Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 5ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 5ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 5ರ ದಿನಭವಿಷ್ಯ
ಪ್ರಾತಿನಿಧಿಕ ಚಿತ್ರ
Follow us
ಸ್ವಾತಿ ಎನ್​ಕೆ
| Updated By: Ganapathi Sharma

Updated on: Jul 05, 2023 | 1:00 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 5ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಭಾವನಾತ್ಮಕ ವಿಚಾರಗಳು ಈ ದಿನ ಮುನ್ನೆಲೆಗೆ ಬರಲಿವೆ. ನೀವು ಹೇಳಬೇಕಾದ್ದನ್ನು ಮುಲಾಜಿಲ್ಲದೆ ಹೇಳುವುದು ಬಹಳ ಕಷ್ಟವಾಗಲಿದೆ. ನಿಮ್ಮ ಬಲ ಎಂದೆನಿಸಿಕೊಂಡ ಕೆಲವು ನಿರ್ಧಾರಗಳು ಸಹಾಯಕ್ಕೆ ಬರಲಿವೆ. ಹೊಸದಾಗಿ ಏನನ್ನಾದರೂ ಕಲಿಯುವುದಕ್ಕೆ ಆರಂಭಿಸುತ್ತಿದ್ದೀರಿ ಎಂದಾದರೆ ಮಾಮೂಲಿಗಿಂತ ಹೆಚ್ಚಿನ ಶ್ರಮ ಹಾಕುವುದು ಅತ್ಯಗತ್ಯ. ಭೂಮಿ, ವಾಹನ, ದೊಡ್ಡ ಸರಕುಗಳ ಸಾಗಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮುಂಚಿತವಾಗಿ ಇದು ನಿಮ್ಮ ಶ್ರಮವನ್ನು ಎಷ್ಟು ನಿರೀಕ್ಷಿಸುತ್ತದೆ ಎಂಬ ಲೆಕ್ಕಾಚಾರ ಹಾಕಿಕೊಳ್ಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಮಕ್ಕಳ ಯಶಸ್ಸಿನಿಂದ ಮನಸ್ಸಿಗೆ ಸಂತೋಷ, ಸಮಾಧಾನ ದೊರೆಯಲಿದೆ. ಮನೆಯ ವಿಸ್ತರಣೆ ಅಥವಾ ದುರಸ್ತಿ ಮಾಡುವುದಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರ ಜತೆಗೆ ಚರ್ಚೆಯನ್ನು ನಡೆಸಲಿದ್ದೀರಿ. ಇದೇ ಮೊದಲ ಬಾರಿಗೆ ಹೊಸ ಪ್ರದೇಶಗಳಿಗೆ ತೆರಳುತ್ತಿದ್ದಲ್ಲಿ ಅಲ್ಲಿ ನಿಮ್ಮ ಹವ್ಯಾಸಕ್ಕೆ, ವ್ಯವಹಾರಕ್ಕೆ ಅಥವಾ ಕೆಲಸಕ್ಕೆ ಅನುಕೂಲವಾಗುವಂಥ ಬೆಳವಣಿಗೆಗಳು ಆಗಲಿವೆ. ಬಹಳ ಸಮಯದಿಂದ ಹುಡುಕುತ್ತಿದ್ದ ದಾಖಲೆಗಳು ದೊರೆಯುವ ಯೋಗ ಇದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮಗೆ ಎಷ್ಟೇ ಹತ್ತಿರದವರು ಹೇಳಿದರೂ ಯಾವುದೇ ಕಾರಣಕ್ಕೂ ಹೇಳಿಕೆ ಮಾತುಗಳನ್ನು ಕೇಳಬೇಡಿ. ನಿಮ್ಮ ಮೂಲಕ ಇತರರು ತಮ್ಮ ಗುರಿ ಸಾಧನೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಾರೆ. ನಿಮ್ಮ ಹೆಸರು, ವರ್ಚಸ್ಸು ದುರುಪಯೋಗ ಆಗದಂತೆ ಮೇಲಧಿಕಾರಿಗಳು ತಮ್ಮ ಮನಸ್ಸಿನಲ್ಲಿರುವ ವಿಚಾರ ನಿಮಗೆ ಹೇಳುತ್ತಿಲ್ಲ ಎಂಬುದು ನಿಮ್ಮ ಗಮನಕ್ಕೆ ಬರುತ್ತದೆ. ಮಾತಿನ ಮೇಲೆ ನಿಗಾ ಇರಬೇಕು. ಇಲ್ಲದಿದ್ದರೆ ಅನಗತ್ಯ ವಿವಾದ ಆಗಬಹುದು. ಕಾರಣವೇ ಇಲ್ಲದೆ ನಿಮ್ಮ ಮನಸ್ಸಿಗೆ ಇಂದು ಬೇಸರ ಕಾಡಲಿದೆ. ನಿಮಗೆ ಗೊತ್ತಿಲದ ವಿಚಾರದ ಬಗ್ಗೆ ಮಾತನಾಡದಿರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮ ಮಾತಿಗೆ ಮನ್ನಣೆ, ಗೌರವ ದೊರೆಯುವುದು ಹೆಚ್ಚಾಗುತ್ತದೆ. ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡು ಎಂಬ ಮಾತಿನಂತೆ ಯಾರದೋ ಮಾತು ನಂಬಿಕೊಂಡು, ಆಪ್ತರ ಮೇಲೆ ಅನುಮಾನ ಮೂಡುವ ಮುನ್ನ ಮಾತುಕತೆಯಿಂದ ವಿಚಾರವನ್ನು ತಿಳಿದುಕೊಳ್ಳುವುದಕ್ಕೆ ಪ್ರಯತ್ನಿಸಿ. ಕ್ರೆಡಿಟ್ ಕಾರ್ಡ್ ಬಿಲ್, ಇಎಂಐ ಕಟ್ಟುವುದನ್ನು ನೀವೇ ಮರೆಯುತ್ತೀರೋ ಅಥವಾ ಏನೋ ಅನನುಕೂಲ ಆಗುತ್ತದೋ ಅದು ಸಮಸ್ಯೆಯಾಗಿ ಮಾರ್ಪಡಬಹುದು, ಗಮನಿಸಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಎಲ್ಲವನ್ನೂ ಮೊದಲಿಂದ ಶುರು ಮಾಡಬೇಕಾಗುತ್ತದೆ. ಅದು ಸ್ನೇಹ, ಸಂಬಂಧ, ಈಗಾಗಲೇ ಅರ್ಧವಾದರೂ ಮಾಡಿ ಮುಗಿಸಿದ ಕೆಲಸ ಹೀಗೆ ಎಲ್ಲವನ್ನೂ ಆರಂಭದಿಂದ ಪ್ರಾರಂಭಿಸಬೇಕಾಗುತ್ತದೆ. ಹೋಟೆಲ್ ಉದ್ಯಮದವರು ಸರ್ಕಾರದಿಂದ ಇರುವ ನಿಯಮಗಳನ್ನು ಪಾಲಿಸುತ್ತಿದ್ದೀರಾ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ. ನಿಮಗೆ ಈ ವರೆಗೆ ಸಿಕ್ಕ ಸ್ಥಾನ- ಮಾನ, ಗೌರವ, ಅಧಿಕಾರಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡಬೇಕಾಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ದಿನಸಿ ಮಾರಾಟ, ಸಿಮೆಂಟ್ ಮಾರಾಟ ಹಾಗೂ ಉಕ್ಕಿನ ಮಾರಾಟದಂಥ ಸ್ವಂತ ವ್ಯವಹಾರ ಮಾಡುವವರಿಗೆ ಏಳ್ಗೆ ಇದೆ. ಹೊಸದಾಗಿ ಹೂಡಿಕೆಯನ್ನು ಮಾಡಿ, ವ್ಯಾಪಾರ ವಿಸ್ತರಣೆಯನ್ನು ಮಾಡುವುದಕ್ಕೆ ಆಲೋಚನೆ ಮಾಡಲಿದ್ದೀರಿ. ನಿಮ್ಮಲ್ಲಿ ಕೆಲಸವರಿಗೆ ಕಿರು ಪ್ರಯಾಣ ಮಾಡುವ ಯೋಗ ಇದೆ. ವಾಹನ ಖರೀದಿ ಬಗ್ಗೆ ಮನೆಯಲ್ಲಿ ಚರ್ಚೆ ನಡೆಸಲಿದ್ದೀರಿ. ಸಾಲ ಮಾಡಬೇಕಾದ ಸ್ಥಿತಿ ನಿರ್ಮಾಣ ಆಗುತ್ತದೆ. ಮನೆಗೆ ಗೃಹಾಲಂಕಾರ ವಸ್ತುಗಳನ್ನು ಖರೀದಿ ಮಾಡುವ ಯೋಗ ಇದೆ. ಆದರೆ ಹಾಸಿಗೆ ಇದ್ದಷ್ಟು ಕಾಲು ಚಾಚಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಉದ್ಯೋಗ ಸ್ಥಳದಲ್ಲಿ ನಿಮ್ಮ ಮಾತಿಗೆ ಗೌರವ, ಆದರ ದೊರೆಯಲಿದೆ. ನಿಮ್ಮಲ್ಲಿ ಕೆಲವರಿಗೆ ಯಾವುದಾದರೂ ಪ್ರಾಜೆಕ್ಟ್ ಮೇಲೆ ವಿದೇಶಕ್ಕೆ ತೆರಳುವಂಥ ಯೋಗ ದೊರೆಯಬಹುದು. ಆದರೆ ತೀರ್ಮಾನ ಮಾಡುವ ವಿಚಾರದಲ್ಲಿ ಗಟ್ಟಿಯಾಗಿರಿ. ಸಂಗಾತಿ ಜತೆಗೆ ವಾಗ್ವಾದ ಬೆಳೆಯುವಂಥ ಸನ್ನಿವೇಶ ಸೃಷ್ಟಿಯಾದಲ್ಲಿ ಮಾತು ಮುಂದುವರಿಸದಿರಿ. ಸಾಫ್ಟ್ ವೇರ್ ಗೆ ಸಂಬಂಧಿಸಿದ ಉದ್ಯೋಗಗಳಲ್ಲಿ ತೊಡಗಿರುವವರಿಗೆ ಬೇರೆ ವಿಭಾಗದ ಜವಾಬ್ದಾರಿಯನ್ನು ಹೊಸದಾಗಿ ನೀಡಬಹುದು. ಮನೆಯ ಬದಲಾವಣೆ ಮಾಡಬೇಕು ಎಂದಿರುವವರಿಗೆ ಮನಸ್ಸಿಗೆ ಮೆಚ್ಚುವಂಥ ಮನೆ ದೊರೆಯುವ ಅವಕಾಶಗಳಿವೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನಿಮ್ಮ ಕೆಲಸ ಆಗಬೇಕು ಎಂಬ ಕಾರಣಕ್ಕೆ ಕೆಲವು ರಾಜೀ ಮಾಡಿಕೊಳ್ಳಬೇಕಾದ ಸನ್ನಿವೇಶ ಸೃಷ್ಟಿ ಆಗಲಿದೆ. ನಿಮ್ಮದು ಎಂಬಂಥ ವಸ್ತುಗಳ ಬಗ್ಗೆ ಜಾಗ್ರತೆಯಿಂದ ಇರಬೇಕು. ನೀವಾಗಿಯೇ ಮಾತು ಕೊಟ್ಟು ಅಸಾಧ್ಯ ಎನಿಸುವಂಥ ಜವಾಬ್ದಾರಿಗಳನ್ನು ಮೈ ಮೇಲೆ ಎಳೆದುಕೊಳ್ಳದಿರಿ. ಸಿನಿಮಾ ರಂಗದಲ್ಲಿ ಇರುವವರಿಗೆ ಆಯ್ಕೆಯ ವಿಚಾರದಲ್ಲಿ ಗೊಂದಲಗಳು ಎದುರಾಗಬಹುದು. ತೀರ್ಮಾನಗಳನ್ನು ತೆಗೆದುಕೊಳ್ಳುವಾಗ ಭಾವನಾತ್ಮಕವಾಗಿ ಸಿಲುಕಿಕೊಳ್ಳದಿರಿ. ದೂರ ಪ್ರಯಾಣಗಳು ದಿಢೀರ್ ಒಪ್ಪಿಕೊಳ್ಳಬೇಡಿ. ಇನ್ನು ಮನೆಯ ಹೊರಗಿನ ಊಟ- ತಿಂಡಿಗಳನ್ನು ಸಾಧ್ಯವಾದಷ್ಟೂ ತೆಗೆದುಕೊಳ್ಳಬೇಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಮನೆಯ ನಿರ್ಮಾಣ ಕಾರ್ಯದಲ್ಲಿ ತೊಡಗಿರುವವರಿಗೆ ಹಣಕಾಸಿನ ಹರಿವಿನಲ್ಲಿ ಹಿನ್ನಡೆ ಆಗಬಹುದು. ನೀವು ನಿರೀಕ್ಷೆ ಮಾಡಿದ್ದ ಅಥವಾ ಪ್ರಯತ್ನ ಮಾಡಿದ್ದ ಮೂಲದಿಂದ ಹಣ ಬಾರದೇ ಹೋಗಬಹುದು. ನೀವು ಇದೆ ಅಂದುಕೊಂಡಿದ್ದ ದಾಖಲೆಗಳು ಸಮಯಕ್ಕೆ ದೊರೆಯದೇ ಆತಂಕಕ್ಕೆ ಕಾರಣ ಆಗಬಹುದು. ಸರ್ಕಾರಕ್ಕೆ ಸಲ್ಲಿಸಬೇಕಾದ ದಾಖಲಾತಿಗಳನ್ನು ಡೆಡ್ ಲೈನ್ ಒಳಗಾಗಿ ಸಲ್ಲಿಸುವ ಕಡೆಗೆ ಗಮನ ನೀಡಿ. ಅಕೌಂಟೆಂಟ್ ಗಳಾಗಿ ಕಾರ್ಯ ನಿರ್ವಹಿಸುವವರು ಬಡ್ತಿ ಪಡೆಯುವ ಅಥವಾ ಹೊಸದಾಗಿ ಕ್ಲೈಂಟ್ ಗಳು ದೊರೆಯುವ ಸಾಧ್ಯತೆ ಇದೆ. ನಕ್ಕು ಸುಮ್ಮನಾಗುವ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಬೇಡಿ.

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ