Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಸೆಪ್ಟೆಂಬರ್ 6ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಸೆಪ್ಟೆಂಬರ್ 6ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಸೆಪ್ಟೆಂಬರ್ 6ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಇತರರ ಪಾಲಿಗೆ ನೀವು ಬೆರಗು ಮೂಡಿಸುವಂಥ ವ್ಯಕ್ತಿ ಆಗುತ್ತೀರಿ. ನೀವು ಹೇಳಿದಂತೆಯೇ ಆಯಿತು, ನಾವು ನಿಮ್ಮ ಮಾತು ಕೇಳಬೇಕಿತ್ತು ಎಂದು ನಿಮ್ಮಿಂದ ದೂರವಾದ ಸ್ನೇಹಿತರು ಅಥವಾ ನಿಮ್ಮ ಜತೆ ಕೆಲಸ ಮಾಡುತ್ತಿದ್ದವರು ಮತ್ತೆ ಬರಬಹುದು. ಈ ಸಲ ತುಂಬ ಕಠಿಣವಾಗಿ ವರ್ತಿಸಬೇಡಿ, ಹಂಗಿಸಬೇಡಿ. ಅಂದಹಾಗೆ ಇದರಲ್ಲಿ ನಿಮ್ಮ ಸಂಬಂಧಿಕರು, ಕುಟುಂಬದವರು ಸಹ ಇರಬಹುದು. ಇನ್ನು ಈ ದಿನ ರುಚಿಕಟ್ಟಾದ ಭೋಜನ ಸವಿಯುವ ಯೋಗ ನಿಮ್ಮ ಪಾಲಿಗಿದೆ.
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ನಿಮ್ಮ ನೆನಪಿನ ಶಕ್ತಿ ಈ ದಿನ ಬಹಳ ಮುಖ್ಯವಾಗುತ್ತದೆ. ಯಾವುದಾದರೂ ಕೆಲಸ ಬಾಕಿ ಉಳಿಸಿ, ಮರೆತೆ ಕ್ಷಮಿಸಿ ಎಂದೆಲ್ಲ ಹೇಳುವ ಸನ್ನಿವೇಶ ಎದುರಾಗದಂತೆ ನೋಡಿಕೊಳ್ಳಿ. ಲೇವಾದೇವಿ ವ್ಯವಹಾರ ಮಾಡುವವರಿಗೆ ಮುಖ್ಯ ದಾಖಲೆ ಕಡೆಗೆ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ. ಹಣಕಾಸಿನ ತುರ್ತು ಪರಿಸ್ಥಿತಿಗಾಗಿ ಸ್ನೇಹಿತರಿಂದ ಸಾಲ ಪಡೆಯುವಂಥ ಅಗತ್ಯ ಕಂಡುಬರುತ್ತದೆ. ಸಮಯಕ್ಕೆ ಸರಿಯಾಗಿ ಊಟ, ನಿದ್ರೆ ಮಾಡುವ ಕಡೆಗೂ ಲಕ್ಷ್ಯ ಇರಲಿ.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ಹಲವರು ಬೇಡ ಅಂದಾಗಲೂ ನೀವು ಪಟ್ಟು ಹಿಡಿದು ಮಾಡಿದ ಕೆಲಸದ ಶುಭ ಫಲವನ್ನು ಈ ದಿನ ನೀವು ಕಾಣಲಿದ್ದೀರಿ. ವೃತ್ತಿಪರರು, ಉದ್ಯೋಗಸ್ಥರಿಗೆ ದೊಡ್ಡ ದೊಡ್ಡ ಜವಾಬ್ದಾರಿಗಳು ಹೆಗಲಿಗೆ ಬೀಳುವಂಥ ಸಮಯ ಇದು. ಮನೆ ಬದಲಾವಣೆಗೆ ಅಥವಾ ಮಕ್ಕಳ ಶಾಲೆಯನ್ನು ಬದಲಾಯಿಸಬೇಕು ಎಂದುಕೊಳ್ಳುತ್ತಿರುವವರಿಗೆ ನಿಮ್ಮ ನಿರೀಕ್ಷೆಯಂತೆಯೇ ಬೆಳವಣಿಗೆಗಳು ಕಾಣಲಿವೆ. ದ್ವಿಚಕ್ರ ವಾಹನ ಖರೀದಿ ಮಾಡುವುದಕ್ಕೆ ಹಣಕಾಸು ಹೊಂದಿಸಲು ಪ್ರಯತ್ನಿಸುತ್ತಿದ್ದಲ್ಲಿ ಅನುಕೂಲ ಆಗಲಿದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ಪ್ರತಿ ಸಲವೂ ನಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ಸಾಧ್ಯತೆಯೇನೂ ಇರುವುದಿಲ್ಲ. ಕೆಲವು ಬಾರಿ ನಾವೇ ಕೇಳಿ ಪಡೆದುಕೊಳ್ಳಬೇಕಾಗುತ್ತದೆ. ಈ ದಿನ ಅಂಥದ್ದೇ ಪರಿಸ್ಥಿತಿ ಇರುತ್ತದೆ. ನಿಮಗೆ ಸಿಗಬೇಕಾದದ್ದನ್ನು ಕೇಳಿ ಪಡೆಯಬೇಕು. ಉದ್ಯೋಗ ಅಥವಾ ವ್ಯವಹಾರಕ್ಕೆ ಸಂಬಂಧಿಸಿದ ಅತಿ ಮುಖ್ಯವಾದ ವಿಚಾರಗಳು ಏನಾದರೂ ಇದ್ದಲ್ಲಿ ಅದನ್ನು ನೀವು ಮೇಲಿನವರಿಗೆ ಮುಟ್ಟಿಸಿದ್ದೀರಿ ಎಂಬುದಕ್ಕೆ ದಾಖಲೆಗಳನ್ನು ಇಟ್ಟುಕೊಳ್ಳಿ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ದೈಹಿಕ ಪರಿಶ್ರಮ ಹೆಚ್ಚಾಗಲಿದೆ. ಯಾವುದೇ ಕೆಲಸ ಮಾಡುವ ಮುಂಚೆ ಸರಿಯಾದ ಯೋಜನೆಯನ್ನು ಮಾಡುವುದು ಮುಖ್ಯ. ಎದುರಿಗಿರುವ ವ್ಯಕ್ತಿಯ ಸಾಮರ್ಥ್ಯವನ್ನು ತಿಳಿದುಕೊಳ್ಳದೆ ಯಾವುದೇ ಆತುರದ ತೀರ್ಮಾನವನ್ನು ತೆಗೆದುಕೊಳ್ಳದಿರಿ. ವಾಹನಗಳು ಇದ್ದಲ್ಲಿ ದುರಸ್ತಿಗಾಗಿ ಹಣ ಖರ್ಚಾಗುವಂಥ ಯೋಗ ಇದೆ. ಇತರರಿಂದ ಶಿಫಾರಸು ಮಾಡಿಸುವ ಮೂಲಕ ಕೆಲವು ಅನುಕೂಲಗಳು ದೊರೆಯಲಿವೆ. ಸಂಗಾತಿ ಜತೆಗೆ ಮಾತುಕತೆ ಆಡುವಾಗ ಎಚ್ಚರಿಕೆ ಇರಲಿ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ದಿಢೀರನೇ ನೀವು ಅಂದುಕೊಂಡಂತೆಯೇ ಹಲವು ಬದಲಾವಣೆಗಳು, ಬೆಳವಣಿಗೆಗಳು ಕಂಡುಬರಲಿವೆ. ಕೋರ್ಟ್ ವ್ಯಾಜ್ಯಗಳು ನಡೆಯುತ್ತಿದ್ದಲ್ಲಿ ಕೆಲವರಿಗೆ ರಾಜೀ- ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದಕ್ಕೆ ಅವಕಾಶಗಳು ದೊರೆಯಲಿವೆ. ಹೆಣ್ಣುಮಕ್ಕಳಿಗೆ ತವರು ಮನೆಯಿಂದ ಕೆಲವು ಅನುಕೂಲಗಳು ದೊರೆಯುವ ಸಾಧ್ಯತೆ ಇದೆ. ನಿಮ್ಮ ಜವಾಬ್ದಾರಿಗಳನ್ನು ಸಮಯಕ್ಕೆ ಮುಗಿಸಿದ್ದೀರಾ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಿ.
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ನೀವಾಗಿಯೇ ಹೇಳಿದ ವಿಚಾರವೊಂದು ಕೊರಳಿಗೆ ಉರುಳಾಗಿ ಸುತ್ತಿಕೊಳ್ಳುವ ಸಾಧ್ಯತೆ ಇದೆ. ಮೊದಲಿಗೆ ನಿಮ್ಮ ಜತೆಗೆ ಬಹಳ ಚೆನ್ನಾಗಿ, ಗೌರವಯುತವಾಗಿ ಮಾತನಾಡುತ್ತಿದ್ದವರು ಏಕಾಏಕಿ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದೆನಿಸುವುದಕ್ಕೆ ಶುರುವಾಗುತ್ತದೆ. ಆಸ್ತಿ- ಹಣಕಾಸಿನ ವಿಚಾರವು ಪ್ರಾಶಸ್ತ್ಯ ಪಡೆದುಕೊಳ್ಳುತ್ತದೆ. ನಿರ್ಭಯವಾಗಿ ಯಾವುದಾದರೂ ಕೆಲಸ ಒಪ್ಪಿಕೊಳ್ಳುವುದಕ್ಕೆ ಧೈರ್ಯ ಸಾಕಾಗುವುದಿಲ್ಲ. ವಿಟಮಿನ್ -ಡಿ ಕೊರತೆಯನ್ನು ಅನುಭವಿಸಲಿದ್ದೀರಿ.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ಎಲ್ಲರೂ ನಿಮ್ಮನ್ನು ಗಮನಿಸುತ್ತಿರುವಂತೆ ಭಾಸ ಆಗುತ್ತದೆ. ಮದುವೆಗಾಗಿ ಪ್ರಯತ್ನಿಸುತ್ತಿರುವವರಿಗೆ ಸಂಬಂಧಿಕರ ಕಡೆಯಿಂದ ಸಹಾಯ/ನೆರವು ದೊರೆಯುತ್ತದೆ. ಯೋಗ/ಧ್ಯಾನಗಳಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯಲಿದೆ. ಕಣ್ಣಿನ ಸಮಸ್ಯೆಗಳು ಎದುರಾಗಬಹುದು. ಇತಿಹಾಸತಜ್ಞರು, ಪ್ರಾಚ್ಯವಸ್ತುಗಳ ಸಂಶೋಧಕರಿಗೆ ಮಹತ್ತರವಾದ ಸಾಧನೆಗೆ ಬೆಂಬಲ/ನೆರವು ದೊರೆಯಲಿದೆ. ಮನೆಯಲ್ಲಿ ಕಚೇರಿಗೆ ಬೇಕಾದಂಥ ವ್ಯವಸ್ಥೆಗಳನ್ನು ಮಾಡಿಕೊಳ್ಳಲಿದ್ದೀರಿ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ನನ್ನ ಶ್ರಮಕ್ಕೆ ಬೆಲೆಯೇ ಸಿಕ್ಕುತ್ತಿಲ್ಲ, ಎಷ್ಟು ಪ್ರಯತ್ನ ಪಟ್ಟರೂ ನನ್ನ ಕೆಲಸ ತುದಿ ಮುಟ್ಟುತ್ತಿಲ್ಲ ಅಂದುಕೊಳ್ಳುತ್ತಿರುವವರಿಗೆ ಇವತ್ತು ಒಂದಿಷ್ಟು ಸಮಾಧಾನ ದೊರೆಯುತ್ತದೆ. ಕಣ್ಣು- ಕಿವಿಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ ಆ ಬಗ್ಗೆ ನಿರ್ಲಕ್ಷ್ಯ ಮಾಡದೆ ತಕ್ಷಣ ವೈದ್ಯರಲ್ಲಿ ತೋರಿಸಿ. ಇನ್ನು ಸಾಧ್ಯವಾದಲ್ಲಿ ತುಳಸೀ ಗಿಡಕ್ಕೆ ಒಂದು ತಂಬಿಗೆಯಷ್ಟು ನೀರನ್ನು ಹಾಕಿ. ಯಾವುದಾದರೂ ಕಾರಣಕ್ಕೆ ನೀವು ಹಾಕುವಂತಿಲ್ಲ ಅಂತಾದರೆ ಬೇರೆಯವರಿಂದಲಾದರೂ ಹಾಕಿಸಿ.