AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ರಾಶಿಭವಿಷ್ಯ; ದುಡುಕಿನಿಂದ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು-ಎಚ್ಚರ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಜನವರಿ 26ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ರಾಶಿಭವಿಷ್ಯ; ದುಡುಕಿನಿಂದ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು-ಎಚ್ಚರ
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: Jan 26, 2024 | 12:45 AM

Share

ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಜನವರಿ 26) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಪ್ರೀತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 27 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:20 ರಿಂದ 12:45ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:36 ರಿಂದ 17:02 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:29 ರಿಂದ 09:54ರ ವರೆಗೆ.

ಧನು ರಾಶಿ : ಇಂದು ನಮ್ಮ ಉದ್ಯೋಗದಲ್ಲಿ ಹೊಸ ನಿರೀಕ್ಷೆಯು ಇರಲಿದೆ. ದುಡುಕಿನಿಂದ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು. ಉದ್ಯಮಕ್ಕೆ ಸಂಬಂಧಿಸಿದ ಸರಿಯಾದ ನಿರ್ಧಾರವನ್ನು ಯಾರಿಂದಲಾದರೂ ಪಡಡಸುಕೊಳ್ಳಿ. ನಿಮ್ಮ ಚಾಂಚಲ್ಯದ ಸ್ಥಿತಿಗೆ ಸಿಟ್ಟಾಗಬಹುದು. ಹಿರಿಯ ಅಧಿಕಾರಿಗಳ ಜೊತೆ ಸ್ನೇಹದಿಂದ ಮಾತನಾಡಿ ವಿಶ್ವಾಸ ಗಳಿಸುವಿರಿ. ಇಂದು ಬರುವ ಹಣದ ಆಧಾರದ ಮೇಲೆ ನೀವು ಯಾವ ವ್ಯವಹಾರವನ್ನೂ ಮಾಡುವುದು ಬೇಡ. ವಾಹನವನ್ನು ಚಾಲಾಯಿಸುವಾಗ ಅನೇಕ ಸಕಾರಾತ್ಮಕ ಯೋಚನೆಗಳು ಇರಲಿ. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗೊಂದಲಗಳು ಬರುವುದು. ಸ್ವತಂತ್ರವಾದ ಆಲೋಚನೆಯು ಇಲ್ಲದೇ ಹೋದರೆ ಕಷ್ಟವಾದೀತು‌‌. ಕಛೇರಿಯಲ್ಲಿ ನಿಮ್ಮ ಶ್ರಮಕ್ಕೆ ಮೆಚ್ಚುಗೆ ಉಂಟಾಗಲಿದೆ‌. ಹಣಕಾಸಿನ ವ್ಯವಹಾರದಲ್ಲಿ ಹಿನ್ನಡೆ ಉಂಟಾಗಬಹುದು.

ಮಕರ ರಾಶಿ : ಉದ್ಯೋಗದಲ್ಲಿ ಸವಾಲಿನ ಕೆಲಸ ಕಾರ್ಯಗಳು ದೊರೆತರೂ ಸಾಧಿಸಬಲ್ಲಿರಿ. ಸಮಯೋಚಿತ ಸಲಹೆಯಿಂದ ಬರುವ ತೊಂದರೆಯು ದೂರಾಗುವುದು. ಪಾಲುದಾರಿಕೆಯಲ್ಲಿ ಕಲಹವಾಗುವ ಸಾಧ್ಯತೆ ಇದೆ. ಪತ್ರವ್ಯವಹಾರವು ಸಂಪೂರ್ಣ ಪ್ರಾಮಾಣಿಕವಾಗಿ ಇರದು ಎಂಬುದು ಗಮನದಲ್ಲಿ ಇರಲಿ. ನಿಮ್ಮ ಉದ್ಯೋಗವನ್ನು ನೀವು ಪ್ರೀತಿಸುವಿರಿ. ಕೇಳಿಕೊಂಡು ಬಂದವರಿಗೆ ನಿಮ್ಮಿಂದ ಅಲ್ಪ ಸಹಾಯ ಸಿಗುವುದು. ಅನವಶ್ಯಕವಾಗಿ ಚಿಂತನೆಯಿಂದ ನಿಮ್ಮ ಆತ್ಮವಿಶ್ವಾಸವನ್ನು ನೀವೇ ಹಾಳುಮಾಡಿಕೊಳ್ಳುವಿರಿ. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು. ಸಹೋದ್ಯೋಗಿಗಳ ವರ್ತನೆಯಿಂದ ಸಿಟ್ಟಾಗುವ ಸಾಧ್ಯತೆ ಇದೆ. ಭೋಗವಸ್ತುಗಳನ್ನು ಖರೀದಿ ಮಾಡುವಿರಿ. ಇವತ್ತಿಗೆ ತುರ್ತಾಗಿ ಬೇಕಾದುದನ್ನು ಸ್ನೇಹಿತರಿಂದ ಪಡೆದುಕೊಳ್ಳುವಿರಿ. ಪಕ್ಷಪಾತ ಮಾಡದೇ ಎಲ್ಲರನ್ನೂ ಸಮಾನ ಭಾವನೆಯಿಂದ ಕಾಣುವ ಪ್ರಯತ್ನ ಮಾಡಿ.

ಕುಂಭ ರಾಶಿ : ಕುಟುಂಬದಲ್ಲಿ ನೀರಸ ವಾತಾವರಣವಿದ್ದು, ವ್ಯಾಪಾರ ವ್ಯವಹಾರಗಳ ಆದಾಯದಲ್ಲಿ ಯಾವುದೇ ವ್ಯತ್ಯಾಸ ಕಂಡುಬರುವುದಿಲ್ಲ. ಬಂಧುಗಳಿಂದ ನೀವು ದೂರವಾಗುವಿರಿ. ಸದಾ ಅನ್ಯರ ಬಗ್ಗೆ ಆಲೋಚನೆ ಮಾಡುವುದನ್ನು ಬಿಡಿ. ನೆರೆಹೊರೆಯವರ ವಿಚಾರದಲ್ಲಿ ಸಣ್ಣ ಅಸಮಾಧಾನ ಇರಲಿದೆ. ದೇಹಕ್ಕೆ ತೊಂದರೆ ಮಾಡಿಕೊಳ್ಳುವ ಸನ್ನಿವೇಶವಿರಲಿದೆ. ಮನೆಯ ಬದಲಾವಣೆಯನ್ನು ಮಾಡುವಿರಿ. ಯಾವುದೇ ಪ್ರಭಾವಕ್ಕೆ ಒಳಗಾಗದೆ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ. ಭೂ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯಲಿದೆ. ಚರ ಆಸ್ತಿಯನ್ನು ಮಾರಾಟ ಮಾಡಿ ಹಣದ ಗಳಿಸುವಿರಿ. ನಿಮಗೆ ಸಂಬಂಧಿಸದ ವಿಚಾರದಲ್ಲಿ ಮಧ್ಯಸ್ತಿಕೆ ಬೇಡ. ಇದರಿಂದ ಅಪಮಾನವು ಆಗುವುದು. ನಿಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಮಸ್ಯೆಯಾಗಬಹುದು. ಇಂದು ಭಯವು ಕಾಡಲಿದ್ದು ಮನೆಯನ್ನು ಬಿಟ್ಟು ಹೋಗಲಾರಿರಿ.

ಮೀನ ರಾಶಿ : ತಾಳ್ಮೆ ಮತ್ತು ಸಂಯಮದಿಂದ ಇರುವ ಕಾರಣ ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ತೊಂದರೆ ಆಗಲಿದ್ದು ಮನಸ್ಸು ವಿಚಲಿತವಗಲಿದೆ. ಮಿತ್ರರು ನಿಮಗೆ ಸಹಕಾರ ನೀಡಲಾರರು. ಸಾಲ ಮಾಡುವ ಸಂದರ್ಭವನ್ನು ತಂದುಕೊಳ್ಳುವುದು ಬೇಡ. ವಿದ್ಯಾರ್ಥಿಗಳ ಕ್ರಿಯಾಶೀಲ ವ್ಯಕ್ತಿತ್ವದಿಂದ ಎಲ್ಲರ ಗಮನವನ್ನು ಸೆಳೆಯುವರು‌. ನಿಮಗೆ ಇಂದು ಸಂಗಾತಿಯ ಮೇಲೆ ಪ್ರೀತಿ ಹೆಚ್ಚಾಗಿದ್ದು ದೂರದ ಊರಿನಿಂದ ನೋಡಲು ಹೋಗುವಿರಿ. ಪ್ರೇಮವು ಯಾರಿಂದಲೋ ಬಹಿರಂಗವಾಗುವುದು. ಮಹಿಳಾ ಉದ್ಯೋಗಿಗಳು ಹೆಚ್ಚಿನ ಸ್ಥಾನವನ್ನು ಪಡೆಯುವಿರಿ. ಯಾರನ್ನೂ ದೂರುವ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ. ಅತಿಯಾದ ಕಾರ್ಯಗಳಿಂದ ಏಕಾಂಗಿಯಾಗಿ ಇರಬೇಕು ಎಂದು ಅನ್ನಿಸಬಹುದು.

-ಲೋಹಿತ ಹೆಬ್ಬಾರ್-8762924271 (what’s app only)

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ