Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 13ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 13ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 13ರ ದಿನಭವಿಷ್ಯ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 13, 2023 | 5:10 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 13ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಇತರರು ನೆರವಾಗುತ್ತೀನಿ ಎಂದಿದ್ದಾರೆ ಎಂಬ ಮಾತನ್ನೇ ನಂಬಿಕೊಂಡು, ಯಾವುದೇ ಕೆಲಸಕ್ಕೆ ಇಳಿಯದಿರಿ. ನಿಮ್ಮ ಸಾಮರ್ಥ್ಯ, ನಿಮ್ಮ ಬಳಿ ಇರುವ ಸಂಪನ್ಮೂಲ ಲಭ್ಯತೆ ಇತ್ಯಾದಿಗಳನ್ನು ಗಮನದಲ್ಲಿ ಇಟ್ಟುಕೊಂಡೇ ಮುಂದುವರಿಯಿರಿ. ಯಾರಾದರೂ ನಿಮ್ಮ ವಿರುದ್ಧ ಹಳೇ ದ್ವೇಷ ಸಾಧನೆ ಮಾಡುತ್ತಿದ್ದಾರೆ ಎಂಬ ಗುಮಾನಿ ಬಂದಲ್ಲಿ ಈ ದಿನ ಕೂಡಲೇ ಎಚ್ಚೆತ್ತುಕೊಳ್ಳುವುದು ಮುಖ್ಯ. ವಿದ್ಯಾರ್ಥಿಗಳು ಪ್ರಮುಖವಾದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಬಿಡುವು ಸಿಗದಷ್ಟು ಮೇಲಿಂದ ಮೇಲೆ ಕೆಲಸಗಳು ಬರಲಿವೆ. ಆದ್ದರಿಂದ ಯಾವುದು ಮೊದಲು ಹಾಗೂ ಯಾವುದು ನಂತರ ಎಂಬ ಬಗ್ಗೆ ಸ್ಪಷ್ಟತೆ ಇರಲಿ. ಎಲ್ಲರೂ ಒಪ್ಪಿಕೊಂಡಿದ್ದಾರೆ ಎಂದು ಕೆಲವು ಸಂಗತಿಗಳನ್ನು ನೀವೂ ಒಪ್ಪಲೇಬೇಕು ಎಂಬ ಒತ್ತಡ ಬರಬಹುದು. ನಿಧಾನವಾಗಿ ಆಲೋಚನೆ ಮಾಡಿ, ಆ ನಂತರ ತೀರ್ಮಾನವನ್ನು ಕೈಗೊಳ್ಳಿ. ದೂರ ಪ್ರಯಾಣದ ವಿಚಾರದಲ್ಲಿ ತತ್ ಕ್ಷಣದ ನಿರ್ಧಾರ ಒಳ್ಳೆಯದಲ್ಲ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮ್ಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವುದಕ್ಕೆ ಕೆಲವು ಗುಂಪುಗಳು ಕೆಲಸ ಮಾಡುತ್ತಿವೆ ಎಂದು ಬಲವಾಗಿ ನಿಮಗೆ ಅನಿಸುವುದಕ್ಕೆ ಶುರು ಆಗುತ್ತದೆ. ನಿಮ್ಮ ಪಾಲಿಗೆ ಬಂದಂಥ ಜವಾಬ್ದಾರಿಗಳನ್ನು ಮಾಮೂಲಿಗಿಂತ ಹೆಚ್ಚಿನ ಶ್ರದ್ಧೆ- ಆಸಕ್ತಿಯಿಂದ ಮಾಡಿದರೆ ಉತ್ತಮ. ಎಲ್ಲರೂ ಅನುಸರಿಸುವ ದಾರಿ ಸರಿಯಾಗಿಯೇ ಇರಬೇಕು ಎಂಬ ನಂಬಿಕೆ ಈ ದಿನ ಬೇಡ. ಮೊದಲ ಬಾರಿಗೆ ಪರಿಚಯವಾದವರು, ಆಕರ್ಷಕವಾಗಿ ಮಾತನಾಡಿದರು ಎಂಬ ಕಾರಣಕ್ಕೆ ಅವರಿಗೆ ನಿಮ್ಮ ವೈಯಕ್ತಿಕ ವಿಚಾರಗಳನ್ನು ಹೇಳದಿರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನೀವಾಗಿಯೇ ಮಾಡಿಕೊಂಡಂಥ ಜವಾಬ್ದಾರಿಯನ್ನು ಪೂರ್ಣಗೊಳಿಸಲು ಈ ದಿನ ಹರಸಾಹಸ ಪಡುತ್ತೀರಿ. ಯಾರಿಂದಲೋ ಸಹಾಯ ಕೇಳಿ, ಇಲ್ಲ ಎನಿಸಿಕೊಂಡು ಅವಮಾನಕ್ಕೆ ಗುರಿಯಾದಂತೆ ಎಂದು ನಿಮಗೇ ಎನಿಸುತ್ತದೆ. ಎಲೆಕ್ಟ್ರಿಕಲ್ ಉಪಕರಣಗಳಿಗಾಗಿ ಹಣ ಖರ್ಚು ಮಾಡುವಂಥ ಯೋಗ ಇದೆ. ಉದ್ಯೋಗ ಸ್ಥಳದಲ್ಲಿ ನಿಮ್ಮಿಂದ ನಿರೀಕ್ಷೆ ಮಾಡುವುದು ವಿಪರೀತ ಹೆಚ್ಚಾಗಲಿದೆ. ಇದರಿಂದ ಸ್ವಲ್ಪ ಮಟ್ಟಿಗೆ ಒತ್ತಡದ ಸನ್ನಿವೇಶ ಇರುತ್ತದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಇತರರು ನಿಮ್ಮ ಮೇಲೆ ಇಟ್ಟಿರುವ ನಿರೀಕ್ಷೆಯು ಭಾರವಾಗಿ ಪರಿಣಮಿಸಲಿದೆ. ಸಂಸಾರದಲ್ಲಿ ಭಿನ್ನಾಭಿಪ್ರಾಯ ಏರ್ಪಡಬಹುದು. ಮಕ್ಕಳ ಶಿಕ್ಷಣದ ವಿಚಾರಕ್ಕೆ ಚಿಂತೆ ಎದುರಾಗಲಿದೆ. ಈಗಾಗಲೇ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅದು ಅರ್ಧದಲ್ಲಿ ನಿಂತುಬಿಡುವ ಸಾಧ್ಯತೆ ಇದೆ. ಇತರರ ಮಾತನ್ನು ನಂಬಿ, ನಿರ್ಧಾರ ಕೈಗೊಳ್ಳಬೇಡಿ. ವರ್ಗಾವಣೆಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಪ್ರಭಾವಿಗಳ ನೆರವು ದೊರೆಯಲಿದೆ. ರಾಜಕಾರಣಿಗಳಿಗೆ ಹೊಸ ಜವಾಬ್ದಾರಿಗಳು ಹುಡುಕಿಕೊಂಡು ಬರಲಿವೆ. ಶಿವನ ಆರಾಧನೆ ಮಾಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಒಂದಲ್ಲಾ ಒಂದು ವಿಷಯಕ್ಕೆ ಮನಸ್ತಾಪವನ್ನು ಮಾಡಿಕೊಳ್ಳಲಿದ್ದೀರಿ. ಇತರರ ಜವಾಬ್ದಾರಿಗಳನ್ನು ವಹಿಸಿಕೊಳ್ಳದಿರುವುದು ಉತ್ತಮ. ಹಾಗೊಂದು ವೇಳೆ ವಹಿಸಿಕೊಂಡಲ್ಲಿ ಕೆಲಸ ಮಾಡಿಯೂ ಮಾತು ಕೇಳಿಸಿಕೊಳ್ಳುವಂತಾಗುತ್ತದೆ. ಅದೆಷ್ಟೇ ಸಣ್ಣ ಪ್ರಮಾಣದ, ಸಮಯದ ಪ್ರಯಾಣವಾದರೂ ನೀವು ಯಾರನ್ನು ಭೇಟಿ ಆಗುವುದಕ್ಕೆ ತೆರಳುತ್ತಿದ್ದೀರೋ ಅವರ ಲಭ್ಯತೆಯನ್ನು ಖಾತ್ರಿಪಡಿಸಿಕೊಂಡು ಆ ನಂತರ ತೆರಳುವುದು ಉತ್ತಮ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಆಡಬಾರದ ಮಾತನ್ನು ಆಡಬಾರದ ಸ್ಥಳದಲ್ಲಿ ಆಡಿ, ತೊಂದರೆಗಳನ್ನು ಮೈಮೇಲೆ ಎಳೆದುಕೊಳ್ಳಲಿದ್ದೀರಿ. ಸಂತಸವೋ- ಸಂಕಟವೋ ಮನಸ್ಸಿನ ಮೇಲೆ ನಿಯಂತ್ರಣವನ್ನು ಇರಿಸಿಕೊಳ್ಳಿ. ಮಕ್ಕಳ ಆರೋಗ್ಯದ ಕಡೆ ಲಕ್ಷ್ಯ ನೀಡಿ. ಅದರಲ್ಲೂ ಹೆಣ್ಣುಮಕ್ಕಳು ಇರುವಂಥವರು ಹೆಚ್ಚಿನ ಎಚ್ಚರಿಕೆಯಿಂದ ಇರಬೇಕು. ಹಳೆಯ ಸ್ನೇಹಿತರು ಈ ದಿನ ಭೇಟಿ ಆಗುವ ಯೋಗ ಇದೆ. ಹಳೇ ಆರೋಗ್ಯ ಸಮಸ್ಯೆಗಳು ಉಲ್ಬಣ ಆಗಬಹುದು.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಕೆಲಸ ಪೂರ್ತಿ ಆಗುವ ಮುಂಚೆಯೇ ಹೇಳಿಕೊಂಡು, ಅದು ಅರೆಬರೆ ಆಗಿ, ಅವಮಾನಕ್ಕೆ ಗುರಿ ಆಗಬಹುದು. ಆದ್ದರಿಂದ ಯಾವುದೇ ಕೆಲಸ ಪೂರ್ಣಗೊಳ್ಳುವವರೆಗೆ ಹೇಳಿಕೊಳ್ಳದಿರಿ. ಸಂಗೀತಗಾರರು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇರುವವರು, ವೇದ ಪಾಠ ಮಾಡುವಂಥವರಿಗೆ ಗೌರವ- ಸನ್ಮಾನಗಳು ಆಗಲಿವೆ. ಹೊಸದಾಗಿ ಭೂಮಿ ಖರೀದಿ ಮಾಡಬೇಕು ಎಂದಿರುವವರು ಈ ದಿನದ ಮಟ್ಟಿಗೆ ಅದಕ್ಕೆ ಸಂಬಂಧಿಸಿದ ಕೆಲಸಗಳನ್ನು ಮುಂದಕ್ಕೆ ಹಾಕುವುದು ಒಳ್ಳೆಯದು.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ರಾಜಕಾರಣದ ಬಗ್ಗೆ ಮಹತ್ವಾಕಾಂಕ್ಷೆ ಇರುವವರಿಗೆ ಇದು ಬಹಳ ಮುಖ್ಯವಾದ ದಿನ ಇದಾಗಿರುತ್ತದೆ. ಪ್ರಭಾವಿ ವ್ಯಕ್ತಿಗಳ ಸಂಪರ್ಕಕಕ್ಕೆ ಬರಲಿದ್ದೀರಿ. ವೃತ್ತಿನಿರತರಿಗೆ ಭವಿಷ್ಯದ ಸವಾಲಿನ ಬಗ್ಗೆ ಸೂಚನೆ ದೊರೆಯಲಿದೆ. ಉದ್ಯೋಗದಲ್ಲಿ ಇರುವವರು ಕೆಲವು ಬದಲಾವಣೆ ಮಾಡಿಕೊಳ್ಳುವ ಬಗ್ಗೆ ಸಮಾನ ಮನಸ್ಕರು, ಸ್ನೇಹಿತರ ಜತೆಯಲ್ಲಿ ಚರ್ಚಿಸುವ ಅವಕಾಶಗಳಿವೆ. ಸೋಷಿಯಲ್ ಮೀಡಿಯಾ ಬಳಸುವವರು ಬಹಳ ಎಚ್ಚರಿಕೆಯಿಂದ ಇರಬೇಕು. ವಾಗ್ವಾದ- ಭಿನ್ನಾಭಿಪ್ರಾಯ ಇಲ್ಲದಂತೆ ನೋಡಿಕೊಳ್ಳುವುದು ನಿಮ್ಮ ಕೈಯಲ್ಲೇ ಇದೆ.

ಲೇಖನ- ಎನ್‌.ಕೆ.ಸ್ವಾತಿ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು