Horoscope: ದಿನಭವಿಷ್ಯ, ಬಹಳ ದಿನಗಳಿಂದ ಉಳಿದಿದ್ದ ಕಾರ್ಯವು ಪೂರ್ಣವಾಗಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 22) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ, ಬಹಳ ದಿನಗಳಿಂದ ಉಳಿದಿದ್ದ ಕಾರ್ಯವು ಪೂರ್ಣವಾಗಬಹುದು
ರಾಶಿಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 22, 2023 | 12:30 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 22) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದಶಮೀ, ನಿತ್ಯನಕ್ಷತ್ರ: ಪೂರ್ವಾಭಾದ್ರಾ, ಯೋಗ: ಧ್ರುವ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 37 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:19 ರಿಂದ 01:44ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:03 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:53 ರಿಂದ 12:19ರ ವರೆಗೆ.

ಸಿಂಹ ರಾಶಿ : ಕಛೇರಿಯಲ್ಲಿ ನಿಮ್ಮ‌ ಕೆಲಸವನ್ನು ಕಂಡು ಅಪಹಾಸ್ಯ ಮಾಡಬಹುದು. ರಾಜಕೀಯದ ಆಸಕ್ತಿಯನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ.‌ ಸತತ ಪ್ರಯತ್ನದಿಂದ ಆದಾಯ ಹಾಗೂ ಖರ್ಚನ್ನು ಸರಿಯಾಗಿ ತೂಗಿಸಲು ತಿಳಿಯುವಿರಿ. ಇಂದಿನ ಕೆಲಸದಲ್ಲಿ ಕೆಲವು ತೊಂದರೆಗಳು ಕಾಣಿಸಿಕೊಂಡರೂ ಅದನ್ನು ಲೆಕ್ಕಿಸದೇ ಮುಂದೆ ಸಾಗುವಿರಿ. ಗೆಳೆಯರ ಮಾತನ್ನು ಗೌರವಿಸಿದ್ದು ಅವರಿಗೆ ಸಂತೋಷವಾಗಲಿದೆ. ಬಂಧುಗಳು ನಿಮ್ಮ ಹತ್ತಿರ ಆರ್ಥಿಕ ಸಹಾಯವನ್ನು ಕೇಳಿಕೊಂಡು ಬರಬಹುದು. ಮನಸ್ಸಿನ ಕಿರಿಕಿರಿಯಿಂದ ಕೋಪವು ಬರಬಹುದು. ಸರ್ಕಾರಿ ಕೆಲಸಕ್ಕಾಗಿ ಅರ್ಜಿಯನ್ನು ಹಾಕಿ ಕಾಯುತ್ತ ಕುಳಿತಿರುವಿರಿ. ಸಂಗಾತಿಯ ಕೋಪವನ್ನು ಶಾಂತಗೊಳಿಸಲು ಬೇರೆ ಬೇರೆ ಉಪಾಯವನ್ನು ಮಾಡುವಿರಿ. ಇನ್ನೊಬ್ಬರನ್ನು‌ ಅನುಕರಿಸಿ ಹಾಸ್ಯ ಮಾಡುವಿರಿ. ಕಲಾವಿದರು ಸ್ವತಂತ್ರರಾಗಲು ಇಷ್ಟಪಡುವರು.

ಕನ್ಯಾ ರಾಶಿ : ಸಹೋದ್ಯೋಗಿಗಳ ಜೊತೆ ವಾಗ್ವಾದಕ್ಕೆ ಇಳಿಯಬೇಕಾಗಬಹುದು. ಸರಳ ವಿಷಯಗಳನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಉತ್ತಮ‌ ದಿನದ ನಿರೀಕ್ಷೆಯಲ್ಲಿ ಇರುವ ನಿಮಗೆ ಬೇಸರವಾದೀತು. ಇನ್ನೊಬ್ಬರ ಸಂಧಾನಕ್ಕೆ ಮಧ್ಯಸ್ತಿಕೆಯನ್ನು ವಹಿಸುವಿರಿ. ಕಛೇರಿಯ ವ್ಯವಹಾರವು ನಿಮಗೆ ಸರಿ ಕಾಣಿಸದು. ಹೇಳದೇ ಮೌನದಿಂದ ಇರುವಿರಿ. ನೆಮ್ಮದಿಗಾಗಿ ಚಡಪಡಿಸುವಿರಿ. ಒತ್ತಡವು ನಿಮಗೆ ಯಾವ ವ್ಯವಹಾರಕ್ಕೂ ಆಸಕ್ತಿ ಇರದಂತೆ ಮಾಡುವುದು. ಯಾರ ಮಾತನ್ನೂ ಕೇಳುವ ತಾಳ್ಮೆ ಇರದು. ನಿಮ್ಮ ಮಾತನ್ನು ಕೇಳಲು ಆಸಕ್ತಿ ಇರದು. ಇನ ಮೇಲೆ ಆರ್ಥಿಕ ಉಳಿತಾಯಕ್ಕೆ ಹೆಚ್ಚಿನ ಗಮನ ನೀಡಿ. ಅವಕಾಶಗಳನ್ನು ಸರಿಯಾಗಿ ಬಳಕೆ ಮಾಡಿಕೊಳ್ಳುವಿರಿ. ಬಂಧುಗಳ ಮಾತಿನಿಂದ ಅಸಮಾಧನವು ಇರುವುದು. ಮನಸ್ಸು ಚಂಚಲವಾಗಬಹುದು.

ತುಲಾ ರಾಶಿ : ಸ್ವಾವಲಂಬಿಯಾಗಿರುವ ನಿಮ್ಮ ಕನಸು ಪೂರ್ಣವಾಗಿ ನನಸಾಗದು. ಯಾವುದೋ ಶುಭಸೂಚನೆಯು ಇರಲಿದೆ. ನಿಮ್ಮ ಆಲೋಚನೆಯು ವಾಸ್ತವಕ್ಕಿಂತ ಭಿನ್ನವಾಗಿ ಕಾಣಿಸುವುದು. ಕೆಟ್ಟ ಆಲೋಚನೆಯಿಂದ ದೂರವಿರುವುದು ಸುಖ. ಹಿರಿಯರಿಗೆ ಅಗೌರವದಿಂದ ಮಾತನಾಡಿ, ಅನಂತರ ಪಶ್ಚಾತ್ತಾಪಪಡುವಿರಿ. ತೀರ್ಥಯಾತ್ರೆಯ ಸಂದರ್ಭವು ಬರಬಹುದು. ಹಣಕಾಸಿನ ಕೊರತೆಯಿಂದ ಯಾವದೋ ಕಾರ್ಯವನ್ನು ಮಾಡುವಿರಿ. ಪರೋಕ್ಷವಾಗಿ ನಿಮ್ಮವರನ್ನು ದ್ವೇಷಿಸುವಿರಿ.‌ ಮಕ್ಕಳ‌ ಮೇಲೆ‌ ನಿಮ್ಮ ಮೋಹವು ಅತಿಯಾಗಿದ್ದು ಅದು ಬಂಧನವೂ ಆಗಬಹುದು. ಅಸಾಮಾನ್ಯ ಕಾರ್ಯವನ್ನು ಮಾಡಲು ಬಹಳ ಉತ್ಸಾಹವಿರುವುದು. ನಿಮ್ಮ ಹಣದ ಅಭಾವವನ್ನು ಯಾರ ಬಳಿಯೂ ಹೇಳಿಕೊಳ್ಳುವುದು ಬೇಡ. ಹಲವು ಒತ್ತಡದಿಂದ ನಿಮಗೆ ಕೆಲಸವು ಸೂಚಿಸದೇ ಹೋದೀತು.

ವೃಶ್ಚಿಕ ರಾಶಿ : ಆಪ್ತರ‌ ಮಾತಿನ ಮೇಲೆ‌ ಇಂದು ಪೂರ್ಣವಾದ ನಂಬಿಕೆ ಇರದು. ಆಸ್ತಿಯ ವಿಚಾರಗಳನ್ನು ಸಂಬಂಧಿಸಿದವರ ಜೊತೆ ಹಂಚಿಕೊಳ್ಳಿ. ಇಂದಿನ ನಿಮ್ಮ ಮಾತಿನಿಂದ ದ್ವೇಷವನ್ನು ಸಾಧಿಸಬಹುದು. ಬಹಳ ದಿನಗಳಿಂದ ಉಳಿದಿದ್ದ ಕಾರ್ಯವು ಪೂರ್ಣವಾಗಬಹುದು. ವಿದ್ಯಾದಾನವನ್ನು ಮಾಡಿದವರನ್ನು ಗೌರವಿಸುವಿರಿ. ಭೂಮಿಯ ವ್ಯವಹಾರದಲ್ಲಿ ಮಾತುಕತೆಗಳು ನಡೆಯಲಿದ್ದು ತೀರ್ಮಾನವಾಗದು. ಓಡಾಟದ ಸಮಯದಲ್ಲಿ ನಿಮ್ಮ‌ ವಸ್ತುವು ಕಾಣೆಯಾಗಿದ್ದು ನಿಮಗೆ ಗೊತ್ತಾಗದು. ಕಳೆದುಕೊಂಡ ವಸ್ತುವಿನ ಮೌಲ್ಯವು ನಿಮಗೆ ಗೊತ್ತಾಗದೇ ಹೋಗುವುದು. ಅಪರಿಚಿತರು ನಿಮ್ಮಿಂದ ಧನವನ್ನು ಪಡೆಯುವರು. ಮನೆಗೆ ಬಂದ ಅತಿಥಿಯನ್ನು ಸತ್ಕಾರಿಸುವಿರಿ. ವಾಹನದಿಂದ ಬಿದ್ದು ಗಾಯವನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಸಹೋದರಿಯ ವಿಚಾರದಲ್ಲಿ ನಿಮಗೆ ಅಸಮಾಧಾನವಾಗುವುದು. ಸಂಗಾತಿಯ ಜೊತೆ ಪ್ರವಾಸಿಗರು ಹೋಗುವಿರಿ.