Nitya Bhavishya: ಈ ರಾಶಿಯವರು ಆರೋಗ್ಯದ ವಿಚಾರದಲ್ಲಿ ಜಾಗರೂಕರಾಗಿರಬೇಕು

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಫೆಬ್ರವರಿ​​​​ 09ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ಈ ರಾಶಿಯವರು ಆರೋಗ್ಯದ ವಿಚಾರದಲ್ಲಿ ಜಾಗರೂಕರಾಗಿರಬೇಕು
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 09, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವ್ಯತಿಪಾತ್, ಕರಣ: ಶಕುನಿ, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 33 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:20 ರಿಂದ 12:47ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:40 ರಿಂದ 05:07 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:27 ರಿಂದ 09:54ರ ವರೆಗೆ.

ಧನು ರಾಶಿ : ನಿಮ್ಮ ಪೋಷಕರ ಜೊತೆ ನೀವು ಆಸ್ತಿಯ ವಿಚಾರವಾಗಿ ಚರ್ಚಿಸುವಿರಿ. ಎಲ್ಲರೊಂದಿಗೆ ಪ್ರೀತಿಯನ್ನು ಬೆಳೆಸಿಕೊಳ್ಳುವಿರಿ. ಇಂದು ನೀವು ಆಚರಣೆಗೆ ಹೆಚ್ಚು ಒತ್ತು ನೀಡುವಿರಿ. ರಾಜಕೀಯದಲ್ಲಿ ನಿಮಗೆ ಜನಬೆಂಬಲ ಹೆಚ್ಚಾಗಬಹುದು. ನೀವು ಅಮೂಲ್ಯವಾದ ವಸ್ತುವನ್ನು ಉಡುಗೊರೆಯಾಗಿ ಆಪ್ತರಿಗೆ ಕೊಡುವಿರಿ. ನೀವು ಧಾರ್ಮಿಕ ಚಟುವಟಿಕೆಗಳಲ್ಲಿ ಶ್ರದ್ಧೆ ಹೆಚ್ಚಿರುವುದು. ಇನ್ನೊಬ್ಬರನ್ನು ಹಿಂದಿಕ್ಕಲು ಪ್ರಯತ್ನ ಪೂರ್ವಕವಾಗಿ ಕಾರ್ಯ ಮಾಡುವಿರಿ. ಸ್ನೇಹಿತನ ಮನೆಯಲ್ಲಿ ಇಂದು ಹಬ್ಬದ ವಾತಾವರಣವು ಇರಲಿದೆ. ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಾದಿ ಸುಗಮವಾಗಲಿದೆ. ನಂಬಿಕೆಯಿಂದ ಕೆಲಸವನ್ನು ಮಾಡುವಿರಿ. ಪ್ರಯತ್ನಿಸಿದ ಕಾರ್ಯಗಳು ನಿಮಗೆ ಬಹುಪಾಲು ಉತ್ತಮ‌ ಫಲಿತಾಂಶವು ಕೊಡುವುದು. ಸ್ವಂತ ಉದ್ಯೋಗಸ್ಥರು ಲಾಭ ಗಳಿಸುವರು. ಯಾರೊಂದಿಗೂ ವೈರ ಬೇಡ. ಸರ್ಕಾರದಿಂದ ಕೆಲವು ವಿಚಾರಕ್ಕೆ ಕಿರಿಕಿರಿ ಉಂಟಾದೀತು.

ಮಕರ ರಾಶಿ : ಇಂದು ನೀವು ಹಲವು ದಿನಗಳಿಂದ ಮಾಡುತ್ತಿದ್ದ ಕಾರ್ಯದಲ್ಲಿ ದೊಡ್ಡ ಗುರಿಯನ್ನು ಪೂರೈಸುವಿರಿ. ಸಹೋದ್ಯೋಗಿಗಳ ಬಗ್ಗೆ ಪೂರ್ವಾಗ್ರಹವಿರುವುದು. ನೀವು ಸಂಬಂಧಿಕರ ಜೊತೆ ಸ್ವಲ್ಪ ಸಮಯ ಒಟ್ಟಿಗೆ ಕುಳಿತು ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಿರಿ. ಯಾವ ಕಾರ್ಯವನ್ನಾದರೂ ಜಾಣ್ಮೆಯಿಂದ ಮಾಡುವಿರಿ. ದುಃಖವನ್ನು ನೀವು ಸರಿಯಾದ ಜನರ ಬಳಿ ಹೇಳಿಕೊಳ್ಳುವಿರಿ. ನಿಮ್ಮ ಗೌರವಕ್ಕೆ ಧಕ್ಕೆ ಬರಬಹುದು. ನಾಯಕತ್ವಸ ಸಾಮರ್ಥ್ಯವು ಬಲವಾಗಬಹುದು. ಕ್ರಿಯಾಶೀಲತೆಯು ನಿಮ್ಮ ಅಧಿಕಾರಕ್ಕೆ ಪೂರಕವಾಗಿರುವುದು. ನಿಮ್ಮ ಸುತ್ತಲಿನ ವಾತಾವರಣವು ನಿಮಗೆ ಹಿತವಾಗುವುದು. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಂದರ್ಭಗಳು ಬರಬಹುದು. ಆಸ್ತಿಯ ಭಾಗವನ್ನು ಮಾರಾಟ ಮಾಡಬೇಕಾದೀತು. ಎಷ್ಟೋ ಕೆಲಸಗಳು ನಿಮ್ಮ ಬಳಿಯೇ ಬಾಕಿ ಇರುವುದು. ಆಲಸ್ಯದಿಂದ ಮುಖ್ಯ ಕೆಲಸವನ್ನೇ ಮರೆಯುವಿರಿ. ಯಾವುದೋ ಯೋಚನೆಯಲ್ಲಿ ಮುಖ್ಯ ಕಾರ್ಯವು ಗೌಣವಾಗಬಹುದು.

ಕುಂಭ ರಾಶಿ : ಇಂದು ನಿಮಗಾಗಿ ಯಾರಾದರೂ ಸಹಕಾರವನ್ನು ನೀಡಲು ಬರಬಹುದು. ಹೆಚ್ಚುತ್ತಿರುವ ವೆಚ್ಚಗಳನ್ನು ಕಡಿವಾಣ ಹಾಕಿಕೊಳ್ಳಿ. ಆರೋಗ್ಯದ ವಿಚಾರದಲ್ಲಿ ನೀವು ಜಾಗರೂಕರಾಗಿರಬೇಕು. ನೀವು ಅಪೂರ್ಣವಾದ ಕಾರ್ಯಗಳಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳುವಿರಿ. ನಿಮ್ಮ ಕಾರ್ಯದ ಒಟ್ಟು ಅವಲೋಕನದ ಅವಶ್ಯಕತೆ ಇರಲಿದೆ. ನಿಮ್ಮ ಮಾತಿನಿಂದ ಸ್ಥಾನಮಾನ ಮತ್ತು ಪ್ರತಿಷ್ಠೆಗಳು ಹೆಚ್ಚಾಗಬಹುದು. ಆಮದಿನ ವಿಷಯದಲ್ಲಿ ನೀವು ಗೊಂದಲವಿರಬಹುದು. ನೀವು ಮಂಗಳಕರ ಕಾರ್ಯಕ್ರಮದಲ್ಲಿ ಭಾಗಿಯಾಗುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ವ್ಯವಸ್ಥೆಯನ್ನು ಮಾಡುವಿರಿ. ಸಂತೋಷದ ಕೂಟದಲ್ಲಿ ನೀವು ಭಾಗಿಗಳಾಗುವಿರಿ. ಉದ್ಯಮವನ್ನು ಆರಂಭಿಸುವ ಮೊದಲು ಸರಿಯಾದ ಯೋಜನೆ ಇರಲಿ.

ಮೀನ ರಾಶಿ : ಆರ್ಥಿಕ ವ್ಯವಹಾರಕ್ಕೆ ಇಂದು ಶುಭ ದಿನವಾಗಿದೆ. ನಿಮ್ಮ ಆಲಸ್ಯದ ಕಾರಣ ನಿಮ್ಮ ಕೆಲಸದಲ್ಲಿ ಅಜಾಗರೂಕರಾಗಿರುವಿರಿ. ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ಹೆಚ್ಚಿಸುವಿರಿ. ಪ್ರೀತಿಪಾತ್ರರ ಬೆಂಬಲ ನಿಮ್ಮೊಂದಿಗೆ ಇದ್ದರೂ ಮಾನಸಿಕವಾಗಿ ಒಪ್ಪಿಕೊಳ್ಳಲಾರಿರಿ. ಆಡಳಿತದ ವಿಚಾರದಲ್ಲಿ ನೀವು ಬಹಳ ಗಂಭೀರವಾಗುವಿರಿ. ನಿಮ್ಮ ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ನೀವು ತೊಡೆದುಹಾಕುತ್ತೀರಿ. ನಿಮ್ಮ ಆರ್ಥಿಕ ಪರಿಸ್ಥಿತಿಯು ಮೊದಲಿಗಿಂತ ಉತ್ತಮವಾಗಿದ್ದು, ಹೂಡಿಕೆಯ ಕಡೆ ಗಮನವಿರುವುದು. ನಿಮ್ಮ ಪ್ರಮುಖ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮ್ಮ ಕೈಲಾದಷ್ಟು ಪ್ರಯತ್ನಿಸಿ. ಸ್ಥಿರತೆಯು ನಿಮಗೆ ಬಲವನ್ನು ಕೊಡುವುದು. ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಮಾಡಿಕೊಳ್ಳುವಿರಿ. ಮಕ್ಕಳಿಂದ ಆಗುವ ಅಸಮಾಧಾನವನ್ನು ಸಹಿಸಲಾರಿರಿ. ವಿರೋಧಿಗಳ ಮಾತನ್ನು ನೀವು ನಿರ್ಲಕ್ಷಿಸುವಿರಿ. ನಿಮ್ಮ ಉದ್ಯೋಗದ ತೊಂದರೆಗಳನ್ನು ಸರಿಮಾಡಿಕೊಂಡು ಮುನ್ನಡೆಯುವಿರಿ.

-ಲೋಹಿತ ಹೆಬ್ಬಾರ್-8762924271 (what’s app only)

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್