Numerology Predictions: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 10ರ ದಿನಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 10 ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Predictions: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 10ರ ದಿನಭವಿಷ್ಯ 
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 10ರ ದಿನಭವಿಷ್ಯ Image Credit source: freepik
Follow us
Rakesh Nayak Manchi
|

Updated on: Jun 10, 2023 | 12:59 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 10ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ರುಚಿಕಟ್ಟಾದ ಊಟ- ತಿಂಡಿ ಮಾಡುವಂಥ ಯೋಗ ಇದೆ. ನಿಮ್ಮ ಮಾತಿನ ಮೂಲಕ ಅಥವಾ ಪರಿಚಯಸ್ಥರ ಮೂಲಕ ಇತರರಿಗೆ ನೆರವು ನೀಡಲಿದ್ದೀರಿ. ನೀರಿನ ಮಾರಾಟದ ವ್ಯವಹಾರದಲ್ಲಿ ಇರುವಂಥವರು ವಿಸ್ತರಣೆಗಾಗಿ ಪ್ರಯತ್ನ ಮಾಡಲಿದ್ದೀರಿ. ಬಲಗಣ್ಣಿಗೆ ಪೆಟ್ಟಾಗುವಂಥ ಸಾಧ್ಯತೆ ಇದ್ದು, ಈ ಬಗ್ಗೆ ಮುಂಜಾಗ್ರತೆ ವಹಿಸುವುದು ಮುಖ್ಯ. ಈಗಾಗಲೇ ಯಾರಿಗಾದರೂ ಸಾಲ ನೀಡಿ, ಅವರಿಂದ ಮರಳಿ ಪಡೆಯುವುದಕ್ಕೆ ಶ್ರಮಿಸುತ್ತಿದ್ದಲ್ಲಿ ಈ ದಿನ ದೊರೆಯುವ ಸೂಚನೆ ದೊರೆಯಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಈ ದಿನ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವವಾದ ತೀರ್ಮಾನವೊಂದನ್ನು ಮಾಡಲಿದ್ದೀರಿ. ಉದ್ದೇಶಿತ ಗುರಿಯನ್ನು ತಲುಪುವ ಕಡೆಗೆ ಯೋಜನೆಯನ್ನು ರೂಪಿಸಲಿದ್ದೀರಿ. ಸ್ವಂತ ಉದ್ಯೋಗ, ವ್ಯವಹಾರವನ್ನು ಮಾಡುತ್ತಿರುವವರು ನಿರ್ಧಾರ ಕೈಗೊಳ್ಳುವಾಗ ಸ್ಪಷ್ಟತೆ ಇರಲಿ. ಸಂಕೋಚಕ್ಕೆ ಅಥವಾ ದಾಕ್ಷಿಣ್ಯಕ್ಕೆ ಬಿದ್ದು ತೀರ್ಮಾನ ಕೈಗೊಂಡಲ್ಲಿ ಆ ನಂತರ ಪರಿತಪಿಸುವಂತೆ ಆಗುತ್ತದೆ. ವಿದ್ಯಾರ್ಥಿಗಳಿಗೆ ಸಂತೋಷವಾಗಿ ದಿನ ಕಳೆಯುವಂತಹ ಯೋಗ ಇದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮ್ಮ ಗುಣ- ಸ್ವಭಾವ, ಆಲೋಚನೆಯಲ್ಲಿ ಬದಲಾವಣೆ ಮಾಡಿಕೊಳ್ಳುವ ಕುರಿತು ಆಲೋಚನೆ ಮಾಡಲಿದ್ದೀರಿ. ನಿನ್ನೆ ತನಕ ಒಂದು ಲೆಕ್ಕ, ಇವತ್ತಿಂದ ಬೇರೆ ಲೆಕ್ಕ ಎನ್ನುವಂತೆ ಬದುಕುವುದಕ್ಕೆ ಆಲೋಚಿಸುತ್ತೀರಿ. ಖಂಡಿತಾ ಇದರಲ್ಲಿ ತಪ್ಪಿಲ್ಲ. ಆದರೆ ಇದನ್ನೇ ಮುಂದು ಮಾಡಿಕೊಂಡು ಯಾರನ್ನೂ ನೋಯಿಸಬೇಡಿ. ಚಿನ್ನ ಖರೀದಿ ಮಾಡಬೇಕು ಅಂದುಕೊಳ್ಳುವ ಸಾಧ್ಯತೆ ಇದೆ. ಇನ್ನು ಕುಟುಂಬದ ಖರ್ಚಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಮಾಡುತ್ತೀರಿ. ಸೂರ್ಯಾಸ್ತದ ಹೊತ್ತಿಗೆ ಪಶ್ಚಿಮ ದಿಕ್ಕಿಗೆ ತಿರುಗಿ ನಿಂತು ಒಂದೆರಡು ನಿಮಿಷ ಧ್ಯಾನ ಮಾಡಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಒಂದು ಸಲ ತೆಗೆದುಕೊಂಡ ನಿರ್ಧಾರವನ್ನು ಬದಲಿಸಿಕೊಳ್ಳಲಿಕ್ಕೆ ಹೋಗಬೇಡಿ. ಹಾಗೊಂದು ವೇಳೆ ಅನಿವಾರ್ಯ ಅಂತಾದಲ್ಲಿ ಅದನ್ನು ಸಂಬಂಧಪಟ್ಟವರ ಗಮನಕ್ಕೆ ತಕ್ಷಣವೇ ತನ್ನಿ. ಇಲ್ಲದಿದ್ದಲ್ಲಿ ನಿಮ್ಮ ವರ್ಚಸ್ಸಿಗೆ ಧಕ್ಕೆ ಆಗುವಂಥ ಸನ್ನಿವೇಶ ಸೃಷ್ಟಿ ಆಗಬಹುದು. ಹೊಸದಾಗಿ ವಸ್ತುಗಳನ್ನು ಖರೀದಿ ಮಾಡಬೇಕು ಎಂದಾದರೆ ಅದರ ಅಗತ್ಯ ಎಷ್ಟಿದೆ ಎಂಬ ಬಗ್ಗೆ ಒಂದಕ್ಕೆ ನಾಲ್ಕು ಬಾರಿ ಆಲೋಚನೆ ಮಾಡಿ, ನಿರ್ಧಾರವನ್ನು ಕೈಗೊಳ್ಳುವುದು ಉತ್ತಮ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನಾನು ಅಂದುಕೊಂಡಿದ್ದೇ ಆಗಬೇಕು ಎಂಬ ಹಠ ಈ ದಿನ ಒಳ್ಳೆಯದಲ್ಲ. ಹೀಗೆ ಮಾಡಿದಲ್ಲಿ ನಿಮ್ಮ ಆತ್ಮೀಯರು ಹಾಗೂ ಬಹಳ ಮೆಚ್ಚುವಂಥವರ ಜತೆಗೆ ಕೆಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಏರ್ಪಡಬಹುದು. ಇನ್ನು ಹಳೆಯ ನೋವು ಎಂದು ಕಾಡುತ್ತಿದ್ದಲ್ಲಿ ಮಂಡಿನೋವು ಈ ದಿನ ನಿಮಗೆ ಕಾಡಬಹುದು. ತೂಕದ ಸಮಸ್ಯೆ ಎದುರಿಸುತ್ತಿರುವವರು ಇಳಿಸಿಕೊಳ್ಳುವ ಕಡೆಗೆ ಗಮನ ವಹಿಸಿ. ಸರಿಯಾದ ವೈದ್ಯರ ಹಾಗೂ ಸೂಕ್ತ ಔಷಧೋಪಚಾರದ ಅಗತ್ಯ ಕಂಡುಬರಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಇತರರು ಒಪ್ಪಿಕೊಂಡರು ಅನ್ನುವ ಕಾರಣಕ್ಕೆ ನಿಮಗೆ ಇಷ್ಟವಿಲ್ಲದಿದ್ದರೂ ಕೆಲವು ಸಂಗತಿಗಳನ್ನು ನೀವೂ ಒಪ್ಪಿಕೊಳ್ಳಬೇಕಾಗುತ್ತದೆ. ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣ ಮಾಡುವವರು ತಮ್ಮ ವಸ್ತುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಮೊಬೈಲ್ ಫೋನ್, ಲ್ಯಾಪ್‌ಟಾಪ್, ಟ್ಯಾಬ್ ಸೇರಿದಂತೆ ಇತರ ವಸ್ತುಗಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿ. ಯಾವುದೇ ಮುಖ್ಯ ಕೆಲಸ ಇದ್ದರೂ ಸಾಧ್ಯವಾದಲ್ಲಿ ಈ ದಿನ ಅದನ್ನು ಮುಂದಕ್ಕೆ ಹಾಕಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ನಿಮ್ಮ ಮನೆ ದೇವರ ಆರಾಧನೆಯನ್ನು ಮಾಡಿದರೆ ಹಲವು ಸವಾಲುಗಳು ಸುಲಭವಾಗಿ ಎದುರಿಸಬಹುದು. ಯಾವುದೇ ವಿಚಾರವಾಗಿರಲಿ, ಅದೆಷ್ಟೇ ಸಣ್ಣ ಪ್ರಮಾಣದ್ದಾಗಿರಲಿ ಪೂರ್ತಿಯಾಗಿ ಆ ಬಗ್ಗೆ ತಿಳಿದುಕೊಳ್ಳದೆ ನಿಮ್ಮ ಅಭಿಪ್ರಾಯವನ್ನು ಹೇಳದಿರಿ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸವನ್ನು ಒಪ್ಪಿಕೊಳ್ಳದಿರಿ. ಪಾರ್ಟನರ್ ಷಿಪ್ ವ್ಯವಹಾರಗಳನ್ನು ಮಾಡುತ್ತಿರುವವರು ಕಾಗದ- ಪತ್ರಗಳು, ಸರ್ಕಾರದಿಂದ ತೆಗೆದುಕೊಳ್ಳಬೇಕಾದ ಪರವಾನಗಿಗಳನ್ನು ತೆಗೆದುಕೊಳ್ಳಲಾಗಿದೆಯೇ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನಿಮ್ಮಲ್ಲಿ ಕೆಲವರಿಗೆ ಈ ದಿನ ವಿಪರೀತ ಮರೆವಿನ ಸಮಸ್ಯೆ ಕಾಡುತ್ತದೆ. ಅದಕ್ಕೆ ಮುಖ್ಯವಾದ ಕಾರಣ ಒತ್ತಡದ ಸನ್ನಿವೇಶಗಳು ಅಥವಾ ನೀವಾಗಿಯೇ ಹಾಕಿಕೊಳ್ಳುವ ಅಸಾಧ್ಯವಾದ ಗುರಿಗಳು. ಯಾರೋ ಒಬ್ಬರ ಮೇಲಿನ ಸಿಟ್ಟಿನಿಂದ ಎಲ್ಲರಿಗೂ ಅನ್ವಯ ಆಗುವಂಥ ಕಠಿಣ ನಿಯಮಗಳನ್ನು ತರುವುದು ಸರಿಯಲ್ಲ. ನಿಶ್ಚಿತವಾದ ಗುರಿ ಇಟ್ಟುಕೊಂಡು ಮುಂದಕ್ಕೆ ಸಾಗಿ. ಊಟ- ತಿಂಡಿಯನ್ನು ಸಮಯಕ್ಕೆ ಸರಿಯಾಗಿ ಮಾಡುವುದರ ಕಡೆಗೆ ಲಕ್ಚ್ಯ ನೀಡಿ. ಈ ದಿನ ಸಾಧ್ಯವಾದಲ್ಲಿ ಹತ್ತು ನಿಮಿಷಗಳ ಕಾಲ ಧ್ಯಾನವನ್ನು ಮಾಡುವುದು ಉತ್ತಮ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಈ ದಿನ ಸಾಧ್ಯವಾದಲ್ಲಿ ಈಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿ. ಖರ್ಚಿನ ವಿಚಾರವಾಗಿ ಮನೆಯಲ್ಲಿ ಸಿಕ್ಕಾಪಟ್ಟೆ ಚರ್ಚೆಗಳು ಆಗಲಿವೆ. ನಿಮ್ಮ ಶ್ರಮದ ಫಲವನ್ನು ಇನ್ಯಾರೋ ಪಡೆಯುತ್ತಿದ್ದಾರೆ ಎಂದು ನಿಮಗೆ ಬಲವಾಗಿ ಅನಿಸುವುದಕ್ಕೆ ಶುರು ಆಗುತ್ತದೆ. ಪ್ರಮುಖ ಸ್ಥಾನಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಮುಂದಿನ ಹಂತಕ್ಕೆ ಬಡ್ತಿ ಸಿಗುವುದು ಬಹಳ ಕಷ್ಟವಾದದ್ದು ಎಂದು ಅನಿಸುತ್ತದೆ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರಿಗೆ ನಿಮ್ಮಿಂದ ಕೈ ಮೀರಿದ ಭರವಸೆಗಳನ್ನು ನೀಡಲು ಹೋಗದಿರಿ.

ಲೇಖನ- ಎನ್‌.ಕೆ.ಸ್ವಾತಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ