Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 12ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 12ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 12ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಪೊಲೀಸ್ ಠಾಣೆ ಕೆಲಸಗಳು, ಕೋರ್ಟ್- ಕಚೇರಿ ವ್ಯವಹಾರಗಳು ಇದ್ದಲ್ಲಿ ಸರಾಗವಾಗಿ ನಡೆಯಲಿದೆ. ನಿಮ್ಮ ಸುತ್ತ- ಮುತ್ತ ಆಗುತ್ತಿರುವ ಬೆಳವಣಿಗೆಗಳ ಮೇಲೆ ಕಣ್ಣು ತೆರೆದಿಟ್ಟಿರಿ. ಭವಿಷ್ಯದಲ್ಲಿ ನಡೆಯಲಿರುವ ಬೆಳವಣಿಗೆಗಳ ಬಗ್ಗೆ ಸೂಚನೆ ದೊರೆಯಲಿದೆ. ಉಳಿತಾಯ ಮಾಡಿದ್ದ ಹಣದಲ್ಲಿ ಸ್ವಲ್ಪ ಪ್ರಮಾಣದಲ್ಲಿಯಾದರೂ ಹಿಂತೆಗೆಯಬೇಕಾದ ಸನ್ನಿವೇಶ ನಿರ್ಮಾಣ ಆಗಲಿದೆ. ಉದ್ಯೋಗಸ್ಥ ಮಹಿಳೆಯರಿಗೆ ಮೇಲಧಿಕಾರಿಗಳಿಂದ ಮಾನಸಿಕ ಕಿರುಕುಳ ಅನುಭವಕ್ಕೆ ಬರಲಿದೆ.
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ನೀವು ಈ ಹಿಂದೆ ಯಾರಿಗೆ ಸಹಾಯ ಮಾಡಿದ್ದೀರೋ ಈ ದಿನ ಅವರು ನಿಮಗೆ ಸಹಾಯ ಮಾಡುವಂಥ ಯೋಗ ಇದೆ. ಬೆನ್ನು ನೋವು ಕಾಡುವಂಥ ಸಾಧ್ಯತೆ ಇದ್ದು, ಒಂದು ವೇಳೆ ಈ ಮುಂಚೆಯೂ ನೋವನ್ನು ಅನುಭವಿಸಿದ್ದಲ್ಲಿ ಕಡ್ಡಾಯವಾಗಿ ವೈದ್ಯರನ್ನು ಭೇಟಿಯಾಗಿ. ಸರ್ಕಾರಿ ಕೆಲಸ ಮಾಡುತ್ತಿರುವವರಿಗೆ ಹೊಸ ಜವಾಬ್ದಾರಿ ವಹಿಸುವಂಥ ಯೋಗ ಇದೆ. ಇದರಿಂದಾಗಿ ಹೆಚ್ಚು ಒತ್ತಡದ ಸನ್ನಿವೇಶವನ್ನು ಎದುರಿಸಬೇಕಾಗುತ್ತದೆ.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ನೀವು ಕೈಗೊಳ್ಳುವ ತೀರ್ಮಾನದ ಬಗ್ಗೆ ಪರ- ವಿರೋಧಗಳು ಕೇಳಿಬರಲಿವೆ. ಒಂದು ವೇಳೆ ಇನ್ನಷ್ಟು ಸಮಯ ಮುಂದೂಡುವುದಕ್ಕೆ ಸಾಧ್ಯ ಎಂದಾದಲ್ಲಿ ಮುಂದಕ್ಕೆ ಹಾಕಿ. ಇನ್ನು ರಿಯಲ್ ಎಸ್ಟೇಟ್ ಏಜೆಂಟ್ ಆಗಿರುವವರಿಗೆ ದೊಡ್ಡ ಮಟ್ಟದ ಹಣ ಬರುವಂಥ ಅವಕಾಶವೊಂದು ತೆರೆದುಕೊಳ್ಳಲಿದೆ. ನಿಮ್ಮ ಶ್ರಮಕ್ಕೆ ನಿರೀಕ್ಷೆಗೂ ಮೀರಿದಂಥ ಲಾಭ ದೊರೆಯುವ ಸಾಧ‌್ಯತೆಗಳಿವೆ. ಕೃಷಿಕರು ಮನೆಗೆ ರಾಸುಗಳನ್ನು ಖರೀದಿ ಮಾಡುವಂಥ ಸಾಧ್ಯತೆ ಇದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ನಿಮ್ಮ ಬಗ್ಗೆ ನಿಮಗೆ ಅಪರಿಮಿತವಾದ ಆತ್ಮವಿಶ್ವಾಸ, ಭರವಸೆ ಮೂಡುವ ದಿನ ಇದು. ಯಾವುದಾದರೂ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸೂಕ್ತವಾದ ದಿನ ಇದು. ಎಲ್ಲರನ್ನೂ ಜತೆಗೆ ಕರೆದುಕೊಂಡು ಮುಂದಕ್ಕೆ ಸಾಗಬೇಕು ಎಂಬ ನಿಮ್ಮ ಅಪೇಕ್ಷೆಗೆ ತಕ್ಕಂತೆ ಬೆಳವಣಿಗೆಗಳನ್ನು ಕಾಣಬಹುದು. ಆದರೆ ಹಣಕಾಸು ಖರ್ಚಿನ ವಿಚಾರದಲ್ಲಿ ಲೆಕ್ಕಾಚಾರ ತಪ್ಪಬೇಡಿ. ಗ್ಯಾಜೆಟ್ ಖರೀದಿ ಮಾಡಬೇಕು ಎಂದು ಕ್ರೆಡಿಟ್ ಕಾರ್ಡ್ ಬಳಸಿ, ಖರ್ಚು ಆಗಬಹುದು, ಜಾಗ್ರತೆ ಇರಲಿ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ಏಕಾಂಗಿತನ ನಿಮ್ಮನ್ನು ಈ ದಿನ ಕಾಡಬಹುದು. ಈ ಹಿಂದೆ ನೀವು ತೆಗೆದುಕೊಂಡ ನಿರ್ಧಾರದ ಬಗ್ಗೆ ಪರಾಮರ್ಶೆ ಮಾಡಲಿದ್ದೀರಿ. ಮನೆಯಿಂದ ದೂರದಲ್ಲಿ ಕೆಲಸ ಮಾಡುತ್ತಿರುವವರಿಗೆ ಒತ್ತಡದ ಸನ್ನಿವೇಶ ಇರಲಿದೆ. ಕುಟುಂಬದ ಸದಸ್ಯರ ಸಲುವಾಗಿ ಕೆಲವು ವಸ್ತುಗಳನ್ನು ಖರೀದಿ ಮಾಡುವುದಕ್ಕೆ ಹಣ ಖರ್ಚು ಮಾಡುವಂಥ ಯೋಗ ಇದೆ. ಆಹಾರ ಸೇವನೆ ಮಾಡುವಾಗ ನಿಮಗೆ ಅಲರ್ಜಿ ಆಗುವಂಥ ಪದಾರ್ಥಗಳನ್ನು ಮಾಡದಿರಿ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ನಿಮ್ಮ ಮನಸ್ಸಿಗೆ ಮೆಚ್ಚುವಂಥ ಜೀವನ ಸಂಗಾತಿ ದೊರೆಯುವ ಅವಕಾಶ ಹೆಚ್ಚಿದೆ. ಆದರೆ ಸ್ವಲ್ಪ ಹಿನ್ನೆಲೆ, ಅಭಿರುಚಿ ಹಾಗೂ ನಿಮ್ಮ ಮನಸ್ಥಿತಿಗೆ ಹೊಂದಾಣಿಕೆ ಆಗುತ್ತಾರೆ ಎಂದು ಪೂರ್ವಾಪರ ಚಿಂತಿಸಿ, ಮುಂದಕ್ಕೆ ಹೆಜ್ಜೆ ಇಡಿ. ಹಾಲಿನ ಪದಾರ್ಥಗಳು ಸೇವನೆ ಮಾಡುವಾಗ ಎಚ್ಚರಿಕೆ ಅಗತ್ಯ. ಲಾಂಗ್ ಡ್ರೈವ್ ಹೋಗುವ ಸಾಧ್ಯತೆ ಇದೆ. ದೇಹದ ತೂಕದ ಕಡೆಗೆ ಲಕ್ಷ್ಯ ನೀಡಿ. ದೂರ ಪ್ರಯಾಣ ಮಾಡುವಾಗ ಯಾರನ್ನು ಭೇಟಿ ಮಾಡುತ್ತೀರೋ ಅವರ ಲಭ್ಯತೆ ವಿಚಾರಿಸಿಕೊಳ್ಳಿ.
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ಬಿಡುವಿಲ್ಲದಷ್ಟು ಕೆಲಸಗಳು ನಿಮ್ಮ ಮೈ ಮೇಲೆ ಬರಲಿವೆ. ನೀವು ಬಹಳ ಸಮಯದಿಂದ ಖರೀದಿ ಮಾಡಬೇಕು ಎಂದಿದ್ದ ವಸ್ತುಗಳನ್ನು ಈ ದಿನ ಕೊಳ್ಳುವಂಥ ಸಾಧ್ಯತೆಗಳಿವೆ. ಪ್ರಭಾವಿಗಳ ಪರಿಚಯ ಆಗಲಿದೆ. ಈ ಹಿಂದೆ ನೀವು ಕಷ್ಟಪಟ್ಟು ಬೆಳೆಸಿಕೊಂಡಿದ್ದ ಸಾಮರ್ಥ್ಯ, ಪರಿಚಯ ಈಗ ನಿಮಗೆ ಉಪಯೋಗಕ್ಕೆ ಆಗಲಿದೆ. ಊಟ- ತಿಂಡಿ ಸಮಯಕ್ಕೆ ಸರಿಯಾಗಿ ಮಾಡಲಿಕ್ಕೆ ಆಗದೆ ಗ್ಯಾಸ್ಟ್ರಿಕ್ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಆದ್ದರಿಂದ ಸಮಯಕ್ಕೆ ಸರಿಯಾಗಿ ಊಟ- ತಿಂಡಿ ಮಾಡಿ.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ನೀವು ನಿರೀಕ್ಷೆಯೇ ಮಾಡದ ರೀತಿಯಲ್ಲಿ ಗೌರವಾದರಗಳು ನಿಮಗೆ ದೊರೆಯಲಿವೆ. ಕೆಲಸ ಮಾಡುತ್ತಿರುವ ಸ್ಥಳದಲ್ಲಿ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುವಾಗ ನಿಮ್ಮ ಅಭಿಪ್ರಾಯವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಎಲ್ಲರನ್ನೂ ಸಮಾಧಾನ ಮಾಡುತ್ತೀನಿ ಎಂಬ ಲೆಕ್ಕಾಚಾರ ಹಾಕಿಕೊಳ್ಳುತ್ತಾ ನಿಮ್ಮೊಳಗೆ ಅಸಮಾಧಾನ ಉದ್ಭವಿಸಲಿದೆ. ಈ ದಿನ ಷಣ್ಮುಖನ ಸ್ಮರಣೆ, ಧ್ಯಾನ ಅಥವಾ ಆರಾಧನೆಯನ್ನು ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ಲೆಕ್ಕ, ಸಂಶೋಧನೆ ಅಥವಾ ವಿಶ್ಲೇಷಣೆಯಂಥ ಉದ್ಯೋಗದಲ್ಲಿ ಇರುವವರು ನಿಮಗೆ ವಹಿಸಿದ ಜವಾಬ್ದಾರಿಯನ್ನು ಮುಗಿದಿದೆ ಎಂದು ಹೇಳುವ ಮುಂಚೆ ಒಂದಕ್ಕೆ ನಾಲ್ಕು ಬಾರಿ ಪರೀಕ್ಷಿಸಿಕೊಳ್ಳಿ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರಿಂದ ಮತ್ತೊಮ್ಮೆ ಪರಿಶೀಲನೆ ಮಾಡಿಸುವುದು ಉತ್ತಮ ನಿರ್ಧಾರ ಎನಿಸಿಕೊಳ್ಳುತ್ತದೆ. ಮಹಿಳೆಯರು ಉದ್ಯೋಗಕ್ಕಾಗಿ ಪ್ರಯತ್ನವನ್ನು ಪಡುತ್ತಾ ಇದ್ದಲ್ಲಿ ಈ ದಿನ ಅವಕಾಶಗಳ ಬಗ್ಗೆ ಸ್ನೇಹಿತರು ಅಥವಾ ಸಂಬಂಧಿಕರ ಮೂಲಕ ಮಾಹಿತಿ ದೊರೆಯುತ್ತದೆ.
ಲೇಖನ- ಎನ್.ಕೆ.ಸ್ವಾತಿ