Daily Horoscope: ಈ ರಾಶಿಯವರ ಮಾತಿನ ಮೇಲೆ ನಿಯಂತ್ರಣವಿರಲಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಸೆಪ್ಟೆಂಬರ್​ 25: ನಿಮ್ಮ ಪ್ರೀತಿಯನ್ನು ಹಂಚಿಕೊಳ್ಳಲು ಸಮಯವನ್ನು ನೀವು ನಿರೀಕ್ಷಿಸುವಿರಿ. ನಿಮ್ಮ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಚಾರಗಳನ್ನು ನೀವು ಇನ್ನೊಬ್ಬರಿಂದ ಕೇಳುವಿರಿ. ಮನೋರಂಜನೆ ಕಾರ್ಯದಲ್ಲಿ ನೀವು ಮಗ್ನರಾಗುವಿರಿ. ಮೇಲಧಿಕಾರಿಗಳ ಒತ್ತಡವು ನಿಮಗೆ ಸಾಕಾಗುವುದು. ಹಾಗಾದರೆ ಸೆಪ್ಟೆಂಬರ್​ 25ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರ ಮಾತಿನ ಮೇಲೆ ನಿಯಂತ್ರಣವಿರಲಿ
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 25, 2024 | 12:20 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಷ್ಟಮೀ, ನಿತ್ಯ ನಕ್ಷತ್ರ: ಆರ್ದ್ರಾ, ಯೋಗ: ವರಿಯಾನ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 25 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:24 ರಿಂದ ಸಂಜೆ 01:54, ಯಮಘಂಡ ಕಾಲ ಬೆಳಿಗ್ಗೆ 07:53ರಿಂದ 09:24ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:54 ರಿಂದ 10:54 ರ ವರೆಗೆ.

ಸಿಂಹ ರಾಶಿ : ವಿದ್ಯಾರ್ಥಿಗಳ ಕನಸು ನನಸಾಗುವುದು. ಯಾರ ವ್ಯಕ್ತಿತ್ವವನ್ನೂ ನೋಡಿದ ಮಾತ್ರಕ್ಕೆ ಅಳೆಯುವಲ್ಲಿ ಸೋಲುವಿರಿ. ನಿಮ್ಮ ಪರೀಕ್ಷೆಯ ಕಾಲವೂ ಆಗಬಹುದು. ನೂತನ ವಸ್ತುವಿನ ಖರೀದಿಯಿಂದ ಮೋಸಹೋಗಬಹುದು. ಅನಗತ್ಯ ವಸ್ತುಗಳನ್ನು ಖರೀದಿಸಿ ಬಂದ ಹಣವನ್ನು ಕಳೆದುಕೊಳ್ಳುವಿರಿ. ಭೂ ಕಲಹವು ಇತ್ಯರ್ಥ ಮಾಡಿಕೊಳ್ಳುವುದು ಉತ್ತಮ. ಮಕ್ಕಳಿಗೆ ಬೇಕಾದುದನ್ನು ಕೊಡಿಸುವಿರಿ. ಸ್ನೇಹಿತ ಜೊತೆ ಪ್ರವಾಸವನ್ನು ಯೋಜಿಸುವಿರಿ. ಮನೆಯ ವಾತಾವರಣದ ಕಾರಣ ಕಛೇರಿಯಲ್ಲಿ ಕೆಲಸದ ಮಾನಸಿಕತೆ ಇರದು. ಅಪರಿಚಿತರು ನಿಮ್ಮಿಂದ‌ ಧನಸಹಾಯವನ್ನು ನಿರೀಕ್ಷಿಸುವರು. ಉದ್ಯೋಗಿಗಳಿಗೆ ಖುಷಿ ಆಗಿವಂತೆ ಮಾಡುವಿರಿ. ವಿವಾಹಕ್ಕೆ ನಿಮಗೆ ಮನಸ್ಸು ಇರದು. ಸ್ವತಂತ್ರವಾಗಿ ಇರಲು ನೀವು ಬಯಸಬಹುದು. ಸಮಸ್ಯೆಗಳೆಲ್ಲವೂ ಪರಿಹಾರವಾಗಲಿದೆ. ಬಂಧುಗಳ ಬಗ್ಗೆ ನಿಮಗೆ ಸದಭಿಪ್ರಾಯ ಇರದು. ಬೇರೆಯವರ ಕಾರ್ಯಕ್ಕಾಗಿ ಓಡಾಟಮಾಡುವಿರಿ. ವೈವಾಹಿಕ ಜೀವನವನ್ನು ಇಂದು ಕೂಡ ಅತ್ಯಂತ ಸಂತೋಷದಿಂದ ಕಳೆಯುವಿರಿ.

ಕನ್ಯಾ ರಾಶಿ : ನೀವು ನಿಮ್ಮ ಉದ್ಯೋಗದಲ್ಲಿ ಗಟ್ಟಿತನವನ್ನು ಉಳಿಸಿಕೊಳ್ಳುವಿರಿ. ನಿಮ್ಮ ಕಾರ್ಯದಲ್ಲಿ ಅಗತ್ಯದ ಬದಲಾವಣೆಯನ್ನು ಮಾಡಿಕೊಳ್ಳಬೇಕಾಗಬಹುದು. ಸಕಾಲಕ್ಕೆ ನಿಮಗೆ ಹಣವು ಸಿಗದೇ ವ್ಯವಹಾರದಲ್ಲಿ ಗೊಂದಲವಾದೀತು. ನೀವು ಅಂದುಕೊಂಡಂತೆ ನಿಮ್ಮ ಬದುಕು ಸಾಗುತ್ತಿದೆಯೇ ಎಂದು ಪರೀಕ್ಷಿಸಿಕೊಳ್ಳುವುದು ಅವಶ್ಯಕ. ಹಿರಿಯರಿಂದ ನಿಮ್ಮ ಕೆಲಸಕ್ಕೆ ಕೆಲವು ಬೈಗುಳಗಳು ಸಿಗಬಹುದು. ನಿಮ್ಮ ಕಾರ್ಯದ ಒತ್ತಡದಿಂದ ಧಾರ್ಮಿಕ ಕಾರ್ಯಗಳಿಗೆ ಸಮಯ ಸಾಲದು. ಬಾಲಿಶ ಮಾತುಗಳನ್ನು ಕಡಿಮೆ ಮಾಡಿ.‌ ಇಲ್ಲವಾದರೆ ಗೌರವವು ಕಡಿಮೆ ಆದೀತು. ನೀವು ಕೊಟ್ಟ ವಸ್ತುವನ್ನು ಮರೆತಿದ್ದು ಇಂದು ನೆನಪಾಗಿ ಅದನ್ನು ಹಿಂಪಡೆಯಲು ಪ್ರಯತ್ನಿಸುವಿರಿ. ನಿತ್ಯದ ಕಲಸವನ್ನೇ ಹೊಸ ರೀತಿಯಲ್ಲಿ ಮಾಡಲು ಇಚ್ಛಿಸುವಿರಿ. ಆಲಸ್ಯದಿಂದ ಕೆಲಸವನ್ನು ಹೆಚ್ಚು ಮಾಡಿಕೊಳ್ಳುವಿರಿ. ವ್ಯವಹಾರದಲ್ಲಿಯೂ ಹೊಸ ಅಧ್ಯಾಯ ತೆರೆಯಲಿದೆ. ಹೂಡಿಕೆ ವಿಸ್ತರಣೆಗೆ ಅವಸರ ಬೇಡ. ನಿಮ್ಮ ಕಾರ್ಯಭಾರವನ್ನು ವರ್ಗಾಯಿಸಲು ಪ್ರಯತ್ನಿಸುವಿರಿ. ನಿಮ್ಮ ನೇರ ಮಾತುಗಳು ಆಪ್ತರಿಗೂ ಇಂದು ಇಷ್ಟವಾಗದು.

ತುಲಾ ರಾಶಿ : ಅಧಿಕಾರದಲ್ಲಿ ಇದ್ದರೂ ಅದನ್ನು ನಿರ್ವಹಿಸುವ ಕ್ರಮವೂ ಗೊತ್ತಿರಬೇಕು. ಅತಿಥಿಗಳ ಆಗಮನದಿಂದ ನಿಮಗೆ ಕಷ್ಟವಾಗಬಹುದು. ಇನ್ನೊಬ್ಬರ ಆಲೋಚನೆಯನ್ನು ಗೌರವಿಸಿ ಅವರ ಪಾಲಿಗೆ ದೊಡ್ಡವರಾಗುವಿರಿ. ನಿಮಗೆ ಇರುವ ಕಾರ್ಯಕುಶಲತೆಯನ್ನು ಮುಚ್ಚಿಕೊಳ್ಳುವರು. ಇನ್ನೊಬ್ಬರಿಗೆ ನೋವನ್ನು ಕೊಟ್ಟು ಅನಂತರ ಪಶ್ಚಾತ್ತಾಪಪಡುವಿರಿ. ನಿಮ್ಮ ಖಾಸಗಿತನವು ಹಿತಶತ್ರುಗಳಿಂದ ಬಯಲಾಗಬಹುದು. ಮನೆಯ ಕೆಲಸಕ್ಕೆ ಹಣವನ್ನು ಖರ್ಚು ಮಾಡಬೇಕಾದೀತು. ಸಂಗಾತಿಗೆ ಅಪರೂಪದ ಉಡುಗೊರೆಯನ್ನು ಕೊಡುವಿರಿ. ಒಳ್ಳೆಯ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ಹೆಚ್ಚಿನ ಆದಾಯದ ಉದ್ಯೋಗವನ್ನು ಹುಡುಕುತ್ತಿರುವಿರಿ. ಬೇಕೆಂದಾಗ ಸಿಗದುದರ ಬಗ್ಗೆ ದುಃಖಿಸಲಾರಿರಿ. ನಿಮ್ಮ‌ ಸರಳತೆಯು ಇತರರಿಗೆ ಪ್ರೇರಣೆಯಾದೀತು. ಕೆಲವು ಕೆಲಸದ ಭರಾಟೆಯಲ್ಲಿ ಇಂದು ಸಮಯವು ನಿಮ್ಮದಾಗಿರದು. ಅಪರಿಚಿತರ ಮಾತು ನಿಮ್ಮನ್ನು ಒಳ್ಳೆಯ ಕಾರ್ಯಕ್ಕೆ ಪ್ರೇರಿಸಬಹುದು.

ವೃಶ್ಚಿಕ ರಾಶಿ : ನಿಮ್ಮ ಪ್ರತಿಭೆಯ ಪರಿಚಯು ನಿಮಗೂ ಇತರರಿಗೂ ಆಗುವುದು. ನಿಮ್ಮನ್ನು ಇಂದು ಯಾರಾದರೂ ಮಾತಿನಿಂದ ಕಟ್ಟಿಹಾಕಬಹುದು. ವಿಶ್ವಾಸವನ್ನು ಗಳಿಸುವ ಪ್ರಯತ್ನವು ಸ್ವಲ್ಪಮಟ್ಟಿಗೆ ಸಾಧ್ಯವಾಗುವುದು. ಕೆಲವು ವಿಚಾರಗಳು ನಿಮ್ಮ ಮನಸ್ಸಿಗೆ ಕಿರಿಕಿರಿಯನ್ನು ತರಬಹುದು. ಮಕ್ಕಳಿಂದ ನಿಮಗೆ ಶ್ರೇಯಸ್ಸು ಸಿಗುವುದು. ಅಸಹಜ ವರ್ತನೆಯಿಂದ ನಿಮ್ಮವರಿಗೆ ಸಿಟ್ಟು ಬರಬಹುದು. ನಿಮ್ಮ ಪ್ರೀತಿಯನ್ನು ಹಂಚಿಕೊಳ್ಳಲು ಸಮಯವನ್ನು ನೀವು ನಿರೀಕ್ಷಿಸುವಿರಿ. ನಿಮ್ಮ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಚಾರಗಳನ್ನು ನೀವು ಇನ್ನೊಬ್ಬರಿಂದ ಕೇಳುವಿರಿ. ಮನೋರಂಜನೆ ಕಾರ್ಯದಲ್ಲಿ ನೀವು ಮಗ್ನರಾಗುವಿರಿ. ಮೇಲಧಿಕಾರಿಗಳ ಒತ್ತಡವು ನಿಮಗೆ ಸಾಕಾಗುವುದು. ಕೆಲವು ವಿಚಾರಗಳನ್ನು ನಿರ್ಲಕ್ಷ್ಯ ಮಾಡಿ ಅವಕಾಶದಿಂದ ವಂಚಿತರಾಗುವಿರಿ. ನಿಮ್ಮ ರಹಸ್ಯ ಪ್ರೇಮವು ಬಯಲಾದೀತು. ಯಾವುದೇ ವೆಚ್ಚದಲ್ಲಿ ಮಾತಿನ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳಬೇಡಿ. ನೀವು ಯಾವುದನ್ನೂ ಸರಿಯಾಗಿ ಅರ್ಥಮಾಡಿಕೊಳ್ಳಲು ಸೋಲಬಹುದು.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ