Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಅಕ್ಟೋಬರ್ 1ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಅಕ್ಟೋಬರ್ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಅಕ್ಟೋಬರ್ 1ರ ದಿನಭವಿಷ್ಯ
ಪ್ರಾತಿನಿಧಿಕ ಚಿತ್ರ
Follow us
ಸ್ವಾತಿ ಎನ್​ಕೆ
| Updated By: Ganapathi Sharma

Updated on: Oct 01, 2023 | 1:00 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಅಕ್ಟೋಬರ್ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ದಾಖಲೆ- ಪತ್ರಗಳ ವ್ಯವಹಾರಗಳಲ್ಲಿ ತೊಡಗಿಕೊಳ್ಳುವಾಗ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ನಿಚ್ಚಳವಾಗಿ ಕಾಣುವಂಥ ವಿಚಾರಗಳ ಬಗ್ಗೆ ಅಭಿಪ್ರಾಯ ಹೇಳುವಾಗ ಕೂಡ ಪೂರ್ಣವಾಗಿ ಮಾಹಿತಿಯನ್ನು ಪಡೆದುಕೊಳ್ಳುವುದು ಮುಖ್ಯವಾಗುತ್ತದೆ. ಹೊಸದಾಗಿ ಸ್ನೇಹಿತರಾದವರ ಜತೆಗೆ ಏಕಾಏಕಿ ವ್ಯವಹಾರ ನಡೆಸುವುದು ಒಳ್ಳೆಯದಲ್ಲ. ನಿಮ್ಮ ನೇರವಂತಿಕೆಯ ಮಾತುಗಳಿಂದಾಗಿ ಅಹಂಕಾರಿ ಎಂದು ಹಣೆಟ್ಟಿ ಕಟ್ಟುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಇತರರು ಹಂಗಿಸುವ, ಛೇಡಿಸುವ, ಮೂದಲಿಸುವ ಮಾತುಗಳನ್ನು ಆಡಿದಲ್ಲಿ ತೀರಾ ಮನಸ್ಸಿಗೆ ತೆಗೆದುಕೊಳ್ಳಬೇಡಿ. ಇದನ್ನು ಹೇಳುತ್ತಿರುವವರಿಗೆ ನಿಮ್ಮ ಬಗ್ಗೆ ಪ್ರಾಮಾಣಿಕವಾದ ಕಾಳಜಿ, ಸ್ನೇಹವೋ ಅಥವಾ ಪ್ರೀತಿ ಇದೆಯೇ ಎಂಬ ಪ್ರಶ್ನೆಯನ್ನು ನಿಮಗೆ ನೀವೇ ಕೇಳಿಕೊಳ್ಳಿ. ಆ ನಂತರ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂದು ತೀರ್ಮಾನಿಸಿ. ಸ್ವಂತ ಉದ್ಯಮ, ವ್ಯವಹಾರವನ್ನು ನಡೆಸುತ್ತಿದ್ದಲ್ಲಿ ವಿಸ್ತರಣೆ ಬಗ್ಗೆ ಆಲೋಚನೆ ಬರಲಿದೆ. ಅಥವಾ ಈ ಸಂಬಂಧವಾಗಿ ಕೆಲವರ ಜತೆಗೆ ಚರ್ಚೆ ಕೂಡ ನಡೆಸಬಹುದು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಯಾರು ಏನಾದರೂ ಅಂದುಕೊಳ್ಳಲಿ, ನನಗೆ ಬೇಕಾದಂತೆ ಬದುಕುತ್ತೇನೆ ಎಂಬ ಮನೋಭಾವ ಈ ದಿನ ನಿಮ್ಮನ್ನು ಪ್ರಬಲವಾಗಿ ಆವರಿಸಲಿದೆ. ಸಣ್ಣ- ಸಣ್ಣ ಸಂಗತಿಗಳಿಗೂ ಹೆಚ್ಚಿನ ಗಮನ ಕೊಟ್ಟು ಅರ್ಥ ಮಾಡಿಕೊಳ್ಳುವುದಕ್ಕೆ ಹಾಗೂ ವ್ಯಾಖ್ಯಾನಿಸುವುದಕ್ಕೆ ಪ್ರಯತ್ನ ಮಾಡಲಿದ್ದೀರಿ. ಒಂದು ಸಲಕ್ಕೆ ಬಾಕಿ ಉಳಿದಿರುವ ಕೆಲಸಗಳನ್ನೆಲ್ಲ ಪೂರ್ಣಗೊಳಿಸುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ದೇವತಾ ಕಾರ್ಯಗಳಿಗೆ ದೇಣಿಗೆ ನೀಡುವಂಥ ಯೋಗ ಇದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನೀವಾಗಿಯೇ ಹೇಳಿದ ವಿಚಾರವೊಂದು ಕೊರಳಿಗೆ ಉರುಳಾಗಿ ಸುತ್ತಿಕೊಳ್ಳುವ ಸಾಧ್ಯತೆ ಇದೆ. ಮೊದಲಿಗೆ ನಿಮ್ಮ ಜತೆಗೆ ಬಹಳ ಚೆನ್ನಾಗಿ, ಗೌರವಯುತವಾಗಿ ಮಾತನಾಡುತ್ತಿದ್ದವರು ಏಕಾಏಕಿ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದೆನಿಸುವುದಕ್ಕೆ ಶುರುವಾಗುತ್ತದೆ. ಆಸ್ತಿ- ಹಣಕಾಸಿನ ವಿಚಾರವು ಪ್ರಾಶಸ್ತ್ಯ ಪಡೆದುಕೊಳ್ಳುತ್ತದೆ. ನಿರ್ಭಯವಾಗಿ ಯಾವುದಾದರೂ ಕೆಲಸ ಒಪ್ಪಿಕೊಳ್ಳುವುದಕ್ಕೆ ಧೈರ್ಯ ಸಾಕಾಗುವುದಿಲ್ಲ. ವಿಟಮಿನ್ -ಡಿ ಕೊರತೆಯನ್ನು ಅನುಭವಿಸಲಿದ್ದೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಸ್ವಂತ ವ್ಯವಹಾರ ಮಾಡುವಂಥವರಿಗೆ ಆದಾಯದ ಹರಿವು, ಆದಾಯದ ಮೂಲ ಎರಡೂ ಜಾಸ್ತಿ ಆಗಲಿದೆ. ಯಾರದೋ ಸ್ವಂತ ಲಾಭಕ್ಕಾಗಿ ನಿಮ್ಮ ಹೆಸರನ್ನು ಬಳಸಿಕೊಳ್ಳುವಂಥ ಅವಕಾಶಗಳಿವೆ. ಆದ್ದರಿಂದ ಬಹಳ ಎಚ್ಚರಿಕೆಯಿಂದ ಇರಬೇಕು. ಕ್ವಾರಿ ವ್ಯವಹಾರಗಳನ್ನು ಮಾಡುತ್ತಿರುವವರಿಗೆ ತಾತ್ಕಾಲಿಕ ಅಡೆತಡೆಗಳು ಎದುರಾಗಬಹುದು. ಸಂತಾನಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಉತ್ತಮವಾದ ಸುದ್ದಿ ಹಾಗೂ ಬೆಳವಣಿಗೆ ಇದೆ. ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರಯತ್ನಿಸುತ್ತಿರುವವರಿಗೆ ಶುಭ ವಾರ್ತೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಆದಾಯ ಹೆಚ್ಚಳ ಮಾಡಿಕೊಳ್ಳುವ ನಿಟ್ಟಿನಲ್ಲಿ ನೀವು ಮಾಡುವ ಪ್ರಯತ್ನಗಳಿಗೆ ಫಲ ದೊರೆಯಲಿದೆ. ನವ ವಿವಾಹಿತರಿಗೆ ಉತ್ತಮವಾದ ಸಮಯವನ್ನು ಕಳೆಯುವಂಥ ಯೋಗ ಇದೆ. ಉದ್ಯೋಗ ಬದಲಾವಣೆಗಾಗಿ ಪ್ರಯತ್ನ ಮಾಡುತ್ತಿದ್ದಲ್ಲಿ ಸ್ನೇಹಿತರ ಮೂಲಕ ಅವಕಾಶಗಳು ಹುಡುಕಿಕೊಂಡು ಬರಲಿವೆ. ದೂರ ಪ್ರಯಾಣ ಮಾಡುವುದರ ಸಂಬಂಧವಾಗಿ ಸಿದ್ಧತೆಯನ್ನು ಮಾಡಿಕೊಳ್ಳಲಿದ್ದೀರಿ. ಸಂಗಾತಿಯ ಮಾತಿಗೆ ಗೌರವ, ಪ್ರಾಶಸ್ತ್ಯ ನೀಡುವುದು ಮುಖ್ಯ,

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಸಮಚಿತ್ತದಿಂದ ನಿರ್ಧಾರ ತೆಗೆದುಕೊಳ್ಳುವುದು ಈ ದಿನ ಮುಖ್ಯವಾಗುತ್ತದೆ. ಹಣಕಾಸಿನ ಹರಿವು ಸರಾಗವಾಯಿತು ಅಂದರೆ ಭಾವನಾತ್ಮಕ ಕಾರಣಗಳಿಗೆ ಅಥವಾ ಸನ್ನಿವೇಶಗಳಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳದಿರುವುದು ಕ್ಷೇಮ. ಉದ್ಯೋಗ ಸ್ಥಳದಲ್ಲಿ ನಿಮ್ಮ ಪ್ರಾಮುಖ್ಯ ಹೆಚ್ಚಾಗುತ್ತಿರುವುದು ಅನುಭವಕ್ಕೆ ಬರುತ್ತದೆ. ಹೊಸ ವಸ್ತ್ರಾಭರಣಗಳನ್ನು ಖರೀದಿ ಮಾಡುವುದರ ಸಲುವಾಗಿ ಹಣವನ್ನು ಖರ್ಚು ಮಾಡಲಿದ್ದೀರಿ. ರಾಜಕಾರಣದಲ್ಲಿ ಇರುವವರಿಗೆ ಪ್ರಯಾಣ, ಒತ್ತಡ ಹಾಗೂ ಉದ್ವೇಗದ ಸನ್ನಿವೇಶಗಳು ಎದುರಾಗುತ್ತವೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಸಂಗಾತಿಯ ಜವಾಬ್ದಾರಿಗಳ ಪೈಕಿ ಕೆಲವನ್ನು ನೀವು ಹಂಚಿಕೊಳ್ಳಲಿದ್ದೀರಿ. ಸ್ವಂತ ವ್ಯಾಪಾರ- ವ್ಯವಹಾರ ನಡೆಸುತ್ತಿರುವವರಿಗೆ ಅಲ್ಪಪ್ರಗತಿ ಇದೆ. ರುಚಿಕಟ್ಟಾದ ಊಟ- ತಿಂಡಿ ಸವಿಯುವ ಯೋಗ ಇದೆ. ಅನಿರೀಕ್ಷಿತವಾಗಿ ಧನಾಗಮದ ಯೋಗ ಇದ್ದು, ಅದು ಹಾಗೇ ಖರ್ಚು ಕೂಡ ಆಗಬಹುದು. ಮೈಗ್ರೇನ್ ಸಮಸ್ಯೆ ಇರುವವರಿಗೆ ಅದು ಉಲ್ಬಣ ಆಗುವ ಸಾಧ್ಯತೆಗಳಿವೆ. ಪ್ರವಚನಕಾರರು, ಸಂಶೋಧನೆಗಳಲ್ಲಿ ತೊಡಗಿಕೊಂಡವರಿಗೆ ಉತ್ತಮ ಬೆಳವಣಿಗೆ ಇದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಇನ್ನೊಬ್ಬರ ಪರವಾಗಿ ನಿರ್ಧಾರ ತೆಗೆದುಕೊಳ್ಳುವಂಥ ಸನ್ನಿವೇಶಗಳಲ್ಲಿ ಅತ್ಯುತ್ಸಾಹ ತೋರಿಸುವಂಥ ಅಗತ್ಯ ಇಲ್ಲ. ನಿಮ್ಮ ಕೈಯಿಂದ ಹಣ ಕಳೆದುಕೊಳ್ಳುವಂಥ ಸಾಧ್ಯತೆಗಳಿರುತ್ತವೆ. ಇತರರ ವೈಯಕ್ತಿಕ ವಿಚಾರಗಳ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆ ಮಾಡುವುದಕ್ಕೆ ಹೋಗಬೇಡಿ. ವಿನಾಕಾರಣ ವಾಗ್ವಾದಗಳಿಗೆ ಕಾರಣ ಆಗಬಹುದು. ಮಂಡಿ ನೋವಿನ ಸಮಸ್ಯೆ ಕಾಡುತ್ತಿರುವವರು ಕಡ್ಡಾಯವಾಗಿ ವೈದ್ಯರಲ್ಲಿ ತೋರಿಸಿಕೊಳ್ಳಿ.

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ