AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Predictions: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 8ರ ದಿನಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 8ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Predictions: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 8ರ ದಿನಭವಿಷ್ಯ 
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 8ರ ದಿನಭವಿಷ್ಯ 
Rakesh Nayak Manchi
|

Updated on: May 08, 2023 | 5:46 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 8ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮ ಆತ್ಮಾಭಿಮಾನಕ್ಕೆ ಪೆಟ್ಟು ಬೀಳುವಂಥ ಮಾತುಗಳನ್ನು ಕೇಳಿಸಿಕೊಳ್ಳಬೇಕಾಗುತ್ತದೆ. ಯಾವುದೇ ವಿಷಯವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು, ತಕ್ಷಣದ ನಿರ್ಧಾರ ಅಥವಾ ಆತುರದ ನಿರ್ಧಾರಗಳನ್ನು ಮಾಡಬೇಡಿ. ಬೆಲೆಬಾಳುವ ವಸ್ತುವೊಂದನ್ನು ಎಲ್ಲೆಂದರಲ್ಲಿ ಇಟ್ಟು, ಮರೆತು ಹೋಗುವಂತಾಗುತ್ತದೆ. ಕುಟುಂಬದವರಿಗಾಗಿ ಹೆಚ್ಚಿನ ಸಮಯವನ್ನು ಮೀಸಲಿಡುವುದಕ್ಕೆ ಯತ್ನಿಸಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮ್ಮ ಸಲಹೆಗೆ ಇತರರು ಗೌರವ, ಬೆಲೆ ನೀಡಲಿದ್ದಾರೆ. ಸಂಗೀತಗಾರರು, ಸಿನಿಮಾ ಕ್ಷೇತ್ರದಲ್ಲಿ ಇರುವವರಿಗೆ ಸನ್ಮಾನಗಳಾಗುವ ಯೋಗ ಇದೆ. ಸಾರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಒತ್ತಡದ ದಿನವಾಗಿರುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ಈಗಾಗಲೇ ಇದ್ದಲ್ಲಿ ಅದು ಉಲ್ಬಣಿಸಲಿದೆ. ಪ್ರೀತಿಪಾತ್ರರಿಗೆ ಉಡುಗೊರೆ ನೀಡುವುದಕ್ಕೆ ಹಣದ ಖರ್ಚಾಗಲಿದೆ. ಕಿರುಪ್ರವಾಸ ಯೋಗ ನಿಮಗಿದೆ

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನೀವು ಈ ಹಿಂದೆ ಹೇಳಿದ್ದ ಸುಳ್ಳಿನ ಫಲವನ್ನು ಈಗ ಅನುಭವಿಸಲಿದ್ದೀರಿ. ಮನೆಯವರ ಆರೋಗ್ಯಕ್ಕಾಗಿ ಹಣ ಖರ್ಚಾಗಲಿದೆ. ದೇವತಾರಾಧನೆಯಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಎಲ್ಲರೂ ಮೆಚ್ಚುವಂತೆ ನಡೆದುಕೊಳ್ಳುತ್ತೀನಿ ಅಂದುಕೊಳ್ಳದಿರಿ, ಇದರಿಂದ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ. ಶುಭ ಕಾರ್ಯಗಳಿಗಾಗಿ ಹಣವನ್ನು ಸಾಲ ಮಾಡಬೇಕಾಗುತ್ತದೆ. ಅಗತ್ಯಕ್ಕಿಂತ ಹೆಚ್ಚಿನ ಸಾಲ ಬೇಡ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಎಲ್ಲರೂ ನಿಮ್ಮನ್ನು ಗಮನಿಸುತ್ತಿರುವಂತೆ ಭಾಸ ಆಗುತ್ತದೆ. ಮದುವೆಗಾಗಿ ಪ್ರಯತ್ನಿಸುತ್ತಿರುವವರಿಗೆ ಸಂಬಂಧಿಕರ ಕಡೆಯಿಂದ ಸಹಾಯ/ನೆರವು ದೊರೆಯುತ್ತದೆ. ಯೋಗ/ಧ್ಯಾನಗಳಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯಲಿದೆ. ಕಣ್ಣಿನ ಸಮಸ್ಯೆಗಳು ಎದುರಾಗಬಹುದು. ಇತಿಹಾಸತಜ್ಞರು, ಪ್ರಾಚ್ಯವಸ್ತುಗಳ ಸಂಶೋಧಕರಿಗೆ ಮಹತ್ತರವಾದ ಸಾಧನೆಗೆ ಬೆಂಬಲ/ನೆರವು ದೊರೆಯಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಇತರರ ವೈಯಕ್ತಿಕ ವಿಚಾರಗಳಿಗೆ ಮೂಗು ತೂರಿಸಬೇಡಿ. ಸ್ವ ಉದ್ಯೋಗಿಗಳಿಗೆ ಅಗತ್ಯವಾದ ಬಂಡವಾಳ ದೊರೆಯುವ ಸಾಧ್ಯತೆಗಳಿವೆ. ಎಚ್್ಆರ್ ಏಜೆನ್ಸಿಗಳಲ್ಲಿ ಕಾರ್ಯ ನಿರ್ವಹಿಸುವವರು, ಸೈನ್ಯದಲ್ಲಿ ಇರುವವರಿಗೆ ಬಡ್ತಿ ದೊರೆಯುವ ಅವಕಾಶ ಇದೆ. ಇಷ್ಟು ಸಮಯ ನಿಮಗೆ ಹವ್ಯಾಸ ಆಗಿದ್ದದ್ದು ಇನ್ನು ಮುಂದೆ ಸಮಪಾದನೆಗೆ ದಾರಿ ಆಗುವ ಮಾರ್ಗ ಕಂಡುಕೊಳ್ಳಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಇನ್ನೊಬ್ಬರ ಸಹಾಯವನ್ನು ನಿರೀಕ್ಷಿಸಿ ಯಾವುದೇ ಕೆಲಸಕ್ಕೆ ಕೈ ಹಾಕಬೇಡಿ. ಅರ್ಧ ಕೆಲಸ ಈಗಾಗಲೇ ಮುಗಿದಿರುವಂಥದು ಮೊದಲಿಂದ ಆರಂಭಿಸಬೇಕಾಗುತ್ತದೆ. ಮನರಂಜನೆಗಾಗಿ ಹಣವನ್ನು ಖರ್ಚು ಮಾಡಲಿದ್ದೀರಿ. ಬಾಡಿಗೆ ಮನೆಯಲ್ಲಿ ಇರುವವರು ಬದಲಾವಣೆ ಮಾಡಲು ಆಲೋಚನೆ ಮಾಡಲಿದ್ದೀರಿ. ನಿಮಗಿಂತ ಹಿರಿಯರ ಜತೆಗೆ ಮಾತಾಡುವಾಗ ಮಾತಿನ ಮೇಲೆ ಹಿಡಿತ ಇರಲಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಹಣಕಾಸಿನ ಹರಿವು ಹೆಚ್ಚು ಮಾಡಿಕೊಳ್ಳುವುದಕ್ಕೆ ದಾರಿ ಗೋಚರ ಆಗಲಿದೆ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರ ಮೇಲೆ ನಂಬಿಕೆ ಇಡುವುದು ಮುಖ್ಯ. ಮಸಾಲೆಯುಕ್ತ ಪದಾರ್ಥಗಳನ್ನು ಸೇವನೆ ಮಾಡದಿರುವುದು ಉತ್ತಮ. ದಾಕ್ಷಿಣ್ಯಕ್ಕೆ ಸಿಲುಕಿಕೊಂಡು ಒಪ್ಪಿಕೊಂಡ ಕೆಲಸವನ್ನು ಮುಗಿಸುವುದು ಕಷ್ಟವಾಗುತ್ತದೆ. ಮಾಧ್ಯಮ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಸವಾಲಿನ ದಿನವಾಗಿರುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನಿಮಗೆ ಅವಮಾನ ಆಗುವುದಕ್ಕೆ ಏನು ಬೇಕೋ ಅವೆಲ್ಲವನ್ನೂ ಶತ್ರುಗಳು ಮಾಡಲಿದ್ದಾರೆ. ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಪ್ರಗತಿ ಇದೆ. ಮೇಲಧಿಕಾರಿಗಳು ನಿಮಗೆ ವಹಿಸಿದ ಕೆಲಸವನ್ನು ಬೇರೆಯವರಿಗೆ ವರ್ಗಾಯಿಸಬೇಡಿ. ಬಡ್ತಿ, ವರ್ಗಾವಣೆ ನಿರೀಕ್ಷೆಯಲ್ಲಿ ಇರುವವರಿಗೆ ಆ ಬಗೆಗಿನ ಮಾಹಿತಿ ದೊರೆಯಲಿದೆ. ಕ್ರಿಯೇಟಿವ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಪ್ರಭಾವಿಗಳ ಪರಿಚಯ ಆಗಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಎಲ್ಲ ಬದಲಾವಣೆಗಳು ಒಟ್ಟಿಗೆ ಮಾಡಿಕೊಳ್ಳಬೇಕಾದ ಅನಿವಾರ್ಯ ಎದುರಾಗಲಿದೆ. ಅದರ ಸಕಾರಾತ್ಮಕ ಫಲವನ್ನು ಕಾಣಲಿದ್ದೀರಿ. ಒಲ್ಲದ ಮನಸ್ಸಿನಿಂದ ವ್ಯಕ್ತಿಯೊಬ್ಬರಿಗೆ ಸಹಾಯ ಮಾಡಬೇಕಾಗಬಹುದು. ಯಾರ ಮೇಲೂ ದ್ವೇಷ ಸಾಧನೆ ಮಾಡದಿರಿ. ಸರ್ಕಾರದ ಕೆಲಸಗಳ ಗುತ್ತಿಗೆ ವಹಿಸಿಕೊಳ್ಳುವವರಿಗೆ ಹಣಕಾಸಿನ ಬಿಡುಗಡೆ ಆಗುವ ಸಾಧ್ಯತೆ ಇದೆ.

ಲೇಖನ- ಎನ್‌.ಕೆ.ಸ್ವಾತಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್