Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 17ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 17ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 17ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ನಿಮ್ಮ ಹಣಕಾಸಿನ ನಿರ್ಣಯಗಳು ಇವತ್ತು ಪ್ರಾಮುಖ್ಯ ಪಡೆದುಕೊಳ್ಳುತ್ತವೆ. ಸರ್ಕಾರಕ್ಕೆ ಕಟ್ಟಬೇಕಾದ ತೆರಿಗೆ, ಶುಲ್ಕ ಪಾವತಿ ಆಗಿದೆಯಾ ಎಂದು ನೋಡಿಕೊಳ್ಳಿ. ಜತೆಗೆ ಈ ದಿನ ಸಿಗ್ನಲ್ ಜಂಪ್, ಹೆಲ್ಮೆಟ್ ಇಲ್ಲದೆ ಪ್ರಯಾಣ, ಕಾರಿನಲ್ಲಿ ಸೀಟ್ ಬೆಲ್ಟ್ ಇಲ್ಲದೆ ಪ್ರಯಾಣಿಸುವುದು ಇಂಥದ್ದೆಲ್ಲ ಮಾಡದಿರಿ. ಹೊಸ ವಸ್ತ್ರಾಭರಣಗಳ ಖರೀದಿಗಾಗಿ ಹಣ ಖರ್ಚು ಮಾಡುವಂಥ ಯೋಗ ಇದೆ. ಆದರೆ ನಿಮ್ಮ ಅಗತ್ಯ ಏನು, ಎಷ್ಟು ಎಂಬ ಬಗ್ಗೆ ಸ್ಪಷ್ಟತೆ ಇರಲಿ.
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ನಿಮಗೆ ಸಂಬಂಧ ಪಡದ ವಿಷಯಕ್ಕೆ ಹೆಚ್ಚಿನ ಸಮಯವನ್ನು ಕಳೆಯುವಂತಾಗುತ್ತದೆ. ಯಾರೋ ಮಾಡಿದ ತಪ್ಪಿನಿಂದಾಗಿ ನೀವು ಪರಿತಪಿಸುವಂತೆ ಆಗುತ್ತದೆ. ಆದ್ದರಿಂದ ವಿಪರೀತ ಚಿಂತೆ ಮಾಡುವ ಅಗತ್ಯ ಇಲ್ಲ. ದಿನದ ಕೊನೆಯ ಹೊತ್ತಿಗೆ ಪರಿಸ್ಥಿತಿಯ ಬಗ್ಗೆ ಸ್ಪಷ್ಟ ಚಿತ್ರಣ ನಿಮಗೆ ದೊರೆಯುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ವಿಪರೀತ ಖರ್ಚಿದೆ. ನೀವೇ ಡ್ರೈವಿಂಗ್ ಮಾಡುವಂತಿದ್ದರೆ ಪ್ರಯಾಣದ ವೇಳೆ ಎಚ್ಚರಿಕೆ ಅಗತ್ಯ. ಇನ್ನು ಮಕ್ಕಳ ಚಲನವಲನದ ಮೇಲೆ ಕಣ್ಣಿಟ್ಟಿರಿ.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ಸಂಗಾತಿ ಜತೆಗೆ ಸಂತೋಷವಾಗಿ ದಿನ ಕಳೆಯಲಿದ್ದೀರಿ. ಪ್ರೇಮಿಗಳು ದೂರದ ಸ್ಥಳಗಳಿಗೆ ತೆರಳುವ ಸಾಧ್ಯತೆ ಇದೆ. ಸರ್ಕಾರಿ ಕೆಲಸಗಳಲ್ಲಿ ಇರುವವರಿಗೆ ಭಾರೀ ಒತ್ತಡದ ಜೀವನ ಇರುತ್ತದೆ. ವೈದ್ಯಕೀಯ ವೃತ್ತಿಯಲ್ಲಿ ಇರುವವರು, ಶಾಲೆಗಳನ್ನು ನಡೆಸುತ್ತಿರುವವರಿಗೆ ಆದಾಯ ಉತ್ತಮವಾಗುತ್ತದೆ. ರಾಜಕಾರಣಿಗಳಿಗೆ ಪದೋನ್ನತಿ ಆಗಬಹುದು. ಇದರ ಜತೆಜತೆಗೆ ನಿಮ್ಮ ಮೇಲಿನ ಜವಾಬ್ದಾರಿ ಕೂಡ ಜಾಸ್ತಿ ಆಗಲಿದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ನಿಮ್ಮ ಬಗ್ಗೆ ನಿಮಗೆ ಅಪರಿಮಿತವಾದ ಆತ್ಮವಿಶ್ವಾಸ, ಭರವಸೆ ಮೂಡುವ ದಿನ ಇದು. ಯಾವುದಾದರೂ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸೂಕ್ತವಾದ ದಿನ ಇದು. ಎಲ್ಲರನ್ನೂ ಜತೆಗೆ ಕರೆದುಕೊಂಡು ಮುಂದಕ್ಕೆ ಸಾಗಬೇಕು ಎಂಬ ನಿಮ್ಮ ಅಪೇಕ್ಷೆಗೆ ತಕ್ಕಂತೆ ಬೆಳವಣಿಗೆಗಳನ್ನು ಕಾಣಬಹುದು. ಆದರೆ ಹಣಕಾಸು ಖರ್ಚಿನ ವಿಚಾರದಲ್ಲಿ ಲೆಕ್ಕಾಚಾರ ತಪ್ಪಬೇಡಿ. ಗ್ಯಾಜೆಟ್ ಖರೀದಿ ಮಾಡಬೇಕು ಎಂದು ಕ್ರೆಡಿಟ್ ಕಾರ್ಡ್ ಬಳಸಿ, ಖರ್ಚು ಆಗಬಹುದು, ಜಾಗ್ರತೆ ಇರಲಿ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ನಿಮ್ಮ ಮನಸ್ಸಿನಲ್ಲಿ ಇಂಥವರನ್ನೇ ಮದುವೆ ಆಗಬೇಕು ಎಂದು ನಿಶ್ಚಯಿಸಿ, ಈ ದಿನ ಮನೆಯಲ್ಲಿ ವಿಷಯ ಪ್ರಸ್ತಾವ ಮಾಡಬೇಕು ಎಂದಿದ್ದಲ್ಲಿ ಸಾಧ್ಯವಾದರೆ ಬೇರೆ ದಿನಕ್ಕೆ ಮುಂದೂಡಿ. ಏಕೆಂದರೆ ನಿಮ್ಮ ಮನೆಯಲ್ಲಿ ಒಪ್ಪಿಸುವುದು ಕಷ್ಟವಾಗುತ್ತದೆ. ಇನ್ನು ವಯೋಸಹಜ ಅನಾರೋಗ್ಯ ಸಮಸ್ಯೆ ಇರುವಂಥವರು ವೈದ್ಯರನ್ನು ಬದಲಾಯಿಸಬೇಕು ಎಂದಿದಲ್ಲಿ ಸದ್ಯಕ್ಕೆ ಬೇಡ. ಇನ್ನು ಔಷಧಗಳಿಂದ ಅಲರ್ಜಿ ಕಾಡಬಹುದು.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ಇತರರು ಒಪ್ಪಿಕೊಂಡರು ಅನ್ನುವ ಕಾರಣಕ್ಕೆ ನಿಮಗೆ ಇಷ್ಟವಿಲ್ಲದಿದ್ದರೂ ಕೆಲವು ಸಂಗತಿಗಳನ್ನು ನೀವೂ ಒಪ್ಪಿಕೊಳ್ಳಬೇಕಾಗುತ್ತದೆ. ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣ ಮಾಡುವವರು ತಮ್ಮ ವಸ್ತುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಮೊಬೈಲ್ ಫೋನ್, ಲ್ಯಾಪ್‌ಟಾಪ್, ಟ್ಯಾಬ್ ಸೇರಿದಂತೆ ಇತರ ವಸ್ತುಗಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿ. ಯಾವುದೇ ಮುಖ್ಯ ಕೆಲಸ ಇದ್ದರೂ ಸಾಧ್ಯವಾದಲ್ಲಿ ಈ ದಿನ ಅದನ್ನು ಮುಂದಕ್ಕೆ ಹಾಕಿ.
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ಆರೋಗ್ಯದ ಬಗ್ಗೆ ನಿಮ್ಮ ಪ್ರಾಶಸ್ತ್ಯ ಹೆಚ್ಚಾಗಲಿದೆ. ನಿಮ್ಮಲ್ಲಿ ಕೆಲವರು ಆಯುರ್ವೇದ ಚಿಕಿತ್ಸೆಗೆ ಮುಂದಾಗಬಹುದು. ಇನ್ನು ಯೋಗ, ಜಿಮ್ ಇಂಥದ್ದಕ್ಕೆ ಸೇರ್ಪಡೆ ಆಗುವಂಥ ಸಾಧ್ಯತೆಗಳಿವೆ. ಬಹಳ ಸಮಯದಿಂದ ನೀವು ಹುಡುಕಾಡುತ್ತಿದ್ದ ವ್ಯಕ್ತಿಗಳು, ಕಾಗದ- ಪತ್ರಗಳು ದೊರೆಯುವ ಸಾಧ್ಯತೆಗಳಿವೆ. ಗಣಪತಿ ಆರಾಧನೆಯನ್ನು ಮಾಡಿ. ಕ್ರಿಯೇಟಿವ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಕಾಂಟ್ಯಾಕ್ಟ್‌ಗಳು ದೊರೆಯಲಿವೆ.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ನಾನು ಅಂದುಕೊಂಡಿದ್ದೇ ಆಗಬೇಕು ಎಂಬ ಹಠ ಈ ದಿನ ಒಳ್ಳೆಯದಲ್ಲ. ಹೀಗೆ ಮಾಡಿದಲ್ಲಿ ನಿಮ್ಮ ಆತ್ಮೀಯರು ಹಾಗೂ ಬಹಳ ಮೆಚ್ಚುವಂಥವರ ಜತೆಗೆ ಕೆಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಏರ್ಪಡಬಹುದು. ಇನ್ನು ಹಳೆಯ ನೋವು ಎಂದು ಕಾಡುತ್ತಿದ್ದಲ್ಲಿ ಮಂಡಿನೋವು ಈ ದಿನ ನಿಮಗೆ ಕಾಡಬಹುದು. ತೂಕದ ಸಮಸ್ಯೆ ಎದುರಿಸುತ್ತಿರುವವರು ಇಳಿಸಿಕೊಳ್ಳುವ ಕಡೆಗೆ ಗಮನ ವಹಿಸಿ. ಸರಿಯಾದ ವೈದ್ಯರ ಹಾಗೂ ಸೂಕ್ತ ಔಷಧೋಪಚಾರದ ಅಗತ್ಯ ಕಂಡುಬರಲಿದೆ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ಈ ದಿನ ನಿಮ್ಮ ಆತ್ಮಗೌರವ, ಪ್ರತಿಷ್ಠೆಗೆ ಪೆಟ್ಟು ನೀಡುವಂಥ ಮಾತುಗಳನ್ನು ಕೇಳಿಸಿಕೊಳ್ಳಬೇಕಾಗುತ್ತದೆ. ಕುಟುಂಬದ ಬಗ್ಗೆ ನಿಮ್ಮ ಯೋಚನೆ ಜಾಸ್ತಿ ಆಗುತ್ತದೆ. ಇನ್ನು ಮನೆ ಕಟ್ಟುತ್ತಿರುವವರು, ಸೈಟು ಖರೀದಿಸಬೇಕು ಎಂದಿರುವವರಿಗೆ ಈ ದಿನ ಮಹತ್ವದ್ದಾಗಿರುತ್ತದೆ. ಷೇರು – ಡಿಜಿಟಲ್ ಸ್ವತ್ತುಗಳಲ್ಲಿ ಹೂಡಿಕೆ ಮಾಡಿರುವವರು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಅಂತರಂಗದ ರಹಸ್ಯಗಳನ್ನು ಯಾರ ಜತೆಗೂ ಹಂಚಿಕೊಳ್ಳಬೇಡಿ.