸಾಧ್ಯತೆಯೂ ಇದೆ. ಆದ್ದರಿಂದ ಕೊಡು- ಕೊಳ್ಳುವ ಯಾವುದೇ ವ್ಯವಹಾರ ಇರಲಿ, ಬಹಳ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಆಲಸ್ಯದ ಕಾರಣಕ್ಕೆ ಕೆಲವು ಅವಕಾಶಗಳನ್ನು ಕಳೆದುಕೊಳ್ಳಲಿದ್ದೀರಿ. ಆದ್ದರಿಂದ ಯಾವುದೇ ಕೆಲಸಕ್ಕೆ ಕೊನೆ ಕ್ಷಣದ ತನಕ ಕಾಯುತ್ತಾ ಕೂರಬೇಡಿ. ವಿವಾಹ ವಯಸ್ಕ ಯುವತಿಯರಿಗೆ ಸೂಕ್ತ ಸಂಬಂಧಗಳು ದೊರೆಯುವ ಯೋಗ ಇದೆ. ಕುಟುಂಬ ಸದಸ್ಯರ ಜತೆಗೆ ಪ್ರವಾಸ ತೆರಳುವಂಥ ಯೋಗ ಇದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ದಂಪತಿ ಮಧ್ಯೆ ಸಣ್ಣ- ಪುಟ್ಟ ಮನಸ್ತಾಪಗಳು ಇದ್ದಲ್ಲಿ ಬಗೆಹರಿಸಿಕೊಳ್ಳುವುದಕ್ಕೆ ಉತ್ತಮ ವೇದಿಕೆ ದೊರೆಯಲಿದೆ. ನಿಮ್ಮಲ್ಲಿ ಕೆಲವರು ಮನೆಯನ್ನು ಬದಲಿಸಿ, ಬೇರೆಡೆ ತೆರಳುವುದಕ್ಕೆ ಆಲೋಚನೆ ಮಾಡಲಿದ್ದೀರಿ. ಈ ಓಡಾಟದಲ್ಲಿ ಹೆಚ್ಚಿನ ಸಮಯ ಹೋಗಲಿದೆ. ಇನ್ನು ಮನೆಗೆ ದೊಡ್ಡ ಅಳತೆಯ ಟೀವಿ, ಹೋಮ್ ಥಿಯೇಟರ್ ಇಂಥದ್ದನ್ನು ಕೊಳ್ಳುವುದಕ್ಕೆ ಹಣ ಖರ್ಚು ಮಾಡಲಿದ್ದೀರಿ. ಒಟ್ಟಾರೆಯಾಗಿ ನೋಡಿದಾಗ ಕುಟುಂಬ- ಮನೆಯ ಸಲುವಾಗಿಯೇ ಹೆಚ್ಚು ಖರ್ಚು ಮಾಡುವಂಥ ಯೋಗ ಕಂಡುಬರುತ್ತಿದೆ. ಮಕ್ಕಳ ಶಿಕ್ಷಣದ ಸಲುವಾಗಿ ಉಳಿತಾಯ ಯೋಜನೆಗಳಲ್ಲಿ ಹಣ ಹೂಡಿಕೆ ಸಹ ಆರಂಭಿಸುವುದಕ್ಕೆ ಮುಂದಾಗಲಿದ್ದೀರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಸಾಕುಪ್ರಾಣಿಗಳ ಆರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯ ನೀಡಿ. ಉದ್ಯೋಗ ಸ್ಥಳದಲ್ಲಿ ಇತರರು ಆಗುವುದಿಲ್ಲ ಎಂದು ಕೈ ಬಿಟ್ಟ ಕೆಲಸದ ಹೊಣೆಯನ್ನು ನಿಮಗೆ ವಹಿಸುವ ಸಾಧ್ಯತೆ ಹೆಚ್ಚಿದೆ. ಕುಟುಂಬದ ವಿಚಾರದಲ್ಲಿ ನೀವು ತೆಗೆದುಕೊಂಡಂಥ ಸಮಯೋಚಿತ ನಿರ್ಧಾರಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿವೆ. ಚಾರ್ಟರ್ಡ್ ಅಕೌಂಟೆಂಟ್, ವಕೀಲರು ಇಂಥ ವೃತ್ತಿಯಲ್ಲಿ ಇರುವವರಿಗೆ ಕ್ಲೈಂಟ್ ಗಳ ಜತೆಗೆ ಮನಸ್ತಾಪ ಏರ್ಪಡುವ ಸಾಧ್ಯತೆ ಇದೆ. ಆದ್ದರಿಂದ ಯಾವುದೇ ವಿಚಾರವನ್ನು ಮೇಲ್ ಮಾಡುವುದೋ ಅಥವಾ ದಾಖಲೆ ಸಹಿತವಾಗಿ ಅವರಿಗೆ ತಲುಪಿಸುವುದಕ್ಕೆ ಪ್ರಯತ್ನ ಮಾಡಿ. ಅಥ್ಲೆಟಿಕ್ಸ್, ಜಿಮ್ ಇಂಥದ್ದಕ್ಕೆ ಸೇರ್ಪಡೆ ಆಗುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ಒಟ್ಟಿನಲ್ಲಿ ಚಟುವಟಿಕೆಯಿಂದ ಇರುವುದಕ್ಕೆ ಪ್ರಯತ್ನ ಮಾಡಲಿದ್ದೀರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ವಿಮಾ ಏಜೆಂಟರು, ಸೆಕೆಂಡ್ ಹ್ಯಾಂಡ್ ವಾಹನಗಳ ಡೀಲರ್ ಗಳು, ಮನೆ- ಸೈಟುಗಳ ದಲ್ಲಾಳಿಗಳಿಗೆ ಆದಾಯ ಹೆಚ್ಚಾಗಲಿದೆ. ಈ ಹಿಂದೆ ನೀವು ಮಾಡಿದ ಸಹಾಯ, ನೀಡಿದ ಸಲಹೆ- ಸೂಚನೆಗಳಿಂದ ಲಾಭವಾದಂಥವರು ಈಗ ಮತ್ತೆ ನಿಮ್ಮನ್ನು ಹುಡುಕಿಕೊಂಡು ಬಂದು, ಕೆಲವು ಕೆಲಸಗಳನ್ನು ನೀಡಲಿದ್ದಾರೆ. ಎಲೆಕ್ಟ್ರಿಕಲ್ ವಾಹನ ಖರೀದಿ ಮಾಡಬೇಕು ಎಂಬ ಕಾರಣಕ್ಕೆ ಹಣಕಾಸಿಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಅದು ಒದಗಿ ಬರುವ ಸಾಧ್ಯತೆ ಇದೆ. ನೀವು ತೆಗೆದುಕೊಂಡ ಕೆಲವು ನಿರ್ಧಾರಗಳು ತಕ್ಷಣವೇ ಫಲ ನೀಡುವುದಕ್ಕೆ ಆರಂಭಿಸಲಿವೆ. ಸೋದರಮಾವ, ತಾಯಿಯ ತಂದೆ ಇವರ ಆರೋಗ್ಯದ ಬಗ್ಗೆ ಮಾತ್ರ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ. ಸಣ್ಣ- ಪುಟ್ಟ ಅನಾರೋಗ್ಯ ಎಂದು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಹೊಸ ಪ್ರಾಜೆಕ್ಟ್ ವೊಂದರ ಸಲುವಾಗಿ ದೂರ ಪ್ರಯಾಣ ಮಾಡಬೇಕಾಗುತ್ತದೆ. ಇದರಿಂದ ಹೆಸರು, ಸ್ಥಾನ- ಮಾನ ದೊರೆಯಲಿದೆ. ಈಗಾಗಲೇ ಸ್ವಂತ ಜಾಗ ಇರುವಂಥವರು ಹೋಮ್ ಸ್ಟೇಯಂಥದ್ದನ್ನು ಆರಂಭಿಸುವ ಬಗ್ಗೆ ಚಿಂತನೆ ಮಾಡಲಿದ್ದೀರಿ. ಇದಕ್ಕಾಗಿ ಬೇಕಾದ ಸಿದ್ಧತೆಗಳನ್ನು ಆರಂಭಿಸಿದ್ದೀರಿ ಎಂದಾದರೆ ಅದು ಇನ್ನಷ್ಟು ವೇಗ ಪಡೆದುಕೊಳ್ಳಲಿದೆ. ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಚಿಂತೆ ಕಾಡಲಿದೆ. ಅಂದುಕೊಂಡಂಥ ಅಥವಾ ಪ್ರಯತ್ನ ಮಾಡಿದ ಸಂಸ್ಥೆಯಲ್ಲಿ ಪ್ರವೇಶ ದೊರಕದೆ ಮನಸ್ಸಿಗೆ ಬೇಸರ ಕೂಡ ಆಗಬಹುದು. ಆನ್ ಲೈನ್ ನಲ್ಲಿ ವ್ಯವಹಾರ ಮಾಡುವಂಥವರು ಬಹಳ ಜಾಗ್ರತೆಯಿಂದ ಇರಬೇಕು. ನಿಮ್ಮಲ್ಲಿ ಕೆಲವರಿಗೆ ವಂಚನೆ ಆಗುವಂಥ ಯೋಗ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಈಗಾಗಲೇ ಕೆಲಸ ಆರಂಭಿಸಿ, ಒಂದು ಹಂತ ತಲುಪಿದ ನಂತರ ಯಾಕೋ ಮುಂದುವರಿಯುತ್ತಿಲ್ಲ ಎಂದಾಗಿದ್ದಲ್ಲಿ ಈಗ ವೇಗ ಪಡೆದುಕೊಳ್ಳಲಿದೆ. ಕೆಲಸ ಬದಲಾವಣೆಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸ್ನೇಹಿತರ ಮೂಲಕ ಮುಖ್ಯ ಸಲಹೆ, ಸೂಚನೆ ಹಾಗೂ ಮಾಹಿತಿ ದೊರೆಯಲಿದೆ. ಇನ್ನು ಹೊಸ ಬಟ್ಟೆಗಳನ್ನು ಖರೀದಿಸುವಂಥ ಯೋಗ ಇದೆ. ನಿಮ್ಮಲ್ಲಿ ಕೆಲವರು ಪ್ರೀತಿಪಾತ್ರರಿಗೆ ಅಥವಾ ಆಪ್ತರಿಗೆ ಉಡುಗೊರೆಯಾಗಿ ನೀಡಲಿದ್ದೀರಿ. ಮನೆಗೆ ಗೃಹೋಪಯೋಗಿ ವಸ್ತುಗಳನ್ನು ಸಹ ಖರೀದಿ ಮಾಡಲಿದ್ದೀರಿ. ಕ್ರೆಡಿಟ್ ಕಾರ್ಡ್ ಬಳಸುವಂತಿದ್ದಲ್ಲಿ ಹಾಗೂ ಅದರಲ್ಲಿ ಇಎಂಐಗೆ ಏನನ್ನಾದರೂ ಖರೀದಿಸುತ್ತಿದ್ದೀರಿ ಎಂದಾದರೆ ಯಾವುದು ಹಾಗೂ ಎಷ್ಟು ವಸ್ತುಗಳು ಅಗತ್ಯ ಎಂಬ ಬಗ್ಗೆ ನಿಗಾ ಇರಲಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಸ್ನೇಹಿತರು- ಸಂಬಂಧಿಗಳ ಮನೆಯ ಶುಭ ಕಾರ್ಯಗಳಿಗಾಗಿ ನಿಮಗೆ ಓಡಾಟ ಹೆಚ್ಚಾಗಬಹುದು. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರಿಗೆ ಒಂದೋ ಆ ಉದ್ಯೋಗ ಕಾಯಂ ಆಗಬಹುದು ಅಥವಾ ಇದಕ್ಕಿಂತ ಒಳ್ಳೆ ಕೆಲಸ ಸಿಗಲಿದೆ. ವೃತ್ತಿಪರರು ಇರುವಂಥ ಕೆಲವು ಕೆಲಸಗಳನ್ನು ಪದೇಪದೇ ಮಾಡಬೇಕಾದಂಥ ಸನ್ನಿವೇಶ ಸೃಷ್ಟಿ ಆಗಲಿದೆ. ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವವರಿಗೆ ಖರ್ಚಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಬೆನ್ನಿನ ನೋವು ಕಾಡುತ್ತಿದ್ದಲ್ಲಿ ಅದು ಉಲ್ಬಣ ಆಗುವಂಥ ಸಾಧ್ಯತೆ ಇದೆ. ಆದ್ದರಿಂದ ಸೂಕ್ತ ವೈದ್ಯರಲ್ಲಿ ಪರೀಕ್ಷೆ ಮಾಡಿಸುವುದು ಮುಖ್ಯ ಆಗುತ್ತದೆ. ಯಾವುದೇ ಭರವಸೆ ನೀಡುವ ಮುನ್ನ ಈಡೇರಿಸುವುದಕ್ಕೆ ಸಾಧ್ಯವಾ ಅಳೆದು ನೋಡಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಹೊಸದಾಗಿ ಪರಿಚಯ ಆದವರ ಸಲಹೆ- ಸೂಚನೆಗಳನ್ನು ಪಾಲಿಸುವ ಮುನ್ನ ಒಂದಕ್ಕೆ ನಾಲ್ಕು ಬಾರಿ ಆಲೋಚನೆ ಮಾಡಿ. ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಆದಾಯ ಮೂಲ ಹೆಚ್ಚಾಗುವಂಥ ಸಾಧ್ಯತೆ ಇದೆ. ದೀರ್ಘ ಕಾಲದಿಂದ ಬಾರದೆ ಬಾಕಿ ಉಳಿದಿದ್ದ ಹಣ ನಿಮ್ಮ ಕೈ ಸೇರುವಂಥ ಅವಕಾಶಗಳಿವೆ. ಹಳೇ ಕಡತ, ಕಾಗದ- ಪತ್ರಗಳನ್ನು ಸರಿಯಾಗಿ ಹುಡುಕಿ ಇಟ್ಟುಕೊಳ್ಳಿ, ಅನುಕೂಲ ಆಗಲಿದೆ. ಅನಿರೀಕ್ಷಿತವಾಗಿ ಪ್ರಯಾಣಗಳನ್ನು ಕೈಗೊಳ್ಳಬೇಕಾಗಬಹುದು. ಆದ್ದರಿಂದ ಅಗತ್ಯ ಇರುವ ಎಲ್ಲ ವಸ್ತುಗಳನ್ನು ಸಿದ್ಧ ಮಾಡಿಟ್ಟುಕೊಂಡಿದ್ದೀರಾ ಎಂಬುದನ್ನು ಪರೀಕ್ಷೆ ಮಾಡಿಟ್ಟುಕೊಂಡಲ್ಲಿ ಉತ್ತಮ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಬ್ಯಾಂಕ್ ಗಳಿಂದ ಸಾಲಕ್ಕಾಗಿ ಪ್ರಯತ್ನ ಮಾಡುತ್ತಿದ್ದಲ್ಲಿ ದಾಖಲೆ ಪತ್ರಗಳನ್ನು ಹೊಂದಿಸಿಕೊಳ್ಳುವ ಪ್ರಕ್ರಿಯೆ ವೇಗವನ್ನು ಪಡೆದುಕೊಳ್ಳಲಿದೆ. ನಿಮ್ಮ ಪರವಾಗಿ ಕೆಲವರು ಶಿಫಾರಸು ಸಹ ಮಾಡುವ ಸಾಧ್ಯತೆಗಳಿವೆ. ಐಟಿ- ಬಿಪಿಒಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಹೊಸದಾಗಿ ಪ್ರಾಜೆಕ್ಟ್ ಗಳು ನಿಮ್ಮ ಶ್ರಮದ ಬಲವೂ ಸೇರಿಕೊಂಡು ಯಶಸ್ಸು ಕಾಣುವ ಯೋಗ ಇದೆ. ಕುಟುಂಬ ಸದಸ್ಯರ ಅನಾರೋಗ್ಯವು ಸ್ವಲ್ಪ ಮಟ್ಟಿಗೆ ಆತಂಕ ಸೃಷ್ಟಿಸುವ ಸಾಧ್ಯತೆ ಇದೆ. ದೂರ ಪ್ರಯಾಣ ಅಥವಾ ವಿದೇಶ ಪ್ರಯಾಣ ಮಾಡುವವರು ಅಥವಾ ಈಗಾಗಲೇ ಪ್ರಯಾಣ ಮಾಡುತ್ತಿರುವವರು ನಿಮ್ಮ ವಸ್ತುಗಳ ಕಡೆಗೆ ಹೆಚ್ಚಿನ ನಿಗಾ ವಹಿಸುವುದು ಮುಖ್ಯವಾಗುತ್ತದೆ.

Published On - 1:00 am, Tue, 4 July 23

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ