Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 4ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 3ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 4ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 4ರ ದಿನಭವಿಷ್ಯ
Follow us
ಸ್ವಾತಿ ಎನ್​ಕೆ
| Updated By: Digi Tech Desk

Updated on:Jun 06, 2023 | 12:53 PM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 4 ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಮನೆಯ ದುರಸ್ತಿಗಾಗಿ ಹಣ ಖರ್ಚು ಮಾಡಬೇಕಾಗಬಹುದು. ಅಥವಾ ಬಾಡಿಗೆ ಮನೆಯಲ್ಲಿ ಇರುವವರು ಹೆಚ್ಚಿನ ಬಾಡಿಗೆಯ ಅಥವಾ ಖರ್ಚು ಹೆಚ್ಚಾಗುವಂಥ ಮನೆಗೆ ತೆರಳುವಂಥ ಸಾಧ್ಯತೆ ಇದೆ. ಯಾವುದೇ ಖರ್ಚು- ವೆಚ್ಚದ ಸಂಗತಿಗಳಲ್ಲಿ ಜಾಗ್ರತೆಯಿಂದ ಇರಬೇಕು. ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಿ ಎಂದಾದಲ್ಲಿ ಅಗತ್ಯ ಮೀರಿದ ಖರ್ಚುಗಳನ್ನು ಮೈ ಮೇಲೆ ಎಳೆದುಕೊಳ್ಳಲಿದ್ದೀರಿ. ಆಪ್ತರ ಜತೆಗೆ ಮನಸ್ತಾಪ ಮಾಡಿಕೊಳ್ಳುವಂಥ ಸನ್ನಿವೇಶ ಸೃಷ್ಟಿ ಆಗಲಿದೆ. ಆದ್ದರಿಂದ ಯಾವುದೇ ವಿಚಾರಗಳನ್ನು ಮುಂದುವರಿಸಿಕೊಂಡು ಹೋಗದಿರಿ. ಏಕೆಂದರೆ ಈ ದಿನ ನಿಮ್ಮ ಆಪ್ತರು, ಪ್ರೀತಿಪಾತ್ರರು ದೂರವಾಗುವಂಥ ಯೋಗ ಇದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಸೋದರ- ಸೋದರಿಯರ ಶಿಕ್ಷಣ, ಮದುವೆ, ಕೆಲಸಕ್ಕಾಗಿ ಇಂಥವುಗಳಿಗೆ ಖರ್ಚುಗಳು ಹೆಚ್ಚಾಗಲಿವೆ. ನಿಮ್ಮ ದುಡಿಮೆ ಹಾಗೂ ಖರ್ಚುಗಳ ಮಧ್ಯೆ ಅಂತರ ಹೆಚ್ಚಾಗಿ, ಸಾಲ ಮಾಡಬೇಕಾದ ಸನ್ನಿವೇಶ ಎದುರಾಗಲಿದೆ. ಆರೋಗ್ಯದಲ್ಲಿ ಆಗಾಗ ಏರುಪೇರಾಗಿ ಅದಕ್ಕೆ ಖರ್ಚುಗಳು ಆಗಲಿವೆ. ಇತರರನ್ನು ನಂಬಿಕೊಂಡು, ಸಾಲ ಮಾಡಿ ಹಣ ಹೂಡುವಂಥ ಆಲೋಚನೆಯನ್ನು ಮಾಡದಿರುವುದು ಉತ್ತಮ. ಸರ್ಕಾರದಿಂದ ದೊರೆಯಬೇಕಾದ ಪರವಾನಗಿ, ಅನುಮತಿಗಳು ಸಿಗದೆ ಇರಬಹುದು. ಅಥವಾ ನಿರೀಕ್ಷಿತ ಅವಧಿಗಿಂತ ಹೆಚ್ಚಿನ ಸಮಯ ತೆಗೆದುಕೊಳ್ಳಬಹುದು. ಈ ಮಧ್ಯೆ ಮುಖ್ಯವಾಗಿ ಈಗಿರುವಂಥ ಕೆಲಸವನ್ನು ಬಿಡುವಂಥ ಯೋಚನೆ ಬೇಡವೇ ಬೇಡ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಆಪ್ತರ ಜತೆಗೇ ಭಿನ್ನಾಭಿಪ್ರಾಯ, ಮನಸ್ತಾಪ ಸೃಷ್ಟಿ ಆಗಬಹುದು. ಬಂಧುಗಳಿಂದ ಅವಮಾನ, ಪ್ರಾಣಿಗಳ ಕಡಿತ ಅನುಭವಿಸಬೇಕಾಗುತ್ತದೆ. ವಾಹನಗಳ ದುರಸ್ತಿ, ಸರ್ವೀಸ್ ಇಂಥದ್ದಕ್ಕೆ ಕೈ ಮೀರಿದ ಖರ್ಚುಗಳು ಬರಲಿವೆ. ಸೆಕೆಂಡ್ ಹ್ಯಾಂಡ್ ವಾಹನಗಳನ್ನು ಖರೀದಿಸಬೇಕು ಎಂದಿದ್ದಲ್ಲಿ ಆ ಆಲೋಚನೆಯನ್ನು ಕೈ ಬಿಡುವುದು ಉತ್ತಮ. ಪ್ರಮುಖ ಹುದ್ದೆ, ಸ್ಥಾನ- ಮಾನಗಳಲ್ಲಿ ಇರುವವರು ಅದನ್ನು ಕಳೆದುಕೊಳ್ಳಲಿದ್ದಾರೆ. ಹೊಸದಾಗಿ ವ್ಯಾಪಾರ- ವ್ಯವಹಾರ ಮಾಡಬೇಕು ಎಂದಿರುವವರಿಗೆ ನಾನಾ ವಿಧದಲ್ಲಿ ವಿಘ್ನಗಳು ಎದುರಾಗಲಿವೆ.  ಆತುರಪಟ್ಟು ವ್ಯವಹಾರಕ್ಕೆ ಇಳಿದಲ್ಲಿ ಇದರಿಂದ ನಷ್ಟವನ್ನು ಎದುರಿಸಬೇಕಾದೀತು.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಈ ದಿನ ವಿವಿಧ ಮೂಲಗಳಿಂದ ಧನಪ್ರಾಪ್ತಿ ಆಗುವಂಥ ಯೋಗ ಇದೆ. ಈ ಹಿಂದೆ ಹೂಡಿಕೆ ಮಾಡಿ, ಲಾಭದ ಪ್ರಮಾಣ ಕಡಿಮೆ ಆಗಿರುತ್ತದೋ ಅಥವಾ ಬರುವುದೇ ಅನುಮಾನ ಎಂದುಕೊಂಡಿರುವಂಥ ಮೊತ್ತ ನಿಮ್ಮ ಕೈ ಸೇರುವಂಥ ಯೋಗ ಇದೆ. ಅದೇ ರೀತಿ ವಿವಾಹಿತರಿಗೆ ಸಂತೋಷವಾಗಿ ಸಮಯ ಕಳೆಯುವುದಕ್ಕೆ ಸಾಧ್ಯವಾಗುತ್ತದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ನಿಮ್ಮ ಮಾತಿಗೆ ತೂಕ ಬರಲಿದೆ. ಶಿಫಾರಸುಗಳನ್ನು ಮಾಡಿ, ಇತರರಿಗೆ ಅನುಕೂಲ ಮಾಡಿಕೊಡಲಿದ್ದೀರಿ. ವಿದೇಶದಲ್ಲಿ ವ್ಯಾಸಂಗ ಮಾಡಬೇಕು ಎಂದುಕೊಂಡು ಪ್ರಯತ್ನಿಸುತ್ತಿರುವವರಿಗೆ ಹಣಕಾಸಿನ ಅನುಕೂಲಗಳು ಕೂಡಿಬರಲಿವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಉದ್ಯೋಗ ಬದಲಾವಣೆ ಮಾಡಬೇಕು ಎಂದಿರುವವರಿಗೆ ಈ ದಿನ ಸ್ನೇಹಿತರ ಭೇಟಿಯಿಂದ ಅವಕಾಶಗಳ ಬಗ್ಗೆ ಮಾಹಿತಿ ದೊರೆಯಲಿದೆ. ಜತೆಗೆ ಸಂಬಂಧ ಪಟ್ಟ ವ್ಯಕ್ತಿಯ ಜತೆಗೆ ನಿಮ್ಮಲ್ಲಿ ಕೆಲವರಿಗೆ ಮಾತುಕತೆಯನ್ನು ಆಡುವ ಸಾಧ್ಯತೆಯೂ ಕಂಡುಬರುತ್ತಿದೆ. ಇದರಿಂದ ಏನು ಗೊತ್ತಾಗುತ್ತದೆ ಅಂದರೆ, ಈ ದಿನ ನೀವು ಮಾಡುವ ಭೇಟಿ, ಪ್ರಯತ್ನಗಳ ಫಲವಾಗಿ ಉತ್ತಮ ಸಂಸ್ಥೆಯಲ್ಲಿ ಕೆಲಸ ದೊರೆಯಲಿದೆ. ಅದರ ಜತೆಗೆ ಸ್ಥಾನ- ಮಾನ, ಉತ್ತಮ ವೇತನ ಸಹ ಸಿಗಲಿದೆ. ಸಂಗಾತಿಯ ತಂದೆಯವರ ಅನಾರೋಗ್ಯ ಸಮಸ್ಯೆ ಒಂದಿಷ್ಟು ಆತಂಕಕ್ಕೆ ಕಾರಣ ಆಗಬಹುದು. ಆದರೆ ಸೂಕ್ತ ವೈದ್ಯೋಪಚಾರ ದೊರೆಯುವ ಬಗ್ಗೆ ಮಾಹಿತಿ ದೊರೆತು, ಮನಸ್ಸಿಗೆ ಸಮಾಧಾನ ದೊರೆಯಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ರಾಜಕಾರಣದಲ್ಲಿ, ಸಿನಿಮಾ ರಂಗದಲ್ಲಿ ಇರುವಂಥವರ ಜನಪ್ರಿಯತೆ ಹೆಚ್ಚಾಗಲಿದೆ. ನಿಮ್ಮಲ್ಲಿ ಕೆಲವರಿಗೆ ಹೊಸ ಮನೆಗೆ ತೆರಳುವಂಥ ಯೋಗ ಕಂಡುಬರುತ್ತಿದ್ದು, ಈ ಬಗ್ಗೆ ಕುಟುಂಬ ಸದಸ್ಯರ ಜತೆಗೆ ಮಾತುಕತೆ ಆಡಲಿದ್ದೀರಿ. ಇನ್ನು ವ್ಯಾಪಾರ- ಉದ್ಯಮದಲ್ಲಿ ಇರುವವರಿಗೆ ಅನಿರೀಕ್ಷಿತವಾಗಿ ಹಲವು ಅವಕಾಶಗಳು ಬರಲಿವೆ. ಈ ಹಿಂದೆ ನೀವು ಯಾರಿಗೆ ನೆರವು ನೀಡಿದ್ದಿರೋ ಅವರ ಮೂಲಕವಾಗಿ ಆದಾಯವನ್ನು ಹೆಚ್ಚಳ ಮಾಡಿಕೊಳ್ಳುವಂತಹ ಅವಕಾಶಗಳು ತೆರೆದುಕೊಳ್ಳಲಿವೆ. ಹಾಸಿಗೆ, ಪೀಠೋಪಕರಣಗಳ ಖರೀದಿಗಾಗಿ ಹಣ ಖರ್ಚು ಮಾಡುವಂಥ ಯೋಗ ಇದೆ. ಖರ್ಚಿನ ಅಂದಾಜಿಲ್ಲದೆ ಹೊಸ ಹೂಡಿಕೆ ಬಗ್ಗೆ ಯಾವುದೇ ಕಾರಣಕ್ಕೆ ಅಂತಿಮ ನಿರ್ಧಾರಕ್ಕೆ ಬರಬೇಡಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಮಕ್ಕಳು, ಸೋದರರು ಅಥವಾ ಸೋದರಿಯರ ಮದುವೆಗಾಗಿ ಪ್ರಯತ್ನಿಸುತ್ತಿರುವವರಿಗೆ ಪ್ರಮುಖವಾದ ಬೆಳವಣಿಗೆ ಕಂಡುಬರಲಿದೆ. ನಿಮ್ಮ ಪ್ರಯತ್ನಕ್ಕೆ ಸಂಬಂಧಿಕರು, ಸ್ನೇಹಿತರು ನೆರವು ನೀಡುವ ಸಾಧ್ಯತೆಗಳಿವೆ. ಇತರರು ನಿಮ್ಮ ಬಳಿ ಗುಟ್ಟು ಎಂದು ಹೇಳಿದ್ದರ ರಹಸ್ಯವನ್ನು ಕಾಪಾಡಿಕೊಳ್ಳುವ ಕಡೆಗೆ ಹೆಚ್ಚಿನ ಗಮನವನ್ನು ನೀಡಿ. ಸಾರ್ವಜನಿಕ ಬದುಕಿನಲ್ಲಿ ಇರುವವರಿಗೆ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಲಿವೆ. ಚಿನ್ನಾಭರಣಗಳ ಖರೀದಿಗಾಗಿ ಕ್ರೆಡಿಟ್ ಕಾರ್ಡ್ ಬಳಸುವಂಥ ಸನ್ನಿವೇಶ ಎದುರಾಗುತ್ತದೆ. ಆದಾಯ ಹೆಚ್ಚಳವನ್ನು ಮಾಡಿಕೊಳ್ಳುವ ನಿಟ್ಟಿನಲ್ಲಿ ಹೊಸ ಪ್ರಯತ್ನಗಳನ್ನು ಆರಂಭಿಸಲಿದ್ದೀರಿ. ಹಳೇ ಪ್ರೇಮ ಪ್ರಕರಣಗಳು ಈ ದಿನ ನಿಮ್ಮನ್ನು ವಿಪರೀತ ಕಾಡಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಈ ಹಿಂದೆ ನೀವೇ ಆಡಿದ್ದ ಮಾತು ಅಥವಾ ಇನ್ನೊಬ್ಬರ ವಿಚಾರವಾಗಿ ಸಾರ್ವಜನಿಕವಾಗಿ ಮಂಡಿಸಿದ್ದ ಅಭಿಪ್ರಾಯಕ್ಕೆ ಈಗ ಆಕ್ಷೇಪಗಳು ವ್ಯಕ್ತ ಆಗುತ್ತವೆ. ದಾಕ್ಷಿಣ್ಯಕ್ಕೆ ಸಿಲುಕಿಕೊಂಡು ಒಪ್ಪಿಕೊಂಡ ಕೆಲಸ ಮುಗಿಸುವುದರೊಳಗೆ ಬಹಳ ಶ್ರಮ ಪಡಬೇಕಾಗುತ್ತದೆ. ವಿನಾಕಾರಣದ ಪ್ರಯಾಣ ಮತ್ತು ಇದರಿಂದ ಅನಗತ್ಯವಾಗಿ ಖರ್ಚುಗಳು ಆಗಲಿವೆ. ಯಾವುದೇ ಕೆಲಸವನ್ನಾಗಲಿ ಪೂರ್ಣ ಮನಸ್ಸಿನಿಂದ ಮಾಡಬೇಕು. ಆರಂಭದಲ್ಲಿ ಇರುವ ಉತ್ಸಾಹ ಕೆಲಸ ಪೂರ್ಣ ಆಗುವ ತನಕ ಇರಬೇಕು. ಯಾರನ್ನಾದರೂ ಸರಿ, ಸುಖಾ- ಸುಮ್ಮನೆ ಬೈದಾಡಿಕೊಂಡು ಓಡಾಡಬೇಡಿ.ಯಾರು- ಯಾವ ಸಮಯದಲ್ಲಿ ಹಾಗೂ ಹೇಗೆ ಸಹಾಯಕ್ಕೆ ಬರುತ್ತಾರೆ ಎಂಬುದನ್ನು ಹೇಳುವುದೇ ಕಷ್ಟ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ನೀವು ಯಾವುದೇ ಕೆಲಸ ಮಾಡಿದರೂ ಅದರಲ್ಲಿ ಯಶಸ್ಸು ದೊರೆಯಲಿದೆ. ಭವಿಷ್ಯದ ಬಗ್ಗೆ ಬಹಳ ಮುಖ್ಯವಾದ ತೀರ್ಮಾನವೊಂದನ್ನು ತೆಗೆದುಕೊಳ್ಳಲಿದ್ದೀರಿ. ನಿಮ್ಮ ಮಾತಿಗೆ ಬೆಲೆ ದೊರೆಯಲಿದೆ. ಇತರರ ಮೇಲೆ ಪ್ರಭಾವ ಬೀರುವಷ್ಟರ ಮಟ್ಟಿಗೆ ನೀವು ಪ್ರಭಾವಿಗಳಾಗಲಿದ್ದೀರಿ. ವಿದೇಶದಿಂದ ಶುಭ ಸುದ್ದಿ ನಿರೀಕ್ಷೆ ಮಾಡುತ್ತಿರುವವರಿಗೆ ಅದು ಬರುವ ಸಾಧ್ಯತೆ ಇದೆ. ರಾಜಕೀಯವಾಗಿ ಪ್ರಾಮುಖ್ಯ ದೊರೆಯುವ ಅವಕಾಶಗಳು ಹೆಚ್ಚಿದೆ. ಹೊಸ ಸ್ಥಳ, ಜಮೀನು  ಖರೀದಿಸಬೇಕು ಎಂದಿದ್ದಲ್ಲಿ ನೀವು ಹುಡುಕುತ್ತಿದ್ದಂಥದ್ದೇ ದೊರೆಯುವಂಥ ಸಾಧ್ಯತೆ ಈ ದಿನ ಜಾಸ್ತಿ ಇದೆ. ಪ್ರೀತಿಪಾತ್ರರಿಂದ ಉಡುಗೊರೆಗಳು ದೊರೆಯುವ ಯೋಗ ಇದೆ.

ಲೇಖನ- ಎನ್‌.ಕೆ.ಸ್ವಾತಿ

Published On - 6:22 am, Sun, 4 June 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್